ಶೀರ್ಷಿಕೆ : news and photo date: 16--12--2017
ಲಿಂಕ್ : news and photo date: 16--12--2017
news and photo date: 16--12--2017
ಈ ವರ್ಷವೂ ತೊಗರಿ ಖರೀದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ
*************************************************************
ಕಲಬುರಗಿ ಡಿ.16 (ಕ.ವಾ.)-ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಬೆಂಬಲ ಬೆಲೆ ನಿಗದಿಪಡಿಸಿ ಈ ವರ್ಷವೂ ತೊಗರಿ ಖರೀದಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಜನತೆಗೆ ಅಭಯ ನೀಡಿದರು.
ಅಫಜಲಪೂರದ ನ್ಯಾಷನಲ್ ಪಂಕ್ಷನ್ ಹಾಲ್ ಆವರಣದಲ್ಲಿ ಡಿ.16ರಂದು ನಡೆದ ಅಫಜಲಪುರ ತಾಲೂಕಿನ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕಳೆದ ವರ್ಷ ದಾಖಲೆಯ 34 ಲಕ್ಷ ಟನ್ ತೊಗರಿಯನ್ನು ಖರೀದಿಸಿ ರೈತರಿಗೆ ನ್ಯಾಯ ದೊರಕಿಸಿಕೊಡಲಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಬೆಂಬಲ ಬೆಲೆಯನ್ನು ನಿಗದಿ ಮಾಡಿದೆ. ರಾಜ್ಯ ಸರ್ಕಾರ ಕೂಡ ಶೀಘ್ರ ನ್ಯಾಯಯುತ ಬೆಲೆ ನಿಗದಿ ಪಡಿಸುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಕಳೆದ ನಾಲ್ಕೂವರೆ ವರ್ಷದಲ್ಲಿ ನೀರಾವರಿ ಕ್ಷೇತ್ರಕ್ಕೆ 52,000 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಕಲಬುರಗಿ ಜಿಲ್ಲೆಯೊಂದಕ್ಕೆ 1532 ಕೋಟಿ ರೂ.ಗಳನ್ನು ವ್ಯಯಿಸಿದೆ. ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರತಿ ವರ್ಷ 1000 ಕೋಟಿ ರೂ. ಮೀಸಲಿರಿಸಿ ಪ್ರಾದೇಶಿಕ ಅಸಮಾನತೆಯ ನಿವಾರಣೆಗೆ ದಿಟ್ಟ ಹೆಜ್ಜೆ ಇಡಲಾಗುತ್ತಿದೆ. 2017-18ನೇ ಸಾಲಿಗೆ 1,500 ಕೋಟಿ. ರೂ.ಗೆ ಕ್ರಿಯಾಯೋಜನೆ ಮಾಡಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
165 ಭರವಸೆಗಳಲ್ಲಿ ಈಗಾಗಲೇ 155 ಭರವಸೆಗಳನ್ನು ಈಡೇರಿಸಲಾಗಿದೆ. 8,165 ಕೋಟಿ ರೂ. ಸಾಲ ಮನ್ನಾ ಮಾಡಿ 22,27,506 ರೈತರಿಗೆ ನ್ಯಾಯ ದೊರಕಿಸಿಕೊಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ರಾಜ್ಯ ಸರ್ಕಾರವು 5 ವರ್ಷದಲ್ಲಿ 86,000 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಬಡ ಮಹಿಳೆಯರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಬಡ್ಡಿ ಇಲ್ಲದೇ ಸ್ವಸಹಾಯ ಸಂಘಗಳಿಗೆ ಸಾಲ ಒದಗಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.
ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಬಡವರ ಪರ ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ನಾವು ವಾಗ್ದಾನದಂತೆಯೇ ನಡೆದುಕೊಂಡಿದ್ದೇವೆ. 371 (ಜೆ) ನಡಿ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ನೀಡಿ ನ್ಯಾಯ ದೊರಕಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು.
ಅಫಜಲಪುರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೀಗಾಗಿ ಲೇಖನಗಳು news and photo date: 16--12--2017
ಎಲ್ಲಾ ಲೇಖನಗಳು ಆಗಿದೆ news and photo date: 16--12--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo date: 16--12--2017 ಲಿಂಕ್ ವಿಳಾಸ https://dekalungi.blogspot.com/2017/12/news-and-photo-date-16-12-2017.html
0 Response to "news and photo date: 16--12--2017"
ಕಾಮೆಂಟ್ ಪೋಸ್ಟ್ ಮಾಡಿ