ಶೀರ್ಷಿಕೆ : ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬೆಳೆವಿಮೆ ನೊಂದಾಯಿಸಿಕೊಳ್ಳಲು ಸೂಚನೆ
ಲಿಂಕ್ : ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬೆಳೆವಿಮೆ ನೊಂದಾಯಿಸಿಕೊಳ್ಳಲು ಸೂಚನೆ
ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬೆಳೆವಿಮೆ ನೊಂದಾಯಿಸಿಕೊಳ್ಳಲು ಸೂಚನೆ
ಕೊಪ್ಪಳ ನ. 23 (ಕರ್ನಾಟಕ ವಾರ್ತೆ): ಕೊಪ್ಪಳ ಕೃಷಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬೆಳೆವಿಮೆ ನೊಂದಾಯಿಸಿಕೊಳ್ಳುವಂತೆ ರೈತರಿಗೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಬೆಳೆ ವಿಮೆಯನ್ನು ಹಿಂಗಾರು ಹಂಗಾಮು ಬೆಳೆಗಳಾದ ಮಳೆ ಆಶ್ರಿತ & ನೀರಾವರಿ ಜೋಳ, ಮಳೆ ಆಶ್ರಿತ ಅಗಸೆ, ಮಳೆ ಆಶ್ರಿತ & ನೀರಾವರಿ ಮುಸಕಿನಜೋಳ, ಮಳೆ ಆಶ್ರಿತ ಕುಸುಮೆ, ಮಳೆ ಆಶ್ರಿತ & ನೀರಾವರಿ ಸೂರ್ಯಕಾಂತಿ ಮತ್ತು ಮಳೆ ಆಶ್ರಿತ ಅಗಸಿ ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ನ. 30 ರೊಳಗೆ ನೋಂದಾಯಿಸಿಕೊಳ್ಳಬೇಕು. ಮಳೆ ಆಶ್ರಿತ ಗೋಧಿ ಬೆಳೆಗೆ ಡಿಸೆಂಬರ್. ರೊಳಗೆ, ನೀರಾವರಿ ಗೋಧಿ ಹಾಗೂ ಮಳೆ ಆಶ್ರಿತ & ನೀರಾವರಿ ಕಡಲೆ ಬೆಳೆಗಳಿಗೆ ಡಿಸೆಂಬರ್. 30 ರೊಳಗೆ ನೋಂದಾಯಿಸಿಕೊಳ್ಳಬೇಕು. ಬೇಸಿಗೆ ಹಂಗಾಮು ಬೆಳೆಗಳಾದ ನೀರಾವರಿ ಶೇಂಗಾ, ಭತ್ತ ಮತ್ತು ಸೂರ್ಯಕಾಂತಿ ಬೆಳೆಗಳನ್ನು 2018 ರ ಫೆಬ್ರವರಿ. 28 ರೊಳಗೆ ಬೆಳೆವಿಮೆಗಾಗಿ ನೋಂದಾಯಿಸಿಕೊಳ್ಳಬೇಕು. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಎಲ್ಲಾ ವರ್ಗದ ರೈತರು ಪಾಲ್ಗೊಂಡು, ಬೆಳೆ ವಿಮೆ ಪ್ರೀಮಿಯಮ್ ತುಂಬಿ ಯೋಜನೆಯ ಪ್ರಯೋಜನೆ ಪಡೆಯಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರಿ ಇಲಾಖೆ, ಸ್ಥಳೀಯ ವಾಣಿಜ್ಯ ಗ್ರಾಮೀಣ ಬ್ಯಾಂಕ್ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬೆಳೆವಿಮೆ ನೊಂದಾಯಿಸಿಕೊಳ್ಳಲು ಸೂಚನೆ
ಎಲ್ಲಾ ಲೇಖನಗಳು ಆಗಿದೆ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬೆಳೆವಿಮೆ ನೊಂದಾಯಿಸಿಕೊಳ್ಳಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬೆಳೆವಿಮೆ ನೊಂದಾಯಿಸಿಕೊಳ್ಳಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/11/blog-post_73.html
0 Response to "ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬೆಳೆವಿಮೆ ನೊಂದಾಯಿಸಿಕೊಳ್ಳಲು ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ