NEWS AND PHOTO DATE: 17--12--2017

NEWS AND PHOTO DATE: 17--12--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 17--12--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 17--12--2017
ಲಿಂಕ್ : NEWS AND PHOTO DATE: 17--12--2017

ಓದಿ


NEWS AND PHOTO DATE: 17--12--2017

ಮಹಿಳಾ ಉದ್ದಿಮೆದಾರರಿಗೆ ಸರ್ಕಾರದ ಅಭಯ
*******************************************
ಕಲಬುರಗಿ,ಡಿ.17.(ಕ.ವಾ.)-ಮಹಿಳಾ ಉದ್ದಿಮೆದಾರರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಸರ್ಕಾರ ರಾಜ್ಯದಲ್ಲಿ ಐದು ಮಹಿಳಾ ಉದ್ದಿಮೆದಾರರ ಪಾರ್ಕ್ ನಿರ್ಮಿಸಲು ಮಂಜೂರಾತಿ ನೀಡಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೋದ್ಯಮದಲ್ಲಿ ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ರವಿವಾರ ಕಲಬುರಗಿಯ ಐವಾನ-ಎ-ಶಾಹಿ ಅತಿಥಿಗೃಹ ಆವರಣದಲ್ಲಿ ಜಿಲ್ಲಾಡಳಿತ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಹೈದ್ರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಕಲಬುರಗಿ ಲೇಡಿಸ್ ಅಸೊಸಿಯೇಶನ್ ಮ್ಯಾನುಫ್ಯಾಕ್ಚರರ್ಸ್ ಪಾರ್ಕ್ ಕೆ-ಲ್ಯಾಂಪ್ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸೌಲಭ್ಯ ಕೇಂದ್ರದ ಶಿಲಾನ್ಯಾಸ ಅನಾವರಣಗೊಳಿಸಿ ಮಾತನಾಡಿದರು.
ರಾಜ್ಯದಲ್ಲಿ ಆರಂಭಿಸಲು ಉದ್ದೇಶಿಸಲಾದ 5 ಮಹಿಳಾ ಕೈಗಾರಿಕಾ ಪಾರ್ಕ್ ಪೈಕಿ ಪ್ರಪ್ರಥಮವಾಗಿ ಕಲಬುರಗಿಯಲ್ಲಿ ಕೈಗಾರಿಕಾ ಮಹಿಳಾ ಪಾರ್ಕ್ ಉದ್ಘಾಟನೆಯಾಗುತ್ತಿರುವುದು ಸಂತಸ ಸಂಗತಿ. ಇದಕ್ಕಾಗಿ ನಂದೂರು ಕೆಸರಟಗಿ ಪ್ರದೇಶದಲ್ಲಿ 50 ಎಕರೆ ಭೂಮಿ ನೀಡಲಾಗಿದೆ ರಾಜ್ಯದಲ್ಲಿ ಹೆಚ್ಚು ಕೈಗಾರಿಕೆ ಆರಂಭಿಸುವ ಉದ್ದೇಶದಿಂದ ಈ ಹಿಂದೆ ಕೆ. ರತ್ನಪ್ರಭಾ ಅವರು ಕೈಗಾರಿಕೆ ಇಲಾಖೆಯ ಅಪರ ಕಾರ್ಯದಶಿಯಾಗಿದ್ದಾಗ ಹೊಸ ಕೈಗಾರಿಕೆ ನೀತಿ ರೂಪಿಸಲು ತಿಳಿಸಲಾಗಿತ್ತು, ರಾಜ್ಯದಲ್ಲಿ ಮಹಿಳಾ ಕೈಗಾರಿಕೆಗಳನ್ನು ಸ್ಥಾಪಿಸಿ ಮಹಿಳೆಯರಿಗೆ ಕೈಗಾರಿಕೆಯಲ್ಲಿ ಸೌಲಭ್ಯ ದೊರೆಯುವಂತೆ ಮಾಡಿದ ಕೀರ್ತಿ ರತ್ನಪ್ರಭ ಅವರಿಗೆ ಸಲ್ಲುತ್ತದೆ ಎಂದು ಶ್ಲಾಘಿಸಿದರು.
ಕಲಬುರಗಿಯಲ್ಲಿ ಪ್ರಸ್ತುತ 200 ಜನ ಮಹಿಳೆಯರು ಉದ್ಯಾಮಶೀಲರಾಗಿ ತಮ್ಮನ್ನು ತೊಡಗಿಸಿದ್ದಾರೆ. ಇನ್ನು ಹಿಂದುಳಿದ, ದಲಿತ ಮಹಿಳೆಯರು ಹೆಚ್ಚಾಗಿ ಉದ್ಯಾಮಶೀಲರಾಗಿ ಹೊರಹೊಮ್ಮಬೇಕು. ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಮಾತ್ರ ಸಮಾಜದಲ್ಲಿ ಲಿಂಗತಾರತಮ್ಯ, ದೌರ್ಜನ್ಯ ಕಡಿಮೆಯಾಗಲು ಸಾಧ್ಯ. ಸರ್ಕಾರದ ಸೌಲಭ್ಯ ಪಡೆದು ಮಹಿಳೆಯರು ಉದ್ಯಾಮಶೀಲರಾಗಿ ಯಶಸ್ಸು ಪಡೆಯಲಿ ಎಂದು ಶುಭ ಹಾರೈಸಿದರು.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಮಾತನಾಡಿ, ಇದೊಂದು ಐತಿಹಾಸಿಕ ದಿನ. ಪ್ರಥಮವಾಗಿ ಕಲಬುರ್ಗಿಯಲ್ಲಿ ಮಹಿಳಾ ಕೈಗಾರಿಕಾ ಪಾರ್ಕಿನ ಸಾಮಾನ್ಯ ಸೌಲಭ್ಯ ಕೇಂದ್ರದ ಶಿಲಾನ್ಯಾಸವನ್ನು ಮುಖ್ಯಮಂತ್ರಿಗಳು ನೆರವೇರಿಸಿದ್ದು ಸಂತೋಷದ ವಿಷಯ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರ್ಕಾರದ ಕೈಗಾರಿಕೆ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮಹಿಳೆಯರಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆಯರಿಗೆ ಹಕ್ಕು ಪತ್ರ ವಿತರಿಸಿದರು. ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ, ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕೆ.ಐ.ಎ.ಡಿ.ಬಿ. ಕಾರ್ಯನಿರ್ವಾಹಕ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಯರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಉಪಸ್ಥಿತರಿದ್ದರು.
ಡಿ. 29 ರಿಂದ ಕನ್ನಡ ಸಾಹಿತ್ಯ ಪರಿಷತ್ತು ಪರೀಕ್ಷೆ
*****************************************
ಕಲಬುರಗಿ,ಡಿ.17.(ಕ.ವಾ.)-ಕನ್ನಡ ಸಾಹಿತ್ಯ ಪರಿಷತ್ತಿನ 2017-18ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು 2017ರ ಡಿಸೆಂಬರ್ 29, 30 ಹಾಗೂ 31 ರಂದು ರಾಜ್ಯದ 18 ಕೇಂದ್ರಗಳಲ್ಲಿ ನಡೆಯಲಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ರಾಜಶೇಖರ ಹತಗುಂದಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ಡಿಸೆಂಬರ್ 23ರ ನಂತರವೂ ಪ್ರವೇಶಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇವರನ್ನು ವಿಚಾರಿಸಬೇಕು. ಬೇರೆ ಜಿಲ್ಲೆಯವರಿಗೆ ಪ್ರವೇಶ ಪತ್ರ ತಲುಪದಿದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪ್ರವೇಶ ಪತ್ರ ಹಾಗೂ ಪರೀಕ್ಷಾ ಕೇಂದ್ರದ ವಿಳಾಸಕ್ಕಾಗಿ ದೂರವಾಣಿ 080-26623584ನ್ನು ಅಥವಾ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಯುವ ಶಕ್ತಿ ಸಂಘ ಯೋಜನೆಯಡಿ ಅರ್ಜಿ ಆಹ್ವಾನ
******************************************
ಕಲಬುರಗಿ,ಡಿ.17.(ಕ.ವಾ.)-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2017-18 ಸಾಲಿನಲ್ಲಿ ಯುವ ಶಕ್ತಿ ಸಂಘ ಸ್ಥಾಪನೆ ಮತ್ತು ನಿರ್ವಹಣೆಗಾಗಿ 5 ಲಕ್ಷ ರೂ.ಗಳ ಸುತ್ತು ನಿಧಿ ಮಂಜೂರು ಮಾಡಲು ಅರ್ಹ ಯುವಕ/ಯುವತಿ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಬಯಸುವವರು ಸಂಘವು ನಿಯಮಾನುಸಾರ ಸೊಸೈಟಿ ನೋಂದಣಿ ಕಾಯ್ದೆ 1960 ಅಡಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮಾನ್ಯತೆ ಪಡೆದಿರಬೇಕು. ವಯೋಮಿತಿ 15 ರಿಂದ 35 ವರ್ಷದೊಳಗಿರಬೇಕು. ಕಡ್ಡಾಯವಾಗಿ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಾರ್ಯಾಲಯವನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-268637 ಅಥವಾ ಮೊಬೈಲ್ ಸಂಖ್ಯೆ 8197058425ನ್ನು ಸಂಪರ್ಕಿಸಲು ಕೋರಲಾಗಿದೆ.
ಶಹಾಬಾದ: ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ
********************************************
ಕಲಬುರಗಿ,ಡಿ.17.(ಕ.ವಾ.)-ಶಹಾಬಾದ ನಗರಸಭೆಯಿಂದ ಪ್ರಸಕ್ತ 2017-18ನೇ ಸಾಲಿನ ದೀನದಯಾಳ ಅಂತ್ಯೋದಯ ಯೋಜನೆಯ ನಲ್ಮ್ ಅಭಿಯಾನ ಯೋಜನೆಯಡಿ ಶಹಾಬಾದ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುವ ನಿರುದ್ಯೋಗಿ ಅರೆ ಉದ್ಯೋಗ ಯುವಕ/ಯುವತಿಯರಿಗೆ ಕಲಬುರಗಿ ಕೆ.ಜಿ.ಟಿ.ಟಿ.ಐ. ಹಾಗೂ ಕಿಯೋನಿಕ್ಸ್‍ದಿಂದ ವಿವಿಧ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ತರಬೇತಿಗಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಶಹಾಬಾದ ನಗರಸಭೆ ಆಯುಕ್ತರು ತಿಳಿಸಿದ್ದಾರೆ.
ಕಲಬುರಗಿಯ ಕೆ.ಜಿ.ಟಿ.ಟಿ.ಐ. ದಿಂದ ಸಿಎನ್‍ಸಿ ಅಪರೇಟರ್ ಟರ್ನಿಂಗ್, ಆಪರೇಟರ್-ಕನ್ವೆರ್ಷನಲ್ ಟರ್ನಿಂಗ್ ಕೋರ್ಸ್‍ಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಕಿಯೋನಿಕ್ಸ್‍ದಿಂದ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ವೆಬ್ ಡೆವಲಪರ್, ಜೂನಿಯರ್ ಸಾಫ್ಟವೇರ್ ಡೆವಲಪರ್, ಡೊಮೆಸ್ಟಿಕ್ ಬೈಯೋಮೆಟ್ರಿಕ್ ಡಾಟಾ ಆಪರೇಟರ್ ಕೋರ್ಸ್‍ಗಳಲ್ಲಿ ತರಬೇತಿ ನೀಡಲಾಗುವುದು.
ಈ ಹಿಂದೆ ಕೌಶಲ್ಯ ಅಭಿವೃದ್ಧಿಯಲ್ಲಿ ತಾಂತ್ರಾಂಶದಲ್ಲಿ ಹೆಸರು ನೋಂದಾಯಿಸಿದ ಫಲಾನುಭವಿಗಳು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನವಾಗಿದೆ. ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ, ವಿದ್ಯಾರ್ಹತೆ, ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಶಹಾಬಾದ ನಗರಸಭೆ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ.









ಹೀಗಾಗಿ ಲೇಖನಗಳು NEWS AND PHOTO DATE: 17--12--2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 17--12--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 17--12--2017 ಲಿಂಕ್ ವಿಳಾಸ https://dekalungi.blogspot.com/2017/12/news-and-photo-date-17-12-2017.html

Subscribe to receive free email updates:

0 Response to "NEWS AND PHOTO DATE: 17--12--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ