ಶೀರ್ಷಿಕೆ : ಭಾರತ ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ : ಎಂ. ಕನಗವಲ್ಲಿ
ಲಿಂಕ್ : ಭಾರತ ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ : ಎಂ. ಕನಗವಲ್ಲಿ
ಭಾರತ ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ : ಎಂ. ಕನಗವಲ್ಲಿ
ಕೊಪ್ಪಳ ನ. 22 (ಕರ್ನಾಟಕ ವಾರ್ತೆ): ದೇಶಕ್ಕಾಗಿ ಡಾ. ಬಿ.ಆರ್ ಅಂಬೇಡ್ಕರ್ ರವರ ಕೊಡುಗೆಗಳು ಅಪಾರವಾಗಿದ್ದು, ಶಿಕ್ಷಣ ಮತ್ತು ಅಧ್ಯಯನದಿಂದಲೇ ಬಾಬಾ ಸಾಹೇಬ್ ರವರು ಉನ್ನತ ಮಟ್ಟಕ್ಕೇರಲು ಸಾಧ್ಯವಾಯಿತು, ಆದ್ದರಿಂದ ಪ್ರತಿಯೊಬ್ಬರೂ ಓದುವ ಹಾಗೂ ಅಧ್ಯಯನ ಕೈಗೊಳ್ಳುವ ಹವ್ಯಾಸವನ್ನು ಬೆಳಸಿಕೊಳ್ಳಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬೆಂಗಳೂರು ಸಮಾಜ ಕಲ್ಯಾಣ ಇಲಾಖೆ, ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಬಹುಶಿಸ್ತಿಯ ಸಂಶೋಧನಾ ಕೇಂದ್ರ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 125ನೇ ಜಯಂತಿ ವರ್ಷಾಚರಣೆ ಅಂಗವಾಗಿ ಅಂತರ್ ರಾಷ್ಟ್ರೀಯ ಸಮ್ಮೇಳನ ಆಯೋಜನ ಸಮಿತಿ, ಬೆಂಗಳೂರು ಮತ್ತು ಕೊಪ್ಪಳ ಸ್ನಾತಕೋತ್ತರ ಕೇಂದ್ರ ಇವರ ಸಹಯೋಗದಲ್ಲಿ "ತಳ ಸಮುದಾಯ ಮತ್ತು ಸಾಮಾಜಿಕ ನ್ಯಾಯ" ಡಾ. ಬಿ.ಆರ್ ಅಂಬೇಡ್ಕರ್ ರವರ ಚಿಂತನೆಗಳ ಕುರಿತು ನಗರದ ಸ್ನಾತಕೋತ್ತರ ಕೇಂದ್ರದಲ್ಲಿ ಬುಧವಾರದಂದು ಆಯೋಜಿಸಲಾಗಿದ್ದ, ಒಂದು ದಿನದ ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ರವರು ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದ ಮೊದಲ ಭಾರತೀಯರಾಗಿದ್ದಾರೆ. ಅವರು ನೀಡಿದ ಸಂವಿಧಾನ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಇಂತಹ ಮಹಾ ಮಾನವತಾವಾದಿ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಅವರ ಜೀವನ, ಚಿಂತನೆ ಹಾಗೂ ವಿಶೇಷವಾಗಿ ಸಂವಿಧಾನವನ್ನು ಅರಿತುಕೊಳ್ಳಬೇಕು. ಬಾಬಾ ಸಾಹೇಬ್ ರವರ 125ನೇ ಜಯಂತಿ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಆಯೋಜಿಸಲಾಗಿದ್ದ, “ಭಾರತ ಭಾಗ್ಯವಿದಾತ” ಧ್ವನಿ-ಬೆಳಕು ಕಾರ್ಯಕ್ರಮ ನಿಜವಾಗಿಯೂ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿತ್ತು. ಇಂತಹ ಕಾರ್ಯಕ್ರಮಗಳು ಆಗಾಗ್ಗೆ ಜರುಗಬೇಕು. ವಿದ್ಯಾರ್ಥಿಗಳು ತಮ್ಮ ಪದವಿ ಶಿಕ್ಷಣದ ಜೊತೆ ಜೊತೆಯಲ್ಲಿಯೇ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಅಧ್ಯಯನ ಕೈಗೊಂಡು ತಿಳಿದುಕೊಳ್ಳಬೇಕು. ಸ್ನಾತಕೊತ್ತರ ಕೇಂದ್ರದಲ್ಲಿಂದು ಹಮ್ಮಿಕೊಳ್ಳಲಾಗಿದ್ದ, ಅಂಬೇಡ್ಕರ್ ರವರ ಚಿಂತನೆಗಳ ಕುರಿತ ವಿಚಾರ ಸಂಕಿರಣದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಆಸಕ್ತಿಯಿಂದ ವಿಚಾರಗಳನ್ನು ತಿಳಿದು ಹಿಂದಿರುಗಿ, ಅಂದಾಗ ಮಾತ್ರ ಇಂತಹ ಕಾರ್ಯಾಗಾರಗಳಿಗೆ ಅರ್ಥ ಬರುತ್ತದೆ. ಮೊಬೈಲ್ ಬಳಕೆಯನ್ನು ಕಡಿಮೆಗೊಳಿಸಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ, ಶಿಕ್ಷಣವಂತರಾದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ವಿದ್ಯಾರ್ಥಿಗಳಿಗೆ ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸುಭಾಶ್ ಎಮ್.ಎಸ್. ಅವರು ಮಾತನಾಡಿ, ತಳ ಸಮುದಾಯಕ್ಕೆ ಸ್ಥಾನಮಾನ, ಅಸ್ಪ್ರಶ್ಯತೆ ನಿವಾರಣೆ, ಮಹಿಳೆಯರಿಗೆ ಸಮಾನತೆ ಒದಗಿಸಿದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಸರ್ಕಾರದಿಂದ ಅಂಬೇಡ್ಕರ್ ರವರ 125ನೇ ಜಯಂತಿ ವರ್ಷಾಚರಣೆ ಆಚರಿಸಲಾಗುತ್ತಿದೆ. ಸಮಾಜದಲ್ಲಿ ಇಂದಿಗೂ ನಡೆಯುತ್ತಿರುವ ಅಸ್ಪ್ರಶ್ಯತೆ, ಇತ್ಯಾದಿ ಸಾಮಾಜಿಕ ವ್ಯವಸ್ಥೆಗಳನ್ನು ಹೋಗಲಾಡಿಸಿದಾಗ ಮಾತ್ರ ಅವರ ಚಿಂತನೆಗಳಿಗೆ ಬೆಲೆ ಬರುತ್ತದೆ. ವಿಶ್ವಸಂಸ್ಥೆಯಲ್ಲಿ ಕೂಡ ಅಂಬೇಡ್ಕರ್ ಅವರ ಬಗ್ಗೆ ಚಿಂತನೆ ನಡೆಯುತ್ತಿದೆ. ಅವರು ಕೇವಲ ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಅವರು ರಾಷ್ಟ್ರದ ಆಸ್ತಿ ಹಾಗೂ ಮಹಾ ಮಾನವತಾವಾದಿಗಳಾಗಿದ್ದಾರೆ. ಬಾಬಾ ಸಾಹೇಬರ್ ರವರ ಚಿಂತನೆ, ತತ್ವಾದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಸ್.ಎ ಪಾಟೀಲ್, ಮೌಲ್ಯಮಾಪನ ಕುಲಸಚಿವ ಪ್ರೊ. ಸಿ.ಬಿ ಹೊನ್ನುಸಿದ್ಧಾರ್ಥ, ಸಿಂಡಿಕೇಟ್ ಸದಸ್ಯರಾದ ಕೆ.ಬಿ ಬ್ಯಾಳಿ, ಸಾವಿತ್ರಿ ಮುಜುಂದಾರ್ ಹಾಗೂ ಅಲ್ಲಾವಲಿ ಭಾಷಾ ಕೋಲ್ಮಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಬಹು ಶಿಸ್ತಿಯ ಸಂಶೋಧನಾ ಕೇಂದ್ರದ ಸಂಯೋಜಕ ಡಾ. ಮೋಹನ್ ದಾಸ್, ಕೊಪ್ಪಳ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಡಾ. ಮನೋಜ್ ಡೊಳ್ಳಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಭಾರತ ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ : ಎಂ. ಕನಗವಲ್ಲಿ
ಎಲ್ಲಾ ಲೇಖನಗಳು ಆಗಿದೆ ಭಾರತ ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ : ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಭಾರತ ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ : ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2017/11/blog-post_979.html
0 Response to "ಭಾರತ ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ : ಎಂ. ಕನಗವಲ್ಲಿ"
ಕಾಮೆಂಟ್ ಪೋಸ್ಟ್ ಮಾಡಿ