ಶೀರ್ಷಿಕೆ : NEWS DATE: 17---11--2017
ಲಿಂಕ್ : NEWS DATE: 17---11--2017
NEWS DATE: 17---11--2017
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
*********************************************
ಕಲಬುರಗಿ,ನ.17.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಅವರು ಹುಬ್ಬಳ್ಳಿ-ಸಿಕಂದ್ರಾಬಾದ್ ಎಕ್ಸ್‍ಪ್ರೆಸ್ ರೈಲಿನ ಮೂಲಕ ನವೆಂಬರ್ 18ರಂದು ಬೆಳಿಗ್ಗೆ 7.10 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಂದು ಸಚಿವರು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ನವೆಂಬರ್ 19ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಯವರ ಅನಿಲ ಭಾಗ್ಯ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸುವರು. ಅಂದು ರಾತ್ರಿ 8.15 ಗಂಟೆಗೆ ಸಿಕಂದ್ರಾಬಾದ್-ಹುಬ್ಬಳ್ಳಿ ಎಕ್ಸ್‍ಪ್ರೆಸ್ ರೈಲಿನ ಮೂಲಕ ಹುಬ್ಬಳ್ಳಿಗೆ ಪ್ರಯಾಣಿಸುವರು.

ನವೆಂಬರ್ 18ರಂದು ಗ್ರಾಹಕರ ಕುಂದುಕೊರತೆ ಸಭೆ
**********************************************
ಕಲಬುರಗಿ,ನ.17.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಗ್ರಾಮೀಣ ವಿಭಾಗ-2ದಿಂದ ನವೆಂಬರ್ 18ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಗ್ರಾಮೀಣ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಈ ಕೆಳಕಂಡ ಉಪವಿಭಾಗದ ಕಚೇರಿಯಲ್ಲಿ ಗ್ರಾಹಕರ ಕುಂದುಕೊರತೆ ಸಭೆ ಜರುಗಲಿದೆ.
ವಿಭಾಗೀಯ ಕಚೇರಿ-2ರ ವ್ಯಾಪ್ತಿಯ ಜೇವರ್ಗಿ, ಯಡ್ರಾಮಿ, ಚಿತ್ತಾಪುರ, ಶಹಾಬಾದ ಮತ್ತು ಕಾಳಗಿ ಉಪವಿಭಾಗದ ಜೆಸ್ಕಾಂ ಕಚೇರಿಗಳ ಆವರಣದಲ್ಲಿ ಗ್ರಾಹಕರ ಕುಂದುಕೊರತೆ ಸಭೆ ಜರುಗಲಿದ್ದು, ವಿದ್ಯುತ್ ಗ್ರಾಹಕರು ವಿದ್ಯುತ್‍ಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿವಾಹಕ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಡಿ.ಎ.-ಎಫ್.ಡಿ.ಎ. ನೇಮಕಾತಿ: ಪರೀಕ್ಷಾ ಪೂರ್ವಭಾವಿ ತರಬೇತಿ ಶಿಬಿರ
ಕಲಬುರಗಿ,ನ.17.(ಕ.ವಾ.)-ಎಸ್.ಡಿ.ಎ. ಮತ್ತು ಎಫ್.ಡಿ.ಎ. ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಕಲಬುರಗಿಯ ಎಂ.ಎಸ್.ಕೆ.ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉಚಿತವಾಗಿ ಪರೀಕ್ಷಾ ಪೂರ್ವಭಾವಿ ತರಬೇತಿ ಶಿಬಿರವನ್ನು ನವೆಂಬರ್ 20ರಿಂದ 29ರವರೆಗೆ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿ ಶಿಬಿರವು ಪ್ರತಿದಿನ ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಆಸಕ್ತಿಯುಳ್ಳ ಯುವಕ/ಯುವತಿಯರು ಈ ತರಬೇತಿಯ ಶಿಬಿರದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ನವೆಂಬರ್ 20ರಿಂದ ಆಧಾರ್ ಅದಾಲತ್
***********************************
ಕಲಬುರಗಿ,ನ.17.(ಕ.ವಾ.) ಇ-ಆಡಳಿತ ಬೆಂಗಳೂರು ಹಾಗೂ ಜಿಲ್ಲಾಡಳಿತ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಆಧಾರ್ ಆದಾಲತ್ ನವೆಂಬರ್ 20ರಿಂದ 24ರವರೆಗೆ ಐದು ದಿನಗಳ ಕಾಲ ಕಲಬುರಗಿಯ ಜಿಲ್ಲಾ ಪಂಚಾಯಿತಿಯ ಹಳೆ ಸಭಾಂಗಣದಲ್ಲಿ ನಡೆಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ.
ಪ್ರಯುಕ್ತ ಆಧಾರ್ ನೋಂದಣಿ, ತಿದ್ದುಪಡಿ, ಮೊಬೈಲ್ ಸಂಖ್ಯೆ ಬದಲಾವಣೆ ಹಾಗೂ ಇದುವರೆಗೆ ಆಧಾರ್ ಪಡೆಯದೇ ಸಮಸ್ಯೆ ಎದುರಿಸುತ್ತಿರುವವರು ಈ ಅದಾಲತ್‍ನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

ಪದವೀಧರ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳ
***************************************************************
ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
*********************
ಕಲಬುರಗಿ,ನ.17.(ಕ.ವಾ.)-ಹೈದ್ರಾಬಾದ್ ಕರ್ನಾಟಕ ಪ್ರದೇಶದ 6 ಜಿಲ್ಲೆಗಳ 371(ಜೆ)ಅಡಿಯಲ್ಲಿ ಸ್ಥಳೀಯ ವೃಂದದ ಶೇ. 80 ಹಾಗೂ ಉಳಿಕೆ ವೃಂದ 20ರಷ್ಟು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8ನೇ ತರಗತಿ) ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ನವೆಂಬರ್ 18, 19, 25 ಮತ್ತು 26ರಂದು ಕಲಬುರಗಿ ನಗರದ ಒಟ್ಟು 24 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ.
ಸ್ಥಳೀಯ ವೃಂದದ ಶೇ. 80ರಷ್ಟು ಹುದ್ದೆಗಳಿಗೆ ನವೆಂಬರ್ 18 ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾಮಾನ್ಯ ಪತ್ರಿಕೆ ಹಾಗೂ ಮಾಧ್ಯಾಹ್ನ 2.30 ರಿಂದ ಸಂಜೆ 5.30 ಗಂಟೆಯವರೆಗೆ ಆಂಗ್ಲ ಭಾಷೆ ಪರೀಕ್ಷೆ ನಡೆಯಲಿದೆ. ನವೆಂಬರ್ 19ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗಣಿತ ಮತ್ತು ವಿಜ್ಞಾನ ಹಾಗೂ ಸಮಾಜ ಪಾಠಗಳ ಪರೀಕ್ಷೆ ಮಧ್ಯಾಹ್ನ 2.30ರಿಂದ ಸಂಜೆ 4.30 ಗಂಟೆಯವರೆಗೆ ಭಾಷಾ ಸಾಮಾಥ್ರ್ಯ ಪತ್ರಿಕೆಯ ಪರೀಕ್ಷೆಗಳು ನಗರದ 9 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಅದೇ ರೀತಿ ಉಳಿಕೆ ಮೂಲ ವೃಂದದ ಶೇ. 20ರಷ್ಟು ಹುದ್ದೆಯ ಅಭ್ಯರ್ಥಿಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ನವೆಂಬರ್ 25ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾಮಾನ್ಯ ಪತ್ರಿಕೆ ಹಾಗೂ ಮಾಧ್ಯಾಹ್ನ 2.30 ರಿಂದ ಸಂಜೆ 5.30 ಗಂಟೆಯವರೆಗೆ ಆಂಗ್ಲ ಭಾಷೆ ಪರೀಕ್ಷೆ ನಡೆಯಲಿದೆ. ಹಾಗೂ 26ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗಣಿತ ಮತ್ತು ವಿಜ್ಞಾನ ಹಾಗೂ ಸಮಾಜ ಪಾಠಗಳ ಪರೀಕ್ಷೆ ಮಧ್ಯಾಹ್ನ 2.30ರಿಂದ ಸಂಜೆ 4.30 ಗಂಟೆಯವರೆಗೆ ಭಾಷಾ ಸಾಮಾಥ್ರ್ಯ ಪತ್ರಿಕೆಯ ಪರೀಕ್ಷೆಗಳು ನಗರದ 15 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಕಲಬುರಗಿ ತಹಸೀಲ್ದಾರ್ ಅಶೋಕ ಹಿರೊಳ್ಳಿ ತಿಳಿಸಿದ್ದಾರೆ.
ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ ಪ್ರದೇಶÀದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿರಾಕ್ಸ್/ಪುಸ್ತಕ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಧರಣಿ ಮತ್ತು ಮೆರವಣಿಗೆ ನಡೆಸಬಾರದೆಂದು ಕಲಬುರಗಿ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್ ಹಾಗೂ ಇತರೆ ಎಲೆಕ್ಟ್ರಾನಿಕ್ಸ್ ವಸ್ತು ಮತ್ತು ಚಿಕ್ಕ ಗಾತ್ರದ ಪುಸ್ತಕಗಳನ್ನು ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಬಾರದೆಂದು ಅವರು ಆದೇಶದಲ್ಲಿ ಸೂಚಿಸಿದ್ದಾರೆ.

ನವೆಂಬರ್ 19ರಂದು ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ
*******************************************************
ಕಲಬುರಗಿ,ನ.17.(ಕ.ವಾ.)- ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಇವುಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 19ರಂದು ಸಂಜೆ 7.15 ಗಂಟೆಗೆ ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಕನ್ನಡ ಭವನದಲ್ಲಿ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ತಿಳಿಸಿದ್ದಾರೆ.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಶಿವಣ್ಣ ದೇಸಾಯಿ ಕಲ್ಲೂರ ಈ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಪಿ.ಎಂ.ಮಣ್ಣೂರ ಅಧ್ಯಕ್ಷತೆ ವಹಿಸುವರು. ಹಿರಿಯ ಸಂಗೀತ ಕಲಾವಿದರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಿದ್ರಾಮಪ್ಪ ಪೊಲೀಸ್ ಪಾಟೀಲ ಅತಿಥಿಗಳಾಗಿ ಆಗಮಿಸುವರು.
ಕಲಬುರಗಿ ಹಿರಿಯ ಸಂಗೀತ ವಿದ್ವಾನರಾದ ರೇವಯ್ಯ ವಸ್ತ್ರದ ಉಪಸ್ಥಿತರಿರುವರು. ಈ ಸಂವಾದ ಕಾರ್ಯಕ್ರಮದಲ್ಲಿ ಲಕ್ಷ್ಮೀ ಶಂಕರ ಜೋಶಿ, ಅಮರ ಪ್ರೀಯ ಹಿರೇಮಠ, ಶಂಕರ ಹೂಗಾರ, ಹನೀಫಾ ಶೇಖ್, ಶಿವಶಂಕರ ಬಿರಾದಾರ, ಮಹೇಶ ಬಡಿಗೇರ್, ಅನಿರುದ್ದ ದೇಶಮುಖ ಹಾಗೂ ಬಾಬುರಾವ ಕೋಬಾಳ ಭಾಗವಹಿಸುವರು. ಶಿವಶರಣಯ್ಯ ನಿಂಗದಳ್ಳಿ ಅವರಿಂದ ಜಾನಪದ ಗಾಯನ ಕಾರ್ಯಕ್ರಮ ಹಾಗೂ ಕಲ್ಯಾಣಿ ಭಜಂತ್ರಿ ಅವರಿಂದ ಶಹನಾಯಿ ವಾದನ ಸಾಂಸ್ಕøತಿಕ ಕಾರ್ಯಕ್ರಮ ಸಹ ಜರುಗಲಿದೆ.

ಕೆ.ಎಸ್.ಟಿ.ಡಿ.ಸಿ.ಯಿಂದ ರಿಯಾಯಿತಿ ದರದಲ್ಲಿ ಪ್ರವಾಸ ಆಯೋಜನೆ
***********************************************************
ಕಲಬುರಗಿ,ನ.17.(ಕ.ವಾ.)-ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದಿಂದ (ಕೆ.ಎಸ್.ಟಿ.ಡಿ.ಸಿ.) ಪುನೀತ ಯಾತ್ರೆಯಡಿ ಕಲಬುರಗಿಯಿಂದ ರಿಯಾಯಿತಿ ದರದಲ್ಲಿ ವ್ಯವಸ್ಥಿತ ಪ್ರವಾಸವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಕೆ.ಎಸ್.ಟಿ.ಡಿ.ಸಿ.ಯ ಸಹಾಯಕ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.
ಕಲಬುರಗಿಯಿಂದ ಹೊರಡುವ ವ್ಯವಸ್ಥಿತ ಪ್ರವಾಸದ ವಿವರ ಇಂತಿದೆ. ಪ್ರವಾಸ ದರ 135 ರೂ.ದೊಂದಿಗೆ ಕಲಬುರಗಿ ನಗರ ಮತ್ತು ಗಾಣಗಾಪುರ ವೀಕ್ಷಣೆಗಾಗಿ ಪ್ರತಿದಿನ ಪ್ರವಾಸ ನಿಗದಿಪಡಿಸಲಾಗಿದೆ. ಪ್ರವಾಸ ದರ 295 ರೂ.ದೊಂದಿಗೆ ನಾಗಾವಿ, ಸನ್ನತಿ ಸ್ಥೂಪ, ಶ್ರೀಕೋರಿಸಿದ್ದೇಶ್ವರ ದರ್ಶನಕ್ಕೆ ಪ್ರತಿದಿನ ಪ್ರವಾಸವನ್ನು ನಿಗದಿಪಡಿಸಲಾಗಿದೆ. ಮೂರು ದಿನಗಳ ತಿರುಪತಿ, ಮಂಗಾಪುರ ಶೀಘ್ರ ದರ್ಶನಕ್ಕೆ 2550 ರೂ.ಗಳ ಪ್ರವಾಸ ದರವನ್ನು ನಿಗದಿಪಡಿಸಲಾಗಿದೆ.
ನಾಲ್ಕು ದಿನಗಳ ತಿರುಪತಿ ಶೀಘ್ರ ದರ್ಶನ, ಶ್ರೀಕಾಳಹಸ್ತಿ ಶ್ರೀನಿವಾಸ ಮಂಗಾಪುರ ದರ್ಶನಕ್ಕಾಗಿ 2925 ರೂ.ಗಳ ಪ್ರವಾಸ ದರವನ್ನು ನಿಗದಿಪಡಿಸಲಾಗಿದೆ. ನಾಲ್ಕು ದಿನಗಳ ಶಿರಡಿ, ನಾಸಿಕ, ತ್ರಯಾಂಬಕೇಶ್ವರ ಶನಿಸಿಂಗನಾಪುರ ದರ್ಶನಕ್ಕೆ 2625 ರೂ.ಗಳ ಪ್ರವಾಸ ದರ ನಿಗದಿಪಡಿಸಲಾಗಿದೆ. ನಾಲ್ಕು ದಿನಗಳ ಶ್ರೀಶೈಲ ಮಹಾನಂದಿ, ಸಾಕ್ಷಿ ಗಣೇಶ ದರ್ಶನಕ್ಕೆ 2275ರೂ. ಗಳ ಪ್ರವಾಸ ದರವನ್ನು ನಿಗದಿಪಡಿಸಲಾಗಿದೆ.
ಪ್ರವಾಸಕ್ಕೆ ನಿಗದಿಯಾದ ದಿನ, ಪ್ರವಾಸಜ ಸಮಯ ಮತ್ತು ಪ್ರವಾಸಕ್ಕಾಗಿ ಬುಕ್ಕಿಂಗ್ ಮಾಡಿಸಲು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭವೃದ್ಧಿ ನಿಗಮ ನಿಯಮಿತ, ಹೊಟೇಲ್ ಯಾತ್ರಿ ನಿವಾಸ, ಪಬ್ಲಿಕ್ ಗಾರ್ಡನ ಕಲಬುರಗಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-249919, ಮೊಬೈಲ್ ಸಂಖ್ಯೆ 9611658770ನ್ನು ಅಥವಾ www.kstdc.coವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

ನವೆಂಬರ್ 19ರಂದು ಕವಿಗೋಷ್ಠಿ ಕಾರ್ಯಕ್ರಮ
******************************************
ಕಲಬುರಗಿ,ನ.17.(ಕ.ವಾ.)- ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಇವುಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 19ರಂದು ರವಿವಾದ ಸಂಜೆ 5.30 ಗಂಟೆಗೆ ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಕನ್ನಡ ಭವನದಲ್ಲಿ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ತಿಳಿಸಿದ್ದಾರೆ.
ಸಾಹಿತಿಗಳು ಹಾಗೂ ಹಿರಿಯ ಪತ್ರಕರ್ತರಾದ ಪ್ರಭಾಕರ ಜೋಶಿ ಅವರು ಕವಿಗೋಷ್ಠಿಯನ್ನು ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ವೀರಭದ್ರ ಸಿಂಪಿ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸಂದೀಪ ಬಿ., ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಷ್ಟ್ರೀಯ ಮಹಿಳಾ ಸದಸ್ಯೆ ಸುಶೀಲಾ ಕಟ್ಟಿ, ಜಿಲ್ಲಾ ಖಜಾನೆ ಅಧಿಕಾರಿ ದತ್ತಪ್ಪ ಗೊಬ್ಬೂರ, ಆಳಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ|| ಹಣಮಂತರಾವ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕಮಲಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ|| ಕೆ.ಎಸ್. ಬಂಧು ಅಧ್ಯಕ್ಷತೆ ವಹಿಸುವರು. ಈ ಕವಿಗೋಷ್ಠಿಯಲ್ಲಿ 16 ಜನ ಕವಿಗಳು ಭಾಗವಹಿಸಿ ಕವನ ವಾಚನ ಮಾಡಲಿದ್ದಾರೆ. ಇದೇ ಸಂದರ್ಬದಲ್ಲಿ ಯಾದಗಿರಿಯ ಚಂದ್ರಶೇಖರ ಗೋಗಿ ಅವರಿಂದ ಸುಗಮ ಸಂಗೀತ ಹಾಗೂ ಕವಿತಾ ಪತ್ತಾರ ಅವರಿಂದ ಜಾನಪದ ಗಾಯನ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

ನವೆಂಬರ್ 25ಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆ
*************************************************
ಕಲಬುರಗಿ,ನ.17.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಮೇಯರ್ ಶರಣಕುಮಾರ ಮೋದಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಇಂದಿರಾ ಸ್ಮಾರಕ ಸಭಾಭವನ (ಟೌನ್‍ಹಾಲ್)ದಲ್ಲಿ ಜರುಗಲಿದೆ.
ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರು, ಉಪಮಹಾಪೌರರು, ಎಲ್ಲ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು ಮತ್ತು ಸದಸ್ಯರು ಈ ಸಭೆಗೆ ಆಗಮಿಸಬೇಕೆಂದು ಸಭಾ ಕಾರ್ಯದರ್ಶಿಗಳು ಕೋರಿದ್ದಾರೆ.

ಆನ್‍ಲೈನ್ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
********************************************************
ಕಲಬುರಗಿ,ನ.17.(ಕ.ವಾ.)-ಇಂಡಿಯಾ ಮೆಟಿಯೊರೋಲೋಜಿಕಲ್ ಡಿಪಾರ್ಟ್‍ಮೆಂಟ್‍ನ ಸೈಂಟಿಫಿಕ್ ಅಸಿಸ್ಟಂಟ್ ಹುದೆಯ ನೇಮಕಾತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ನಿಂದÀ ಆನ್‍ಲೈನ್ ಪರೀಕ್ಷೆಯು ನವೆಂಬರ್ 22ರಿಂದ 25ರವರೆಗೆ ಪ್ರತಿದಿನ ಬೆಳಿಗ್ಗೆ 8.30 ರಿಂದ ಸಂಜೆ 4.45 ಗಂಟೆಯವರೆಗೆ ಕಲಬುರಗಿ ನಗರದ ಸುಪರ ಮಾರ್ಕೆಟ್ ಪ್ರದೇಶದ ಚೇತನಾ ಶಾಲೆ ಹತ್ತಿರದ ಶ್ರೀ ಸಾಯಿ ಕಂಪ್ಯೂಟರ್ಸ್ ಪರೀಕ್ಷಾ ಕೇಂದ್ರದಲ್ಲಿ ಜರುಗಲಿದೆ.
ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ ಪ್ರದೇಶÀದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿರಾಕ್ಸ್/ಪುಸ್ತಕ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಧರಣಿ ಮತ್ತು ಮೆರವಣಿಗೆ ನಡೆಸಬಾರದೆಂದು ಕಲಬುರಗಿ ತಹಸೀಲ್ದಾರ್ ಅಶೋಕ ಹಿರೊಳ್ಳಿ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್ ಹಾಗೂ ಇತರೆ ಎಲೆಕ್ಟ್ರಾನಿಕ್ಸ್ ವಸ್ತು ಮತ್ತು ಚಿಕ್ಕ ಗಾತ್ರದ ಪುಸ್ತಕಗಳನ್ನು ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಬಾರದೆಂದು ಅವರು ಸೂಚಿಸಿದ್ದಾರೆ.

ನವೆಂಬರ್ 18ರಂದು ಉಪವಿಭಾಗವಾರು ವಿದ್ಯುತ್ ಗ್ರಾಹಕರ ಸಂವಾದ ಸಭೆ
******************************************************************
ಕಲಬುರಗಿ,ನ.17.(ಕ.ವಾ.)-ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆ.ಇ.ಆರ್.ಸಿ) ರವರ ನಿರ್ದೇಶನದ ಮೇರೆಗೆ ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಿಂದ ನವೆಂಬರ್ 18ರಂದು ಶನಿವಾರ ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಕಲಬುರಗಿ ನಗರ ವಿಭಾಗದ ವ್ಯಾಪ್ತಿಗೆ ಬರುವ ಉಪ ವಿಭಾಗಗಳ ಗ್ರಾಹಕರ ಸಂವಾದ ಸಭೆಯನ್ನು ಕೆಳಕಂಡ ಉಪವಿಭಾಗವಾರು ಏರ್ಪಡಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಆಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಕಾರ್ಯ ಮತ್ತು ಪಾಲನೆ ನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.
ನಗರ ಉಪವಿಭಾಗ-1ಕ್ಕೆ ಸಂಬಂಧಿಸಿದಂತೆ ಗ್ರಾಹಕರ ಸಂವಾದ ಸಭೆಯು ಕಲಬುರಗಿ ಸುಪರ ಮಾರ್ಕೆಟಿನ ಉಪವಿಭಾಗ-1ರಲ್ಲಿ, ಕಲಬುರಗಿ ನಗರ ಉಪ ವಿಭಾಗ-2ಕ್ಕೆ ಸಂಬಂಧಿಸಿದ ಗ್ರಾಹಕರ ಸಂವಾದ ಸಭೆಯು ಕಲಬುರಗಿ ಸ್ಟೇಶನ್ ರಸ್ತೆ ಉಪವಿಭಾಗ-2ರಲ್ಲಿ, ಕಲಬುರಗಿ ನಗರ ಉಪವಿಭಾಗ-3ಕ್ಕೆ ಸಂಬಂಧಿಸಿದ ಗ್ರಾಹಕರ ಸಂವಾದ ಸಭೆಯು ಕಲಬುರಗಿ ಎಂ.ಬಿ. ನಗರದಲ್ಲಿರುವ ಉಪ ವಿಭಾಗ-3ರಲ್ಲಿ ಹಾಗೂ ಕಲಬುರಗಿ ನಗರ ಉಪವಿಭಾಗ-4ಕ್ಕೆ ಸಂಬಂಧಿಸಿದ ಗ್ರಾಹಕರ ಸಂವಾದ ಸಭೆಯು ಘಾಟಗೆ ಲೇಔಟ್ ಕಾಂಬೇಲ್ ಶಾಲೆಯಲ್ಲಿ ಏರ್ಪಡಿಸಲಾಗಿದೆ.
ಈ ಗ್ರಾಹಕರ ಸಭೆಯು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಸಂಬಂಧಪಟ್ಟ ಉಪವಿಭಾಗಗಳ ಗ್ರಾಹಕರು ಈ ಗ್ರಾಹಕರ ಸಂವಾದ ಸಭೆಯಲ್ಲಿ ಭಾಗವಹಿಸಿ ತಮ್ಮ ಯಾವುದೇ ತರಹದ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಸಲ್ಲಿಸಬಹುದಾಗಿದೆ.

ನವೆಂಬರ್ 18ರಂದು ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ
**************************************************
ಕಲಬುರಗಿ,ನ.17.(ಕ.ವಾ.)-ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2017ರ ಅಂಗವಾಗಿ ಕಲಬುರಗಿ ನಗರದ ಕೇಂದ್ರ ಗ್ರಂಥಾಲಯದಲ್ಲಿ ನವೆಂಬರ್ 18ರಂದು ಸಂಜೆ 4 ಗಂಟೆಗೆ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಶರಣಕುಮಾರ ಮೋದಿ ಅಧ್ಯಕ್ಷತೆ ವಹಿಸುವರು. ಗುಲಬರ್ಗಾ ವಿಶ್ವವಿದ್ಯಾಲಯ ಉಪ ಗ್ರಂಥಪಾಲಕ ಡಾ.ಸುರೇಶ ಜಂಗೆ, ಶರಣಬಸವೇಶ್ವರ ವಿಜ್ಞಾನ ಪದವಿ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪಿ. ರಾಮಕೃಷ್ಣ ರೆಡ್ಡಿ, ಖ್ಯಾತ ಸಾಹಿತಿ ಪ್ರೊ. ವಸಂತ ಕುಷ್ಟಗಿ, ನಗರ ಗ್ರಂಥಾಲಯ ಪ್ರಾಧಿಕಾರ ಸದಸ್ಯ ಅಬ್ದುಲ್ ರಹೀಮ್ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಈ ಸಪ್ತಾಹ ಕಾರ್ಯಕ್ರಮದಲ್ಲಿ ಪುಸ್ತಕ ಪ್ರದರ್ಶನ, ಸದಸ್ಯತ್ವ ನೊಂದಣಿ ಅಭಿಯಾನ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ, ಸಿಬ್ಬಂದಿಗಳ ಸೇವಾ ಪುರಸ್ಕಾರ ಹಾಗೂ ಉತ್ತಮ ಓದುಗ ಹಾಗೂ ಸದಸ್ಯರನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ ಎಂದು ಕಲಬುರಗಿ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 24ರಂದು ತೆಂಗಿನಕಾಯಿ ಹರಾಜು
***************************************
ಕಲಬುರಗಿ,ನ.17.(ಕ.ವಾ.)-ಶಹಾಪುರ ತಾಲೂಕಿನ ಭೀಮರಾಯನಗುಡಿ (ಅಮಲಾಪುರ) ಗ್ರಾಮದ ಬಲಭೀಮೇಶ್ವರ ದೇವಸ್ಥಾನದ ಎದುರುಗಡೆಯ ತೆಂಗಿನಕಾಯಿ ಮಾರಾಟ ಕುರಿತು ಹರಾಜನ್ನು ನವೆಂಬರ್ 24 ರಂದು ಬೆಳಿಗ್ಗೆ 11 ಗಂಟೆಗೆ ಶಹಾಪುರ ತಹಸೀಲ್ದಾರರ ಕಾರ್ಯಾಲಯದಲ್ಲಿ ನಿಗದಿಪಡಿಸಲಾಗಿದೆ ಎಂದು ಶಹಾಪುರ ತಹಸೀಲ್ದಾರರು ಹಾಗೂ ದೇವಸ್ಥಾನದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹರಾಜಿನಲ್ಲಿ 25000 ರೂ. ಠೇವಣಿ ಇಟ್ಟು ಹರಾಜಿನಲ್ಲಿ ಭಾಗವಹಿಸಬೇಕು. ಹರಾಜಾದ ನಂತರ ಮೂರು ದಿನಗಳಲ್ಲಿ ಹರಾಜಿನ ಪೂರ್ಣ ಹಣವನ್ನು ಪಾವತಿಸಬೇಕು. ಹಣ ಪಾವತಿಸಲು ತಪ್ಪಿದ್ದಲ್ಲಿ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಂಡು ಪುನ: ಹರಾಜು ನಡೆಸಲಾಗುವುದೆಂದು ಅವರು ತಿಳಿಸಿದ್ದಾರೆ.

ಹೀಗಾಗಿ ಲೇಖನಗಳು NEWS DATE: 17---11--2017
ಎಲ್ಲಾ ಲೇಖನಗಳು ಆಗಿದೆ NEWS DATE: 17---11--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS DATE: 17---11--2017 ಲಿಂಕ್ ವಿಳಾಸ https://dekalungi.blogspot.com/2017/11/news-date-17-11-2017.html
0 Response to "NEWS DATE: 17---11--2017"
ಕಾಮೆಂಟ್ ಪೋಸ್ಟ್ ಮಾಡಿ