ಶೀರ್ಷಿಕೆ : ಸಾಮಾಜಿಕ ಮತ್ತು ಮಾನವೀಯ ಸಮಸ್ಯೆ ಬಿಂಬಿತ ವರದಿ : ಪ್ರಶಸ್ತಿಗಾಗಿ ಆಹ್ವಾನ
ಲಿಂಕ್ : ಸಾಮಾಜಿಕ ಮತ್ತು ಮಾನವೀಯ ಸಮಸ್ಯೆ ಬಿಂಬಿತ ವರದಿ : ಪ್ರಶಸ್ತಿಗಾಗಿ ಆಹ್ವಾನ
ಸಾಮಾಜಿಕ ಮತ್ತು ಮಾನವೀಯ ಸಮಸ್ಯೆ ಬಿಂಬಿತ ವರದಿ : ಪ್ರಶಸ್ತಿಗಾಗಿ ಆಹ್ವಾನ
ಕೊಪ್ಪಳ ನ. 29 (ಕರ್ನಾಟಕ ವಾರ್ತೆ): ಕರ್ನಾಟಕ ಮಾಧ್ಯಮ ಅಕಾಡೆಮಿಯು ಸಾಮಾಜಿಕ ಸಮಸ್ಯೆ ಬಿಂಬಿಸುವ ಉತ್ತಮ ವರದಿಗೆ-ಅಭಿಮಾನಿ ಪ್ರಶಸ್ತಿ ಮತ್ತು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಉತ್ತಮ ಲೇಖನ-ವರದಿಗೆ- ಮೈಸೂರು ದಿಗಂತ ಪ್ರಶಸ್ತಿಗಳನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಬರೆದ ಪತ್ರಕರ್ತರಿಗೆ ನೀಡುವ ಉದ್ದೇಶ ಹೊಂದಿದ್ದು, ವರದಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು, ಹಾಗೂ ಮೈಸೂರಿನ ‘ಮೈಸೂರು ದಿಗಂತ’ ಪತ್ರಿಕಾ ಸಂಸ್ಥೆಯು ‘ಮಾನವೀಯ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಪ್ರತಿ ವರ್ಷ ತಲಾ ಹತ್ತು ಸಾವಿರ ರೂ.ಗಳ ನಗದು ಪ್ರಶಸ್ತಿ ನೀಡುವ ಸಲುವಾಗಿ ಉಭಯ ಸಂಸ್ಥೆಗಳು ತಲಾ ಒಂದು ಲಕ್ಷ ರೂ.ಗಳ ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿವೆ. 2017 ರ ಜನವರಿಯಿಂದ ಅಕ್ಟೋಬರ್ ವರೆಗಿನ ಅವಧಿಯಲ್ಲಿ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆ ಬಿಂಬಿಸುವ ಉತ್ತಮ ವರದಿಗೆ-ಅಭಿಮಾನಿ ಪ್ರಶಸ್ತಿ ಮತ್ತು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಉತ್ತಮ ಲೇಖನ-ವರದಿಗೆ- ಮೈಸೂರು ದಿಗಂತ ಪ್ರಶಸ್ತಿ ನೀಡಲಾಗುವುದು. ಎರಡೂ ವಿಭಾಗಗಳಿಗೆ ಪ್ರತ್ಯೇಕವಾಗಿ ಪ್ರಸ್ತಾವನೆ ಸಲ್ಲಿಸಬೇಕು. ಕನ್ನಡ ದೈನಿಕ-ವಾರ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಬರೆದಿರುವ ವರದಿಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ ಇರುತ್ತದೆ. ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ, ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರ ಪಡೆದು ಕಳುಹಿಸಬೇಕು. ಲೇಖನ ವರದಿಗಳನ್ನು ಡಿ. 26 ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಅಭಿಮಾನಿ ಪ್ರಶಸ್ತಿ-2017 ಹಾಗೂ ಮೈಸೂರು ದಿಗಂತ ಪ್ರಶಸ್ತಿ-2017, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-01 ಇವರಿಗೆ ಸಲ್ಲಿಸಬೇಕು ಎಂದು ಅಕಾಡೆಮಿ ಅಧ್ಯಕ್ಷ ಎಂ. ಸಿದ್ದರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೀಗಾಗಿ ಲೇಖನಗಳು ಸಾಮಾಜಿಕ ಮತ್ತು ಮಾನವೀಯ ಸಮಸ್ಯೆ ಬಿಂಬಿತ ವರದಿ : ಪ್ರಶಸ್ತಿಗಾಗಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಸಾಮಾಜಿಕ ಮತ್ತು ಮಾನವೀಯ ಸಮಸ್ಯೆ ಬಿಂಬಿತ ವರದಿ : ಪ್ರಶಸ್ತಿಗಾಗಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಾಮಾಜಿಕ ಮತ್ತು ಮಾನವೀಯ ಸಮಸ್ಯೆ ಬಿಂಬಿತ ವರದಿ : ಪ್ರಶಸ್ತಿಗಾಗಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/11/blog-post_760.html
0 Response to "ಸಾಮಾಜಿಕ ಮತ್ತು ಮಾನವೀಯ ಸಮಸ್ಯೆ ಬಿಂಬಿತ ವರದಿ : ಪ್ರಶಸ್ತಿಗಾಗಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ