ಶೀರ್ಷಿಕೆ : ಪ್ರವಾಸಿ ಟ್ಯಾಕ್ಸಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಪ್ರವಾಸಿ ಟ್ಯಾಕ್ಸಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಪ್ರವಾಸಿ ಟ್ಯಾಕ್ಸಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ನ. 22 (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆಯ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಇವರ ವತಿಯಿಂದ 2017-18 ನೇ ಸಾಲಿನಲ್ಲಿ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ವರ್ಗ ಹಾಗೂ ಎಸ್.ಸಿ.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ಅರ್ಹ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಆಯ್ಕೆಗೊಳ್ಳುವ ಫಲಾನುಭವಿಗಳಿಗೆ ತಲಾ 3 ಲಕ್ಷ ರೂ. ಗಳನ್ನು ಸಹಾಯಧನ ರೂಪದಲ್ಲಿ ನೀಡಲಾಗುವುದು. ವಾಹನ ಬೆಲೆಯ ಶೇ. 5% ರಷ್ಟು ಮೊತ್ತವನ್ನು ಆಯ್ಕೆಯಾದ ಅಭ್ಯರ್ಥಿಗಳು ಭರಿಸಬೇಕು. ಉಳಿದ ಮೊತ್ತವನ್ನು ರಾಷ್ಟ್ರೀಕೃತ/ ವಾಣಿಜ್ಯ ಬ್ಯಾಂಕ್/ ಸಹಕಾರಿ ಬ್ಯಾಂಕ್‍ಗಳ ಮೂಲಕ ಸಾಲವನ್ನು ಫಲಾನುಭವಿ ಪಡೆದುಕೊಳ್ಳಬೇಕಾಗುತ್ತದೆ. ಕೊಪ್ಪಳ ಜಿಲ್ಲೆಗೆ ಹಿಂದುಳಿದ ಅಥವಾ ಅಲ್ಪಸಂಖ್ಯಾತ ವರ್ಗಕ್ಕೆ ಒಟ್ಟು 17, ಪರಿಶಿಷ್ಟ ಜಾತಿ-13 ಹಾಗೂ ಪರಿಶಿಷ್ಟ ಪಂಗಡ-06 ಸೇರಿದಂತೆ ಒಟ್ಟು 19 ಪ್ರವಾಸಿ ಟ್ಯಾಕ್ಸಿಗಳ ಗುರಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 20 ರಿಂದ 40 ವರ್ಷ ವಯೋಮಿತಿಯಲ್ಲಿರಬೇಕು. ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಲಘು ವಾಹನ ಚಾಲನಾ ಪರವಾನಗಿ ಪಡೆದು ಕನಿಷ್ಟ ಒಂದು ವರ್ಷವಾಗಿರಬೇಕು ಮತ್ತು ಅದರ ಜೊತೆಗೆ ಬ್ಯಾಡ್ಜ್ ಹೊಂದಿರಬೇಕು. ಹಿಂದುಳಿದ ಅಥವಾ ಅಲ್ಪಸಂಖ್ಯಾತರ ವರ್ಗಕ್ಕೆ ವಾರ್ಷಿಕ ಆದಾಯ, ನಗರ ಪ್ರದೇಶದವರಿಗೆ ರೂ. 55,000/-ಗಳು ಹಾಗೂ ಗ್ರಾಮಾಂತರ ಪ್ರದೇಶದವರಿಗೆ ರೂ. 40,000/- ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ವಾರ್ಷಿಕ ಆದಾಯ ನಗರ ಪ್ರದೇಶದವರಿಗೆ ರೂ. 2.00 ಲಕ್ಷ ಹಾಗೂ ಗ್ರಾಮಾಂತರ ಪ್ರದೇಶದವರಿಗೆ ರೂ. 1.50 ಲಕ್ಷ ಮೀರಿರಬಾರದು. ಅರ್ಜಿದಾರರು ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು. ಕೊಪ್ಪಳ ಜಿಲ್ಲೆಯವರಾಗಿರಬೇಕು.
ನಿಗದಿ ಪಡಿಸಿದ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್‍ನ ಪ್ರತಿಗಳು, ಜಾತಿ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರ, ಖಾಯಂ ಲಘುವಾಹನ ಚಾಲನಾ ಪರವಾನಿಗೆ ಪತ್ರ ಹಾಗೂ ಆರ್.ಟಿ.ಓ ರವರಿಂದ ಪಡೆದಿರುವ ಡಿ.ಎಲ್. ಎಕ್ಸ್‍ಟ್ರಾಕ್‍ಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಹಾಯಕ ನಿರ್ದೇಶಕರ ಕಛೇರಿ ಪ್ರವಾಸೋದ್ಯಮ ಇಲಾಖೆ 2ನೇ ಮಹಡಿ ಜಿಲ್ಲಾಡಳಿತ ಭವನ ಕೊಪ್ಪಳ, ರವರ ಕಛೇರಿಗೆ ಡಿಸೆಂಬರ್. 23 ರೊಳಗಾಗಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳನ್ನು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಪ್ರವಾಸಿ ಟ್ಯಾಕ್ಸಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪ್ರವಾಸಿ ಟ್ಯಾಕ್ಸಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರವಾಸಿ ಟ್ಯಾಕ್ಸಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/11/blog-post_59.html
0 Response to "ಪ್ರವಾಸಿ ಟ್ಯಾಕ್ಸಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ