ಶೀರ್ಷಿಕೆ : ಮಕ್ಕಳನ್ನು ಭಿಕ್ಷಾಟನೆಗೆ ತಳ್ಳುವುದು ಶಿಕ್ಷಾರ್ಹ ಅಪರಾಧ
ಲಿಂಕ್ : ಮಕ್ಕಳನ್ನು ಭಿಕ್ಷಾಟನೆಗೆ ತಳ್ಳುವುದು ಶಿಕ್ಷಾರ್ಹ ಅಪರಾಧ
ಮಕ್ಕಳನ್ನು ಭಿಕ್ಷಾಟನೆಗೆ ತಳ್ಳುವುದು ಶಿಕ್ಷಾರ್ಹ ಅಪರಾಧ
ಕೊಪ್ಪಳ ನ.17 (ಕರ್ನಾಟಕ ವಾರ್ತೆ): ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ರ ಅನ್ವಯ 18 ವರ್ಷದೊಳಗಿನ ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸುವುದು ಅಥವಾ ಮಕ್ಕಳನ್ನು ಭಿಕ್ಷೆ ಬೇಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀರೇಂದ್ರ ನಾವದಗಿ ತಿಳಿಸಿದ್ದಾರೆ.
2015 ರ ಕಾಯ್ದೆಯನ್ವಯ ಈ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳಿಗೆ 5 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಬಹುದಾಗಿದೆ. ಈ ಕುರಿತು ಸಾರ್ವಜನಿಕರಿಲ್ಲಿ ಜಾಗೃತಿಗಾಗಿ ಹಾಗೂ ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಪತ್ತೆ ಹಚ್ಚಿ ಮುಂದಿನ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸುವಂತೆ ಈಗಾಗಲೆ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳನ್ನು ಪತ್ತೆ ಮಾಡಲಾಗುತ್ತಿದ್ದು, ಕಳೆದ ಜೂ.10 ರಂದು ಕೊಪ್ಪಳದಲ್ಲಿ 2 ಮಕ್ಕಳನ್ನು ಪತ್ತೆ ಮಾಡಲಾಗಿದ್ದು, 1 ಮಗು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಿದೆ ಹಾಗೂ ಮತ್ತೊಂದು ಮಗುವನ್ನು ಮಕ್ಕಳ ಪಾಲಕರನ್ನು ಪತ್ತೆ ಮಾಡಿ ಅವರ ವಶಕ್ಕೆ ಒಪ್ಪಿಸಲಾಗಿದೆ. ಜೂನ್ 14 ರಂದು ಗಂಗಾವತಿಯಲ್ಲಿ ಒಟ್ಟು 5 ಮಕ್ಕಳು ಪತ್ತೆಯಾಗಿದ್ದು 1 ಮಗು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದ್ದು ಉಳಿದ ನಾಲ್ಕು ಮಕ್ಕಳನ್ನು ಅವರ ಪಾಲಕರನ್ನು ಪತ್ತೆ ಮಾಡಿ ಅವರ ವಶಕ್ಕೆ ಒಪ್ಪಿಸಲಾಗಿದೆ. ಜೂ.17 ರಂದು ಕುಷ್ಟಗಿಯಲ್ಲಿ ನಾಲ್ಕು ಮಕ್ಕಳು ಪತ್ತೆಯಾಗಿದ್ದು, ನಾಲ್ಕೂ ಮಕ್ಕಳನ್ನು ಅವರ ಪಾಲಕರನ್ನು ಪತ್ತೆಮಾಡಿ ಅವರ ವಶಕ್ಕೆ ಒಪ್ಪಿಸಲಾಗಿದೆ. ಜೊತೆಗೆ ಅಂತಹ ಮಕ್ಕಳ ಪಾಲಕರಿಗೆ ಭಿಕ್ಷಾಟನೆಗೆ ಕಳುಹಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.
ಗಿಣಿಗೇರಾ ಗ್ರಾಮದ ಹೊರವಲಯದಲ್ಲಿ ಉತ್ತರ ಪ್ರದೇಶದಿಂದ ಬಂದಿರುವ ವಲಸಿಗರು ನೆಲೆಸಿದ್ದು, ಅಲ್ಲಿಯ ಮಕ್ಕಳಿಗಾಗಿ ಟೆಂಟ್ ಶಾಲೆ ತೆರೆಯುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಐಸಿಡಿಎಸ್ ಯೋಜನೆ ವ್ಯಾಪ್ತಿಯಲ್ಲಿ ಗುರುತಿಸಿ ಗರ್ಭಿಣಿ ತಾಯಿ ಮತ್ತು ಮಕ್ಕಳಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಕೋರಲಾಗಿದ್ದು, ಅದರನ್ವಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಲಸೆ ಬಂದವರಲ್ಲಿ ಗರ್ಭಿಣಿ ಮಹಿಳೆ ಮತ್ತು ಬಾಣಂತಿಯರಿಗೆ ಹಾಗೂ 6 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಐಸಿಡಿಎಸ್ ಯೋಜನೆಯಡಿ ಫಲನುಭವಿಗಳೆಂದು ಗುರುತಿಸಿ ಶಾಲಾ ಪೂರ್ವ ಶಿಕ್ಷಣ ವ್ಯವಸ್ಥೆಯಡಿ ಮಕ್ಕಳಿಗೆ ಶಿಕ್ಷಣ ಹಾಗೂ ಪೂರಕ ಪೌಷ್ಠಿಕ ಆಹಾರ ಒದಗಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಪ್ರದೇಶವಾದ ಗಂಗಾವತಿ ತಾಲೂಕಿನ ಸಿದ್ದಾಪೂರ ಗ್ರಾಮದಲ್ಲಿ “ಮಕ್ಕಳ ಜಾಗೃತಿ ಕಾರ್ಯಕ್ರಮ” ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಕಾರಟಗಿ ನಗರದಲ್ಲಿ ಮಕ್ಕಳ ರಕ್ಷಣಾ ಘಟಕದ ವಿಶೇಷ ಪೊಲೀಸ್ ಘಟಕದ ಸಂಯುಕ್ತಾಶ್ರಯದಲ್ಲಿ ಅನಿರೀಕ್ಷಿತ ದಾಳಿ ಆಯೋಜಿಸಿ ಒಂದು ಹೆಣ್ಣು ಮಗುವನ್ನು ಪತ್ತೆ ಮಾಡಿ ಸಿದ್ದಾಪುರ ಗ್ರಾಮದಲ್ಲಿನ ಕೆಜಿಬಿವಿ ಶಾಲೆಗೆ ದಾಖಲಿಸಲಾಗಿದೆ.
ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಆರೈಕೆ ಮತ್ತು ಪೋಷಣೆ ಅವಶ್ಯವಿರುವ ಮಕ್ಕಳ ರಕ್ಷಣೆಗಾಗಿ ಮಕ್ಕಳ ಸಹಾಯವಾಣಿ-1098 ಅನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿದೆ. ಇದರಿಂದ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಆರೈಕೆ ಮತ್ತು ಪೋಷಣೆಗಾಗಿ ಹಾಜರುಪಡಿಸಲಾಗುತ್ತಿದೆ.
ಭಿಕ್ಷಾಟನೆಯಲ್ಲಿ ತೊಡಗಿರುವ ಮತ್ತು ಈ ಕೃತ್ಯಕ್ಕೆ ಮಕ್ಕಳನ್ನು ಬಳಸಿಕೊಳ್ಳುವವರ ವಿರುದ್ದ ಸೂಕ್ತ ಕ್ರಮಕ್ಕಾಗಿ ಇನ್ನೂ ಅನಿರೀಕ್ಷಿತ ದಾಳಿ ಆಯೋಜಿಸಲು ಉದ್ದೇಶಿಸಿದ್ದು, ಸಮಾಜ ಕಲ್ಯಾಣ ಇಲಾಖೆಯೊಂದಿಗೆ ಶೀಘ್ರವೇ ದಾಳಿಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮಕ್ಕಳನ್ನು ಭಿಕ್ಷಾಟನೆಗೆ ತಳ್ಳುವುದು ಶಿಕ್ಷಾರ್ಹ ಅಪರಾಧ
ಎಲ್ಲಾ ಲೇಖನಗಳು ಆಗಿದೆ ಮಕ್ಕಳನ್ನು ಭಿಕ್ಷಾಟನೆಗೆ ತಳ್ಳುವುದು ಶಿಕ್ಷಾರ್ಹ ಅಪರಾಧ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಕ್ಕಳನ್ನು ಭಿಕ್ಷಾಟನೆಗೆ ತಳ್ಳುವುದು ಶಿಕ್ಷಾರ್ಹ ಅಪರಾಧ ಲಿಂಕ್ ವಿಳಾಸ https://dekalungi.blogspot.com/2017/11/blog-post_99.html
0 Response to "ಮಕ್ಕಳನ್ನು ಭಿಕ್ಷಾಟನೆಗೆ ತಳ್ಳುವುದು ಶಿಕ್ಷಾರ್ಹ ಅಪರಾಧ"
ಕಾಮೆಂಟ್ ಪೋಸ್ಟ್ ಮಾಡಿ