ಶೀರ್ಷಿಕೆ : ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜಿಸಲು ಕಟ್ಟುನಿಟ್ಟಿನ ಸೂಚನೆ
ಲಿಂಕ್ : ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜಿಸಲು ಕಟ್ಟುನಿಟ್ಟಿನ ಸೂಚನೆ
ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜಿಸಲು ಕಟ್ಟುನಿಟ್ಟಿನ ಸೂಚನೆ
ಕೊಪ್ಪಳ ನ. 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಎಲ್ಲಾ 153 ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಪಂಚಾಯತ ಮಟ್ಟದ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಸದಸ್ಯರು, ಮಕ್ಕಳ ಮತ್ತು ಕಿಶೋರಿ ಸಂಘಗಳ ಪ್ರತಿನಿಧಿಗಳನ್ನೊಳಗೊಂಡ “ಮಕ್ಕಳ ಹಕ್ಕುಗಳ ಗ್ರಾಮಸಭೆ” ಗಳನ್ನು ನ. 14 ರಿಂದ ಆಯೋಜಿಸಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ – 1989 ಜಾರಿಯಾಗಿದ್ದು, 26 ವರ್ಷಗಳನ್ನು ಪೂರೈಸುತ್ತಿದೆ. ಈ ಒಡಂಬಡಿಕೆಗೆ ಭಾತರ ಸರ್ಕಾರವು 1992ರಲ್ಲಿ ಸಹಿ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ತನ್ನ ಬದ್ಧತೆಯನ್ನು ಸೂಚಿಸಿ ಮಕ್ಕಳ ಪರವಾದ ಹಲವಾರು ನಿಯಮ, ಕಾಯ್ದೆ, ಯೋಜನೆ ಹಾಗೂ ಕಾರ್ಯಕ್ರಮಗಳನ್ನು ದೇಶಾದ್ಯಂತ ಜಾರಿಗೊಳಿಸುತ್ತಾ ಬಂದಿದೆ. ಮಕ್ಕಳು ನಮ್ಮ ಸಮಾಜದ ಅವಿಭಾಜ್ಯ ಅಂಗ. ಅವರ ಉಳಿವು, ರಕ್ಷಣೆ ಮತ್ತು ಅಭಿವೃದ್ಧಿ ಎಲ್ಲಾ ಸಮುದಾಯಗಳ ಕರ್ತವ್ಯ. ಆಡಳಿತ ವಿಕೇಂದ್ರೀಕರಣದ ಪ್ರಮುಖ ಹಂತವಾದ ಗ್ರಾಮ ಪಂಚಾಯತ ಮಟ್ಟದಲ್ಲಿಯೇ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳನ್ನು ಗುರುತಿಸಿ ಅಂತಹವುಗಳನ್ನು ತಡೆದು ಮಕ್ಕಳ ಹಕ್ಕುಗಳನ್ನು ರಕ್ಷಿಸುವಲ್ಲಿ ಸ್ಥಳೀಯ ಪಂಚಾಯತಿಗಳು ಮತ್ತು ಸ್ಥಳೀಯ ಪಂಚಾಯತಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಮಹತ್ತರ ಜವಾಬ್ದಾರಿಯಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಗ್ರಾಮ ಮಟ್ಟದಲ್ಲಿ ಮಕ್ಕಳ ಸ್ಥಿತಿಗತಿಗಳನ್ನು ಚರ್ಚಿಸಿ, ವಿಶ್ಲೇಷಿಸಿ ಪಂಚಾಯತ ಮಟ್ಟದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕಳೆದ ನಾಲ್ಕು ವರ್ಷಗಳಿಂದ “ಮಕ್ಕಳ ಗ್ರಾಮಸಭೆ”ಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂವಾಯತ್ ರಾಜ್ ಇಲಾಖೆಯ ಸುತ್ತೋಲೆಯ ನಿರ್ದೇಶನದಂತೆ ಉತ್ತಮವಾಗಿ ಅನುಷ್ಠಾನಗೊಳಿಸಲಾಗಿದೆ. ಅದೇ ರೀತಿ ಕಳೆದ ಸಾಲಿನಲ್ಲಿ 134 ಗ್ರಾಮಪಂಚಾಯತಿಗಳಲ್ಲೂ “ಮಕ್ಕಳ ಗ್ರಾಮಸಭೆ”ಗಳನ್ನು ಉತ್ಕøಷ್ಟವಾಗಿ ಮತ್ತು ಅರ್ಥಗರ್ಭಿತವಾಗಿ ಆಯೋಜಿಸಲಾಗಿತ್ತು. ಹಾಗೆಯೇ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಎಲ್ಲಾ 153 ಗ್ರಾಮ ಪಂಚಾಯತಗಳಲ್ಲೂ, ಗ್ರಾಮ ಪಂಚಾಯತ ಮಟ್ಟದ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಸದಸ್ಯರು, ಮಕ್ಕಳ ಮತ್ತು ಕಿಶೋರಿ ಸಂಘಗಳ ಪ್ರತಿನಿಧಿಗಳನ್ನೊಳಗೊಂಡ ಮಕ್ಕಳ ಹಕ್ಕುಗಳ ಗ್ರಾಮಸಭೆ ಪೂರ್ವಭಾವಿ ಸಭೆಯನ್ನು ಆಯೋಜಿಸಿ, ಗ್ರಾಮ ಸಭೆಯ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಹಾಗೆಯೇ ಮಕ್ಕಳ ಹಕ್ಕುಗಳ ಗ್ರಾಮಸಭೆಗಳನ್ನು ಆಯೋಜಿಸಿ, ಶಿಶು ಮರಣ ತಡೆಯುವುದು, ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಟಿಕ ಆಹಾರವನ್ನು ಒದಗಿಸುವುದು, ಅಪೌಷ್ಟಿಕತೆಯನ್ನು ನಿರ್ಮೂಲನೆ ಮಾಡಲು ಅಗತ್ಯ ಕ್ರಮವಹಿಸಬೇಕು. ಎಲ್ಲಾ 3 ವರ್ಷದಿಂದ 6 ವರ್ಷದ ಮಕ್ಕಳು ಅಂಗನವಾಡಿಗಳಲ್ಲಿ, 6 ರಿಂದ 14 ವರ್ಷದ ಮಕ್ಕಳು ಶಾಲೆಗಳಲ್ಲಿ ದಾಖಲಾಗಿ ಶಿಕ್ಷಣವನ್ನು ಪಡೆಯುವಂತೆ ಮತ್ತು 14 ರಿಂದ 18 ವರ್ಷದ ಮಕ್ಕಳು ಶಿಕ್ಷಣದ ಮುಖ್ಯವಾಹಿನಿಯಲ್ಲಿ ಇರುವಂತೆ ಮಾಡುವುದು. ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಆಟ-ಪಾಠಗಳ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ರೂಪಿಸುವುದು. ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಜೀತ ಪದ್ಧತಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಮತ್ತು ಅವುಗಳನ್ನು ನಿರ್ಮೂಲನೆ, ಮಕ್ಕಳ ಪೋಷಣೆ ಹಾಗೂ ರಕ್ಷಣೆಗಿರುವ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವುದು. ಹಾಗೂ ಮಕ್ಕಳ ಭಾಗವಹಿಸುವ ಹಕ್ಕನ್ನು ಖಾತರಿ ಪಡಿಸುವುದು. ಈ ಅಂಶಗಳನ್ನು ಚರ್ಚಿಸಬೇಕು.
ಮಕ್ಕಳ ಹಕ್ಕುಗಳ ಪರವಾಗಿ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಯೋಜನೆ, ಕಾರ್ಯಕ್ರಮಗಳನ್ನು ವಿವರವಾಗಿ ಚರ್ಚಿಸಿ ಜನಸಾಮಾನ್ಯರು ಹಾಗೂ ಪೋಷಕರುಗಳಿಗೆ ಹೆಚ್ಚಿನ ತಿಳುವಳಿಕೆ ನೀಡುವ, ಮಕ್ಕಳ ಸಮಸ್ಯೆಗಳನ್ನು ನಿವಾರಿಸುವ ಬಗ್ಗೆ ಸ್ಥಳೀಯ ಪಂಚಾಯತ್ ಮತ್ತು ಇಲಾಖೆಗಳು ಕೈಗೊಳ್ಳುವ ಕ್ರಮಗಳ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆಸಬೇಕು. ಮಕ್ಕಳ ಹಕ್ಕುಗಳ ಗ್ರಾಮಸಭೆಯಲ್ಲಿ ಮಕ್ಕಳು, ಪಾಲಕರು, ನಾಗರಿಕರು, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಬಾಲ ಕಾರ್ಮಿಕ ಯೋಜನಾ ಸಂಘಧ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಗಳು, ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು, ಪೊಲೀಸ್ ಅಧಿಕಾರಿಗಳು, ಸ್ಥಳೀಯ ಗ್ರಾಮ ಲೆಕ್ಕಿಗರು, ಆರೋಗ್ಯ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಇತರರೊಂದಿಂಗೆ ಸೇರಿಕೊಂಡು ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ಗ್ರಾ.ಪಂ ಅಧಿಕಾರಿಗಳಿಗೆ ಆಯೋಜಿಸಬೇಕು.
ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜನೆಯನ್ನು ನ. 14 ರಿಂದ ಡಿಸೆಂಬರ್. 08 ರವರೆಗೆ ಆಯೋಜಿಸಲು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದ್ದು, ಒಂದು ವೇಳೆ ನಿಗದಿಪಡಿಸಿದ ದಿನಾಂಕದಂದು ಗ್ರಾಮಸಭೆಗಳನ್ನು ಆಯೋಜಿಸುವುದು ಸಾಧ್ಯವಾಗದಿದ್ದಲ್ಲಿ ನವೆಂಬರ್. 14 ರಿಂದ ಡಿಸೆಂಬರ್. 14 ರೊಳಗಾಗಿ ಕಡ್ಡಾಯವಾಗಿ ಆಯೋಜಿಸಿ, ಪೂರ್ವ ತಯಾರಿ ಸಭೆಯ ವರದಿ, ಗ್ರಾಮಸಭೆಯ ನಡಾವಳಿಗಳು ಹಾಗೂ ನಮೂನೆಯ ವರದಿಗಳನ್ನು ಗ್ರಾಮಸಭೆ ಮುಗಿದ 10 ದಿನದ ಒಳಗಾಗಿ ತಾಲೂಕು ಪಂಚಾಯತ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಭವನ, ಕೊಪ್ಪಳ ಕಛೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜಿಸಲು ಕಟ್ಟುನಿಟ್ಟಿನ ಸೂಚನೆ
ಎಲ್ಲಾ ಲೇಖನಗಳು ಆಗಿದೆ ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜಿಸಲು ಕಟ್ಟುನಿಟ್ಟಿನ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜಿಸಲು ಕಟ್ಟುನಿಟ್ಟಿನ ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/11/blog-post_7.html
0 Response to "ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜಿಸಲು ಕಟ್ಟುನಿಟ್ಟಿನ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ