ಶೀರ್ಷಿಕೆ : ಕಾನೂನು ಒದಗಿಸಿರುವ ರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಬೇಕು- ಎಂ. ಕನಗವಲ್ಲಿ
ಲಿಂಕ್ : ಕಾನೂನು ಒದಗಿಸಿರುವ ರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಬೇಕು- ಎಂ. ಕನಗವಲ್ಲಿ
ಕಾನೂನು ಒದಗಿಸಿರುವ ರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಬೇಕು- ಎಂ. ಕನಗವಲ್ಲಿ
ಕೊಪ್ಪಳ ನ. 09 (ಕರ್ನಾಟಕ ವಾರ್ತೆ): ಭಾರತ ದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಕಾನೂನು, ರಕ್ಷಣೆಯನ್ನು ಒದಗಿಸಿದೆ. ಇದರಲ್ಲಿ ಉಚಿತ ಕಾನೂನು ನೆರವೂ ಕೂಡ ಒಂದಾಗಿದ್ದು, ಈ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ನ್ಯಾಯಾವಾದಿಗಳ ಸಂಘ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ನಗರಸಭೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ “ರಾಷ್ಟ್ರೀಯ ಕಾನೂನು ಪ್ರಾಧಿಕಾರ ದಿನಾಚರಣೆ” ಅಂಗವಾಗಿ ಉಚಿತ ಕಾನೂನು ನೆರವಿನ ಬಗ್ಗೆ ನಗರದಲ್ಲಿ ಆಯೋಜಿಸಿದ ಜಾಗೃತಿ ಜಾಥಾಕ್ಕೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಗುರುವಾರದಂದು ಚಾಲನೆ ನೀಡಿ ಮಾತನಾಡಿದರು.
ನಮ್ಮ ಸಂವಿಧಾನ ದೇಶದ ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ರಕ್ಷಣೆಯನ್ನು ಒದಗಿಸಿದೆ. ಕಾನೂನು ಕೇವಲ ಉಳ್ಳವರ ಸ್ವತ್ತಲ್ಲ. ಪ್ರತಿಯೊಬ್ಬರಿಗೂ ಕಾನೂನಿನ ನೆರವು ಪಡೆಯಲು ಹಕ್ಕಿದೆ. ಇದಕ್ಕೆಂದೇ ಕಾನೂನು ಸೇವಾ ಪ್ರಾಧಿಕಾರ ಅಸ್ತಿತ್ವದಲ್ಲಿದ್ದು, ಇದರಲ್ಲಿ ಬಡವರು, ದಲಿತರು, ಮಹಿಳೆಯರು ಸೇರಿದಂತೆ ಹಲವರಿಗೆ ಉಚಿತವಾಗಿ ಕಾನೂನು ನೆರವು ಜೊತೆಗೆ ಕಾನೂನಿನ ಸಲಹೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಇದರ ಬಗ್ಗೆ ಅರಿವಿನ ಕೊರತೆಯಿಂದಾಗಿ, ಕಾನೂನಿನ ರಕ್ಷಣೆ ಪಡೆಯಲು ಸಾರ್ವಜನಿಕರು ಮುಂದಾಗುತ್ತಿಲ್ಲ. ಹೀಗಾಗಿ ಕಾನೂನು ಸೇವಾ ಪ್ರಾಧಿಕಾರದಲ್ಲಿ ಸಾರ್ವಜನಿಕರಿಗೆ ಲಭ್ಯವಿರುವ ಉಚಿತ ಕಾನೂನು ಸೇವೆಗಳ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮ ಹೆಚ್ಚು ಹೆಚ್ಚಾಗಿ ನಡೆಯಬೇಕು. ಈ ದಿಸೆಯಲ್ಲಿ ನ. 09 ರಿಂದ 18 ರವರೆಗೆ ಜಿಲ್ಲೆಯಾದ್ಯಂತ ಕಾನೂನು ನೆರವು ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಕಾನೂನು ಸೇವಾ ಪ್ರಾಧಿಕಾರ ಹಮ್ಮಿಕೊಂಡಿರುವುದು ಸ್ವಾಗತಾರ್ಹವಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೀವ ಗುರುನಾಥ ಜೋಷಿ ಅವರು ಮಾತನಾಡಿ, ಕಾನೂನು ಸೇವೆಗಳ ಪ್ರಾಧಿಕಾರಗಳು ಸಾರ್ವಜನಿಕರ ಕಾನೂನು ಹಕ್ಕುಗಳ ಸಂರಕ್ಷಣೆಗೆ ಬದ್ಧವಾಗಿವೆ. ಉಚಿತ ಕಾನೂನು ನೆರವು ಮತ್ತು ಸಲಹೆ ಒದಗಿಸುವುದು, ಕಾನೂನು ಜಾಗೃತಿ ಮೂಡಿಸುವುದು, ಲೋಕ ಅದಾಲತ್‍ಗಳನ್ನು ಆಯೋಜಿಸಿ, ನೆರವು ಒದಗಿಸಲಾಗುತ್ತಿದೆ. ಮಹಿಳೆಯರು, ಮಕ್ಕಳು, ಪ.ಜಾತಿ ಮತ್ತು ಪ.ಪಂಗಡದವರು, ಕೈಗಾರಿಕಾ ಕಾರ್ಮಿಕರು, ಅಂಗವಿಕಲರು, ನೈಸರ್ಗಿಕ ವಿಕೋಪ, ಜನಾಂಗೀಯ ಗಲಭೆ, ಕೈಗಾರಿಕಾ ಆಪತ್ತುಗಳಲ್ಲಿ ಬಾಧಿತರು, ಸ್ವಾಧೀನತೆಯಲ್ಲಿರುವ ವ್ಯಕ್ತಿಗಳು ಹೀಗೆ ನಾನಾ ವ್ಯಕ್ತಿಗಳು ಉಚಿತವಾಗಿ ಕಾನೂನು ಸೇವೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಕೆಳ ಹಂತದ ನ್ಯಾಯಾಲಯದಿಂದ ಜಿಲ್ಲಾ, ಹೈಕೋರ್ಟ್, ಸರ್ವೋಚ್ಛ ನ್ಯಾಯಾಲಯದ ಹಂತದವರೆಗೂ ಉಚಿತವಾಗಿ ಕಾನೂನು ನೆರವು ಪಡೆಯಲು ಇಂತಹವರು ಅರ್ಹರಿರುತ್ತಾರೆ. ಜನರು ಕಾನೂನು ಸೇವಾ ಪ್ರಾಧಿಕಾರದ ನೆರವನ್ನು ಪಡೆದು, ಕಾನೂನು ರಕ್ಷಣೆ ಪಡೆದುಕೊಳ್ಳಬೇಕು ಎಂದರು.
ಸೀನಿಯರ್ ಸಿವಿಲ್ ಜಡ್ಜ್ ಟಿ. ಶ್ರೀನಿವಾಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಎಸ್. ಕಂಪ್ಲಿ ಅವರು ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ, ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ ಕನ್ನೂರು, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮನುಶರ್ಮ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎಸ್.ಹೆಚ್. ಇಂಗಳದಾಳ, ಕಾರ್ಯದರ್ಶಿ ಕೊಟ್ರೇಶ ಯು. ಪೋಚಗುಂಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನ್ಯಾಯವಾದಿಗಳು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಾರ್ವಜನಿಕರಿಗೆ ಉಚಿತ ಕಾನೂನು ನೆರವು ಸೌಲಭ್ಯದ ಕುರಿತ ಭಿತ್ತಿ ಪತ್ರಗಳೊಂದಿಗೆ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು.
ಹೀಗಾಗಿ ಲೇಖನಗಳು ಕಾನೂನು ಒದಗಿಸಿರುವ ರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಬೇಕು- ಎಂ. ಕನಗವಲ್ಲಿ
ಎಲ್ಲಾ ಲೇಖನಗಳು ಆಗಿದೆ ಕಾನೂನು ಒದಗಿಸಿರುವ ರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಬೇಕು- ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಾನೂನು ಒದಗಿಸಿರುವ ರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಬೇಕು- ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2017/11/blog-post_9.html
0 Response to "ಕಾನೂನು ಒದಗಿಸಿರುವ ರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಬೇಕು- ಎಂ. ಕನಗವಲ್ಲಿ"
ಕಾಮೆಂಟ್ ಪೋಸ್ಟ್ ಮಾಡಿ