ಶೀರ್ಷಿಕೆ : ಹೈ-ಕ ಪ್ರದೇಶಾಭಿವೃದ್ಧಿ ಯೋಜನೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಿ- ಬಸವರಾಜ ರಾಯರಡ್ಡಿ
ಲಿಂಕ್ : ಹೈ-ಕ ಪ್ರದೇಶಾಭಿವೃದ್ಧಿ ಯೋಜನೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಿ- ಬಸವರಾಜ ರಾಯರಡ್ಡಿ
ಹೈ-ಕ ಪ್ರದೇಶಾಭಿವೃದ್ಧಿ ಯೋಜನೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಿ- ಬಸವರಾಜ ರಾಯರಡ್ಡಿ
ಕೊಪ್ಪಳ ನ. 25 (ಕರ್ನಾಟಕ ವಾರ್ತೆ): ಹೈದ್ರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಈಗಾಗಲೆ ಅನುಮೋದನೆಗೊಂಡಿರುವ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸುವಂತೆ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹೈದ್ರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೈದ್ರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೊಪ್ಪಳ ಜಿಲ್ಲೆಗೆ ನಿಗದಿಪಡಿಸಲಾಗಿರುವ ಕಾಮಗಾರಿಗಳ ಪೈಕಿ, ಇದುವರೆಗೂ ಕಾಮಗಾರಿಗಳು ಪ್ರಾರಂಭವಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಈವರೆಗೆ ಪ್ರಾರಂಭವಾಗದಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪ್ರಾರಂಭ ಮಾಡಬೇಕು. ಕಾಮಗಾರಿಗಳಿಗೆ ಒಂದು ವಾರದೊಳಗಾಗಿ ಆಡಳಿತಾತ್ಮಕ ಅನುಮೋದನೆ ಪಡೆದು, ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿಯಾಗುವ ಪ್ರಶ್ನೆಯಿಲ್ಲ. ಪ್ರಸಕ್ತ ಸಾಲಿಗೆ ಹೈದ್ರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಲ್ಲಿ ಕೊಪ್ಪಳ ಜಿಲ್ಲೆಗೆ ಮೈಕ್ರೋ ಕಾರ್ಯಕ್ರಮದಡಿ ಒಟ್ಟು 464 ಕಾಮಗಾರಿಗಳನ್ನು ನಿಗದಿಪಡಿಸಿದ್ದು ಇದಕ್ಕಾಗಿ 93. 94 ಕೋಟಿ ರೂ. ಗಳ ಅನುದಾನ ಹಂಚಿಕೆ ಮಾಡಿದ್ದು, ಈ ಪೈಕಿ 40. 70 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಕೊಪ್ಪಳ ತಾಲೂಕಿನಲ್ಲಿ 96 ಕಾಮಗಾರಿಗಳಿಗೆ 16. 70 ಕೋಟಿ, ಗಂಗಾವತಿ ತಾಲೂಕಿನಲ್ಲಿ 36 ಕಾಮಗಾರಿಗಳಿಗೆ 6. 19 ಕೋಟಿ, ಕುಷ್ಟಗಿ ತಾಲೂಕಿನಲ್ಲಿ 174 ಕಾಮಗಾರಿಗಳಿಗೆ 31. 86 ಕೋಟಿ, ಹಾಗೂ ಯಲಬುರ್ಗಾ ತಾಲೂಕಿನಲ್ಲಿ 139 ಕಾಮಗಾರಿಗಳಿಗೆ 32. 78 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿ 2016-17 ರವರೆಗಿನ ಪ್ರಗತಿ ಗಮನಿಸಿದಾಗ ಈವರೆಗೆ ಅನುಮೋದನೆಗೊಂಡ 1464 ಕಾಮಗಾರಿಗಳ ಪೈಕಿ ಸುಮಾರು ಒಂದು ಸಾವಿರ ಕಾಮಗಾರಿಗಳು ಪೂರ್ಣಗೊಂಡಿವೆ.
ಮ್ಯಾಕ್ರೋ ಕಾರ್ಯಕ್ರಮಗಳಡಿ ಪ್ರಸಕ್ತ ಸಾಲಿಗೆ 33 ಕಾಮಗಾರಿಗಳನ್ನು ನಿಗದಿಪಡಿಸಿದ್ದು, 82. 80 ಕೋಟಿ ರೂ. ಅನುದಾನ ಕಾಯ್ದಿರಿಸಿದೆ. ಜಿಲ್ಲೆಯಲ್ಲಿ ಈವರೆಗಿನ ಒಟ್ಟು 150 ಕಾಮಗಾರಿಗಳಲ್ಲಿ ಬಹುತೇಕ ಪ್ರೌಢಶಾಲಾ ಕಟ್ಟಡಗಳು ಹಾಗೂ ಕಾಲೇಜು ಕಟ್ಟಡಗಳ ಕಾಮಗಾರಿಗಳು ಒಳಗೊಂಡಿವೆ. ಹೈ-ಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಈವರೆಗೆ 25. 35 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಯಲಬುರ್ಗಾ ತಾಲೂಕಿನ ಕೋನಸಾಗರಕ್ಕೆ ಹೊಸದಾಗಿ ಪ್ರೌಢಶಾಲೆ ಹಾಗೂ ಗಾಣಧಾಳ ಗ್ರಾಮಕ್ಕೆ ಪದವಿಪೂರ್ವ ಕಾಲೇಜು ಮಂಜೂರು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
ಹೈದ್ರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಜಂಟಿನಿರ್ದೇಶಕ ಬಸವರಾಜ ಅವರು ಮಾತನಾಡಿ, ಹೈ-ಕ ಪ್ರದೇಶ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಕೈಗೊಳ್ಳಲಾಗುವ ಕಾಮಗಾರಿಗಳ ಬಿಲ್ ಪಾವತಿಗೆ ಸಂಬಂಧಿಸಿದಂತೆ ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರ ಬ್ಯಾಂಕ್ ಖಾತೆಗೆ ಮಂಡಳಿಯಿಂದಲೇ ನಿಯಮಾನುಸಾರ ನೇರವಾಗಿ ಜಮಾ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದರು.
ಸಭೆಯಲ್ಲಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಹೈದ್ರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಜಂಟಿನಿರ್ದೇಶಕ ಬಸವರಾಜ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಬಂಡಿವಡ್ಡರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಹೈ-ಕ ಪ್ರದೇಶಾಭಿವೃದ್ಧಿ ಯೋಜನೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಿ- ಬಸವರಾಜ ರಾಯರಡ್ಡಿ
ಎಲ್ಲಾ ಲೇಖನಗಳು ಆಗಿದೆ ಹೈ-ಕ ಪ್ರದೇಶಾಭಿವೃದ್ಧಿ ಯೋಜನೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಿ- ಬಸವರಾಜ ರಾಯರಡ್ಡಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹೈ-ಕ ಪ್ರದೇಶಾಭಿವೃದ್ಧಿ ಯೋಜನೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಿ- ಬಸವರಾಜ ರಾಯರಡ್ಡಿ ಲಿಂಕ್ ವಿಳಾಸ https://dekalungi.blogspot.com/2017/11/blog-post_823.html
0 Response to "ಹೈ-ಕ ಪ್ರದೇಶಾಭಿವೃದ್ಧಿ ಯೋಜನೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಿ- ಬಸವರಾಜ ರಾಯರಡ್ಡಿ"
ಕಾಮೆಂಟ್ ಪೋಸ್ಟ್ ಮಾಡಿ