ಶೀರ್ಷಿಕೆ : ಗ್ರಾಮ ಪಂಚಾಯತಿ ಉಪಚುನಾವಣೆ : ಅಧಿಸೂಚನೆ ಪ್ರಕಟ
ಲಿಂಕ್ : ಗ್ರಾಮ ಪಂಚಾಯತಿ ಉಪಚುನಾವಣೆ : ಅಧಿಸೂಚನೆ ಪ್ರಕಟ
ಗ್ರಾಮ ಪಂಚಾಯತಿ ಉಪಚುನಾವಣೆ : ಅಧಿಸೂಚನೆ ಪ್ರಕಟ
ಕೊಪ್ಪಳ ನ. 27 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಯರಗೇರಾ, ಗೌರಿಪುರ, ಚಿಕ್ಕಬೆಣಕಲ್ ಮತ್ತು ಮರಳಿ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯರ 05 ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯೊಂದಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ವಿವಿಧ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯರ ಸ್ಥಾನಗಳಿಗೆ ಚುನಾವಣೆ ಮೂಲಕ ಭರ್ತಿ ಮಾಡುವ ಸಂಬಂಧವಾಗಿ ಉಪಚುನಾವಣೆ ನಡೆಯಲಿದ್ದು, ಚುನಾವಣೆ ನಡೆಯುವ ಗ್ರಾಮ ಪಂಚಾಯತಿ, ಕ್ಷೇತ್ರ ಹಾಗೂ ಮೀಸಲಾತಿ ವಿವರ ಇಂತಿದೆ. ಕುಷ್ಟಗಿ ತಾಲೂಕಿನ ಯರಗೇರಾ ಗ್ರಾಮ ಪಂಚಾಯತಿಯ ಗುಡದೂರಕಲ್-5 (ಅನುಸೂಚಿತ ಜಾತಿ). ಗಂಗಾವತಿ ತಾಲೂಕಿನ ಮರಳಿ ಗ್ರಾಮ ಪಂಚಾಯತಿಯ ಆಚಾರನರಸಾಪುರ-1 (ಹಿಂದುಳಿದ ವರ್ಗ-ಅ(ಮಹಿಳೆ)), ಚಿಕ್ಕಬೆಣಕಲ್ ಗ್ರಾಮ ಪಂಚಾಯತಿಯ ಚಿಕ್ಕಬೆಣಕಲ್-2 (ಅನುಸೂಚಿತ ಜಾತಿ), ಹಿರೇಬೆಣಕಲ್-2 (ಅನುಸೂಚಿತ ಜಾತಿ) ಹಾಗೂ ಗೌರಿಪುರ ಗ್ರಾಮ ಪಂಚಾಯತಿಯ ಅಡವಿಭಾವಿ-2 (ಅನುಸೂಚಿತ ಪಂಗಡ).
ಚುನಾವಣಾ ವೇಳಾಪಟ್ಟಿ ಇಂತಿದೆ. ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿದ್ದು, ನಾಮಪತ್ರಗಳನ್ನು ಡಿ. 01 ರಂದು ಪರಿಶೀಲನೆ ನಡೆಸಲಾಗುವುದು. ಉಮೇದುವಾರಿಕೆ ಹಿಂಪಡೆಯಲು ಡಿ. 04 ಕೊನೆಯ ದಿನವಾಗಿರುತ್ತದೆ. ಮತದಾನ ಅವಶ್ಯವಿದ್ದರೆ ಡಿ. 17 ರಂದು ಬೆ. 07 ರಿಂದ ಸಂಜೆ 05 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿ. 20 ರ ಒಳಗಾಗಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗ್ರಾಮ ಪಂಚಾಯತಿ ಉಪಚುನಾವಣೆ : ಅಧಿಸೂಚನೆ ಪ್ರಕಟ
ಎಲ್ಲಾ ಲೇಖನಗಳು ಆಗಿದೆ ಗ್ರಾಮ ಪಂಚಾಯತಿ ಉಪಚುನಾವಣೆ : ಅಧಿಸೂಚನೆ ಪ್ರಕಟ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗ್ರಾಮ ಪಂಚಾಯತಿ ಉಪಚುನಾವಣೆ : ಅಧಿಸೂಚನೆ ಪ್ರಕಟ ಲಿಂಕ್ ವಿಳಾಸ https://dekalungi.blogspot.com/2017/11/blog-post_749.html
0 Response to "ಗ್ರಾಮ ಪಂಚಾಯತಿ ಉಪಚುನಾವಣೆ : ಅಧಿಸೂಚನೆ ಪ್ರಕಟ"
ಕಾಮೆಂಟ್ ಪೋಸ್ಟ್ ಮಾಡಿ