ಶೀರ್ಷಿಕೆ : NEWS AND PHOTO DATE: 16---11--2017
ಲಿಂಕ್ : NEWS AND PHOTO DATE: 16---11--2017
NEWS AND PHOTO DATE: 16---11--2017
ಸುಗಮ ಸಂಚಾರದ ಅಧಿಸೂಚನೆ ಶೀಘ್ರ ಅನುಷ್ಠಾನಕ್ಕೆ ಜಿಲ್ಲಾಧಿಕಾರಿಗಳ ಸೂಚನೆ
*********************************************************************
ಕಲಬುರಗಿ,ನ.16(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ರೂಪಿಸಲಾದ ಅಂತಿಮ ಅಧಿಸೂಚನೆ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗಿದ್ದು, ಈ ಅಧಿಸೂಚನೆಯಲ್ಲಿರುವ ಎಲ್ಲ ಅಂಶಗಳನ್ನು ನಗರದ ಸಂಚಾರ ಠಾಣೆಯ ಅಧಿಕಾರಿಗಳು ಆದಷ್ಟು ಬೇಗ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಸೂಚಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಸ್ತೆ ಸುರಕ್ಷತೆ ಅಂತಿಮ ಅಧಿಸೂಚನೆ ಆದೇಶ 2017ರ ಜುಲೈ ಮಾಹೆಯಲ್ಲಿ ಹೊರಡಿಸಿದ್ದು, ಅಕ್ಟೋಬರ್ ಮಾಹೆಯ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾಗಿದೆ. ಸುರಕ್ಷತೆ ಮತ್ತು ಸುಗಮ ಸಂಚಾರ ಕ್ರಮಗಳನ್ನು ಅನುಷ್ಠಾನಗೊಳಿಸಲು ಅವಶ್ಯಕ ಪರಿಕರಗಳ ಅಳವಡಿಕೆಗೆ ಅನುದಾನ ನೀಡಲಾಗುವುದು ಎಂದರು.
ನಗರದ 15 ರಸ್ತೆಗಳನ್ನು ಏಕಮುಖ ಸಂಚಾರ ರಸ್ತೆಗಳೆಂದು, ಭಾರಿ ವಾಹನಗಳು ನಗರ ಪ್ರದೇಶ ಪ್ರವೇಶಿಸದಂತೆ ನಿಷೇಧಿಸುವುದು, ಬೆಳಗಿನ 8 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಗೂಡ್ಸ್ ಅಟೋಗಳ ಲೋಡಿಂಗ್ ಅಥವಾ ಅನ್‍ಲೋಡಿಂಗ್ ನಿಯಂತ್ರಿಸುವುದು, ನಗರದ ಕೆಲವು ಪ್ರದೇಶಗಳನ್ನು ನಿಲುಗಡೆ ನಿಷೇಧ ಪ್ರದೇಶಗಳೆಂದು ಘೋಷಿಸುವುದು, ಕೆಲವು ರಸ್ತೆಗಳಲ್ಲಿ ವಾಹನಗಳು ಎಡ ಮತ್ತು ಬಲಗಡೆಯಲ್ಲಿ “ಯೂ ಟರ್ನ್” ತಿರುವು ನಿಷೇಧಿಸುವುದು, ಕೆಲವು ಪ್ರದೇಶಗಳಲ್ಲಿ ದಿನ ಬಿಟ್ಟು ದಿನ ಹಾಗೂ ರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ನಿಲುಗಡೆಗೆ ಅವಕಾಶ ನೀಡುವುದು, ನಾಲ್ಕು ಚಕ್ರ ವಾಹನಗಳ ನಿಲುಗಡೆಗೆ ಸ್ಥಳ ನೀಡುವುದು, ಆಟೊ ನಿಲುಗಡೆ ಹಾಗೂ ಬಸ್ ನಿಲುಗಡೆ ಸ್ಥಳಗಳ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಇವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ತಿಳಿಸಿದರು.
ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ವಾಹನಗಳ ಓಡಾಟದಿಂದ ವಾಯುಮಾಲಿನ್ಯ ಉಂಟಾಗುತ್ತಿದೆ. ನಗರದಲ್ಲಿ ಯಾರಾದರೂ ಬ್ಯಾಟರಿ ಚಾಲಿತ ಅಥವಾ ವಿದ್ಯುತ್ ಚಾಲಿತ ಅಟೋರಿಕ್ಷಾಗಳು ಓಡಿಸಲು ಮುಂದೆ ಬಂದರೆ ಅವರಿಗೆ ತಕ್ಷಣ ಪರವಾನಿಗೆ ನೀಡಲಾಗುವುದು. ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ರಾಜ್ಯಪತ್ರದ ಅನುಸಾರ ನಗರದಲ್ಲಿ 56 ಅಟೋರಿಕ್ಷಾ ನಿಲ್ದಾಣಗಳನ್ನು ಅಧಿಕೃತವಾಗಿ ಗುರುತಿಸಲಾಗಿದೆ. ಈ ಪೈಕಿ 14 ನಿಲ್ದಾಣಗಳು ಫಲಕಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಉಳಿದ ನಿಲ್ದಾಣಗಳಿಗೆ ಫಲಕ ಅಳವಡಿಸಿ ಕಾರ್ಯನಿರ್ವಹಿಸುವಂತೆ ಸಂಚಾರ ಠಾಣೆಯವರು ಕ್ರಮ ಜರುಗಿಸಬೇಕೆಂದು ತಿಳಿಸಿದರು.
ನಗರದ ಲಾಹೋಟಿ ಪೆಟ್ರೋಲ್ ಪಂಪ್ ಹತ್ತಿರ ಯಾವಾಗಲೂ ವಾಹನ ಸಂಚಾರದ ತೊಂದರೆ ಇದ್ದು, ಇಲ್ಲಿ ಸಿಗ್ನಲ್ ಅಳವಡಿಸಬೇಕು. ಅದಲ್ಲದೇ ನಗರದಾದ್ಯಂತ ಇಂಥಹ ಸ್ಥಳಗಳನ್ನು ಗುರುತಿಸಿ ಸುಗಮ ಸಂಚಾರಕ್ಕೆ ಕ್ರಮ ಜರುಗಿಸಬೇಕು. ನಗರದ ಸುಪರ್ ಮಾರುಕಟ್ಟೆ ಪ್ರದೇಶದಲ್ಲಿ ಅಟೋ ನಿಲ್ದಾಣ ಇದ್ದರೂ ಸಹ ಎಲ್ಲಿ ಬೇಕಾದಲ್ಲಿ ಅಟೋಗಳನ್ನು ನಿಲ್ಲಿಸುವುದರಿಂದ ವಾಹನ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ನಗರದಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು 5 ಕೋಟಿ ರೂ. ಲಭ್ಯವಿದ್ದು, ಇದರಲ್ಲಿ ನಗರಕ್ಕೆ ಅವಶ್ಯಕವಿರುವ ಸುಧಾರಿತ ಸಾಧನ ಸಲಕರಣೆಗಳ ಅವಶ್ಯಕತೆಯನ್ನು ಸಲ್ಲಿಸುವಂತೆ ಸೂಚಿಸಿದರು.
ಅಟೋರಿಕ್ಷಾ ಹಳೆಯದಾದಾಗ ಹೊಸ ಅಟೋರಿಕ್ಷಾಕ್ಕೆ ಪರವಾನಿಗೆಯನ್ನು ಬದಲಿಸಿ ನೀಡಲಾಗುವುದು. ಹಳೇ ಅಟೋರಿಕ್ಷಾ ಯಾವ ಪ್ರದೇಶದಲ್ಲಿ ಓಡಿಸುತ್ತಿದ್ದಾರೆ ಎಂಬುದರ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಬೇರೆ ನಗರಗಳಲ್ಲಿ ಓಡಿಸುತ್ತಿದ್ದರೆ ಅದಕ್ಕೆ ಬೇರೆ ಪರವಾನಿಗೆ ಪಡೆದಿರುವ ಬಗ್ಗೆ ಖಚಿತಪಡಿಸಬೇಕು. ಪರವಾನಿಗೆ ಇಲ್ಲದೇ ಅಥವಾ ಹಳೆಯ ಪರವಾನಿಗೆ ನಂಬರ್ ಹಾಕಿಕೊಂಡು ಓಡಿಸುತ್ತಿದ್ದಲ್ಲಿ ಅಂಥವರ ವಿರುದ್ದ ಕ್ರಮ ಜರುಗಿಸಬೇಕೆಂದರು.
ಇತ್ತೀಚಿಗೆ ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಚೆನ್ನಾಗಿ ಅಭಿವೃದ್ಧಿಯಾಗಿರುವುದರಿಂದ ವಾಹನಗಳು ಅತಿವೇಗದಲ್ಲಿ ಸಂಚರಿಸುತ್ತಿವೆ. ವೇಗದ ಮಿತಿ ಮೀರಿ ಸಂಚರಿಸುವ ವಾಹನಗಳನ್ನು ನಿಯಂತ್ರಿಸಲು ಕ್ರಮ ಜರುಗಿಸಬೇಕು. ಅತೀ ವೇಗದಿಂದಾಗಿ ಅಪಘಾತಗಳು ಸಂಭವಿಸಿ ತಲೆಗೆ ಪೆಟ್ಟಾಗಿ ಹೆಚ್ಚು ಜನರು ಸಾವಿಗೀಡಾಗುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ತಮ್ಮ ಜೀವ ರಕ್ಷಿಸಿಕೊಳ್ಳಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ರೂಢಿ ಮಾಡಿಕೊಳ್ಳುವಂತೆ ಮನವಿ ಮಾಡಿದರು. ಸಭೆಯಲ್ಲಿ ಪಾದೇಶಿಕ ಸಾರಿಗೆ ಅಧಿಕಾರಿ ಎಸ್.ಬಿ.ಸುರೇಂದ್ರಪ್ಪ, ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಜಿಲ್ಲಾ ಪ್ರಧಾನ ನ್ಯಾಯಾಧೀಶರಿಂದ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ
****************************************************************
ಕಲಬುರಗಿ,ನ.16(ಕ.ವಾ.)-ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ವ್ಹಿ.ಪಾಟೀಲ್ ಅವರು ಕಾನೂನು ಸಾಕ್ಷರತಾ ರಥಕ್ಕೆ ಗುರುವಾರ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಚಾಲನೆ ನೀಡಿದರು.
ಜನಸಾಮಾನ್ಯರಿಗೆ ಕಾನೂನು ಮತ್ತು ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಕಲಬುರಗಿ ಜಿಲ್ಲೆಯಾದ್ಯಂತ ನವೆಂಬರ್ 16 ರಿಂದ ಡಿಸೆಂಬರ್ 7ರ ವರೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಾನೂನು ಸಾಕ್ಷರತಾ ರಥ ಸಂಚರಿಸಲಿದೆ. ಪ್ರತಿ ತಾಲೂಕಿಗೆ 4 ದಿನದಂತೆ ಹಾಗೂ ದಿನಕ್ಕೆ 3ರಂತೆ ಒಟ್ಟು 84 ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನವೆಂಬರ್ 16 ರಿಂದ 19ರ ವರೆಗೆ ಕಲಬುರಗಿ ನಗರ ಮತ್ತು ಗ್ರಾಮಾಂತರ. ನವೆಂಬರ್ 20 ರಿಂದ 23ರ ವರೆಗೆ ಸೇಡಂ ತಾಲೂಕು, ನವೆಂಬರ್ 24 ರಿಂದ 27ರ ವರೆಗೆ ಚಿಂಚೋಳಿ ತಾಲೂಕು, ಡಿಸೆಂಬರ್ 2 ರಿಂದ 5ರ ವರೆಗೆ ಚಿತ್ತಾಪುರ ತಾಲೂಕು, ಡಿಸೆಂಬರ್ 6 ರಿಂದ 9ರ ವರೆಗೆ ಆಳಂದ ತಾಲೂಕು, ಡಿಸೆಂಬರ್ 10 ರಿಂದ 13ರ ವರೆಗೆ ಅಫಜಲಪುರ ತಾಲೂಕು ಮತ್ತು ಡಿಸೆಂಬರ್ 14 ರಿಂದ 17ರ ವರೆಗೆ ಜೇವರ್ಗಿ ತಾಲೂಕು ಸಂಚರಿಸಲಿದೆ.
ಇಲ್ಲಿ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಅಸಂಘಟಿತ ಕಾರ್ಮಿಕರಿಗೆ ಇರುವ ಯೋಜನೆ, ಗ್ರಾಹಕರ ಹಿತರಕ್ಷಣಾ ಕಾಯ್ದೆ, ಮಕ್ಕಳ ಹಕ್ಕುಗಳು, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ, ಐ.ಸಿ.ಡಿ.ಎಸ್. ಯೋಜನೆ, ಹೆಣ್ಣು ಮಕ್ಕಳ ಅಕ್ರಮ ಸಾಗಾಣಿಕೆ ನಿಷೇಧ ಕಾಯ್ದೆ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ, ತಂಬಾಕು ದೂಮಪಾನ ದುಷ್ಪರಿಣಾಮ, ಕಾನೂನು ಸೇವಾ ಪ್ರಾಧಿಕಾರದಿಂದ ಸಿಗಬಹುದಾದ ಸೌಲಭ್ಯಗಳ ಕುರಿತು ಉಪನ್ಯಾಸ ಕಾರ್ಯಕ್ರಮಗಳು ಜರುಗುವವು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್.ಮಾಣಿಕ್ಯ, ಜಿಲ್ಲಾ ನ್ಯಾಯಾಧೀಶರುಗಳಾದ ಆರ್. ಕೆ. ತಾಳಿಕೋಟಿ, ವಿ.ವಿ.ಮಲ್ಲಾಪುರೆ, ಬಿ.ಎಸ್.ನಾಯಕ, ಪ್ರೇಮಾವತಿ ಮನಗೂಳಿ, ಗೋಪಾಲಕೃಷ್ಣ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್.ಕೆ.ನವೀನ, ಗಿರಿಮಲ್ಲಪ್ಪ ಶೆಟ್ಟರ, ಸರಸ್ವತಿ ದೇವಿ, ಕಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಕಾಂತ ವೈದ್ಯ, ಮರಿಯಪ್ಪ, ಯುಸೂಫ್ ಅಥಣಿ, ಸೌಭಾಗ್ಯಾ ಯಾದವ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಹಾಯಕ ಕಾರ್ಮಿಕ ಆಯುಕ್ತ ವೆಂಕಟೇಶ ಸಿಂದಿಹಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ, ಮಾಹಿತಿ ಹಕ್ಕು ಕಾರ್ಯಕರ್ತ ಸಿದ್ದರಾಮ ಹಿರೇಮಠ ಮತ್ತಿತರರು ಪಾಲ್ಗೊಂಡಿದ್ದರು.

ಮಿರಾಜ್ ಚಿತ್ರಮಂದಿರದಲ್ಲಿ ಚಲನಚಿತ್ರೋತ್ಸವ ಸಪ್ತಾಹದ ಪ್ರಾರಂಭೋತ್ಸವ
******************************************************************
ಕಲಬುರಗಿ,ನ.16.(ಕ.ವಾ.)-ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾ ಆಡಳಿತ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ನಗರದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ಚಲನಚಿತ್ರಗಳ ಪ್ರದರ್ಶನದ ಚಿತ್ರೋತ್ಸವ ಸಪ್ತಾಹ ಕಾರ್ಯಕ್ರಮಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಕಲಬುರಗಿಯ ಮಿರಾಜ್ ಚಿತ್ರಮಂದಿರದಲ್ಲಿ ನವೆಂಬರ್ 17ರಂದು ಶುಕ್ರವಾರ ಬೆಳಿಗ್ಗೆ 8.15 ಗಂಟೆಗೆ ಚಾಲನೆ ನೀಡಲಿದ್ದಾರೆ.
ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅಧ್ಯಕ್ಷತೆ ವಹಿಸುವರು. ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಭಗವಂತ ಖುಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಅಫಜಲಪುರ ಶಾಸಕ ಮಾಲಿಕಯ್ಯ ವ್ಹಿ. ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ವಿಧಾನಸಭಾ ಶಾಸಕರುಗಳಾದ ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ.ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ ಸಂಕನೂರ, ಮಹಾನಗರಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್ ವಿಶೇಷ ಆಹ್ವಾನಿತರಾಗಿ ಆಗಮಿಸುವರು.

ಶ್ರೇಷ್ಠ ಕೃಷಿಕ/ ಕೃಷಿ ಮಹಿಳೆ ಬಿರುದು ಪಡೆಯಲು ಅರ್ಜಿ ಆಹ್ವಾನ
*********************************************************
ಕಲಬುರಗಿ,ನ.16.(ಕ.ವಾ.)-ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 2017ರ ಡಿಸೆಂಬರ್ 8 ರಿಂದ 11 ರವರೆಗೆ ಕೃಷಿ ಮೇಳ-2017ನ್ನು ಆಯೋಜಿಸಲಾಗಿದೆ. ಕೃಷಿ ಮೇಳದ ಅಂಗವಾಗಿ ಶ್ರೇಷ್ಠ ಕೃಷಿಕ/ ಕೃಷಿ ಮಹಿಳೆ ಮತ್ತು ಶ್ರೇಷ್ಠ ಯುವ ಕೃಷಿಕ/ ಯುವ ಕೃಷಿ ಮಹಿಳೆ ಎಂಬ ಬಿರುದುನ್ನೊಳಗೊಂಡ ಪ್ರಮಾಣಪತ್ರ ನೀಡಲಾಗುತ್ತಿದ್ದು, ಆಯ್ಕೆಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರದ್ದೇವಾಡ್ಡಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಜಲ-ನೆಲ ಸಿರಿ. ಧಾನ್ಯ ಸಿರಿ. ಜೀವನ ಸಿರಿ” ಎಂಬ ಶೀರ್ಷಿಕೆಯಡಿ ನಾಲ್ಕು ದಿನಗಳ ಈ ಮೇಳದಲ್ಲಿ ಶ್ರೇಷ್ಠ ಕೃಷಿಕ/ ಕೃಷಿ ಮಹಿಳೆ ಮತ್ತು ಶ್ರೇಷ್ಠ ಯುವ ಕೃಷಿಕ/ಯುವ ಕೃಷಿ ಮಹಿಳೆಗೆ ನೆನಪಿನ ಕಾಣಿಕೆಯನ್ನು ಕೊಡಲಾಗುವುದು.
ನಿಗದಿತ ಅರ್ಜಿ ನಮೂನೆಯನ್ನು ಜೇವರ್ಗಿ ತಾಲೂಕಿನ ರದ್ದೇವಾಡ್ಗಿ ಕೃಷಿ ವಿಜ್ಞಾನ ಕೇಂದ್ರದಿಂದ ಅಥವಾ ರಾಯಚೂರಿನ ಕೃಷಿ ವಿಶ್ವವಿದ್ಯಾಲಯ ಅಥವಾ ವಿಶ್ವವಿದ್ಯಾಲಯದ ತಿತಿತಿ.uಚಿsಡಿಚಿiಛಿhuಡಿ.eಜu.iಟಿ ವೆಬ್‍ಸೈಟ್‍ದಿಂದ ಪಡೆದು ಭರ್ತಿ ಮಾಡಿದ ಅರ್ಜಿ ನವೆಂಬರ್ 20ರ ಸಂಜೆ 5 ಗಂಟೆಯೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ರದ್ದೇವಾಡ್ಗಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರನ್ನು ಮೊಬೈಲ್ ಸಂಖ್ಯೆ 9480696348/ 9480696315ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ನವೆಂಬರ್ 20ರಂದು ರಾಜ್ಯಮಟ್ಟದ ಲಾನ್ ಟೆನ್ನಿಸ್ ಪಂದ್ಯಾವಳಿ ಉದ್ಘಾಟನೆ
ಕಲಬುರಗಿ,ನ.16.(ಕ.ವಾ.)- ಕಲಬುರಗಿ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ 2017-18ನೇ ಸಾಲಿನ ರಾಜ್ಯಮಟ್ಟದ 14 ಮತ್ತು 17 ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕೀಯರ ಲಾನ್ ಟೆನ್ನಿಸ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ನವೆಂಬರ್ 20ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ್ ಅವರು ಪಂದ್ಯಾವಳಿಗೆ ಚಾಲನೆ ನೀಡುವರು. ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ, ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಮ್ಮ ಚನ್ನಮಲ್ಲಮ್ಮ ಹಿರೇಮಠ ಅತಿಥಿಗಳಾಗಿ ಆಗಮಿಸುವರು.
ದ್ಷಾಕ್ಷಿ ಬೆಳೆ: ಚಳಿಗಾಲದಲ್ಲಿ ಕೈಗೊಳ್ಳಬೇಕಾದ ನಿರ್ವಹಣಾ ಕ್ರಮಗಳು
ಕಲಬುರಗಿ,ನ.16.(ಕ.ವಾ.)-ಪ್ರಸ್ತುತ ಚಳಿಗಾಲದಲ್ಲಿ ದ್ರಾಕ್ಷಿ ಬೆಳೆದ ರೈತರು ಬೆಳೆಗೆ ಕೆಳಕಂಡ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಲಬುರಗಿ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಬೂದಿರೋಗವು ಇದು ಶಿಲಿಂದ್ರದಿಂದ ಬರುವ ಚಳಿಗಾಲದ ರೋಗವಾಗಿದೆ. ಎಲೆ, ಕಾಂಡ, ಹೂವು ಮತ್ತು ಹಣ್ಣುಗಳ ಮೇಲೆ ಕಂದುಬಣ್ಣದ ಮಚ್ಚೆಗಳು ಕಂಡು ಬಂದು ರೋಗಗ್ರಸ್ತ ಎಲೆಗಳು ಉದುರುವುದಲ್ಲದೇ, ಸಣ್ಣ ದ್ರಾಕ್ಷಿ ಹಣ್ಣುಗಳು ಬಿರುಸಾಗಿ ಒಣಗಿ ಸೀಳುತ್ತವೆ. ಇದ್ದರಿಂದ ಹಣ್ಣುಗಳು ಸರಿಯಾಗಿ ಮಾಗದೇ ತನ್ನ ಗುಣಮಟ್ಟವನ್ನು ಕಳೆದುಕೊಳ್ಳುತ್ತದೆ.
ಈ ರೋಗದ ಲಕ್ಷಣ ಕಂಡು ಬಂದ ತಕ್ಷಣ ರೈತರು ಮೊದಲು ಅಂತರವ್ಯಾಪ್ತಿ ಶಿಲೀಂದ್ರ ನಾಶಕಗಳಾದ ಟ್ರೈಡಿಮಿಪಾನ್ 2ಗ್ರಾಂ. ಅಥವಾ ಮೈಕೋಬ್ಯುಟಾನಿಲ್ 1ಗ್ರಾಂ. ಅಥವಾ ಅಜೋಕ್ಸಿಸ್ಟ್ರೊಬಿನ್ 1ಗ್ರಾಂ. ನ್ನು ಪ್ರತಿ ಲೀಟರ್ ನೀರಿಗೆ ಸೇರಿಸಿ ಸಿಂಪರಣೆ ಮಾಡಬೇಕು. ನಂತರದ ದಿನಗಳಲ್ಲಿ ಸಂಪರ್ಕ ಶಿಲೀಂಧ್ರ ನಾಶಕಗಳಾದ ಕರಗುವ ಗಂಧಕ 3ಗ್ರಾಂ ಅಥವಾ ಥೈಯೋಫಿನೈಟ್ ಮಿಥೈಲ್ 1ಗ್ರಾಂ. ನ್ನು ಪ್ರತಿ ಲೀಟರ್ ನೀರಿಗೆ ಸೇರಿಸಿ ಸಿಂಪರಣೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಐವಾನ್-ಎ-ಶಾಹಿ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆಯ ಹಾರ್ಟಿ ಕ್ಲಿನಿಕ್ ವಿಷಯ ತಜ್ಞ ಮಂಜುನಾಥ ಪಾಟೀಲ ಅವರ ಮೊಬೈಲ್ ಸಂಖ್ಯೆ 7259984026ನ್ನು ಸಂಪರ್ಕಿಸಲು ಕೋರಲಾಗಿದೆ.
ಏಕವ್ಯಕಿ-ಸಮೂಹ ಕಲಾಪ್ರದರ್ಶಗಳಿಗೆ ಧನಸಹಾಯ: ಅರ್ಜಿ ಆಹ್ವಾನ
ಕಲಬುರಗಿ.ನ.16 (ಕ.ವಾ): ಕರ್ನಾಟಕ ಲಲಿತಕಲಾ ಅಕಾಡೆಮಿಯು 2017-18 ಸಾಲಿಗೆ ರಾಜ್ಯದ ಕಲಾವಿದರಿಗೆ, ರಾಜ್ಯದ ಒಳಗೆ ಹಾಗೂ ಹೊರ ರಾಜ್ಯಗಳಲ್ಲಿ ಏಕವ್ಯಕ್ತಿ ಮತ್ತು ಸಮೂಹ ಕಲಾಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡಲಾಗುತ್ತಿದ್ದು, ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಕಾಡೆಮಿಯ ರಿಜಿಸ್ವ್ರಾರ್ ಇಂದ್ರಮ್ಮ ಹೆಚ್.ವಿ ತಿಳಿಸಿದ್ದಾರೆ.
ಈ ಪ್ರದರ್ಶನದಲ್ಲಿ ಭಾಗವಹಿಸಲಿಚ್ಛಿಸುವ ಕಲಾವಿದರು ತಾವು ರಚಿಸಿದ ಕಲಾಕೃತಿಯ 5x7 ಅಳತೆಯ ಛಾಯಾಚಿತ್ರ ಕಳುಹಿಸಬೇಕು. ಯಾವುದೇ ಕಲಾಪ್ರದರ್ಶನದಲ್ಲಿ ಪ್ರದರ್ಶನಗೊಂಡಿರದ ಕಳೆದ 2 ವರ್ಷಗಳಿಂದೀಚೆಗೆ ರಚಿಸಿದ ಕಲಾಕೃತಿಗಳಾಗಿರಬೇಕು. ಕನಿಷ್ಠ ಐದು ಕಲಾಕೃತಿಗಳ ಛಾಯಾಚಿತ್ರಗಳು ಮತ್ತು ಕಲಾವಿದರ ಭಾವಚಿತ್ರ ಪರಿಚಯ ಪತ್ರದೊಂದಿಗೆ 2017ರ ಡಿಸೆಂಬರ್ 16 ರೊಳಗಾಗಿ ರಿಜಿಸ್ಟಾರ್, ಕರ್ನಾಟಕ ಲಲಿತ ಕಲಾ ಅಕಾಡೆಮಿ, ಕನ್ನಡ ಭವನ ಜೆ.ಸಿ ರಸ್ತೆ ಬೆಂಗಳೂರು-560002 ವಿಳಾಸಕ್ಕೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸಿ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.
ಅರ್ಜಿಯನ್ನು ಅಕಾಡೆಮಿಯಿಂದ ಖುದಾಗಿ ಅಥವಾ 5ರೂ.ಗಳ ಅಂಚೆ ಚೀಟಿ ಲಗತ್ತಿಸಿದ ಸ್ವ-ವಿಳಾಸವುಳ್ಳ ಮತ್ತು ದೂರವಾಣಿಯ ಸಂಖ್ಯೆಯುಳ್ಳ ಲಕೋಟೆಯನ್ನು ಕಳುಹಿಸಿ ಪಡೆಯಬಹುದಾಗಿದೆ. ಧನಸಹಾಯದ ಮೊತ್ತ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಾರ್ಯಾಲಯದ ದೂರವಾಣಿ ಸಂಖ್ಯೆ: 080-22480297 ಅಥವಾ ಅಕಾಡೆಮಿ ವೆಬ್‍ಸೈಟ್ ತಿತಿತಿ.ಟಚಿಟiಣಞಚಿಟಚಿಞಚಿಡಿಟಿಚಿಣಚಿಞಚಿ.oಡಿgನ್ನು ಸಂಪರ್ಕಿಸಲು ಕೋರಲಾಗಿದೆ.
ನಲ್ಮ ಯೋಜನೆ: ತರಬೇತಿ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ,ನ.16.(ಕ.ವಾ.)-ಅಫಜಲಪುರ ಪುರಸಭೆಯಿಂದ 2017-18ನೇ ಸಾಲಿಗೆ ನಲ್ಮ ಯೋಜನೆಯ ಸ್ಟೆಪ್-ಅಪ್ (SಖಿಇP-UP) ಕಾರ್ಯಕ್ರಮಗಳಡಿ ಪುರಸಭೆ ವ್ಯಾಪ್ತಿಯಲ್ಲಿ ದ್ವಿತೀಯ ಪಿ.ಯು.ಸಿ. ಪಾಸಾದ ಅಭ್ಯರ್ಥಿಗಳಿಗೆ ಜೂನಿಯರ್ ಸಾಫ್ಟವೇರ್ ಡೇವಲಪರ್ ಹಾಗೂ ವೆಬ್ ಡೆವಲಪರ್ ಕೋರ್ಸುಗಳಿಗೆ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಿಯೋನಿಕ್ಸ್ ಸಂಸ್ಥೆಯಿಂದ 55 ಅಭ್ಯರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ ದಾಖಲಾತಿಗಳನ್ನು ಲಗತ್ತಿಸಿ ನವೆಂಬರ್ 30ರೊಳಗಾಗಿ ಅಫಜಲಪುರ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಷರತ್ತು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಫಜಲಪುರ ಪುರಸಭೆ ಕಾರ್ಯಾಲಯವನ್ನು ಸಂಪರ್ಕಿಸಬೇಕೆಂದು ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೆಂಬರ್ 17ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ನ.16.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ 110/33/11 ಕೆ.ವಿ. ವಿದ್ಯುತ್ ಉಪಕೇಂದ್ರ, ಕ.ವಿ.ಪ್ರ.ನಿ.ನಿ. ನಾಲವಾರ ಟರ್ಮಿನಲ್-ಬೆ ವಿದ್ಯುತ್ ಮಾರ್ಗವನ್ನು ನವೆಂಬರ್ 17ರಂದು ಜೋಡಣೆ ಮಾಡಲಾಗುತ್ತಿದೆ. ಈ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಗೆ ಬರುವ ಎಲ್ಲಾ 33 ಕೆ.ವಿ. ಹಾಗೂ 11 ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಅಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಗ್ರಾಮಗಳ ವಿವರ ಇಂತಿದೆ. ಚಿತ್ತಾಪೂರ ತಾಲೂಕಿನ ಗ್ರಾಮ ಪಂಚಾಯಿತಿಗಳಾದ ನಾಲವಾರ, ಕಡಬುರ, ಕೊಲ್ಲುರ, ಸನ್ನತಿ, ಶಾಂಪೂರಹಳ್ಳಿ ಹಾಗೂ ಲಾಡ್ಲಾಪೂರ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳು.

ಹೀಗಾಗಿ ಲೇಖನಗಳು NEWS AND PHOTO DATE: 16---11--2017
ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 16---11--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 16---11--2017 ಲಿಂಕ್ ವಿಳಾಸ https://dekalungi.blogspot.com/2017/11/news-and-photo-date-16-11-2017.html
0 Response to "NEWS AND PHOTO DATE: 16---11--2017"
ಕಾಮೆಂಟ್ ಪೋಸ್ಟ್ ಮಾಡಿ