ಶೀರ್ಷಿಕೆ : ಮಕ್ಕಳ ಸ್ನೇಹಿ ಕಾನೂನು ಸೇವೆ ಹಾಗೂ ರಕ್ಷಣೆಯಲ್ಲಿ ಪ್ರಾಧಿಕಾರ : ಏ. 27 ರಂದು ಕಾರ್ಯಾಗಾರ
ಲಿಂಕ್ : ಮಕ್ಕಳ ಸ್ನೇಹಿ ಕಾನೂನು ಸೇವೆ ಹಾಗೂ ರಕ್ಷಣೆಯಲ್ಲಿ ಪ್ರಾಧಿಕಾರ : ಏ. 27 ರಂದು ಕಾರ್ಯಾಗಾರ
ಮಕ್ಕಳ ಸ್ನೇಹಿ ಕಾನೂನು ಸೇವೆ ಹಾಗೂ ರಕ್ಷಣೆಯಲ್ಲಿ ಪ್ರಾಧಿಕಾರ : ಏ. 27 ರಂದು ಕಾರ್ಯಾಗಾರ
ಕೊಪ್ಪಳ ಏ. 26 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯ, ಸ್ನಾತಕೋತ್ತರ ಕೇಂದ್ರ ಇವರ ಸಹಯೋಗದಲ್ಲಿ "ಮಕ್ಕಳ ಸ್ನೇಹಿ ಕಾನೂನು ಸೇವೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆ"ಗಳ ಕುರಿತು ಒಂದು ದಿನದ ಕಾನೂನು ಕಾರ್ಯಗಾರವನ್ನು ಏ. 27 ರಂದು ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆ ಬೆಳಿಗ್ಗೆ 10-30 ಗಂಟೆಗೆ ಜರುಗಲಿದೆ.
ಕೊಪ್ಪಳ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಆರ್.ಜಿ. ಜೋಶಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯ, ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಡಾ. ಮನೋಜ ಡೊಳ್ಳಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಕಂಪ್ಲಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ನಿಲೋಫರ್ ರಾಂಪುರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಾಬು ಕಲಾದಗಿ, ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ ಪಾಲ್ಗೊಳ್ಳವರು.
ಮಕ್ಕಳ ಸ್ನೇಹಿ ಕಾನೂನು ಸೇವೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆಗಳ ಕುರಿತು ಕಾನೂನು ಕಾರ್ಯಗಾರದ ಅಂಗವಾಗಿ ಎರಡು ಅಧಿವೇಶನಗಳನ್ನು ಹಮ್ಮಿಕೊಳ್ಳಲಾಗಿದೆ. ಮೊದಲನೇ ಅಧಿವೇಶನವು ಅಂದು ಮಧ್ಯಾಹ್ನ 12-30 ರಿಂದ 1-30 ಗಂಟೆಯವರೆಗೆ ನಡೆಯಲಿದ್ದು, ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ ಅವರು "ಬಾಧಿತರ ಪರಿಹಾರ ಯೋಜನೆಗಳು ಹಾಗೂ ಕಾನೂನು" ಕುರಿತು ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ ಅವರು "ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಹಾಗೂ ಸಮಗ್ರ ಮಕ್ಕಳ ಸಂರಕ್ಷಣಾ ಯೋಜನೆ" ಕುರಿತು ವಿಶೇಷ ಉಪನ್ಯಾಸ ನೀಡುವರು. ಎರಡನೇ ಅಧಿವೇಶನವು ಮಧ್ಯಾಹ್ನ 2-30 ರಿಂದ 3-30 ರವರೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಾದ ಕೊಪ್ಪಳದ ವಕೀಲರಾದ ಹನುಮಂತರಾವ್ ಅವರು "ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಹಾಗೂ ಕರ್ನಾಟಕ ತಿದ್ದುಪಡಿ ಕಾಯ್ದೆ-2016" ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಮಕ್ಕಳ ಸ್ನೇಹಿ ಕಾನೂನು ಸೇವೆ ಹಾಗೂ ರಕ್ಷಣೆಯಲ್ಲಿ ಪ್ರಾಧಿಕಾರ : ಏ. 27 ರಂದು ಕಾರ್ಯಾಗಾರ
ಎಲ್ಲಾ ಲೇಖನಗಳು ಆಗಿದೆ ಮಕ್ಕಳ ಸ್ನೇಹಿ ಕಾನೂನು ಸೇವೆ ಹಾಗೂ ರಕ್ಷಣೆಯಲ್ಲಿ ಪ್ರಾಧಿಕಾರ : ಏ. 27 ರಂದು ಕಾರ್ಯಾಗಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಕ್ಕಳ ಸ್ನೇಹಿ ಕಾನೂನು ಸೇವೆ ಹಾಗೂ ರಕ್ಷಣೆಯಲ್ಲಿ ಪ್ರಾಧಿಕಾರ : ಏ. 27 ರಂದು ಕಾರ್ಯಾಗಾರ ಲಿಂಕ್ ವಿಳಾಸ https://dekalungi.blogspot.com/2018/04/27.html
0 Response to "ಮಕ್ಕಳ ಸ್ನೇಹಿ ಕಾನೂನು ಸೇವೆ ಹಾಗೂ ರಕ್ಷಣೆಯಲ್ಲಿ ಪ್ರಾಧಿಕಾರ : ಏ. 27 ರಂದು ಕಾರ್ಯಾಗಾರ"
ಕಾಮೆಂಟ್ ಪೋಸ್ಟ್ ಮಾಡಿ