ಕೃಷ್ಣಾ-ಬಿ ಸ್ಕೀಂ ಮೂರನೆ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್- ಬಸವರಾಜ ರಾಯರಡ್ಡಿ

ಕೃಷ್ಣಾ-ಬಿ ಸ್ಕೀಂ ಮೂರನೆ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್- ಬಸವರಾಜ ರಾಯರಡ್ಡಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೃಷ್ಣಾ-ಬಿ ಸ್ಕೀಂ ಮೂರನೆ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್- ಬಸವರಾಜ ರಾಯರಡ್ಡಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೃಷ್ಣಾ-ಬಿ ಸ್ಕೀಂ ಮೂರನೆ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್- ಬಸವರಾಜ ರಾಯರಡ್ಡಿ
ಲಿಂಕ್ : ಕೃಷ್ಣಾ-ಬಿ ಸ್ಕೀಂ ಮೂರನೆ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್- ಬಸವರಾಜ ರಾಯರಡ್ಡಿ

ಓದಿ


ಕೃಷ್ಣಾ-ಬಿ ಸ್ಕೀಂ ಮೂರನೆ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್- ಬಸವರಾಜ ರಾಯರಡ್ಡಿ


ಕೊಪ್ಪಳ ನ. 01 (ಕರ್ನಾಟಕ ವಾರ್ತೆ): ಕೃಷ್ಣಾ-ಬಿ ಸ್ಕೀಂ ಯೋಜನೆಯಡಿ ಕೊಪ್ಪಳ ಏತ ನೀರಾವರಿ ಯೋಜನೆಯ ಮೂರನೆ ಹಂತದ ಕಾಮಗಾರಿಗಳಿಗೆ 2365 ಕೋಟಿ ರೂ. ಅನುದಾನವನ್ನು ಶೀಘ್ರ ಒದಗಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದು, ಶೀಘ್ರ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.

     ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ನಂತರ ರಾಜ್ಯೋತ್ಸವ ಸಂದೇಶ ನೀಡಿ, ಅವರು ಮಾತನಾಡಿದರು.

     ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕಾಗಿ ಕಳೆದ ತಿಂಗಳು ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿಗಳು, ಕೃಷ್ಣಾ-ಬಿ ಸ್ಕೀಂ ಯೋಜನೆಯಡಿ ಕೊಪ್ಪಳ ಏತ ನೀರಾವರಿ ಯೋಜನೆಯ ಮೂರನೆ ಹಂತದ ಕಾಮಗಾರಿಗಳಿಗೆ 2365 ಕೋಟಿ ರೂ. ಅನುದಾನವನ್ನು ಶೀಘ್ರ ಒದಗಿಸುವುದಾಗಿ ಘೋಷಣೆ ಮಾಡಿದ್ದರು.  ಇದೀಗ ಯೋಜನೆಯ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಪ್ರಾರಂಭಿಸಲಾಗುವುದು.  

     ಕೊಪ್ಪಳ ಜಿಲ್ಲೆಯ ನಾಲ್ವರು ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಜಿಲ್ಲೆಯ ಪಾಲಿಗೆ ಸಂತಸದ ಸಂಗತಿಯಾಗಿದೆ.  ಜಿಲ್ಲೆಯ ವಿಠ್ಠಪ್ಪ ಗೋರಂಟ್ಲಿ, ಶಾವಮ್ಮ ರಾಠೋಡ್, ಡಾ. ಹನುಮಾಕ್ಷಿ ಗೋಗಿ ಹಾಗೂ ಡಾ. ಬಸವರಾಜ ಸಬರದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

     ವಿವಿಧ ಪ್ರಾಂತಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡನಾಡು, ಏಕೀಕರಣಗೊಂಡು ಭಾಷಾವಾರು ಪ್ರಾಂತ ರಚನೆಯ ಆಧಾರದ ಮೇಲೆ ಕರ್ನಾಟಕ ರಾಜ್ಯ ಉದಯವಾಗಿ 61 ವರ್ಷಗಳು ಪೂರ್ಣಗೊಂಡಿವೆ.

ಕರ್ನಾಟಕ ರಾಜ್ಯ ರೂಪುಗೊಳ್ಳಲು ಹಲವರ ಶ್ರಮ, ಹೋರಾಟಗಳು ಕಾರಣವಾಗಿವೆ. ಕರ್ನಾಟಕ ಏಕೀಕರಣಕ್ಕಾಗಿ ಮೊದಲು ಚಳುವಳಿ ಪ್ರಾರಂಭಿಸಿದವರು ಉತ್ತರ ಕರ್ನಾಟಕದವರು ಎಂದು ಹೇಳಲು ಹೆಮ್ಮೆ ಎನಿಸುತ್ತದೆ.  ಕೊಪ್ಪಳ ಐತಿಹಾಸಿಕ ಹಿರಿಮೆಯನ್ನು ಹೊಂದಿದ ನಾಡು, ‘’ತಿರುಳ್ಗನ್ನಡದ ನಾಡು ‘’ ಎಂದೇ ಅದು ಪ್ರಸಿದ್ದವಾಗಿದೆ. ಕೊಪ್ಪಳವು, ಕರ್ನಾಟಕದ ಪ್ರಮುಖ ರಾಜಮನೆತನಗಳ ಆಳ್ವಿಕೆಗೊಳಪಟ್ಟ, ರಾಜಕೀಯ, ಧಾರ್ಮಿಕ, ಸಾಮರಸ್ಯಕ್ಕೆ ಹೆಸರಾದ ಬೀಡು ಇದು ಪರಧರ್ಮ ಸಹಿಷ್ಣತೆಗೆ ಒಂದು ಮಾದರಿಯಾಗಿದೆ. ಈ ನಾಡನ್ನು ಸಾಂಸ್ಕøತಿಕವಾಗಿ ಮತ್ತಷ್ಟು ಉನ್ನತ ಶಿಖರಕ್ಕೆ ತಲುಪಿಸಬೇಕಾದದ್ದು ಈ ನಾಡಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ.  ಕಲಾ ಕ್ಷೇತ್ರಕ್ಕೂ ಕೊಪ್ಪಳ ಜಿಲ್ಲೆಯ ಕೊಡುಗೆ ಗಣನೀಯವಾಗಿದೆ. ವೃತ್ತಿ ರಂಗಭೂಮಿ ಮಂಡಳಿಗಳು, ಪೌರಾಣಿಕ, ಸಾಮಾಜಿಕ, ಹವ್ಯಾಸಿ ನಾಟಕಗಳು, ಜಾನಪದ ಕಲೆಗಳು, ಬಯಲಾಟ, ಚಿತ್ರಕಲೆ, ಸಂಗೀತ-ಸಾಹಿತ್ಯ ಕ್ಷೇತ್ರಗಳಿಗೂ ಸಹ ಕೊಪ್ಪಳ ಜಿಲ್ಲೆ ಪ್ರಸಿದ್ದಿಯಾಗಿದೆ. ಕಿನ್ನಾಳ ಕರಕುಶಲಕಲೆ, ಜಾನಪದ ಪ್ರದರ್ಶನ ಕಲೆಗಳು, ಶಿಲ್ಪಕಲೆಗಳಿಗೆ ಸಂಬಂಧಿಸಿದ ಕಲಾಪ್ರಕಾರಗಳು ಕೊಪ್ಪಳ ಜಿಲ್ಲೆಯಲ್ಲಿ ಇರುವುದು ಅಭಿಮಾನದ ಸಂಗತಿಯಾಗಿದೆ.  2 ಸಾವಿರ ವರ್ಷಗಳ ವರ್ಣಮಯ ಇತಿಹಾಸ, ಸಿರಿ ಭಂಡಾರವನ್ನೇ ತನ್ನದಾಗಿಸಿಕೊಂಡಿರುವ ಈ ರಾಜ್ಯ, ಸೂಕ್ಷ್ಮಾತಿ ಸೂಕ್ಷ್ಮ ಕಲೆಗಳ ತಾಯಿನಾಡು. ಬಹುಭಾಷಾ, ಬಹು ಸಂಸ್ಕøತಿ ಮತ್ತು ಬಹುಧರ್ಮಗಳ ನೆಲೆವೀಡಾದ ಈ ನಾಡಿನ ನೆಲ, ಜಲ, ಸಂಸ್ಕøತಿಯ ವೈಭವವನ್ನು ಮತ್ತಷ್ಟು ಉತ್ತುಂಗಕ್ಕೆರಿಸಲು ರಾಜ್ಯದ ಶ್ರೀಮಂತ ಪರಂಪರೆಯನ್ನು ಉತ್ತೇಜಿಸುವ ಬದ್ಧತೆಯೊಂದಿಗೆ ನಮ್ಮ ಸರ್ಕಾರವು  ಕನ್ನಡ ಭಾಷೆ, ನಾಡು-ನುಡಿಯ ಅಭಿವೃದ್ದಿಗಾಗಿ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು. 

       ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಮರಣ ತಪ್ಪಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ‘ಮಾತೃಪೂರ್ಣ’ ಯೋಜನೆಯನ್ನು ಜಾರಿಗೆ ತಂದಿದ್ದು, ಯೋಜನೆಯಡಿ ಗರ್ಭಿಣಿಯರು, ಬಾಣಂತಿಯರಿಗೆ ಅತ್ಯುತ್ತಮ ಪೌಷ್ಠಿಕ ಆಹಾರವನ್ನು ಅಂಗನವಾಡಿಗಳಲ್ಲೇ ಬಿಸಿಯೂಟದ ರೂಪದಲ್ಲಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 33405 ಮಹಿಳಾ ಫಲಾನುಭವಿಗಳಿಗೆ ಮಾತೃಪೂರ್ಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟದಡಿ ಪೌಷ್ಠಿಕ ಆಹಾರ ನೀಡಲಾಗುತ್ತಿದೆ.  ಕೃಷಿಭಾಗ್ಯ ಯೋಜನೆಯಡಿ ಈವರೆಗೆ ಒಟ್ಟು 7945 ಕೃಷಿಹೊಂಡಗಳನ್ನು ನಿರ್ಮಿಸಲಾಗಿದ್ದು, ಇದಕ್ಕಾಗಿ ಸರ್ಕಾರ 66. 66 ಕೋಟಿ ರೂ. ಗಳ ಅನುದಾನ ಒದಗಿಸಿದೆ.  ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಬಹುತೇಕ ಕೃಷಿಹೊಂಡಗಳು ಭರ್ತಿಯಾಗಿ, ರೈತರಲ್ಲಿ ಸಂತಸ ತಂದಿದೆ.  ಕೊಪ್ಪಳ ಜಿಲ್ಲೆಗೆ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮೈಕ್ರೋ ಯೋಜನೆಯ ಸಾಂಸ್ಥಿಕ ಮತ್ತು ಮೂಲಭೂತ ಸೌಕರ್ಯ ವಲಯದಡಿಯಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಈವರೆಗೆ ನಮ್ಮ ಸರ್ಕಾರ ಒಟ್ಟು 301. 29 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ.  ಪ್ರಸಕ್ತ ಸಾಲಿನಲ್ಲಿ ಮ್ಯಾಕ್ರೋ ಯೋಜನೆಯಡಿ 77 ಕೋಟಿ ರೂ. ಮಂಜೂರಾಗಿದ್ದು, ಇದರಲ್ಲಿ ಹೊಸ 6 ಪ್ರೌಢಶಾಲೆಗಳು, 3 ಪಿಯು ಕಾಲೇಜುಗಳು, 1 ಪದವಿ ಕಾಲೇಜು ಹಾಸ್ಟೇಲ್, ನ್ಯಾಷನಲ್ ಸ್ಕಿಲ್ ಡೇವಲಪ್‍ಮೆಂಟ್ ಸೆಂಟರ್,  4 ಬಸ್‍ಸ್ಟ್ಯಾಂಡ್, ತಳಕಲ್ ಸರ್ಕಾರಿ ಇಂಜಿನೀಯರಿಂಗ್ ಕಾಲೇಜು ಕಟ್ಟಡ, ಕೊಪ್ಪಳ, ಕನಕಗಿರಿ ಮತ್ತು ಗಂಗಾವತಿ ನಗರದಲ್ಲಿನ ರಸ್ತೆಗಳು, ಕೊಪ್ಪಳದಲ್ಲಿ ಸ್ಕೌಟ್ಸ್ ಮತ್ತು ಗೈಡ್ ಕಟ್ಟಡ ಹಾಗೂ ಕೊಪ್ಪಳದಲ್ಲಿ ಗ್ರಂಥಾಲಯ ಕಟ್ಟಡ ಕಾಮಗಾರಿಗಳಿಗೆ ಅನುದಾನವನ್ನು ಒದಗಿಸಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
     ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ. ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ನೆರವೇರಿತು.  ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 06 ಜನ ಸಾಧಕರಿಗೆ  ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.  ವಿವಿಧ ಶಾಲಾ ಮಕ್ಕಳಿಂದ ಕನ್ನಡ ನಾಡು, ನುಡಿ ಕುರಿತು ಏರ್ಪಡಿಸಿದ ಸಾಂಸ್ಕøತಿಕ ಕಾರ್ಯಕ್ರಮ ಆಕರ್ಷಣೆಯ ಕೇಂದ್ರವಾಯಿತು. 
     ಕೊಪ್ಪಳ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದ್ರಿ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
     ಸಮಾರಂಭಕ್ಕೂ ಪೂರ್ವದಲ್ಲಿ ಕನ್ನಡತಾಯಿ ಭುವನೇಶ್ವರಿ ದೇವಿ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಹಸಿಲ್ದಾರರ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.  ಮೆರವಣಿಗೆಯಲ್ಲಿ ಹಲವು ಕಲಾತಂಡಗಳು ಪಾಲ್ಗೊಂಡಿದ್ದವು.  ವಿವಿಧ ಇಲಾಖೆಗಳು ಹಾಗೂ ಶಾಲೆಗಳಿಂದ ಆಯೋಜಿಸಿದ್ದ ಸ್ತಬ್ಧ ಚಿತ್ರಗಳು ಮೆರವಣಿಗೆಗೆ ಸಾಥ್ ನೀಡಿದ್ದವು.


ಹೀಗಾಗಿ ಲೇಖನಗಳು ಕೃಷ್ಣಾ-ಬಿ ಸ್ಕೀಂ ಮೂರನೆ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್- ಬಸವರಾಜ ರಾಯರಡ್ಡಿ

ಎಲ್ಲಾ ಲೇಖನಗಳು ಆಗಿದೆ ಕೃಷ್ಣಾ-ಬಿ ಸ್ಕೀಂ ಮೂರನೆ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್- ಬಸವರಾಜ ರಾಯರಡ್ಡಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೃಷ್ಣಾ-ಬಿ ಸ್ಕೀಂ ಮೂರನೆ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್- ಬಸವರಾಜ ರಾಯರಡ್ಡಿ ಲಿಂಕ್ ವಿಳಾಸ https://dekalungi.blogspot.com/2017/11/blog-post_97.html

Subscribe to receive free email updates:

0 Response to "ಕೃಷ್ಣಾ-ಬಿ ಸ್ಕೀಂ ಮೂರನೆ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್- ಬಸವರಾಜ ರಾಯರಡ್ಡಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ