NEWS DATE: 18--12--2017

NEWS DATE: 18--12--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS DATE: 18--12--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS DATE: 18--12--2017
ಲಿಂಕ್ : NEWS DATE: 18--12--2017

ಓದಿ


NEWS DATE: 18--12--2017

ಮಕ್ಕಳ ಪಾಲನೆ ಮತ್ತು ರಕ್ಷಣೆಯಲ್ಲಿ ಕಾರ್ಯನಿರತ ಸಂಸ್ಥೆಗಳು:
*****************************************************
ನೋಂದಣಿಯಾಗದಿದ್ದಲ್ಲಿ ಕೂಡಲೆ ನೋಂದಣಿ ಮಾಡಿಕೊಳ್ಳಲು ಸೂಚನೆ
**************************************************************
ಕಲಬುರಗಿ,ಡಿ.18.(ಕ.ವಾ.)-ಬಾಲನ್ಯಾಯ (ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015ರನ್ವಯ ಮಕ್ಕಳ ಪಾಲನೆ ಮತ್ತು ರಕ್ಷಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಇದೂವರಗೆ ನೋಂದಣಿ ಮಾಡಿಕೊಳ್ಳದಿರುವ ಕಲಬುರಗಿ ಜಿಲ್ಲೆಯ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಈ ಕೂಡಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಭರ್ತಿ ಮಾಡಿ ಸಂಸ್ಥೆಯ ನೋಂದಣಿಗೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ಈಗಾಗಲೆ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಸಂಸ್ಥೆಗಳು ನೋಂದಣಿ ಅವಧಿ ಮುಗಿಯುವ ಮೂರು ತಿಂಗಳ ಮುಂಚಿತವಾಗಿ ನವೀಕರಣಕ್ಕೆ ಪ್ರಸ್ತಾವನೆಗಳನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಸೆಕ್ಷನ್ 42(1) ರನ್ವಯ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂ. ದಂಡ ಅಥವಾ ಎರಡು ಶಿಕ್ಷೆ ವಿಧಿಸಲಾಗುವುದೆಂದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೋಂದಾಯಿಸಲು ತಡ ಮಾಡಿದಲ್ಲಿ ಪ್ರತಿ 30 ದಿನಕ್ಕೆ ಪ್ರತ್ಯೇಕ ಅಪರಾಧ ಎಂದು ಪರಿಗಣಿಸಲಾಗುವುದು ಹಾಗೂ ಸಂಸ್ಥೆಯು ಯಾವುದೇ ಕಾಯ್ದೆಯಡಿ ನೋಂದಣಿಯಾಗಿದ್ದರೂ ಅದನ್ನು ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಜರುಗಿಸಲಾಗುವುದು. ಇದಲ್ಲದೇ ಒಂದು ವೇಳೆ ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು.
ಸವೋಚ್ಚ ನ್ಯಾಯಾಲಯವು ರಿಟ್ ಪಿಟೀಷನ್ ಸಂಖ್ಯೆ:75/20112ಗೆ ದಿನಾಂಕ:10-05-2013 ರಂದು ನೀಡಿರುವ ನಿರ್ದೇಶನದಂತೆ ಮಕ್ಕಳಿಗೆ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳು ಮಕ್ಕಳ ಕಲ್ಯಾಣ ಸಮಿತಿಯ ಮುಖಾಂತರ ಮಾತ್ರ ಮಕ್ಕಳನ್ನು ದಾಖಲು ಮಾಡಬೇಕಿದ್ದು, ನೇರವಾಗಿ ಪಡೆಯಲು ಅವಕಾಶ ಇಲ್ಲವೆಂದು ಸ್ಪಷ್ಟಪಡಿಸಿದೆ.
ಇದರೊಂದಿಗೆ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು (Sheಟಣeಡಿ homes), ಬಯಲು ತಂಗುದಾಣಗಳು, ನಿರ್ಗತಿಕ ಮಕ್ಕಳ ಕುಟಿರ, ಬಾಲಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್ ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳನ್ನು ಬಾಲನ್ಯಾಯ ಕಾಯ್ದೆ 2000 ರಡಿಯಲ್ಲಿ ಕಡ್ಡಾಯವಾಗಿ ನೋಂದಣಿಯಾಗಿ ಕಾರ್ಯನಿರ್ವಹಿಸಬೇಕೆಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆಸು ಪಾಸಿನಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಿದ್ದಲ್ಲಿ ಸದರಿ ಮಾಹಿತಿಯನ್ನು ವಿಳಾಸದೊಂದಿಗೆ ಕೂಡಲೇ ಹತ್ತಿರದ ಪೊಲಿಸ್ ಠಾಣೆ/ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ/ ಉಪನಿರ್ದೇಶಕರು, ಮಹಿಳಾ ಮತ್ತು ಅಭಿವೃದ್ದಿ ಇಲಾಖೆ/ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು/ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ತಿಳಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರಿಡಾಂಗಣ ಎದುರುಗಡೆ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯದ ದೂರವಾಣಿ ಸಂಖ್ಯೆ 08472-243219ನ್ನು ಸಂಪರ್ಕಿಸಬಹುದಾಗಿದೆ.
ಡಿಸೆಂಬರ್ 20ರಂದು ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು
*********************************************************
ಕಲಬುರಗಿ,ಡಿ.18(ಕ.ವಾ.)-ವಾಡಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜನ್ನು ಡಿಸೆಂಬರ್ 20ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದಾಗಿದೆ ಎಂದು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆ ಪ್ರಾಚಾರ್ಯ ಚಂದ್ರಕಾಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ 19ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
*****************************************************
ಕಲಬುರಗಿ,ಡಿ.18.(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಶ್ರೀಮತಿ ಅಂಬುಬಾಯಿ ಅಂಧ ಬಾಲಕಿಯರ ವಿಶೇಷ ವಸತಿ ಶಾಲೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಡಿಸೆಂಬರ್ 19ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಸರ್ಕಾರಿ ಆಸ್ಪತ್ರೆಯ ಎದುರುಗಡೆಯಿರುವ ಶ್ರೀಮತಿ ಅಂಬುಬಾಯಿ ಅಂಧ ಬಾಲಕಿಯರ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶ ಎಸ್.ಆರ್. ಮಾಣಿಕ್ಯ ಕಾರ್ಯಕ್ರಮ ಉದ್ಘಾಟಿಸುವರು. ಶ್ರೀಮತಿ ಅಂಬುಬಾಯಿ ಅಂಧ ಬಾಲಕಿಯರ ವಸತಿ ವಿಶೇಷ ಶಾಲೆಯ ಅಧ್ಯಕ್ಷ ದತ್ತು ಅಗ್ರವಾಲ ಅಧ್ಯಕ್ಷತೆ ವಹಿಸುವರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ ಹಿರೇಮಠ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ಜಿಲ್ಲಾ ಕಲ್ಯಾಣಾಧಿಕಾರಿ ಬನ್ಸಿ ಪವಾರ ಅಂಗವಿಕಲರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಮಾತನಾಡುವರು.
ಸೇಡಂ: ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ
******************************************
ಕಲಬುರಗಿ,ಡಿ.18.(ಕ.ವಾ.)-ಸೇಡಂ ಪುರಸಭೆ ಕಾರ್ಯಾಲಯದಿಂದ 2017-18ನೇ ಸಾಲಿನ ದೀನದಯಾಳ ಅಂತ್ಯೋದಯ ಯೋಜನೆ ನಲ್ಮ್ ಅಭಿಯಾನ ಯೋಜನೆಯಡಿ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಉಪ ಘಟಕದಡಿ ವಿವಿಧ ಸರ್ಕಾರಿ ಸೌಮ್ಯದ ತರಬೇತಿ ಸಂಸ್ಥೆಗಳ ಮೂಲಕ ಸೇಡಂ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುವ ನಿರುದ್ಯೋಗಿ ಅರೆ ಉದ್ಯೋಗ ಯುವಕ/ಯುವತಿಯರಿಗೆ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಸೇಡಂ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ್ವಿತೀಯ ಪಿ.ಯು.ಸಿ. ಪಾಸಾದ ಅಭ್ಯರ್ಥಿಗಳಿಗೆ ವೆಬ್ ಡೆವಲಪರ್ ಹಾಗೂ ಜೂನಿಯರ್ ಸಾಫ್ಟವೇರ್ ಡೆವಲಪರ್ ಕೋರ್ಸ್‍ಗಳಲ್ಲಿ ತರಬೇತಿ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ವಿದ್ಯಾರ್ಹತೆ ದಾಖಲೆ, ತಹಶೀಲ್ದಾರರಿಂದ ಪಡೆದ ಜಾತಿ, ಆದಾಯ ಹಾಗೂ ವಾಸಸ್ಥಳ ಪ್ರಮಾಣಪತ್ರ, ಚುನಾವಣಾ ಗುರುತಿನ ಚೀಟಿ/ಆಧಾರ ಕಾರ್ಡ, ಇತ್ತೀಚಿನ 4 ಭಾವಚಿತ್ರಗಳು, ಪಡಿತರ ಚೀಟಿಯ ದಾಖಲೆಗಳನ್ನು ದೃಢೀಕರಿಸಿ ಲಗತ್ತಿಸಿ 2018ರ ಜನವರಿ 5ರ ಸಂಜೆ 5.30 ಗಂಟೆಯೊಳಗಾಗಿ ಸೇಡಂ ಪುರಸಭೆ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸೇಡಂ ಪುರಸಭೆ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ.
ಆಶ್ರಯ ಯೋಜನೆ: ವಂತಿಗೆ ಹಣ ಪಾವತಿಸಿ ಹಕ್ಕುಪತ್ರ ಪಡೆಯಲು ಸೂಚನೆ
*****************************************************************
ಕಲಬುರಗಿ,ಡಿ.18.(ಕ.ವಾ.)-ಆಶ್ರಯ ಯೋಜನೆ ಅಡಿ 2002-03ನೇ ಹಾಗೂ 2003-04ನೇ ಸಾಲಿಗೆ ಆಯ್ಕೆಯಾದ ಫಲಾನುಭವಿಗಳು ತಮ್ಮ ಬಾಕಿ ವಂತಿಕೆ ಹಣ ಭರಿಸಿ ಮಹಾನಗರಪಾಲಿಕೆಯಿಂದ ಹಕ್ಕು ಪತ್ರ ಹಾಗೂ ಸ್ವಾಧೀನತೆ ಪತ್ರಗಳನ್ನು ಪಡೆದುಕೊಂಡು ಮನೆಯನ್ನು ತಮ್ಮ ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಬೇಕೆಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದು ವೇಳೆ ಫಲಾನುಭವಿಗಳು ತಮ್ಮ ಮನೆಯನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳದಿದ್ದಲ್ಲಿ ಇದಕ್ಕೆ ಮಹಾನಗರಪಾಲಿಕೆಯು ಹೊಣೆಗಾರರಾಗಿರುವುದಿಲ್ಲ. ಫಲಾನುಭವಿಗಳು ತಮ್ಮ ಹಕ್ಕು ಪತ್ರ ಹಾಗೂ ಸ್ವಾಧೀನತೆಯ ಪತ್ರವನ್ನು ಪಡೆದು ತಮ್ಮ ಮನೆಗಳಲ್ಲಿ ವಾಸ ಮಾಡಬೇಕು. ಒಂದು ವೇಳೆ ತಮ್ಮ ಮನೆಗಳಿಗೆ ಏನಾದರೂ ಹಾನಿಯಾದರೆ ಮಹಾನಗರ ಪಾಲಿಕೆಯು ಹೊಣೆಗಾರರಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ವಂತಿಗೆ ಹಣ ಪಾವತಿಸಿ ಮನೆಗಳನ್ನು ಸ್ವಧೀನಪಡಿಸಿಕೊಳ್ಳುವಂತೆ ಈಗಾಗಲೆ ಪತ್ರಿಕಾ ಪ್ರಕಟಣೆ ನೀಡಿಲಾಗಿದ್ದು, ಇದೂವರೆಗೆ ಕೇವಲ 65 ಫಲಾನುಭವಿಗಳು ಮಾತ್ರ ಸ್ವಾಧೀನಪತ್ರ ಪಡೆದಿರುತ್ತಾರೆ. ಇನ್ನುಳಿದ ಫಲಾನುಭವಿಗಳು ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಬಾಕಿ ವಂತಿಗೆಯನ್ನು ಭರಿಸಿ ಸ್ವಾಧೀನಪತ್ರ ಪಡೆದುಕೊಂಡು ಮನೆಯಲ್ಲಿ ವಾಸಿಸಬೇಕು. ಇಲ್ಲದಿದ್ದಲ್ಲಿ ಆಯ್ಕೆಯಾದ ಫಲಾನುಭವಿಗಳ ಹೆಸರನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಗೊಳಿಸಲಾಗುವುದು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿಕಲಬುರಗಿ ಮಹಾನಗರ ಪಾಲಿಕೆಯ ಎಸ್.ಜೆ.ಎಸ್.ಆರ್.ವೈ. ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡಿಸೆಂಬರ್ 21ರಿಂದ ಕಾಲುವೆಗಳಿಗೆ ನೀರು ಸ್ಥಗಿತ
*********************************************
ಕಲಬುರಗಿ,ಡಿ.18.(ಕ.ವಾ.)-ಕೆಳದಂಡೆ ಮುಲ್ಲಾಮಾರಿ ಯೋಜನೆಯ ಹಿಂಗಾರು ಹಂಗಾಮಿಗೆ ಪ್ರದೇಶದಲ್ಲಿ ಬೆಳೆದ ಎಲ್ಲ ಬೆಳೆಗಳು ಕಟಾವು ಆಗುತ್ತಿದ್ದು, ನೀರು ಬಳಕೆದಾರರು ಹಾಗೂ ರೈತರ ಬೇಡಿಕೆ ಇಲ್ಲದ್ದನ್ನು ಗಮನಿಸಿ ನೀರಾವರಿ ಸಲಹಾ ಸಮಿತಿಯ ನಿರ್ಣಯದಂತೆ ಮುಲ್ಲಾಮಾರಿ ಜಲಾಶಯದ ಕಾಲುವೆಯಿಂದ ಜಮೀನುಗಳಿಗೆ ನೀರು ಹರಿಸುವುದನ್ನು ಡಿಸೆಂಬರ್ 21ರ ಬೆಳಿಗ್ಗೆ 8 ಗಂಟೆಯಿಂದ ಸ್ಥಗಿತಗೊಳಿಸಲಾಗುವುದು.
ಕೆಳದಂಡೆ ಮುಲ್ಲಾಮಾರಿ ಯೋಜನೆಯ ಹಿಂಗಾರು ಹಿಂಗಾಮಿಗೆ 2017ರ ನವೆಂಬರ್ 14ರಿಂದ ನೀರು ಬಿಡಲಾಗುತ್ತಿದೆ. ಮುಖ್ಯ ಕಾಲುವೆಯ ಅಂತಿಮ ತುದಿಗೆ ನೀರು ತಲುಪಿರುತ್ತದೆ. ನೀರಿನ ಬೇಡಿಕೆಗೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಲ್ಲಿ ಮತ್ತೆ ಕಾಲುವೆಯಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐ.ಪಿ.ಸಿ ವಿಭಾಗ-1ರ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು NEWS DATE: 18--12--2017

ಎಲ್ಲಾ ಲೇಖನಗಳು ಆಗಿದೆ NEWS DATE: 18--12--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS DATE: 18--12--2017 ಲಿಂಕ್ ವಿಳಾಸ https://dekalungi.blogspot.com/2017/12/news-date-18-12-2017.html

Subscribe to receive free email updates:

0 Response to "NEWS DATE: 18--12--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ