NEWS AND PHOTO DATE: 10--11--2017

NEWS AND PHOTO DATE: 10--11--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 10--11--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 10--11--2017
ಲಿಂಕ್ : NEWS AND PHOTO DATE: 10--11--2017

ಓದಿ


NEWS AND PHOTO DATE: 10--11--2017





ಅಪ್ರತಿಮ ಹೋರಾಟಗಾರ ಟಿಪ್ಪು ಸುಲ್ತಾನ---ಸಚಿವ ಡಾ|| ಶರಣಪ್ರಕಾಶ ಪಾಟೀಲ್
ಕಲಬುರಗಿ:ನ.10(ಕ.ವಾ)-ತನ್ನ ಇಡೀ ಜೀವನವನ್ನೇ ನಾಡಿನ ಏಳಿಗೆಗಾಗಿ ಮುಡಿಪಾಗಿಟ್ಟು ಶೌರ್ಯ, ಸಾಹಸಕ್ಕೆ ಹೆಸರಾಗಿ ಸಹಿಷ್ಣತೆಯ ರುವಾರಿಯಾಗಿದ್ದ ಟಿಪ್ಪು ಸುಲ್ತಾನ ಸ್ವಾತಂತ್ರ್ಯ ಪೂರ್ವ ದೇಶ ಕಂಡ ಅಪ್ರತಿಮ ಹೋರಾಟಗಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ್ ಹೇಳಿದರು.
     ಅವರು ಶುಕ್ರವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ. ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮವನ್ನು ಟಿಪ್ಪು ಸುಲ್ತಾನ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಟಿಪ್ಪು ಸುಲ್ತಾನ ಜೀವನದುದ್ದಕ್ಕು ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದರಿಂದಲೆ ಅವರ ತ್ಯಾಗ ಮತ್ತು ಬಲಿದಾನ ಇಂದು ಇತಿಹಾಸದ ಪುಟದಲ್ಲಿ ಸೇರಿದೆ ಎಂದರು.
ಟಿಪ್ಪು ಸುಲ್ತಾನ್ ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿಯ ಆಡಳಿತದಲ್ಲಿ ನಲುಗುತ್ತಿದ್ದ ಭಾರತವನ್ನು ಅವರ ಕಪಿಮುಷ್ಟಿಯಿಂದ ಬಿಡಿಸಲು ಕನಸು ಕಂಡ ಕಾರಣ ಪುರುಷ, ಬ್ರಿಟೀಷರೊಂದಿಗೆ ನಿರಂತದ ಸೆಣಸಿದ ಛಲಗಾರÀ, ಹಗಲಿರುಳು ಬ್ರಿಟೀಷರನ್ನು ದುಃಸ್ವಪ್ನದಂತೆ ನಿರಂತರ ಕಾಡಿದ ವೀರ ಯೋಧ, ಅಪ್ಪಟ ದೇಶಪ್ರೇಮಿಯಾಗಿದ್ದರು ಎಂದರು.
ಟಿಪ್ಪು ಸುಲ್ತಾನ್ ಅವರು ಯುದ್ಧದಲ್ಲಿ ರಾಕೆಟ್ ಕ್ಷಿಪಣಿ ಬಳಸುವ ಮೂಲಕ ಬ್ರಿಟೀಷರ ಸೇನೆಯನ್ನು ಕಂಗೆಡಿಸಿದ್ದನು. ಆಡಳಿತದಲ್ಲಿ ಅನೇಕ ತಂತ್ರಜ್ಞಾನದ ಬದಲಾವಣೆ ಮಾಡಿ, ಒಳ್ಳೆಯ ಆಡಳಿತ ನೀಡಿದ ಸ್ವಾಭಿಮಾನದ ಸಂಕೇತ ಟಿಪ್ಪು ಸುಲ್ತಾನ್ ಆಗಿದ್ದಾರೆ ಎಂದರು. 
     ನಿವೃತ್ತ ಪ್ರಾಂಶುಪಾಲ ಮೊಹ್ಮದ್ ಅಮಜದ್ ಜಾವೀಧ್ ಮಾತನಾಡಿ ಟಿಪ್ಪು ಸುಲ್ತಾನ್ ಹಿಂದೂ ಧರ್ಮವನ್ನು, ಹಿಂದೂಗಳನ್ನು ಎಷ್ಟೊಂದು ಗೌರವ ಮತ್ತು ಭಕ್ತಿಯಿಂದ ಕಾಣುತ್ತಿದ್ದ ಎಂಬುದಕ್ಕೆ ಅವರು ಒಟ್ಟು 156 ದೇವಸ್ಥಾನಗಳಿಗೆ ಆರ್ಥಿಕ ನೆರವು ನೀಡಿರುವುದೇ ಸಾಕ್ಷಿಯಾಗಿದೆ ಎಂದರು.
       ಟಿಪ್ಪು ಸುಲ್ತಾನ್‍ರ ಹಲವಾರು ಕ್ರಾಂತಿಕಾರಿ ಆಲೋಚನೆಗಳು ಮತ್ತು ಕಾರ್ಯಗಳು ನಮಗೆ ಇಂದಿಗೂ ಮಾದರಿ. ಟಿಪ್ಪು ಸುಲ್ತಾನ್ ಸದಾ ಹೊಸ ತಂತ್ರಜ್ಞಾನಕ್ಕೆ ತುಡಿಯುತ್ತಿದ್ದ. ಅವನು ಭಾರತದಲ್ಲಿ ಮೊದಲ ಬಾರಿಗೆ ಸೇನೆಯಲ್ಲಿ ಫ್ರೆಂಚರ ಸಹಾಯದಿಂದ ಕ್ಷಿಪಣಿ ಮತ್ತು ರಾಕೇಟ್‍ಗಳನ್ನು ಬಳಸುವುದರ ಮೂಲಕ ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ ಎಂದರು.
    ಹಜರತ್ ಖಾಜಾ ಬಂದೇ ನವಾಜ ದರ್ಗಾದ ಸಜ್ಜಾದ್ ನಾಶಿನ್ ಡಾ. ಸೈಯದ ಶಹಾ ಖುಸ್ರೋ ಹುಸೇನಿ ಮಾತನಾಡಿ, ಟಿಪ್ಪು ಸುಲ್ತಾನ್ ನೇರವಾಗಿ ಹುಲಿಯೊಂದಿಗೆ ಹೋರಾಡಿ ಜಯಶಾಲಿಯಾಗಿ ಮೈಸೂರು ಹುಲಿ ಎಂದು ಪ್ರಖ್ಯಾತರಾಗಿದ್ದು, ಹುಲಿಯನ್ನೇ ತನ್ನ ಲಾಂಛನವನ್ನಾಗಿ ಮಾಡಿಕೊಂಡಿದ್ದರು. ತನ್ನ ರಾಜ್ಯದ ಎಲ್ಲಾ ಜನತೆಯೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತ ಸಂಯಮದಿಂದ ವರ್ತಿಸುತ್ತಿದ್ದ ಸರಳ ವ್ಯಕ್ತಿ ಟಿಪ್ಪು ಸುಲ್ತಾನ್ ಎಂದರು. 
      ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹ್ಮದ ಅಜಗರ ಚುಲಬುಲ್, ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಫರಾಜ್ ಉಲ್ ಇಸ್ಲಾಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ವಂದಿಸಿದರು. 
    ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದಿರುವ ಮೈಸೂರು ಹುಲಿ ಟಿಪ್ಪು ಸುಲ್ತಾನ ಕುರಿತ ಕಿರು ಹೊತ್ತಿಗೆ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಬಿಡುಗಡೆ ಮಾಡಿದರು. 
ನವೆಂಬರ್ 13ರಂದು ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ ಉದ್ಘಾಟನೆ 
ಕಲಬುರಗಿ,ನ.10.(ಕ.ವಾ.)-ಕೈಮಗ್ಗ ಮತ್ತು ಜವಳಿ ಇಲಾಖೆ ಜಿಲ್ಲಾ ಪಂಚಾಯಿತಿ ಕಲಬುರಗಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವುಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರದ ನೂತನ ಜವಳಿ ನೀತಿ 2013-18ರಡಿ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆ ಫಲಾನುಭವಿಗಳಿಗೆ ನವೆಂಬರ್ 13ರಿಂದ 18ರವರೆಗೆ  ಆರು ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮವನ್ನು ಕಲಬುರಗಿಯ ಗುಲಬರ್ಗಾ ಉದ್ದಿಮೆ ವಸಾಹತು ಉತ್ಪಾದಕರ ಸಂಘದಲ್ಲಿ ಏರ್ಪಡಿಸಲಾಗಿದೆ. 
ನವೆಂಬರ್ 13ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಈ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಿಡಾಕ್ (ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜವನೋಪಾಯ ಇಲಾಖೆ) ಜಂಟಿ ನಿರ್ದೇಶಕ ಜಿ.ಯು. ಹುಡೇದ್ ಅಧ್ಯಕ್ಷತೆ ವಹಿಸುವರು. ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕ ಗಿರೀಶ್ ಆರ್., ಕೈಮಗ್ಗ ಮತ್ತು ಜವಳಿ ಇಲಾಖೆಯ ಅಧಿಕ ನಿರ್ದೇಶಕ ವಿಜಯಕುಮಾರ್ ಬಿ. ನಿರಾಳೆ,  ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ ಎಸ್., ಬಳ್ಳಾರಿ ಉತ್ತರ ವಲಯದ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ದೊಡ್ಡಬಸವರಾಜ, ಕಲಬುರಗಿ ಎಸ್.ಬಿ.ಐ. ಲೀಡ್ ಬ್ಯಾಂಕ್ ಅಧಿಕಾರಿ ಪದ್ಮಾಜಿ ಹಾಗೂ ನಬಾರ್ಡ್ ಉಪ ಅಭಿವೃದ್ಧಿ ವ್ಯವಸ್ಥಾಪಕ ರಮೇಶ ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. 
ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲೆಗಳಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲು ಸೂಚನೆ
ಕಲಬುರಗಿ,ನ.10.(ಕ.ವಾ.)-ಶಿಕ್ಷಕರ ದಿನಾಚರಣೆ ಅಂಗವಾಗಿ 2017ರ ನವೆಂಬರ್ 14ರಂದು ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಕೆಳಕಂಡ ಪ್ರತಿಜ್ಞಾ ವಿಧಿ ಸ್ವೀಕರಿಸಬೇಕೆಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. 
“ನಾನು ಯಾವುದೇ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳನ್ನು ಉಲ್ಲಂಘನೆ ಮಾಡುವುದಿಲ್ಲವೆಂದು ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗಿದ್ದು ಕಂಡು ಬಂದರೆ, ತಕ್ಷಣವೇ ಖಂಡಿಸುತ್ತೇನೆ ಮತ್ತು ದೂರವಾಣಿ ಸಂಖ್ಯೆ 1098ಗೆ ಕರೆ ಮಾಡಿ ತಿಳಿಸುತ್ತೇನೆ ಎಂದು ಪ್ರತಿಜ್ಞೆ ಮಾಡುತ್ತೇನೆ” ಎಂದು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಬೇಕು. 
ನವೆಂಬರ್ 12ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ನ.10.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗ-1ರಿಂದ ಕಲಬುರಗಿ 110/11 ಕೆವಿ. ಯುನಿವರ್ಸಿಟಿ ವಿದ್ಯುತ್ ವಿತರಣಾ ಕೇಂದ್ರದಿಂದ ಬರುವ ಎಫ್-1, ಎಫ್-8 ಮತ್ತು ಎಫ್-12 ಫೀಡರ್ ವ್ಯಾಪ್ತಿಯಲ್ಲಿ ಬರುವ ಮಾತಾ ಇಂಡಸ್ಟ್ರೀಸ್ 250ಕೆ.ವಿ. ಪರಿವರ್ತಕ ಶಿಫ್ಟಿಂಗ್ ಕಾರ್ಯವನ್ನು  ಕೈಗೊಳ್ಳುವ ಪ್ರಯುಕ್ತ ನವೆಂಬರ್ 12ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ  ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.  
ವಿದ್ಯುತ್ ವ್ಯತ್ಯಯವಾಗುವ ಗ್ರಾಮಗಳ ವಿವರ ಇಂತಿದೆ. 110/11 ಕೆ.ವಿ. ಯುನಿವರ್ಸಿಟಿ ವಿದ್ಯುತ್ ವಿತರಣಾ ಕೇಂದ್ರÀ: ಎಫ್-10 ನಂದೂರ ಕೆಐಡಿಬಿ 1 ಮತ್ತು 2. ಎಫ್-12 ಕೆಸರಟಗಿ ಇಂಡಸ್ಟ್ರೀಯಲ್.  ಕೆಐಡಿಬಿ ನಂದೂರ ಫೀಡರಿನ ನಂದೂರ, ಕೆಸರಟಗಿ ಇಂಡಸ್ಟ್ರೀಯಲ್ ಏರಿಯಾ, ನಂದೂರ, ನಂದೂರ(ಕೆ), ಧರ್ಮಪೂರ ಗ್ರಾಮಗಳು. 
ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕಲಬುರಗಿ,ನ.10.(ಕ.ವಾ.)-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2017-18ನೇ ಸಾಲಿನ ಮತೀಯ ಅಲ್ಪಸಂಖ್ಯಾತರ ಸಮುದಾಯದ ಜನರು ಸ್ವಯಂ ಉದ್ಯೋಗ ಕೈಗೊಳ್ಳಲು ಅಲ್ಪಸಂಖ್ಯಾತರ ರೈತರ ಕಲ್ಯಾಣ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಕೃಷಿ ಯಂತ್ರೋಪಕರಣ ಖರೀದಿಸಲು ಸಾಲ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಬೌದ್ಧ, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. 
ಅಭ್ಯರ್ಥಿಯು ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು.  ಕುಟುಂಬದ ವಾರ್ಷಿಕ ಆದಾಯ 4,50,000 ರೂ.ಗಳನ್ನು ಮೀರಿರಬಾರದು. ಅರ್ಜಿಯೊಂದಿಗೆ ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರಗಳನ್ನು ಆಯಾ ತಾಲೂಕಿನ ತಹಶೀಲ್ದಾರರರಿಂದ ಪಡೆದು ಸಲ್ಲಿಸಬೇಕು. ವಾಸಸ್ಥಳದ ಬಗ್ಗೆ ಪಡಿತರ ಚೀಟಿಯ ನಕಲು ಪ್ರತಿ, ಆಧಾರ್ ಕಾರ್ಡ್/ಗುರುತಿನ ಚೀಟಿಯ ನಕಲು ಪ್ರತಿ ಅಥವಾ ಮತದಾರರ ಪಟ್ಟಿಯ ನಕಲು ಪ್ರತಿ, ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಾಣಿಕೆ (ಲಿಂಕ್) ಮಾಡಿರಬೇಕು ಮತ್ತು ಕಡ್ಡಾಯವಾಗಿ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಪ್ರತಿಯನ್ನು ದಾಖಲಾತಿಗಳೊಂದಿಗೆ ಕಡ್ಡಾಯವಾಗಿ ಸಲ್ಲಿಸಬೇಕು.   
ಅರ್ಜಿಗಳನ್ನು ಇಲಾಖೆಯ hಣಣಠಿ://ಞmಜಛಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್‍ದಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಎಸ್.ಆರ್. ರೆಸಿಡೆನ್ಸಿ, ಪ್ಲಾಟ್ ನಂ. 1881, ಮೊದಲನೆ ಮಹಡಿ, ಡಾ|| ಎಲ್.ಎಸ್. ರಾಠಿ ಆಸ್ಪತ್ರೆ ಎದುರುಗಡೆ, ಹಳೆ ಜೇವರ್ಗಿ ರಸ್ತೆ, ಕಲಬುರಗಿ-585102 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08472-232425ನ್ನು ಸಂಪರ್ಕಿಸಲು ಕೋರಲಾಗಿದೆ.  ಅರ್ಜಿ ಸಲ್ಲಿಸಲು  ನವೆಂಬರ್ 30 ಕೊನೆಯ ದಿನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಇಲಾಖಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಕಲಬುರಗಿ,ನ.10.(ಕ.ವಾ.)-ಕರ್ನಾಟಕ ಲೋಕಸೇವಾ ಆಯೋಗದಿಂದ 2017ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಯು ನವೆಂಬರ್ 11 ರಿಂದ 13 ರವರೆಗೆ ಹಾಗೂ ನವೆಂಬರ್ 15ರಿಂದ 23ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಕಲಬುರಗಿ ನಗರದ ಎರಡು ಉಪ ಪರೀಕ್ಷಾ ಕೇಂದ್ರಗಳಲ್ಲಿ  ಜರುಗಲಿದೆ.   
ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ ಪ್ರದೇಶÀದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿರಾಕ್ಸ್/ಪುಸ್ತಕ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಧರಣಿ ಮತ್ತು ಮೆರವಣಿಗೆ ನಡೆಸಬಾರದೆಂದು ಕಲಬುರಗಿ ತಹಸೀಲ್ದಾರ್ ಅಶೋಕ ಹಿರೊಳ್ಳಿ ಅವರು ಆದೇಶ ಹೊರಡಿಸಿದ್ದಾರೆ.  
ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್ ಹಾಗೂ ಇತರೆ ಚಿಕ್ಕ ಎಲೆಕ್ಟ್ರಾನಿಕ್ಸ್ ವಸ್ತು ಮತ್ತು ಚಿಕ್ಕ ಗಾತ್ರದ ಪುಸ್ತಕಗಳನ್ನು ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಕೂಡದು ಎಂದು ಸೂಚಿಸಿದ್ದಾರೆ. 
ಕೋಟ್ಪಾ ಕಾಯ್ದೆ ಕಾರ್ಯಾಚರಣೆ: 3500 ರೂ.ದಂಡ  
    ಕಲಬುರಗಿ,ನ.10.(ಕ.ವಾ.)-ಜಿಲ್ಲೆಯಲ್ಲಿ ಜಿಗಿಯುವ ತಂಬಾಕು ಪೊಟ್ಟಣಗಳನ್ನು ನಿಷೇಧಿಸಿರುವ ಪ್ರಯುಕ್ತ ಹಾಗೂ ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ತಂಬಾಕು ನಿಷೇಧ ಕೋಶ ಹಾಗೂ ತಾಲೂಕು ತನಿಖಾ ದಳದ ತಂಡವು ನವೆಂಬರ್ 9 ಹಾಗೂ 10ರಂದು ಕಲಬುರಗಿ ನಗರದ ಪ್ರಮುಖ ಪಾನ್ ಶಾಪ್, ಹೋಟೆಲ್ ಹಾಗೂ ಸಾರ್ವಜನಿಕ ಪ್ರದೇಶಗಳಗೆ ಭೇಟಿ ನೀಡಿ ಧೂಮಪಾನ ಮಾಡುತ್ತಿರುವ ಹಾಗೂ ಕೋಟ್ಪಾ ಕಾಯ್ದೆ-2003ರ ಅಡಿಯಲ್ಲಿ ನಿಯಮ ಬಾಹಿರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಹ ಅಂಗಡಿಗಳಿಗೆ ದಂಡ ವಿಧಿಸಿ, ಜಗಿಯುವ ತಂಬಾಕು ಚೀಟಿಗಳನ್ನು ಜಪ್ತಿ ಮಾಡಿ, ಕೋಟ್ಪಾ ಕಾಯ್ದೆ-2003 ರ ಸೆಕ್ಷನ್-04ಕ್ಕೆ ಸಂಬಂಧಿಸಿದಂತೆ ಒಟ್ಟು 23 ಪ್ರಕರಣಗಳು ದಾಖಲಿಸಿ,  3500 ರೂ.ಗಳ ದಂಡ ವಿಧಿಸಲಾಯಿತು.
ಸದರಿ ತಂಡವು ಸಾರ್ವಜನಿಕರಲ್ಲಿ ತಿಳುವಳಿಕೆ ಮತ್ತು ಜನಸಾಮಾನ್ಯರ ಆರೋಗ್ಯ ಕಾಪಾಡುವ ಹಿತ ದೃಷ್ಟಿಯಿಂದ  ಕಾಯ್ದೆಯ ನಿಯಮ ಪಾಲನೆ ಮಾಡುವಂತೆ ಮತ್ತು ಕೋಟ್ಪಾ ಕಾಯ್ದೆ-2003ರ ಸೆಕ್ಷನ್-04ರ ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಇದಲ್ಲದೆ 18 ವರ್ಷದೊಳಗಿನ ಮಕ್ಕಳು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸೂಚಿಸಿದರು. ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಎಚ್ಚರಿಕೆಯ ನಾಮಫಲಕಗಳನ್ನು ಎಲ್ಲ ಪಾನ್‍ಶಾಪ್, ಹೋಟೇಲ್, ಬಾರ್ ಮತ್ತು ರೇಸ್ಟೋರೆಂಟ್‍ಗಳ ಮಾಲೀಕರು/ ಮಾರಾಟಗಾರರು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಸೂಚಿಸಲಾಯಿತು.  
ಜಿಲ್ಲಾ ಮಟ್ಟದ ತನಿಕಾ ದಳದಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಸಲಹೆಗಾರಾದ ಸುಜಾತಾ ಪಾಟೀಲ, ಹೆಲ್ತ್ ಇನ್ಸ್‍ಪೆಕ್ಟ್‍ರ ಮಲ್ಲಿಕಾರ್ಜುನ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ನಿರ್ದೇಶಕ ಸಂತೋಷÀ ಕುಲಕರ್ಣಿ, ಬಸಮ್ಮ.ಸಿ, ರವಿಚಂದ್ರ ಪೂಜಾರಿ ಸೇರಿದಂತೆ ಮತ್ತಿತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು. 
ನವೆಂಬರ್ 11 ಹಾಗೂ 12ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ನ.10.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ ನವೆಂಬರ್ 11ರಂದು 11ಕೆ.ವಿ. ಸಿದ್ದೇಶ್ವರ ಫೀಡರ ವ್ಯಾಪ್ತಿಯಲ್ಲಿ 11ಕೆ.ವಿ. ವಿದ್ಯುತ್ ಭೂಗತ ಮಾರ್ಗ ಕಾರ್ಯಕೈಗೊಳ್ಳುವ ಪ್ರಯುಕ್ತ ಹಾಗೂ 11ಕೆ.ವಿ. ವಿಠ್ಠಲ ನಗರ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಹಾಗೂ ನವೆಂಬರ್ 12ರಂದು 11ಕೆ.ವಿ. ಸಿದ್ದೇಶ್ವರ ಫೀಡರ್ ವ್ಯಾಪ್ತಿಯಲ್ಲಿ 11ಕೆ.ವಿ. ವಿದ್ಯುತ್ ಭೂಗತ ಮಾರ್ಗಕೈಗೊಳ್ಳುವ ಪ್ರಯುಕ್ತ  ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ. 
ನವೆಂಬರ್ 11ರಂದು ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ. 11 ಕೆ.ವಿ ಸಿದ್ದೇಶ್ವರ: ಅಂದು ಬೆಳಿಗ್ಗೆ 10.30ರಿಂದ ಸಂಜೆ 4 ಗಂಟೆಯವರೆಗೆ ಹಳೇ ಆರ್.ಟಿ.ಓ. ಕಚೆÉೀರಿ ಪ್ರದೇಶ, ರಮಾನಂದ   ಪರಿವರ್ತಕ ಪ್ರದೇಶ, ಕೆ.ಇ.ಬಿ. ಟ್ರೈನಿಂಗ್ ಸೆಂಟರ್, ಸಮದ್ ಪರಿರ್ವತಕ, ಫಾರೂಖ್ ಪರಿವರ್ತಕ, ರಮಾನಂದ ಉಪಾಧ್ಯಾಯ ಪರಿವರ್ತಕ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು. 11 ಕೆ.ವಿ ವಿಠ್ಠಲ್ ನಗರ: ಅಂದು ಬೆಳಿಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ಡಿ.ಡಿ.ಪಿ.ಐ. ಕಚೇರಿ, ವಿಜಯ-ವಿದ್ಯಾಲಯ ಕಂಪೌಂಡ್, ಐವಾನ್-ಎ-ಶಾಹಿ ಅಥಿತಿಗೃಹ, ಗುಲ್ಲಾಬೌಡಿ, ಲಾಹೋಟಿ ಪೆಟ್ರೋಲ್ ಪಂಪ್, ಕೆ.ಬಿ.ಎನ್.ಆಸ್ಪತ್ರೆ, ಖೂಬಾ ಪ್ಲಾಟ್, ವಿಠ್ಠಲನಗರ, ಆನಂದನಗರ, ವಿವೇಕಾನಂದ ನಗರ, ರಾಮನಗರ, ಇಂದಿರಾನಗರ, ವಿದ್ಯಾನಗರ, ಬಲಘಟ ಕಂಪೌಂಡ್, ಮೇಹತಾ ಕಂಪೌಂಡ್, ಮಿನಿ ವಿಧಾನಸೌಧ, ಜಿಲ್ಲಾ ನ್ಯಾಯಾಲಯ ಮತ್ತು ಜೆಸ್ಕಾಂ ಕಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ನವೆಂಬರ್ 12ರಂದು ವಿದ್ಯತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ. 11 ಕೆ.ವಿ ಸಿದ್ದೇಶ್ವರ: ಅಂದು ಬೆಳಿಗ್ಗೆ 10.30ರಿಂದ ಸಂಜೆ 4 ಗಂಟೆಯವರೆಗೆ ಗುಬ್ಬಿ ಕಾಲೋನಿ, ಎಂ.ಜಿ.ರೋಡ್, ನಾಡಗೌಡ ಪರಿವರ್ತಕ ಪ್ರದೇಶ, ಮಹಾ ಬಸವೇಶ್ವರ ಕಾಲೋನಿ, ಘಟಕ-8 ಕಾ ಆಂಡ್ ಪಾ ಕಚೇರಿ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳು.



ಹೀಗಾಗಿ ಲೇಖನಗಳು NEWS AND PHOTO DATE: 10--11--2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 10--11--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 10--11--2017 ಲಿಂಕ್ ವಿಳಾಸ https://dekalungi.blogspot.com/2017/11/news-and-photo-date-10-11-2017.html

Subscribe to receive free email updates:

0 Response to "NEWS AND PHOTO DATE: 10--11--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ