NEWS AND PHOTO DATE: 15--12--2017

NEWS AND PHOTO DATE: 15--12--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 15--12--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 15--12--2017
ಲಿಂಕ್ : NEWS AND PHOTO DATE: 15--12--2017

ಓದಿ


NEWS AND PHOTO DATE: 15--12--2017

ಮುಖ್ಯಮಂತ್ರಿಗಳ ಪ್ರವಾಸ
***********************
ಕಲಬುರಗಿ,ಡಿ.15.(ಕ.ವಾ.)-ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿಸೆಂಬರ್ 16ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ರಾಯಚೂರಿನ ಯರಮರಸ್ ಹೆಲಿಪ್ಯಾಡ್‍ನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು, ಬೆಳಿಗ್ಗೆ 10.45 ಗಂಟೆಗೆ ಅಫಜಲಪುರ ಹೆಲಿಪ್ಯಾಡಿಗೆ ಆಗಮಿಸುವರು. ನಂತರ ಅಫಜಲಪುರ ನ್ಯಾಶನಲ್ ಫಂಕ್ಷನ್ ಹಾಲ್‍ನಲ್ಲಿ ಅಫಜಲಪುರ ತಾಲೂಕಿನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು.
ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 12.30 ಗಂಟೆಗೆ ಅಫಜಲಪುರ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.10 ಗಂಟೆಗೆ ಸೇಡಂ ವಾಸವದತ್ತ ಸಿಮೆಂಟ್ ಫ್ಯಾಕ್ಟರಿ ಹೆಲಿಪ್ಯಾಡಿಗೆ ಆಗಮಿಸಿ, ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು.
ಮುಖ್ಯಮಂತ್ರಿಗಳು ಮಧ್ಯಾಹ್ನ 3.45 ಗಂಟೆಗೆ ಸೇಡಂ ವಾಸವದತ್ತ ಸಿಮೆಂಟ್ ಫ್ಯಾಕ್ಟರಿ ಹೆಲಿಪ್ಯಾಡಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಸಂಜೆ 4.15 ಗಂಟೆಗೆ ಜೇವರ್ಗಿ ತಾಲೂಕಿನ ಯಡ್ರಾಮಿ ಹೆಲಿಪ್ಯಾಡಿಗೆ ಆಗಮಿಸಿ, ಯಡ್ರಾಮಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಅಂದು ಸಂಜೆ 6 ಗಂಟೆಗೆ ಯಡ್ರಾಮಿಯಿಂದ ರಸ್ತೆ ಮೂಲಕ ಕಲಬುರಗಿಗೆ ಆಗಮಿಸಿ ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಡಿಸೆಂಬರ್ 17ರಂದು ರವಿವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ವುಮೆನ್ಸ್ ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸುವರು. ಬೆಳಿಗ್ಗೆ 10 ಗಂಟೆಗೆ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ನೂತನ ಸಭಾಂಗಣ ಉದ್ಘಾಟಿಸುವರು. ನಂತರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿಯ ಡಿ.ಎ.ಆರ್. ಪೊಲೀಸ್ ಮೈದಾನದ ಹೆಲಿಪ್ಯಾಡಿನಿಂದ ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ಗ್ರಾಮಕ್ಕೆ ಪ್ರಯಾಣ ಮಾಡುವರು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
*********************************************
ಕಲಬುರಗಿ,ಡಿ.15.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಅವರು ಡಿಸೆಂಬರ್ 16ರಂದು ಮುಖ್ಯಮಂತ್ರಿಗಳೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಏರ್ಪಡಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಡಿಸೆಂಬರ್ 17ರಂದು ಮುಖ್ಯಮಂತ್ರಿಗಳೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಏರ್ಪಡಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಡಿಸೆಂಬರ್ 18 ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಡಿಸೆಂಬರ್ 19ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಅಂದು ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಡಿ. 16ರಂದು ಉಪವಿಭಾಗವಾರು ವಿದ್ಯುತ್ ಗ್ರಾಹಕರ ಸಂವಾದ ಸಭೆ
************************************************************
ಕಲಬುರಗಿ,ಡಿ.15.(ಕ.ವಾ.)-ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆ.ಇ.ಆರ್.ಸಿ) ರವರ ನಿರ್ದೇಶನದ ಮೇರೆಗೆ ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಿಂದ ಡಿಸೆಂಬರ್ 16 ಶನಿವಾರ ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಕಲಬುರಗಿ ನಗರ ವಿಭಾಗದ ವ್ಯಾಪ್ತಿಗೆ ಬರುವ ಉಪ ವಿಭಾಗಗಳ ಗ್ರಾಹಕರ ಸಂವಾದ ಸಭೆಯನ್ನು ಕೆಳಕಂಡ ಉಪವಿಭಾಗವಾರು ಏರ್ಪಡಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಆಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಕಾರ್ಯ ಮತ್ತು ಪಾಲನೆ ನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.
ಕಲಬುರಗಿ ನಗರ ಉಪವಿಭಾಗ-1ಕ್ಕೆ ಸಂಬಂಧಿಸಿದಂತೆ ಗ್ರಾಹಕರ ಸಂವಾದ ಸಭೆಯು ನಗರದ ಸುಪರ ಮಾರ್ಕೆಟಿನ ಉಪವಿಭಾಗ-1ರಲ್ಲಿ, ಕಲಬುರಗಿ ನಗರ ಉಪ ವಿಭಾಗ-2ಕ್ಕೆ ಸಂಬಂಧಿಸಿದ ಗ್ರಾಹಕರ ಸಂವಾದ ಸಭೆಯು ಕಲಬುರಗಿ ಸ್ಟೇಶನ್ ರಸ್ತೆ ಉಪವಿಭಾಗ-2ರಲ್ಲಿ, ಉಪವಿಭಾಗ-3ಕ್ಕೆ ಸಂಬಂಧಿಸಿದ ಗ್ರಾಹಕರ ಸಂವಾದ ಸಭೆಯು ಕಲಬುರಗಿ ಎಂ.ಬಿ. ನಗರದಲ್ಲಿರುವ ಉಪ ವಿಭಾಗ-3ರಲ್ಲಿ ಹಾಗೂ ಉಪವಿಭಾಗ-4ಕ್ಕೆ ಸಂಬಂಧಿಸಿದ ಗ್ರಾಹಕರ ಸಂವಾದ ಸಭೆಯು ಜೇವರ್ಗಿ ಕ್ರಾಸ್‍ನ ಕೈಗಾರಿಕಾ ಪ್ರದೇಶದಲ್ಲಿ ಏರ್ಪಡಿಸಲಾಗಿದೆ.
ಈ ಗ್ರಾಹಕರ ಸಭೆಯು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಸಂಬಂಧಪಟ್ಟ ಉಪವಿಭಾಗಗಳ ಗ್ರಾಹಕರು ಈ ಗ್ರಾಹಕರ ಸಂವಾದ ಸಭೆಯಲ್ಲಿ ಭಾಗವಹಿಸಿ ತಮ್ಮ ಯಾವುದೇ ತರಹದ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಕರಿಗೆ ಆನ್‍ಲೈನ್ ತರಬೇತಿ ದಿನಾಂಕ ಡಿಸೆಂಬರ್ 17ಕ್ಕೆ ಮುಂದೂಡಿಕೆ
***************************************************************
ಕಲಬುರಗಿ,ssssಡಿ.15.(ಕ.ವಾ.)-ಶಿಕ್ಷಕರ ತರಬೇತಿ ಪಡೆಯದೆ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ಆಯ್ದ ಶಿಕ್ಷಕರನ್ನು ಆನ್‍ಲೈನ್ ಮೂಲಕ ತರಬೇತಿ ನೀಡುವ ದಿನಾಂಕವನ್ನು ಡಿಸೆಂಬರ್ 17ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ ಮರ್ತುಳೆ ಶಶಿಕಾಂತ ತಿಳಿಸಿದಾರೆ.
ತರಬೇತಿಗೆ ಆಯ್ಕೆಯಾದ ಶಿಕ್ಷಕರು ಡಿಸೆಂಬರ್ 17 ರಂದು ಕಲಬುರಗಿ ದರ್ಗಾ ರಸ್ತೆಯಲ್ಲಿರುವ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆ (ಹೆಣ್ಣು) ಯಲ್ಲಿ ಬೆಳಿಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಡಯಟ್ ಕಮಲಾಪುರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08478-221346ಗೆ ಸಂಪರ್ಕಿಸಲು ಕೋರಲಾಗಿದೆ. ಈ ಹಿಂದೆ ತರಬೇತಿ ದಿನಾಂಕವನ್ನು ಡಿಸೆಂಬರ್ 10ರಂದು ನಿಗದಿಪಡಿಸಲಾಗಿತ್ತೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ 16ರಂದು ಗ್ರಾಹಕರ ಕುಂದುಕೊರತೆ ಸಭೆ
**********************************************
ಕಲಬುರಗಿ,ಡಿ.15.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಚಿತ್ತಾಪುರ, ಶಹಾಬಾದ ಹಾಗೂ ಕಾಳಗಿ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಗ್ರಾಹಕರ ಕುಂದುಕೊರತೆ ಸಭೆಯು ಡಿಸೆಂಬರ್ 16ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಚಿತ್ತಾಪುರ, ಶಹಾಬಾದ ಮತ್ತು ಕಾಳಗಿ ಜೆಸ್ಕಾಂ ಉಪವಿಭಾಗದ ಕಚೇರಿಗಳಲ್ಲಿ ಜರುಗಲಿದೆ ಎಂದು ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿನ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಗ್ರಾಹಕರ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಪರಿಹರಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ಜನಸ್ಪಂದನ ಸಭೆಯ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.
ಜಿಲ್ಲಾ ಸಚಿವರಿಂದ 72 ಜನ ವಿಕಲಚೇತನರಿಗೆ ತ್ರಿಚಕ್ರ ಪೆಟ್ರೋಲ್ ವಾಹನ ವಿತರಣೆ
***********************************************************************
ಕಲಬುರಗಿ,ಡಿ.15.(ಕ.ವಾ.)-ಶೇ. 75ಕ್ಕಿಂತ ಹೆಚ್ಚು ಅಂಗ ವೈಕಲ್ಯವುಳ್ಳ ಅಂಗವಿಕಲರಿಗೆ ಮಾತ್ರ ತ್ರಿಚಕ್ರ ಪೆಟ್ರೋಲ ವಾಹನ ವಿತರಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ಪಾರದರ್ಶಕವಾಗಿ ಮತ್ತು ಪ್ರಾಮಾಣಿಕವಾಗಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕೆಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ತಿಳಿಸಿದರು.
ಅವರು ಶುಕ್ರವಾರ ಕಲಬುರಗಿ ನಗರದ ಆದರ್ಶ ನಗರದಲ್ಲಿರುವ ಬಾಲಮಂದಿರದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ ಜಿಲ್ಲೆಯ 72 ಜನ ದೈಹಿಕ ವಿಕಲಚೇತನರಿಗೆ ತ್ರಿಚಕ್ರ ಪೆಟ್ರೋಲ್ ವಾಹನವನ್ನು ವಿತರಣೆ ಮಾಡಿ ಮಾತನಾಡಿದರು.
2016-17ನೇ ಸಾಲಿನ ಸರ್ಕಾರದ ಅನುದಾನದಲ್ಲಿ ಜಿಲ್ಲೆಯ 72 ವಿಕಲಚೇತನರಿಗೆ ತ್ರಿಚಕ್ರ ಪೆಟ್ರೋಲ್ ವಾಹನ ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಸ್.ಟಿ.ಪಿ. ಮತ್ತು ಟಿ.ಎಸ್.ಪಿ. ಯೋಜನೆಯಲ್ಲಿ 135 ಜನ ಅಂಗವಿಕಲರಿಗೆ ತ್ರಿಚಕ್ರ ಪೆಟ್ರೋಲ್ ವಾಹನ ವಿತರಣೆ ಮಾಡಲಾಗುವುದು ಎಂದರು.
ಜಿಲ್ಲೆಯ ಎಲ್ಲ ತಾಲೂಕಿನಲ್ಲಿರುವ ಅರ್ಹ ಅಂಗವಿಕಲರ ಪಟ್ಟಿಯನ್ನು ಒಂದು ತಿಂಗಳೊಳಗಾಗಿ ಸಿದ್ಧಪಡಿಸಬೇಕು. ಅಂಗವಿಕಲರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಕಚೇರಿಯಲ್ಲಿ ಬೋರ್ಡ ಹಾಕಬೇಕು. ಕಚೇರಿಗೆ ಬರುವರೊಂದಿಗೆ ಗೌರವದಿಂದ ನಡೆದುಕೊಂಡು ಸದರಿಯಾದ ಮಾಹಿತಿ ಒದಗಿಸಬೇಕೆಂದು ತಿಳಿಸಿದರು.
ಪ್ರವಾಸೋದ್ಯಮ ಮತ್ತು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಯಾಂಕ ಖರ್ಗೆ, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಜೇವರ್ಗಿ ಶಾಸಕ ಡಾ. ಅಜಯಸಿಂಗ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಕೃಷ್ಣಾಜಿ ಕುಲಕರ್ಣಿ, ಶಿವಾನಂದ ತೊರವಿ, ತುಕಾರಾಮ ಕೊಳ್ಳೂರ, ಶಿವಾನಂದ ಬಾಳಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಖಾಜಾ ಮೈನೋದ್ದೀನ್, ಶಬ್ಬೀರ ಅನ್ವರ ಪಾಲ್ಗೊಂಡಿದ್ದರು. ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿ ಬನ್ಸಿ ಪವಾರ ಸ್ವಾಗತಿಸಿದರು.
ಬಾಕಿಯಿರುವ ಆಸ್ತಿ ತೆರಿಗೆ ಪಾವತಿಸಲು ಮಾಲೀಕರಿಗೆ ಸೂಚನೆ
******************************************************
ಕಲಬುರಗಿ,ಡಿ.15.(ಕ.ವಾ.)-ಮಹಾನಗರ ಪಾಲಿಕೆ ಕಲಬುರಗಿಯ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮಾಲೀಕರಿಗೆ/ಉಪಭೋಗದಾರರು ತಮ್ಮ ಆಸ್ತಿಗಳ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಲ್ಲಿ ಕೂಡಲೇ ಪಾವತಿಸಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಅಡಿಯಲ್ಲಿ ಕಾನೂನು ಪ್ರಕಾರ ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಮಾಲೀಕರು/ಉಪಭೋಗದಾರರ ಮೇಲೆ ನ್ಯಾಯಾಲಯದಲ್ಲಿ ದಾವೆ ಹೂಡಿ ಆಸ್ತಿ ತೆರಿಗೆಯನ್ನು ದಂಡದೊಂದಿಗೆ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಈಗಾಗಲೇ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಮಾಲೀಕರ ಮೇಲೆ ಮಹಾನಗರ ಪಾಲಿಕೆಯಿಂದ ದಾವೆ ಹೂಡಲಾಗಿತ್ತು. ಅದರಂತೆ ನ್ಯಾಯಾಲಯವು ನಿಯಮಾನುಸಾರ ದಂಡದೊಂದಿಗೆ ತೆರಿಗೆ ಪಾವತಿಸಲು ಆದೇಶಿಸಿರುತ್ತದೆ. ಮಾಲೀಕರು ಇಂತಹ ಕ್ರಮಕ್ಕೆ ಅವಕಾಶ ನೀಡದೆ ಮತ್ತು ಪ್ರತಿ ತಿಂಗಳು ಶೇ. 2 ರಂತೆ ದಂಡದಿಂದ ತಪ್ಪಿಸಿಕೊಳ್ಳಲು ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆಯನ್ನು ಕೂಡಲೇ ಪಾವತಿಸಬೇಕು.
ಆಸ್ತಿ ತೆರಿಗೆ ಪಾವತಿಸಲು ರಜಾ ದಿನಗಳಂದು ಸಹ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಮಹಾನಗರ ಪಾಲಿಕೆಯ ವಲಯ ಕಚೇರಿ-3ರ ಆವರಣ ಹಾಗೂ ಖರ್ಗೆ ಪೆಟ್ರೋಲ್ ಬಂಕ್ ಹತ್ತಿರದ ಹೌಸಿಂಗ್ ಬೋರ್ಡ್ ಕಾಂಪ್ಲೆಕ್ಸ್‍ನಲ್ಲಿರುವ ಗುಲಬರ್ಗಾ ಒನ್ ಶಾಖೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.



ಹೀಗಾಗಿ ಲೇಖನಗಳು NEWS AND PHOTO DATE: 15--12--2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 15--12--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 15--12--2017 ಲಿಂಕ್ ವಿಳಾಸ https://dekalungi.blogspot.com/2017/12/news-and-photo-date-15-12-2017.html

Subscribe to receive free email updates:

0 Response to "NEWS AND PHOTO DATE: 15--12--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ