ಶೀರ್ಷಿಕೆ : ಶಿಶುಕ್ಷು ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಶಿಶುಕ್ಷು ತರಬೇತಿ : ಅರ್ಜಿ ಆಹ್ವಾನ
ಶಿಶುಕ್ಷು ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಡಿ. 21 (ಕರ್ನಾಟಕ ವಾರ್ತೆ): ಕೊಪ್ಪಳ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಹೆಚ್.ಎ.ಎಲ್ ಬೆಂಗಳೂರು, ಕಂಪನಿಯಲ್ಲಿ ಶಿಶುಕ್ಷು (ಅಪ್ರೆಂಟಿಸ್) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಡ್ವಾನ್ಸ್ ಆಪರೇಟರ್ ಮಶೀನ್ ಟೂಲ್ ವಿಷಯಕ್ಕೆ ಸಂಬಂಧಿಸಿದಂತೆ ಶಿಶುಕ್ಷು ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನದಲ್ಲಿ ಶೇ. 60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. 15 ರಿಂದ 18 ವರ್ಷ ವಯೋಮಿತಿಯಲ್ಲಿರಬೇಕು. ಕರ್ನಾಟಕ ರಾಜ್ಯದ ಆರ್ಥಿಕ ಬಡ ವಿದ್ಯಾರ್ಥಿಗಳು ಬಿ.ಪಿ.ಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಿರಬೇಕು. ಶಿಶುಕ್ಷು ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ತರಬೇತಿ/ ಶಿಕ್ಷಣ, ಸಂಬಳ ಮತ್ತು ಭತ್ಯೆಗಳು (ಕನಿಷ್ಠ 5500 ಮಾಹೆಯಾನ). ಹಾಗೂ ವಸತಿ ಸೌಲಭ್ಯ ಒದಗಿಸಲಾಗುವುದು.
ಅರ್ಜಿಯನ್ನು ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜಿಲ್ಲಾಡಳಿತ ಭವನ ಕೊಪ್ಪಳ ಇವರಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ, ಬಿ.ಪಿ.ಎಲ್/ ಅಂತ್ಯೋದಯ ಪಡಿತರ ಚೀಟಿ, ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಲಗತ್ತಿಸಿ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅಥವಾ ಅಡಿಷನಲ್ ಜನರಲ್ ಮ್ಯಾನೇಜರ್ (ಟಿ.ಟಿ.ಐ), ಹಿಂದುಸ್ಥಾನ ಏರೋನಾಟಿಕ್ಸ್ ಲಿಮಿಟೆಡ್, ವಿಮಾನಪುರ, ಬೆಂಗಳೂರು-560017, ಇವರಿಗೆ ನೇರವಾಗಿಯೂ ಸಹ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ. 28 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ ಸಂಖ್ಯೆ 08539-220859 ಕ್ಕೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಶಿಶುಕ್ಷು ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಶಿಶುಕ್ಷು ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಶಿಶುಕ್ಷು ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/12/blog-post_39.html
0 Response to "ಶಿಶುಕ್ಷು ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ