ಗವಿಸಿದ್ದೇಶ್ವರ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಹಕಾರ - ಡಿಸಿ ಎಂ. ಕನಗವಲ್ಲಿ

ಗವಿಸಿದ್ದೇಶ್ವರ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಹಕಾರ - ಡಿಸಿ ಎಂ. ಕನಗವಲ್ಲಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಗವಿಸಿದ್ದೇಶ್ವರ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಹಕಾರ - ಡಿಸಿ ಎಂ. ಕನಗವಲ್ಲಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಗವಿಸಿದ್ದೇಶ್ವರ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಹಕಾರ - ಡಿಸಿ ಎಂ. ಕನಗವಲ್ಲಿ
ಲಿಂಕ್ : ಗವಿಸಿದ್ದೇಶ್ವರ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಹಕಾರ - ಡಿಸಿ ಎಂ. ಕನಗವಲ್ಲಿ

ಓದಿ


ಗವಿಸಿದ್ದೇಶ್ವರ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಹಕಾರ - ಡಿಸಿ ಎಂ. ಕನಗವಲ್ಲಿ


ಕೊಪ್ಪಳ, ಡಿ. 16 (ಕರ್ನಾಟಕ ವಾರ್ತೆ): ಕೊಪ್ಪಳದಲ್ಲಿ ಜ.03 ರಿಂದ ಜರುಗಲಿರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ ಅತ್ಯಂತ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
     ಗವಿಸಿದ್ದೇಶ್ವರ ಜಾತ್ರೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಕೊಪ್ಪಳದಲ್ಲಿ ಪ್ರತಿ ವರ್ಷ ನಡೆಯುವ ಗವಿಸಿದ್ದೇಶ್ವರ ಜಾತ್ರೆ ಇದೀಗ ಕೇವಲ ಧಾರ್ಮಿಕ ಕಾರ್ಯಕ್ರಮವಾಗಿ ಉಳಿದಿಲ್ಲ.  ಸಾಮಾಜಿಕ ಜಾಗೃತಿ ಮೂಡಿಸುವಂತಹ ಅನೇಕ ಕಾರ್ಯಕ್ರಮಗಳು ಜಾತ್ರೆಯ ಅಂಗವಾಗಿ ಏರ್ಪಡಿಸಲಾಗುತ್ತಿರುವುದರಿಂದ, ಜಾತ್ರೆಯ ಆಚರಣೆ ಇನ್ನಷ್ಟು ಅರ್ಥಪೂರ್ಣವಾಗುತ್ತಿದೆ.  ಜಾತ್ರೆಯ ಕಾರ್ಯಕ್ರಮಗಳು ಇಡೀ ರಾಜ್ಯಕ್ಕೆ ಸಂಭ್ರಮ ತರುವಂತಾಗಬೇಕು ಜೊತೆಗೆ ಧಾರ್ಮಿಕ ಉತ್ಸವವೂ ಆಗಬೇಕು.  ರಾಜ್ಯದ ವಿವಿಧ ಭಾಗಗಳಿಂದ ಸುಮಾರು 5 ಲಕ್ಷ ಭಕ್ತಾದಿಗಳು ಜಾತ್ರೆಗೆ ಆಗಮಿಸುವ ನಿರೀಕ್ಷೆ ಇದೆ.  ಜ. 03 ರಂದು ಮಹಾರಥೋತ್ಸವ ನಡೆಯಲಿದ್ದು, ಜಾತ್ರೆ ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ಜರುಗುವಂತೆ ಜಿಲ್ಲಾಡಳಿತದಿಂದ ಸಕಲ ರೀತಿಯ ಸಹಕಾರ ನೀಡಲಾಗುವುದು.   ರಥೋತ್ಸವದ ದಿನದಂದು ಟ್ರಾಫಿಕ್ ಜಾಮ್ ಆಗದಂತೆ ಎಚ್ಚರ ವಹಿಸಲು ಈಗಾಗಲೆ ಪೊಲೀಸ್ ಇಲಾಖೆ ಯೋಜನೆಯನ್ನು ರೂಪಿಸಿದೆ.  ಬಸ್‍ನಿಲ್ದಾಣ ಹಾಗೂ ನಗರದ ವಿವಿಧೆಡೆಗಳಿಂದ ಗವಿಮಠ ಬಳಿಗೆ ಸಿಟಿ ಬಸ್ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸಲು ಈಕರಸಾ ಸಂಸ್ಥೆಗೆ ಸೂಚನೆ ನೀಡಲಾಗುವುದು.  ಒಟ್ಟಾರೆ ಭಕ್ತಾದಿಗಳು ಶ್ರೀ ಗವಿಸಿದ್ದೇಶ್ವರ ಜಾತ್ರೆಯನ್ನು ಸಂತೋಷದಿಂದ ಸಂಭ್ರಮಿಸಿ, ಸುರಕ್ಷಿತವಾಗಿ ಮನೆಗೆ ಮರಳುವಂತಾಗಬೇಕು ಎಂದರು.  ಈ ಬಾರಿಯ ಜಾತ್ರೆ ಅಂಗವಾಗಿ, ಸಾರ್ವಜನಿಕರಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಯೂನಿಸೆಫ್‍ನ ಹರೀಶ್ ಜೋಗಿ ಅವರು ಹೇಳಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಪ್ರಸಕ್ತ ಜೀವನ ಸ್ಥಿತಿಯಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಅತಿ ಹೆಚ್ಚು ಒತ್ತಡದಲ್ಲಿ ಬದುಕು ಸಾಗಿಸುವ ಸ್ಥಿತಿ ಇದೆ.  ಒತ್ತಡದ ಬದುಕನ್ನು ನಿರ್ವಹಿಸುವುದು ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿಚಾರಸಂಕಿರಣದಂತಹ ವಿಶೇಷ ಕಾರ್ಯಕ್ರಮ ಆಯೋಜಿಸುವಂತೆ ಸಲಹೆ ನೀಡಿದರು.
ಸ್ವಚ್ಛತೆಗೆ ಆದ್ಯತೆ :
********* ಗವಿಸಿದ್ದೇಶ್ವರ ಜಾತ್ರೆಯ ಸಂದರ್ಭದಲ್ಲಿ ನಗರದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು.  ಸಾರ್ವಜನಿಕರಿಗೆ ಕುಡಿಯುವ ನೀರು ಸಮರ್ಪಕವಾಗಿ ದೊರೆಯಬೇಕು.  ಮೂರು ದಿನಗಳ ಕಾಲವೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗದಂತೆ ಎಚ್ಚರಿಕೆ ವಹಿಸಬೇಕು.  ಬೀದಿ ದೀಪದ ವ್ಯವಸ್ಥೆ, ತುರ್ತು ಆರೋಗ್ಯ ಸೇವೆ ಒದಗಸಬೇಕು.  ಮುಂಜಾಗ್ರತೆಯ ಕ್ರಮವಾಗಿ ಗವಿಮಠದ ಬಳಿ ಅಗ್ನಿಶಾಮಕ ವಾಹನವನ್ನು ಸಿದ್ಧವಾಗಿರಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರಲಿ :
***************** ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ದಾಸೋಹ ನಡೆಯುವ ಸ್ಥಳ, ಮಳಿಗೆಗಳ ಆವರಣ, ಪಾರ್ಕಿಂಗ್ ಸ್ಥಳ ಮುಂತಾದೆಡೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.  ಜಾತ್ರಾ ಅವಧಿಯಲ್ಲಿ ನಗರದ ರಸ್ತೆ ಹಾಗೂ ಗವಿಮಠ ಆವರಣ ಸ್ವಚ್ಛವಾಗಿರಸಲು, ನಗರಸಭೆ ವತಿಯಿಂದ ಸ್ವಚ್ಛತಾ ಕಾರ್ಯಕ್ಕೆ ಅಗತ್ಯ ನೆರವು ಒದಗಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.
ಪೊಲೀಸ್ ಬಂದೋಬಸ್ತ್ :
*********** ಸಭೆಯಲ್ಲಿ ಉಪಸ್ಥಿತರಿದ್ದ  ಡಿವೈಎಸ್‍ಪಿ ಸಂದಿಗವಾಡ ಅವರು ಮಾತನಾಡಿ, ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಜಾತ್ರೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು.   ಪೊಲೀಸರು, ಗೃಹರಕ್ಷಕ ದಳ, ಪೊಲೀಸ್ ಅಧಿಕಾರಿಗಳನ್ನು ಜಾತ್ರೆಯ ಬಂದೋಬಸ್ತ್‍ಗೆ ನೇಮಿಸಲಾಗುವುದು.  ದ್ವಿಚಕ್ರ ವಾಹನ, ಟ್ರ್ಯಾಕ್ಟರ್, ಲಾರಿ, ಜೀಪ್, ಕಾರು ಮುಂತಾದ ವಾಹನಗಳ ಪಾರ್ಕಿಂಗ್ ಮಾಡಲು ಸ್ಥಳ ನಿಗದಿಪಡಿಸಲಾಗುವುದು.  ಜಾತ್ರೆ ಸಂದರ್ಭದಲ್ಲಿ ಜೇಬುಗಳ್ಳತನ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು.  ಜಾತ್ರೆ ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ತಡೆಗಟ್ಟಲು ವಾಹನ ಸಂಚಾರ ಮಾರ್ಗಗಳ ಬದಲಾವಣೆ ಮಾಡಲಾಗುವುದು ಎಂದರು. 
ಜಾಗೃತಿ ನಡಿಗೆ :
******** ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಡಿ. 30 ರಂದು ‘ಸಶಕ್ತ ಮನ- ಸಂತೃಪ್ತ ಜೀವನ’ ಘೋಷವಾಕ್ಯದೊಂದಿಗೆ ‘ನಮ್ಮ ನಡೆ ಒತ್ತಡ ರಹಿತ ಬದುಕಿನ ಕಡೆ’ ಎಂಬ ಆಶಯವನ್ನಿಟ್ಟುಕೊಂಡು, ಜನರಲ್ಲಿ ಜಾಗೃತಿ ಮೂಡಿಸಲು ಈ ಬಾರಿ ಗವಿಮಠ ನಿರ್ಧರಿಸಿದ್ದು, ಜಾಗೃತಿ ನಡಿಗೆ ಅಂದು ಬೆಳಿಗ್ಗೆ 8-30 ಗಂಟೆಗೆ ನಗರದ ಬನ್ನಿಕಟ್ಟೆ ಹತ್ತಿರದ ಗೌರಿಶಂಕರ ದೇವಸ್ಥಾನದಿಂದ ಆರಂಭಗೊಂಡು, ಅಶೋಕ ವೃತ್ತ, ಗಡಿಯಾರ ಕಂಬ ಮಾರ್ಗವಾಗಿ ಗವಿಮಠ ತಲುಪಲಿದೆ.  ನಡಿಗೆ ಜಾಥಾಕ್ಕೆ ನಗರದ ಶಾಲಾ ಕಾಲೇಜುಗಳು ಸಹಕಾರ ನೀಡಬೇಕಿದೆ ಎಂದು ಯೂನಿಸೆಫ್‍ನ ಹರೀಶ್ ಜೋಗಿ ಅವರು ಸಭೆಯಲ್ಲಿ ಮನವಿ ಮಾಡಿದರು.
ತೆಪ್ಪೋತ್ಸವ :
********* ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಾತ್ರಾ ಮಹೋತ್ಸವದ ಅಂಗವಾಗಿ ತೆಪ್ಪೋತ್ಸವವನ್ನು ಆಯೋಜಿಸಲಾಗಿದೆ.  ಡಿ. 31 ರಂದು ಸಂಜೆ 06 ಗಂಟೆಗೆ ಗವಿಮಠ ಬಳಿಯ ನವೀಕರಿಸಿದ ಗವಿಮಠ ಕೆರೆಯಲ್ಲಿ ತೆಪ್ಪೋತ್ಸವ ಏರ್ಪಡಿಸಲಾಗಿದೆ ಎಂದು ಗವಿಮಠದ ಪರವಾಗಿ ಆಗಮಿಸಿದ್ದ ಮಲ್ಲಿಕಾರ್ಜುನ ಸೋಮಲಾಪುರ ಅವರು ಹೇಳಿದರು.
     ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ವೆಂಕಟರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ, ಪೌರಾಯುಕ್ತ ಪರಮೇಶ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಬಿ.ವೈ. ಬಂಡಿವಡ್ಡರ್,  ಗವಿಮಠದ ವತಿಯಿಂದ ಬಸವರಾಜ ಬಳ್ಳೊಳ್ಳಿ, ಶರಣು, ರಾಜೇಶ್ ಯಾವಗಲ್, ಪತ್ರಕರ್ತ ಸೋಮರಡ್ಡಿ ಅಳವಂಡಿ, ತಹಸಿಲ್ದಾರ್ ಗುರುಬಸವರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು  ಭಾಗವಹಿಸಿದ್ದರು.


ಹೀಗಾಗಿ ಲೇಖನಗಳು ಗವಿಸಿದ್ದೇಶ್ವರ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಹಕಾರ - ಡಿಸಿ ಎಂ. ಕನಗವಲ್ಲಿ

ಎಲ್ಲಾ ಲೇಖನಗಳು ಆಗಿದೆ ಗವಿಸಿದ್ದೇಶ್ವರ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಹಕಾರ - ಡಿಸಿ ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಗವಿಸಿದ್ದೇಶ್ವರ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಹಕಾರ - ಡಿಸಿ ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2017/12/blog-post_21.html

Subscribe to receive free email updates:

0 Response to "ಗವಿಸಿದ್ದೇಶ್ವರ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಹಕಾರ - ಡಿಸಿ ಎಂ. ಕನಗವಲ್ಲಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ