ಅರಸೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ

ಅರಸೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅರಸೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅರಸೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ
ಲಿಂಕ್ : ಅರಸೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ

ಓದಿ


ಅರಸೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ

"ಪರಿವರ್ತನಾ ಯಾತ್ರೆ"


ನವ ಕರ್ನಾಟಕದ ನಿರ್ಮಾಣಕ್ಕಾಗಿ ಭಾರತೀಯ ಜನತಾ ಪಕ್ಷವು ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಯು ಇಂದು ಬೆಳಿಗ್ಗೆ ಅರಸೀಕೆರೆಗೆ ಆಗಮಿಸಿತು. ಮಾಜಿ ಮುಖ್ಯಮಂತ್ರಿ ಶ್ರೀ.ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಆಗಮಿಸಿದ ಈ ರಥಯಾತ್ರೆಯು ಅರಸೀಕೆರೆಗೆ ಬರುವ ಹೊತ್ತಿಗೆ ಪಟ್ಟಣದಲ್ಲಿ ಜೋರಾದ ಮಳೆ ಬರುತ್ತಿತ್ತು.  ನೂರಾರು ಕಾರ್ಯಕರ್ತರುಗಳು ಮಳೆಯನ್ನು ಲೆಕ್ಕಿಸದೇ ರಥಯಾತ್ರೆಯ ಜೊತೆ ಬೈಕ್ ರಾಲಿಯಲ್ಲಿ ಪಾಲ್ಗೊಂಡರು.  ರಥಯಾತ್ರೆಗೆಂದೇ ನಿರ್ಮಿಸಿರುವ ವಾಹನದಲ್ಲಿ ಮಾಜಿ ಸಚಿವರಾದ ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆಯವರು ಉಪಸ್ಥಿತರಿದ್ದರು.

ಪಟ್ಟಣದ ಬಸವರಾಜೇಂದ್ರ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪನವರು, ಇಂದು "ಕನಕ ಜಯಂತಿ" ಇದ್ದದ್ದರಿಂದ, ಮೊದಲಿಗೆ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ವೇದಿಕೆಯನ್ನೇರಿದರು. ಈ ಸಮಯದಲ್ಲಿ ಸ್ವಲ್ಪ ಹೊತ್ತು ಮಳೆ ನಿಂತಿದ್ದರಿಂದ ಕಾರ್ಯಕ್ರಮ ಸುಗಮವಾಗಿ ನಡೆಯಿತು.

ಸಭೆಯನ್ನುದ್ದೇಶಿಸಿ ಮಾಜಿ ಸಂಸದೆ ತೇಜಸ್ವಿನಿ ರಮೇಶ್, ಮಾಜಿ ಸಚಿವರಾದ ಶ್ರೀರಾಮುಲು, ವಿ.ಸೋಮಣ್ಣ, ಅರಸೀಕೆರೆಯ ಮಾಜಿ ಶಾಸಕರುಗಳಾದ ಕೆ.ಪಿ.ಪ್ರಭುಕುಮಾರ್, ಎ.ಎಸ್.ಬಸವರಾಜು, ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಿವಿಟಿ ಬಸವರಾಜು ಹಾಗೂ ಮುಖಂಡರುಗಳು ಮಾತನಾಡಿದರು.

ಕೊನೆಯದಾಗಿ ಬಿ.ಎಸ್.ಯಡಿಯೂರಪ್ಪನವರು ಸಭೆಯನ್ನುದ್ದೇಶಿಸಿ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ ಮತ್ತೆ ಜೋರಾದ ಮಳೆ ಪ್ರಾರಂಭವಾಯಿತು.  ಶಾಮಿಯಾನದಿಂದ ಮಳೆನೀರು ಕೆಳಗೆ ಬೀಳತೊಡಗಿದಾಗ ಜನರು ಅನಿವಾರ್ಯವಾಗಿ ಕುಳಿತ ಕುರ್ಚಿಯನ್ನೇ ತಲೆಯಮೇಲೆ ಹಿಡಿದು ಮಳೆಯಿಂದ ರಕ್ಷಣೆ ಪಡೆದರು. ವೇದಿಕೆಯ ಮೇಲಿದ್ದ ಗಣ್ಯರುಗಳೂ ಸಹ ಮಳೆಯಿಂದ ರಕ್ಷಣೆ ಪಡೆಯಲು ಹರಸಾಹಸ ಪಟ್ಟರು.  ಯಡಿಯೂರಪ್ಪನವರು ತಾವು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಯೋಜನೆಗಳು, ಅರಸೀಕೆರೆ ತಾಲ್ಲೂಕಿಗೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿ, ಹಾಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ಕಟುವಾಗಿ ಟೀಕಿಸಿದರು.

ಕಾರ್ಯಕ್ರಮದಲ್ಲಿ ಅರಸೀಕೆರೆ ನಗರ ಬಿಜೆಪಿ ಅಧ್ಯಕ್ಷ ಮನೋಜ್ ಕುಮಾರ್ ಸ್ವಾಗತಿಸಿದರು, ಬಿಜೆಪಿ ವಕ್ತಾರ ಎನ್.ಡಿ.ಪ್ರಸಾದ್ ನಿರೂಪಣೆ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ರಥಯಾತ್ರೆಯು ಅರಸೀಕೆರೆಯಿಂದ ಬಾಣಾವರ, ಜಾವಗಲ್ ಮಾರ್ಗವಾಗಿ ಹಳೇಬೀಡು ತಲುಪಿತು.



















ಹೀಗಾಗಿ ಲೇಖನಗಳು ಅರಸೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ

ಎಲ್ಲಾ ಲೇಖನಗಳು ಆಗಿದೆ ಅರಸೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅರಸೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಲಿಂಕ್ ವಿಳಾಸ https://dekalungi.blogspot.com/2017/11/blog-post_6.html

Subscribe to receive free email updates:

0 Response to "ಅರಸೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ