ಕನಕಗಿರಿ, ಕಾರಟಗಿ ಹಾಗೂ ಕುಕನೂರು ಹೊಸ ತಾಲೂಕು ಜ. 01 ರಿಂದ ಕಾರ್ಯಾರಂಭ : ಸಿದ್ದರಾಮಯ್ಯ

ಕನಕಗಿರಿ, ಕಾರಟಗಿ ಹಾಗೂ ಕುಕನೂರು ಹೊಸ ತಾಲೂಕು ಜ. 01 ರಿಂದ ಕಾರ್ಯಾರಂಭ : ಸಿದ್ದರಾಮಯ್ಯ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕನಕಗಿರಿ, ಕಾರಟಗಿ ಹಾಗೂ ಕುಕನೂರು ಹೊಸ ತಾಲೂಕು ಜ. 01 ರಿಂದ ಕಾರ್ಯಾರಂಭ : ಸಿದ್ದರಾಮಯ್ಯ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕನಕಗಿರಿ, ಕಾರಟಗಿ ಹಾಗೂ ಕುಕನೂರು ಹೊಸ ತಾಲೂಕು ಜ. 01 ರಿಂದ ಕಾರ್ಯಾರಂಭ : ಸಿದ್ದರಾಮಯ್ಯ
ಲಿಂಕ್ : ಕನಕಗಿರಿ, ಕಾರಟಗಿ ಹಾಗೂ ಕುಕನೂರು ಹೊಸ ತಾಲೂಕು ಜ. 01 ರಿಂದ ಕಾರ್ಯಾರಂಭ : ಸಿದ್ದರಾಮಯ್ಯ

ಓದಿ


ಕನಕಗಿರಿ, ಕಾರಟಗಿ ಹಾಗೂ ಕುಕನೂರು ಹೊಸ ತಾಲೂಕು ಜ. 01 ರಿಂದ ಕಾರ್ಯಾರಂಭ : ಸಿದ್ದರಾಮಯ್ಯ


ಕೊಪ್ಪಳ ಡಿ. 15 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕನಕಗಿರಿ, ಕಾರಟಗಿ ಮತ್ತು ಕುಕನೂರು ಮೂರು ಹೊಸ ತಾಲೂಕುಗಳನ್ನಾಗಿ ರಚಿಸಲಾಗಿದ್ದು ನೂತನ ತಾಲೂಕುಗಳು 2018 ರ ಜನೇವರಿ, 01 ರಿಂದ ಅನುಷ್ಠಾನಕ್ಕೆ ಬರಲಿವೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದರು.

    ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸೊಮವಾರದಂದು ಕನಕಗಿರಿ ವಿಧಾನ ಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿದ ಕೊಪ್ಪಳ ಜಿಲ್ಲೆಯ ಪ್ರಗತಿ ಮಾಹಿತಿ ಕಿರುಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. 


    ಕನಕಗಿರಿಯ ಲಕ್ಷ್ಮೀ ಕೆರೆ ಸೇರಿದಂತೆ ಒಟ್ಟು 8 ಕೆರೆಗಳನ್ನು ತುಂಬಿಸಲು 140 ಕೋಟಿ ರೂ. ಗಳನ್ನು ನೀಡಲಾಗಿದೆ.  ಈ ಪೈಕಿ ಈಗಾಗಲೆ 07 ಕೆರೆಗಳನ್ನು ತುಂಬಿಸಲಾಗಿದ್ದು, ಕೆರೆ ತುಂಬಿಸುವ ಯೋಜನೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ನಮ್ಮ ಸರ್ಕಾರ ಕೈಗೊಂಡಿತ್ತು.  ಇದೀಗ ಕೆರೆ ತುಂಬಿಸುವ ಯೋಜನೆ ಅತ್ಯಂತ ಯಶಸ್ವಿಯಾಗಿದ್ದು, ಇದೇ ಮಾದರಿಯನ್ನು ರಾಜ್ಯದ ಹಲವೆಡೆ ವಿಸ್ತರಿಸಲಾಗುತ್ತಿದೆ.  ಕೆರೆ ತುಂಬಿಸುವ ಯೋಜನೆಯಿಂದ ಈ ಭಾಗದ ರೈತರು, ಜನರು ಸಂತಸಗೊಂಡಿದ್ದಾರೆ.  ಆನೆಗುಂದಿ ಮತ್ತು ಕನಕಗಿರಿ ಉತ್ಸವಗಳನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದ್ದು, ಕಳೆದ ಬಾರಿ ತಲೆದೋರಿದ ಭೀಕರ ಬರದ ಹಿನ್ನಲೆಯಲ್ಲಿ ನಿಲ್ಲಿಸಲಾಗಿತ್ತು.  ಈ ವರ್ಷ ಉತ್ತಮ ಮಳೆ-ಬೆಳೆ ಆಗಿರುವುದರಿಂದ, ಪುನಃ ಆನೆಗುಂದಿ ಮತ್ತು ಕನಕಗಿರಿ ಉತ್ಸವಗಳನ್ನು ಸರ್ಕಾರದದಿಂದಲೇ ಆಚರಿಸಲಾಗುವುದು.  ಕೃಷ್ಣ ಬಿ-ಸ್ಕೀಂ-3ನೇ ಹಂತದ ಏತ ನೀರಾವರಿ ಯೋಜನೆ ಕೊಪ್ಪಳ, ಬಾಗಲಕೋಟೆ, ಗದಗ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾಗಿದೆ.  ಈ ಯೋಜನೆಯನ್ನು ಜಾರಿಗೊಳಿಸಲು ಪುನರ್ವಸತಿ ಇತ್ಯಾದಿ ವ್ಯವಸ್ಥೆಗಳನ್ನು ಕಲ್ಪಿಸಲು 51 ಸಾವಿರ ಕೋಟಿ ರೂ. ಬೇಕು.  ಈಗಾಗಲೇ ಜಮೀನುಗಳನ್ನು ಭೂಸ್ವಾಧಿನ ಪಡಿಸಿಕೊಳ್ಳಲಾಗುತ್ತಿದೆ.  2396 ಕೋಟಿ ರೂ. ಗಳನ್ನು ಈ ಯೋಜನೆಗೆ ನೀಡಲಾಗುವುದು.  ಅಲ್ಲದೆ ಶೀಘ್ರ ಕಾಮಗಾರಿಗೆ ಚಾಲನೆ ನೀಡುವ ಕಾರ್ಯ ಕೈಗೊಳ್ಳಲಾಗುವುದು.  ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಶೂಭಾಗ್ಯ, ಪಶುಭಾಗ್ಯ, ಕೃಷಿಭಾಗ್ಯ, ಕೃಷಿಹೊಂಡ, ಶಾದಿಭಾಗ್ಯ, ಸಾಲಮನ್ನಾ, ಮಾತೃಪೂರ್ಣ, ಅನಿಲಭಾಗ್ಯ ಇತ್ಯಾದಿ ನೂರಾರು ಜನಪರ ಕಾರ್ಯಕ್ರಮಗಳನ್ನು ಮಾಡಿದ್ದೇವೆ.  ಕ್ಷೀರಭಾಗ್ಯದಿಂದ ರಾಜ್ಯದಲ್ಲಿ ಹಾಲು ಉತ್ಪಾದನೆ ಹೆಚ್ಚಾಗಿದ್ದರಿಂದ ಶಾಲಾ ಮಕ್ಕಳಿಗೆ ವಾರಕ್ಕೆ 05 ದಿನ ಉಚಿತವಾಗಿ ಹಾಲು ವಿತರಿಸಲಾಗುತ್ತಿದೆ.  ಉತ್ಪಾದಕರಿಗೆ ಪ್ರತಿ ಲೀಟರ್‍ಗೆ 5 ರೂ.ಗಳ ಸಹಾಯಧನವನ್ನು ನೀಡಲಾಗುತ್ತಿದೆ.  ಸಾಲಮನ್ನಾ ಯೋಜನೆಯಲ್ಲಿ ಸಹಕಾರ ಬ್ಯಾಂಕ್‍ಗಳಲ್ಲಿ ತೆಗೆದುಕೊಂಡ ರೈತರ 50 ಸಾವಿರವರೆಗಿನ ರಾಜ್ಯದಲ್ಲಿ ಒಟ್ಟು 8165 ಕೋಟಿ ರೂ. ಗಳನ್ನು ಮನ್ನಾ ಮಾಡಲಾಗಿದೆ.  ಹಾಗೂ ರೈತರಿಗೆ ಬಡ್ಡಿ ರಹಿತವಾಗಿ 3 ಲಕ್ಷಗಳ ವರೆಗೆ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತಿದೆ. 
    ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಈವರೆಗೆ ಎಸ್.ಟಿ.ಪಿ/ ಟಿ.ಎಸ್.ಪಿ ಯೋಜನೆಯಡಿ 86 ಸಾವಿರ ಕೋಟಿ ರೂ. ಗಳನ್ನು ಖರ್ಚು ಮಾಡಲಾಗಿದೆ.  ಈ ವರ್ಷವೂ ಸಹ ಹೆಚ್ಚಿನ ಅನುದಾನವನ್ನು ನೀಡಲಾಗುವುದು.  ತುಂಗಭದ್ರಾ ಜಲಾಶಯದಿಂದ ಈ ಭಾಗದ ರೈತರಿಗೆ ಎರಡನೆ ಬೆಳೆಗೆ ನೀರು ಲಭ್ಯವಿಲ್ಲ ಎನ್ನಲಾಗುತ್ತಿದೆ.  ಇದಕ್ಕಾಗಿ ಅಗತ್ಯವಿರುವ ನೀರು ಪಡೆಯುವ ಸಲುವಾಗಿ ತೆಲಂಗಾಣ ಮುಖ್ಯಮಂತ್ರಿಗಳ ಮನ ಒಲಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿದ್ದು ಅದಕ್ಕಾಗಿ ಅಗತ್ಯವಿದ್ದಲ್ಲಿ ನಿಯೋಗವೊಂದನ್ನು ಕಳುಹಿಸುವುದಾಗಿ ಮುಖ್ಯಮಂತ್ರಿಗಳು ನುಡಿದರು
    ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಮಾತನಾಡಿ, “ಸರ್ವರಿಗೂ ಸಮ ಬಾಳು, ಸಮ ಪಾಲು” ಎಂಬುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ.  ಅನ್ನಭಾಗ್ಯ ಯೋಜನೆಯಲ್ಲಿ 4 ಕೋಟಿ 70 ಲಕ್ಷ ಜನರಿಗೆ ಪ್ರತಿ ಒಬ್ಬರಿಗೆ 7 ಕೆ.ಜಿ. ಯಂತೆ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ.  ದೇಶದಲ್ಲಿ ಯಾವುದೇ ರಾಜ್ಯದಲ್ಲಿ ಇಂತಹ ವ್ಯವಸ್ಥೆ ಇಲ್ಲ.  ರಾಜ್ಯ ಸರ್ಕಾರವು ಸಾಲ ಮನ್ನಾ, ಕೃಷಿ ಹೊಂಡ, ಕೆರೆ ತುಂಬಿಸುವ ಯೋಜನೆ, ಇತ್ಯಾದಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ರೈv Àಪರ ಸರ್ಕಾರ ನಮ್ಮದು ಎಂದರು.
    ಸಮಾರಂಭದ ಅಧ್ಯಕ್ಷೆತೆಯನ್ನು ಕನಕಗಿರಿ ಶಾಸಕ ಶಿವರಾಜ ತಂಗಡಗಿ ಅವರು ವಹಿಸಿದ್ದರು.  ಶಾಸಕರುಗಳಾದ ಇಕ್ಬಾಲ್ ಅನ್ಸಾರಿ, ಕೆ. ರಾಘವೇಂದ್ರ ಹಿಟ್ನಾಳ, ಹಂಪನಗೌಡ ಬಾದರ್ಲಿ, ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದಶಿಗಳಾದ ಉಮಾ ಮಹಾದೇವನ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ಕನಕಗಿರಿ, ಕಾರಟಗಿ ಹಾಗೂ ಕುಕನೂರು ಹೊಸ ತಾಲೂಕು ಜ. 01 ರಿಂದ ಕಾರ್ಯಾರಂಭ : ಸಿದ್ದರಾಮಯ್ಯ

ಎಲ್ಲಾ ಲೇಖನಗಳು ಆಗಿದೆ ಕನಕಗಿರಿ, ಕಾರಟಗಿ ಹಾಗೂ ಕುಕನೂರು ಹೊಸ ತಾಲೂಕು ಜ. 01 ರಿಂದ ಕಾರ್ಯಾರಂಭ : ಸಿದ್ದರಾಮಯ್ಯ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕನಕಗಿರಿ, ಕಾರಟಗಿ ಹಾಗೂ ಕುಕನೂರು ಹೊಸ ತಾಲೂಕು ಜ. 01 ರಿಂದ ಕಾರ್ಯಾರಂಭ : ಸಿದ್ದರಾಮಯ್ಯ ಲಿಂಕ್ ವಿಳಾಸ https://dekalungi.blogspot.com/2017/12/01.html

Subscribe to receive free email updates:

0 Response to "ಕನಕಗಿರಿ, ಕಾರಟಗಿ ಹಾಗೂ ಕುಕನೂರು ಹೊಸ ತಾಲೂಕು ಜ. 01 ರಿಂದ ಕಾರ್ಯಾರಂಭ : ಸಿದ್ದರಾಮಯ್ಯ"

ಕಾಮೆಂಟ್‌‌ ಪೋಸ್ಟ್‌ ಮಾಡಿ