ಶೀರ್ಷಿಕೆ : ಡಿ. 14 ರಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ
ಲಿಂಕ್ : ಡಿ. 14 ರಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ
ಡಿ. 14 ರಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ
ಕೊಪ್ಪಳ ಡಿ. 04 (ಕರ್ನಾಟಕ ವಾರ್ತೆ): ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಡಿ. 14 ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದು, ಅಂದು ಕುಷ್ಟಗಿ, ಗಂಗಾವತಿ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಕುರಿತಂತೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳು ಡಿ. 13 ರಿಂದ ವಿವಿಧ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ವಿಶೇಷ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಡಿ. 13 ರಂದು ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ಡಿ. 13 ರಂದು ರಾತ್ರಿ ಕೊಪ್ಪಳ ಜಿಲ್ಲೆಗೆ ಆಗಮಿಸಿ, ವಾಸ್ತವ್ಯ ಮಾಡುವರು. ಡಿ. 14 ರಂದು ಕೊಪ್ಪಳ ಜಿಲ್ಲೆಯಲ್ಲಿ ಗಂಗಾವತಿ ಮತ್ತು ಕನಕಗಿರಿಯಲ್ಲಿ ಪ್ರವಾಸ ಕೈಗೊಂಡು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಅದೇ ದಿನದಂದು ಕುಷ್ಟಗಿಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಪಕ್ಷದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುವರು. ಗಂಗಾವತಿ ಮತ್ತು ಕನಕಗಿರಿಯಲ್ಲಿ ಸರ್ಕಾರಿ ಕಾರ್ಯಕ್ರಮ ಜರುಗುವದರಿಂದ, ಗಂಗಾವತಿ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿಗಳಿಂದ ಚಾಲನೆ ಕೊಡಲಾಗುವ ಯೋಜನೆ ಹಾಗೂ ಕಾರ್ಯಕ್ರಮಗಳ ಪಟ್ಟಿಯನ್ನು ಆಯಾ ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ, ಪಟ್ಟಿ ಸಿದ್ಧಪಡಿಸಬೇಕು. ಅಲ್ಲದೆ ಕಾರ್ಯಕ್ರಮ ಜರುಗುವ ಸ್ಥಳವನ್ನು ಪರಿಶೀಲಿಸಿ, ಸ್ಥಳವನ್ನು ಅಂತಿಮಗೊಳಿಸಬೇಕು. ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮದ ಸಂಪೂರ್ಣ ಮಿನಿಟ್ ಟು ಮಿನಿಟ್ ಪ್ರವಾಸ ಹಾಗೂ ಕಾರ್ಯಕ್ರಮದ ಪಟ್ಟಿಯನ್ನು ಸಿದ್ಧಪಡಿಸಬೇಕು. ಮುಖ್ಯಮಂತ್ರಿಗಳ ಕನಕಗಿರಿ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಪ್ರವಾಸ ಕಾರ್ಯಕ್ರಮ ಕುರಿತಂತೆ ಗಂಗಾವತಿಯಲ್ಲಿ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಸಿದ್ಧತಾ ಸಭೆ ಕೈಗೊಳ್ಳಬೇಕು. ಎರಡೂ ಕ್ಷೇತ್ರಗಳಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರವನ್ನು ಪಡೆದು, ತ್ವರಿತ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅದೇ ರೀತಿ ಮುಖ್ಯಮಂತ್ರಿಗಳ ಕಾರ್ಯಕ್ರಮಗಳಿಗೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಕನಕಗಿರಿ ಶಾಸಕ ಶಿವರಾಜ ತಂಗಡಗಿ ಅವರು ಮಾತನಾಡಿ, ಡಿ. 14 ರಂದು ಮುಖ್ಯಮಂತ್ರಿಗಳು ಕನಕಗಿರಿಯಲ್ಲಿ ಕೈಗೊಳ್ಳುವ ಕಾರ್ಯಕ್ರಮಕ್ಕೆ ಈಗಾಗಲೆ ಸ್ಥಳ ಅಂತಿಮಗೊಳಿಸಲಾಗಿದೆ. ಕಳೆದ ಬಾರಿ ಕನಕಗಿರಿ ಉತ್ಸವ ಕೈಗೊಂಡ ಸ್ಥಳದಲ್ಲಿಯೇ ಕಾರ್ಯಕ್ರಮ ಆಯೋಜಿಸುವುದು ಸೂಕ್ತವಾಗಿದೆ. ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಮುಖ್ಯಮಂತ್ರಿಗಳು ಕೆರೆ ತುಂಬಿಸುವ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದು, ಲಕ್ಷ್ಮೀದೇವಿ ಕೆರೆಗೆ ಭೇಟಿ ನೀಡಿ ಕೆರೆಗೆ ಬಾಗಿನ ಅರ್ಪಿಸುವರು. ಉಳಿದಂತೆ ಲೋಕಾರ್ಪಣೆ ಮಾಡುವ ಯೋಜನೆಗಳು ಹಾಗೂ ಶಂಕುಸ್ಥಾಪನೆ ನೆರವೇರಿಸುವ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದರು.
ಸಭೆಯಲ್ಲಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಡಿ. 14 ರಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ
ಎಲ್ಲಾ ಲೇಖನಗಳು ಆಗಿದೆ ಡಿ. 14 ರಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಿ. 14 ರಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಲಿಂಕ್ ವಿಳಾಸ https://dekalungi.blogspot.com/2017/12/14.html
0 Response to "ಡಿ. 14 ರಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ"
ಕಾಮೆಂಟ್ ಪೋಸ್ಟ್ ಮಾಡಿ