ಶೀರ್ಷಿಕೆ : ಕಾನೂನು ಸೇವೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕ : ಆರ್.ಜಿ. ಜೋಶಿ
ಲಿಂಕ್ : ಕಾನೂನು ಸೇವೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕ : ಆರ್.ಜಿ. ಜೋಶಿ
ಕಾನೂನು ಸೇವೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕ : ಆರ್.ಜಿ. ಜೋಶಿ
ಕೊಪ್ಪಳ ನ. 09 (ಕರ್ನಾಟಕ ವಾರ್ತೆ): ಕಾನೂನಿನ ನೆರವು ಬೇಕಾದವರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ದೊರೆಯುವ ಉಚಿತ ಕಾನೂನು ಸೇವೆ ಮತ್ತು ಸಹಾಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ ಗುರುನಾಥ ಜೋಷಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ನ್ಯಾಯಾವಾದಿಗಳ ಸಂಘ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ನಗರಸಭೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ “ರಾಷ್ಟ್ರೀಯ ಕಾನೂನು ಪ್ರಾಧಿಕಾರ ದಿನಾಚರಣೆ” ಅಂಗವಾಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಗುರುವಾರದಂದು ಹಮ್ಮಿಕೊಳ್ಳಲಾಗಿದ್ದ, ಕಾನೂನು ಅರಿವು ಮತ್ತು ನೆರವಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಕಾನೂನು ಪ್ರಾಧಿಕಾರ ದಿನಾಚರಣೆ ಅಂಗವಾಗಿ ಇಂದಿನಿಂದ ನ. 18 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಹೋಬಳಿ ಮಟ್ಟದ ಕಾನೂನು ಸೇವೆಗಳ ಸಪ್ತಾಹ ಕಾರ್ಯಕ್ರಮ ಜರುಗಲಿದೆ. ಈ ಸಪ್ತಾಹ ಕಾರ್ಯಕ್ರಮದಲ್ಲಿ ಕಾನೂನಿನ ಬಗ್ಗೆ ಜನರಲ್ಲಿ ತಿಳುವಳಿಕೆ ಹಾಗೂ ಉಚಿತ ಕಾನೂನು ಸೇವೆಯನ್ನು ಒದಗಿಸಲಾಗುವುದು. ಪ್ರಕರಣಗಳಿಗೆ ತಕ್ಕಂತೆ ವಕೀಲರ ನೇಮಕ ಮಾಡಿ ಸಹಾಯ ಒದಗಿಸಲಾಗುವುದು. ಹೋಬಳಿ ಮಟ್ಟದಲ್ಲಿ ನಡೆಯುವ ಕಾನೂನು ಸಪ್ತಾಹ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತಿಯ ಪಿ.ಡಿ.ಓಗಳು ಭಾಗವಹಿಸಿ ಕಾನೂನು ಸೇವೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಹಕರಿಸಬೇಕು. ಉಚಿತ ಕಾನೂನು ಸೇವೆಯ ಸದುಪಯೋಗ ಪಡೆದುಕೊಳ್ಳಿ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ ಗುರುನಾಥ ಜೋಷಿ ಅವರು ಸಾರ್ವಜನಿಕರಿಗೆ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಎಸ್. ಕಂಪ್ಲಿ ಅವರು ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ, ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ ಕನ್ನೂರು, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮನುಶರ್ಮ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎಸ್.ಹೆಚ್. ಇಂಗಳದಾಳ, ಕಾರ್ಯದರ್ಶಿ ಕೊಟ್ರೇಶ ಯು. ಪೋಚಗುಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಜಿ. ದಾಸರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಕೀಲರಾದ ಎಂ. ಹನುಮಂತರಾವ್ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.
ಹೀಗಾಗಿ ಲೇಖನಗಳು ಕಾನೂನು ಸೇವೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕ : ಆರ್.ಜಿ. ಜೋಶಿ
ಎಲ್ಲಾ ಲೇಖನಗಳು ಆಗಿದೆ ಕಾನೂನು ಸೇವೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕ : ಆರ್.ಜಿ. ಜೋಶಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಾನೂನು ಸೇವೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕ : ಆರ್.ಜಿ. ಜೋಶಿ ಲಿಂಕ್ ವಿಳಾಸ https://dekalungi.blogspot.com/2017/11/blog-post_39.html
0 Response to "ಕಾನೂನು ಸೇವೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕ : ಆರ್.ಜಿ. ಜೋಶಿ"
ಕಾಮೆಂಟ್ ಪೋಸ್ಟ್ ಮಾಡಿ