NEWS AND PHOTO DATE: 27--11--2017

NEWS AND PHOTO DATE: 27--11--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 27--11--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 27--11--2017
ಲಿಂಕ್ : NEWS AND PHOTO DATE: 27--11--2017

ಓದಿ


NEWS AND PHOTO DATE: 27--11--2017

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಪ್ರವಾಸ
***********************************************
ಕಲಬುರಗಿ,ನ.27.(ಕ.ವಾ.)-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶಕುಮಾರ ಅವರು ನವೆಂಬರ್ 28ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಅಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರಿಗೆ ಪ್ರಯಾಣಿಸುವರು.
ನವೆಂಬರ್ 30ರಂದು ಉದ್ಯೋಗ ಮೇಳ
**********************************
ಕಲಬುರಗಿ,ನ.27.(ಕ.ವಾ.)-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ನವೆಂಬರ್ 30ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಎಂಟನೇ ತರಗತಿ, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ಬಯೋಡೆಟಾದೊಂದಿಗೆ ಈ ಉದ್ಯೊಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಕಲಬುರಗಿಯ ಭಾರತೀಯ ಎಕ್ಸ್ ಜನರಲ್ ಇನ್ಸುರೆನ್ಸ್, ಸ್ಪಂದನಾ ಸ್ಫೂರ್ತಿ ಫೈನಾನ್ಶಿಯಲ್ ಲಿಮಿಟೆಡ್, ಮಹೀಂದ್ರ ಮತ್ತು ಮಹೀಂದ್ರದ ಸಪ್ತಗಿರಿ ಮೋಟಾರ್ಸ್, ಬೆಂಗಳೂರ ಹೊಸೂರದ ಪ್ರೀಮಿಯರ್ ಸ್ಪಿನಿಂಗ್ ಆಂಡ್ ವೀವಿಂಗ್ ಮಿಲ್ಸ್ ಪ್ರೈವೆಟ್ ಲಿಮಿಟೆಡ್, ಕಲಬುರಗಿಯ ಡಾನ್‍ಬಾಸ್ಕೋ ಟೆಕ್ ಸೊಸೈಟಿ ಹಾಗೂ ಬೆಂಗಳೂರಿನ ಪ್ರಿಮಿಯರ್ ನಂ.1 ಫ್ಯಾಶನ್ ಫೇಬ್ರಿಕ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಚಿತ್ತಾಪುರ: ಬೆಳೆ ವಿಮಾ ಮಾಡಿಸಲು ರೈತರಿಗೆ ಸೂಚನೆ
*************************************************
ಕಲಬುರಗಿ,ನ.27.(ಕ.ವಾ.)-ಪ್ರಸಕ್ತ 2017-18ನೇ ಸಾಲಿನ ಹಿಂಗಾರು ಹಂಗಾಮಿಗಾಗಿ ವಿವಿಧ ಬೆಳೆಗಳಿಗೆ ವಿಮಾ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಚಿತ್ತಾಪೂರ ತಾಲೂಕಿನಲ್ಲಿ ಬೆಳೆಯಲಾದ ವಿವಿಧ ಬೆಳೆಗಳಿಗೆ ರೈತರು ವಿಮೆ ಮಾಡಿಸುವಂತೆ ಚಿತ್ತಾಪುರ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂಗಾರು ಜೋಳ(ಖುಷ್ಕಿ), ಕಡಲೆ(ಖುಷ್ಕಿ), ಕುಸುಮೆ(ಖುಷ್ಕಿ) ಬೆಳೆಗಳಿಗೆ ವಿಮೆ ಮಾಡಿಸಲು ನವೆಂಬರ್ 30 ಕೊನೆ ದಿನವಾಗಿದೆ. ಭತ್ತ ( ನೀರಾವರಿ ) ಬೆಳೆಗೆ ವಿಮೆ ಮಾಡಿಸಲು ಡಿಸೆಂಬರ್ 30 ಹಾಗೂ ನೆಲಗಡಲೆ (ನೀರಾವರಿ, ಬೇಸಿಗೆ) ಬೆಳೆಗೆ ವಿಮೆ ಮಾಡಿಸಲು 2018ರ ಫೆಬ್ರವರಿ 28 ಕೊನೆ ದಿನವಾಗಿದೆ.
ರೈತರು ನಿಗದಿತ ನಮೂನೆಯ ಅರ್ಜಿಯಲ್ಲಿ ಮಾಹಿತಿ ನೀಡಿ ಅರ್ಜಿಯೊಂದಿಗೆ ಪಹಣಿ ಮತ್ತು ಬೆಳೆ ಧೃಡೀಕರಣ ಪತ್ರ ಲಗತ್ತಿಸಿ ಸಂಬಂಧಪಟ್ಟ ಬ್ಯಾಂಕುಗಳಲ್ಲಿ ಕಂತು ಪಾವತಿಸಿ ಬೆಳೆಗೆ ವಿಮಾ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಚಿತ್ತಾಪುರ: ತಾಡಫಲಿನ ವಿತರಣೆಗಾಗಿ ಅರ್ಜಿ ಆಹ್ವಾನ
***********************************************
ಕಲಬುರಗಿ,ನ.27.(ಕ.ವಾ.)- ಕೃಷಿ ಸಂಸ್ಕರಣೆ ಯೋಜನೆಯಡಿ 2017-18ನೇ ಸಾಲಿಗೆ ಚಿತ್ತಾಪೂರ ತಾಲೂಕಿನ ರೈತರಿಗೆ ಸಹಾಯಧನದಲ್ಲಿ ತಾಡಫಲಿನ್ (ತಾಡಪಲ) ವಿತರಿಸಲು ತಾಲೂಕಿನ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಚಿತ್ತಾಪುರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸಾಮಾನ್ಯ ರೈತರು ಅರ್ಜಿಯೊಂದಿಗೆ ಪಹಣಿ ಮತ್ತು ಆಧಾರ ಕಾರ್ಡ ಜಿರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ ಕಾರ್ಡ ಮತ್ತು ಜಾತಿ ಪ್ರಮಾಣಪತ್ರವನ್ನು ಲಗತ್ತಿಸಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದಲ್ಲಿ ನವೆಂಬರ್ 29ರಿಂದ ಡಿಸೆಂಬರ್ 8ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೆಂಬರ್ 28ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*************************************************
ಕಲಬುರಗಿ,ನ.27.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ ನವೆಂಬರ್ 28ರಂದು 11 ಸಿದ್ದೇಶ್ವರ ಫೀಡರ್ ವ್ಯಾಪ್ತಿಯಲ್ಲಿ ಯು.ಜಿ. ಕೇಬಲ ಕಾರ್ಯಕೈಗೊಳ್ಳುವ ಪ್ರಯುಕ್ತ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
11ಕೆ.ವಿ. ಸಿದ್ದೇಶ್ವರ ಫೀಡರ್: ಬಡೇಪೂರ ಕಾಲೋನಿ, ದರ್ಶನ ಅಪಾರ್ಟ್‍ಮೆಂಟ್, ಪ್ರಗತಿ ಕಾಲೋನಿ, ಕೆ.ಹೆಚ್.ಬಿ. ಕಾಂಪ್ಲೇಕ್ಸ್, ಖರ್ಗೆ ಪೆಟ್ರೋಲ್ ಪಂಪ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.


ಹೀಗಾಗಿ ಲೇಖನಗಳು NEWS AND PHOTO DATE: 27--11--2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 27--11--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 27--11--2017 ಲಿಂಕ್ ವಿಳಾಸ https://dekalungi.blogspot.com/2017/11/news-and-photo-date-27-11-2017.html

Subscribe to receive free email updates:

0 Response to "NEWS AND PHOTO DATE: 27--11--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ