ಶೀರ್ಷಿಕೆ : ಕುಟುಂಬ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ
ಲಿಂಕ್ : ಕುಟುಂಬ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ
ಕುಟುಂಬ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ
ಕೊಪ್ಪಳ ಡಿ. 15 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಿದ್ದಾಪುರ ಗ್ರಾಮದ ಬುಡಗಜಂಗಮರ ಕಾಲೋನಿಯ ದುರ್ಗಾದೇವಿ ದೇವಸ್ಥಾನದಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ ಪೂಜಾರ ಅವರು ತಾಯಿ ಮತ್ತು ಮಕ್ಕಳ ಆರೋಗ್ಯ ಹಾಗೂ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ಕುರಿತು ಮಾತನಾಡಿ, ಗರ್ಭಿಣಿಯಾದ ತಕ್ಷಣ ತಮ್ಮ ಹೆಸರನ್ನು ಆಶಾ ಮತ್ತು ಕಿ.ಅ.ಸ(ಮ) ರವರ ಹತ್ತಿರ ನೊಂದಣಿ ಮಾಡಿಸಿ ಹಾಗೂ ಸರ್ಕಾರಿ ಸೌಲಭ್ಯ ಪಡೆಯಲು ರಾಷ್ಟ್ರಿಕೃತ ಬ್ಯಾಂಕ್‍ಗಳಲ್ಲಿ ಬ್ಯಾಂಕ್ ಖಾತೆ ತೆರೆಯಬೇಕು. ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಬೇಕು. ಅಲ್ಲಿ ಉಚಿತ ಊಟ, ಉಚಿತ ರಕ್ತ, ಉಚಿತ ಔಷದಿ, ಉಚಿತ ವಾಹನದ ಸೌಲಭ್ಯ ಪಡೆದುಕೊಳ್ಳಬೇಕು. ಸಂಶಯಾಸ್ಪದ ಕ್ಷಯರೋಗದ ಲಕ್ಷಣಗಳಾದ, 02 ವಾರಗಳಿಂದ ಸತತ ಕೆಮ್ಮು, ಕಪದಲ್ಲಿ ರಕ್ತ ಬರುವುದು, ಸಾಂಯಂಕಾಲ ವೇಳೆ ಜ್ವರ ಬರುವುದು, ಹಸಿವು ಆಗದೇ ಇರುವುದು, ಕಂಕುಳ ಮತ್ತು ಕತ್ತುಗಳಲ್ಲಿ ಗಂಟು ಕಾಣಿಸಿಕೊಂಡರೆ ತಕ್ಷಣ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜದ ಮುಖಂಡರಾದ ಶಿವಮ್ಮ ಅವರು ವಹಿಸಿದ್ದರು. ಅರ್ಪಿತಾ ಬಿ.ಹೆಚ್.ಇ.ಓ, ವಾಸಂತಿ ಕಿ.ಆ.ಸ(ಮ) ಆಶಾ ಮತ್ತು ಅಂ.ಕಾ.ಕ, ಗರ್ಭಿಣಿ ಸ್ತ್ರೀಯರು, ತಾಯೆಂದರು, ಕಿಶೋರಿಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಹೀಗಾಗಿ ಲೇಖನಗಳು ಕುಟುಂಬ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ
ಎಲ್ಲಾ ಲೇಖನಗಳು ಆಗಿದೆ ಕುಟುಂಬ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಲಿಂಕ್ ವಿಳಾಸ https://dekalungi.blogspot.com/2017/12/blog-post_15.html
0 Response to "ಕುಟುಂಬ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ"
ಕಾಮೆಂಟ್ ಪೋಸ್ಟ್ ಮಾಡಿ