ಶೀರ್ಷಿಕೆ : ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಲಿಂಕ್ : ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಕೊಪ್ಪಳ ನ. 10 (ಕರ್ನಾಟಕ ವಾರ್ತೆ): ಕೊಪ್ಪಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಯೋಜನೆಗಳ ಬಗ್ಗೆ ಹಾಗೂ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಬೀದಿನಾಟಕ ಹಾಗೂ ಜಾನಪದ ಸಂಗೀತ ಮೂಲಕ ಜನಜಾಗೃತಿ ಮೂಡಿಸಲು ಅರ್ಹ ನೊಂದಾಯಿತ ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಲಾ ತಂಡದಲ್ಲಿ ಕನಿಷ್ಠ-8 ಜನ ಕಲಾವಿದರು ಇರಬೇಕು. ಈ ಪೈಕಿ ಇಬ್ಬರು ಮಹಿಳಾ ಕಲಾವಿದರು ಇರುವುದು ಕಡ್ಡಾಯ. ಕಲಾತಂಡ ಕೊಪ್ಪಳ ಜಿಲ್ಲೆಯದಾಗಿರಬೇಕು. ಸರ್ಕಾರಿ ಯೋಜನೆಗಳ ಬಗ್ಗೆ ಬೀದಿನಾಟಕ ಪ್ರದರ್ಶಿಸಿದ ಅನುಭವ ಹೊಂದಿರಬೇಕು. ಜಿಲ್ಲೆಗೆ ಈ ಕಾರ್ಯಕ್ರಮಕ್ಕಾಗಿ ಒಟ್ಟು 2 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.
ಆಸಕ್ತ ಅರ್ಹ ಬೀದಿನಾಟಕ ಕಲಾ ತಂಡಗಳು ತಮ್ಮ ತಂಡದ ಸಂಪೂರ್ಣ ವಿವರ, ಕಲಾವಿದರ ವಿವರ, ಅನುಭವದ ದಾಖಲೆಗಳ ಸಹಿತ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಗೆ ನ. 17 ರೊಳಗಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಕಲಾ ತಂಡಗಳಿಗೆ ನ. 20 ರಂದು ಬೆಳಿಗ್ಗೆ 10-30 ಕ್ಕೆ ಹಳೇ ಜಿಲ್ಲಾ ಆಸ್ಪತ್ರೆ ಆವರಣದ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ಏರ್ಪಡಿಸಿದೆ. ಅರ್ಜಿ ಸಲ್ಲಿಸುವ ಕಲಾ ತಂಡಗಳು ತಮ್ಮ ಸ್ವಂತ ಖರ್ಚಿನಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು. ಜಿಲ್ಲಾ ಮಟ್ಟದ ಸಮಿತಿಯು 2 ತಂಡಗಳನ್ನು ಆಯ್ಕೆ ಮಾಡಲಿದೆ. ಆಸಕ್ತ ಬೀದಿನಾಟಕ ಕಲಾ ತಂಡಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಕೃಷ್ಣ ಹೆಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/11/blog-post_47.html
0 Response to "ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ