ಶೀರ್ಷಿಕೆ : ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ
ಲಿಂಕ್ : ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ
ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ
ಕೊಪ್ಪಳ ನ. 14 (ಕರ್ನಾಟಕ ವಾರ್ತೆ): ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನ. 21 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದ್ದು, ಭಾಗವಹಿಸಲು ಆಸಕ್ತರು ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಲು ಇಲಾಖೆ ಸಹಾಯಕ ನಿರ್ದೇಶಕರಾದ ವೈ. ಸುದರ್ಶನರಾವ್ ಅವರು ಸೂಚನೆ ನೀಡಿದ್ದಾರೆ.
ಕೊಪ್ಪಳ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ, ಜನಪದ ಗೀತೆ, ನಾಟಕ (ಹಿಂದಿ ಅಥವಾ ಇಂಗ್ಲೀಷ್), ಭರತನಾಟ್ಯ, ತಬಲಾ ಸೋಲೋ, ಕೊಳಲು, ಶಾಸ್ತ್ರೀಯ ಸಂಗೀತ, ವೀಣಾ ಸೋಲೋ, ಆಶು ಭಾಷಣ, ಕುಚುಪುಡಿ ನೃತ್ಯ, ಗಿಟಾರ್ ಸೋಲೋ, ಹಾರ್ಮೊನಿಯಂ, ಸಿತಾರ್ ಸೋಲೋ ಸೇರಿದಂತೆ ಒಟ್ಟು 16 ಕಲೆಗಳ ಸ್ಪರ್ಧೆಗಳನ್ನು ವೈಯಕ್ತಿಕ ಹಾಗೂ ಗುಂಪು ವಿಭಾಗಗಳಲ್ಲಿ ಸಂಘಟಿಸಲಾಗುವುದು. ಜಿಲ್ಲೆಯ ಎಲ್ಲಾ ತಾಲೂಕಿನ ಯುವಕ-ಯುವತಿಯರು, ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಮಹಿಳಾ-ಪುರುಷ ವಿದ್ಯಾರ್ಥಿಗಳು, ಸಂಘ-ಸಂಸ್ಥೆ ಸದಸ್ಯರು, ಸಂಗೀತ ಸಂಸ್ಥೆಗಳ ಸದಸ್ಯರು, ಕಲಾವಿದರುಗಳು ಭಾಗವಹಿಸಬಹುದಾಗಿದೆ.
ಭಾಗವಹಿಸಲು 15 ರಿಂದ 29 ವರ್ಷ ವಯೋಮಿತಿಯಲ್ಲಿರಬೇಕು. ವಯೋಮಿತಿಯ ನಿರ್ಭಂದವಿರುವುದರಿಂದ ಆಧಾರ ಕಾರ್ಡ ಕಡ್ಡಾಯವಾಗಿ ತರಬೇಕು. ಇಲಾಖೆಯಲ್ಲಿ ನೊಂದಣಿಯಾದ ಎಲ್ಲಾ ಯುವಕ/ ಯುವತಿಯರಿಗೆ, ಸಂಘ ಮತ್ತು ಸಂಸ್ಥೆಯವತಿಯಿಂದ ಯಾವುದಾದರು ಒಂದು ಸ್ಪರ್ಧೆಯಲ್ಲಿ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ. ಸ್ಪರ್ಧಾಳುಗಳಿಗೆ ಊಟದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ನೊಂದಾಣಿಯಾಗಿ ಭಾಗವಹಿಸಿ ಸ್ಪರ್ಧೆಯ ಗುರುತು ಪತ್ರ ತೋರಿಸಿದ ಸ್ಥಳೀಯ ತಾಲೂಕಿನವರಿಗೆ ಬಿಟ್ಟು ಎಲ್ಲಾ ಸ್ಪರ್ಧಾಳುಗಳಿಗೆ ತಾಲೂಕ ಕೇಂದ್ರ ಸ್ಥಾನದಿಂದ ಸಂಘಟನಾ ಸ್ಥಾನದವರೆಗೆ ಸಾಮಾನ್ಯ ಪ್ರಯಾಣ ಭತ್ಯೆ ನೀಡಲಾಗುವುದು. ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತ ಸ್ಪರ್ಧಾಳುಗಳು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.
ಆಸಕ್ತರು ತಮ್ಮ ಹೆಸರು ಮತ್ತು ಸ್ಪರ್ಧೆಗಳ ವಿವರವನ್ನು ಆಯಾ ತಾಲೂಕಿನ ಸಹಾಯಕ ಯುವ ಸಬಲೀಕರಣ ಕ್ರೀಡಾಧಿಕಾರಿಗಳಲ್ಲಿ ನ. 18 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕ ಅಧಿಕಾರಿಗಳ ದೂರವಾಣಿ ಸಂಖ್ಯೆ ಕೊಪ್ಪಳದ ಶರಣಬಸವ ಬಂಡಿಹಾಳ - 9591292420, ಕುಷ್ಟಗಿಯ ಮಹಾಂತೇಶ – 9945501033, ಯಲಬುರ್ಗಾದ ಹನುಮಂತಪ್ಪ – 8970288857, ಹಾಗೂ ಗಂಗಾವತಿಯ ರಂಗಸ್ವಾಮಿ – 7411755523 ಕ್ಕೆ ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರ ಕಛೇರಿಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ
ಎಲ್ಲಾ ಲೇಖನಗಳು ಆಗಿದೆ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/11/blog-post_87.html
0 Response to "ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ