ಶೀರ್ಷಿಕೆ : ಏ. 30 ರಿಂದ ಹುಲಿಗೆಮ್ಮ ದೇವಿ ಜಾತ್ರೆ : ಮೇ. 09 ರಂದು ಮಹಾರಥೋತ್ಸವ: ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಕನಗವಲ್ಲಿ ಸೂಚನೆ
ಲಿಂಕ್ : ಏ. 30 ರಿಂದ ಹುಲಿಗೆಮ್ಮ ದೇವಿ ಜಾತ್ರೆ : ಮೇ. 09 ರಂದು ಮಹಾರಥೋತ್ಸವ: ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಕನಗವಲ್ಲಿ ಸೂಚನೆ
ಏ. 30 ರಿಂದ ಹುಲಿಗೆಮ್ಮ ದೇವಿ ಜಾತ್ರೆ : ಮೇ. 09 ರಂದು ಮಹಾರಥೋತ್ಸವ: ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಕನಗವಲ್ಲಿ ಸೂಚನೆ
ಕೊಪ್ಪಳ ಏ. 21 (ಕರ್ನಾಟಕ ವಾರ್ತೆ): ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ತಾಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಏ. 30 ರಿಂದ ಆರಂಭವಾಗಲಿದ್ದು, ಸ್ವಚ್ಛತೆ ಶುದ್ಧ ಕುಡಿಯುವ ನೀರು ಪೂರೈಕೆ, ವಿದ್ಯುತ್ ವ್ಯವಸ್ಥೆ ಹಾಗೂ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಗಳು ಏ. 30 ರಿಂದ ಮೇ. 11 ರವರೆಗೆ ಜರುಗಲಿದ್ದು, ಪ್ರತಿ ವರ್ಷದಂತೆ ಈ ವರ್ಷವು ಸಹ ವಿಜೃಂಭಣೆಯಿಂದ ನಡೆಯಲಿದೆ. ದೇವಸ್ಥಾನಕ್ಕೆ ವಿದ್ಯುತ್ ಅಲಂಕಾರ ಮತ್ತು ಬೆಳಕಿನ ವ್ಯವಸ್ಥೆ ಕೈಗೊಳ್ಳಬೇಕು. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಸರ್ಮಪಕ ವಿದ್ಯುತ್ ಕಲ್ಪಿಸಬೇಕು. ಯಾವುದೇ ತೊಂದರೆಯಾಗದಂತೆ ಬಿಗಿ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಜಾತ್ರೆ ಸಂದರ್ಭದಲ್ಲಿ ಪ್ರಾಣಿಬಲಿ ಕೊಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಈ ಕುರಿತು ಎಚ್ಚರಿಕೆಯ ಸೂಚನಾ ಫಲಕಗಳನ್ನು ಅಳವಡಿಸಬೇಕು. ಜಾತ್ರಾ ಸಂದರ್ಭದಲ್ಲಿ ಸುಮಾರು ಒಂದು ತಿಂಗಳುಗಳ ಕಾಲ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದು, ಆರೋಗ್ಯದ ಹಿತದೃಷ್ಟಿಯಿಂದ ಹುಲಿಗಿಯಲ್ಲಿ ಆರೋಗ್ಯ ಇಲಾಖೆಯು ಹೆಚ್ಚುವರಿ ವೈದ್ಯರು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಬೇಕು. ಜಾತ್ರಾ ಸಮಯದಲ್ಲಿ ಮದ್ಯಪಾನವನ್ನು ನಿಷೇಧಿಸಲಾಗಿದೆ. ಜಾತ್ರೆಗೆ ವಿವಿಧೆಡೆಯಿಂದ ಆಗಮಿಸಲಿರುವ ಭಕ್ತಾಧಿಗಳ ಅನುಕೂಲಕ್ಕಾಗಿ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್.ಚಂದ್ರಮೌಳಿ ಅವರು ಮಾತನಾಡಿ, ಜಾತ್ರೆಯ ಸಂದರ್ಭದಲ್ಲಿ ನಿರಂತರ ವಿದ್ಯುತ್ ಸರಬರಾಜಿಗೆ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು. ಸ್ವಾಗತ ಕಮಾನಿನಿಂದ ದೇವಸ್ಥಾನದ ವರೆಗಿನ ಅಂಗಡಿ ಮುಗ್ಗಟ್ಟುಗಳನ್ನು ರಸ್ತೆಯ ಮೇಲೆ ಇಡದಂತೆ ಕ್ರಮ ಕೈಗೊಳ್ಳಬೇಕು. ಅಗ್ನಿ ಶಾಮಕ ವಾಹನವನ್ನು ಜಾತ್ರಾ ಅವಧಿಯಲ್ಲಿ ಕ್ಷೇತ್ರದಲ್ಲಿ ಕಾಯ್ದಿರಿಸಬೇಕು. ಜಾತ್ರೆ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ತುಂಗಭದ್ರ ಜಲಾಶಯದಿಂದ ನದಿಗೆ ನೀರು ಹರಿಸುವುದು ಅಗತ್ಯವಾಗಿದೆ ಅಲ್ಲದೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕಾಗಿದೆ ಎಂದು ಮನವಿ ಮಾಡಿದರು. ದೇವಾಲಯ ಆವರಣದಲ್ಲಿ ಭಕ್ತಾದಿಗಳಿಗೆ ತಾತ್ಕಾಲಿಕವಾಗಿ ನೆರಳಿನ ವ್ಯವಸ್ಥೆ ಮಾಡಲಾಗುವುದು. ಹೊಸದಾಗಿ ಖರೀದಿಸಲಾಗಿರುವ ಜಮೀನಿನಲ್ಲಿ ಗಿಡಗಂಟೆಗಳನ್ನು ಸ್ವಚ್ಛಗೊಳಿಸಿ, ಬೆಳಕಿಗಾಗಿ ಟವರ್‍ಲೈಟ್‍ಗಳನ್ನು ಅಳವಡಿಸಲಾಗುವುದು. ಭಕ್ತಾದಿಗಳಿಗಾಗಿ ತಾತ್ಕಾಲಿಕ ಸಾಮೂಹಿಕ ಸ್ನಾನದ ವ್ಯವಸ್ಥೆಯನ್ನು ಮಾಡಲಾಗುವುದು. ರಥೋತ್ಸವಕ್ಕಾಗಿ ರಥದ ಸಾಮರ್ಥ್ಯ ಕುರಿತು ಲೋಕೋಪಯೋಗಿ ಇಲಾಖೆಯಿಂದ ಪ್ರಮಾಣ ಪತ್ರ ಪಡೆಯಲಾಗುವುದು ಎಂದರು.
ಧಾರ್ಮಿಕ ಕಾರ್ಯಕ್ರಮಗಳ ವಿವರ : ಶ್ರೀ ಹುಲಿಗೆಮ್ಮ ದೇವಿಯ ಜಾತ್ರೆಯು ಏ. 30 ರಿಂದ ಮೇ. 11 ರವರೆಗೆ ಜರುಗಲಿದ್ದು, ಕಾರ್ಯಕ್ರಮದ ವಿವರ ಇಂತಿದೆ. ಏ. 30 ರಂದು ರಾತ್ರಿ 8 ಗಂಟೆಗೆ ಹುಲಿಗೆಮ್ಮ ದೇವಿಯವರಿಗೆ ಕಂಕಣಧಾರಣೆ. ಮೇ. 08 ರಂದು ಸಂಜೆ 7 ಗಂಟೆಗೆ ಉತ್ಸವ. ಮೇ. 09 ರಂದು ಅಕ್ಕಿಪಡಿ, ಸಂಜೆ 5-30 ಗಂಟೆಗೆ ಮಹಾರಥೋತ್ಸವ ಜರುಗಲಿದೆ. ಮೇ. 10 ರಂದು ಬಾಳಿದಂಡಿಗೆ, ಸಂಜೆ 8 ಗಂಟೆಗೆ ಕೊಂಡದ ಪೂಜಾ, ರಾತ್ರಿ 3-30 ಗಂಟೆಗೆ (ಬ್ರಾಹ್ಮೀ ಮುಹೂರ್ತದಲ್ಲಿ) ಗಂಗಾದೇವಿ ಪೂಜಾ, ಬೆಳಗಿನ ಜಾವ 4 ಗಂಟೆಗೆ ಶ್ರೀದೇವಿಗೆ ಪ್ರಸಾದ ಕಟ್ಟುವುದು, ಬೆಳಗಿನ ಜಾವ 4-30 ಕ್ಕೆ ಬಾಳಿದಂಡಿಗೆ ಆರೋಹಣ. ಮೇ. 11 ರಂದು ಪಾಯಸ ಅಗ್ನಿಕೊಂಡ ಸಂಜೆ 8 ಗಂಟೆಗೆ ಕೊಂಡದ ಪೂಜಾ, ರಾತ್ರಿ 9 ಕ್ಕೆ ಹಿಡಿದಕ್ಷಿಣೆ ವಿತರಣೆ, 9-30 ಕ್ಕೆ ಪಡಗದ ಪೂಜಾ, ಬೆಳಗಿನಜಾವ 4 ಗಂಟೆಗೆ (ಬ್ರಾಹ್ಮೀ ಮುಹೂರ್ತದಲ್ಲಿ) ಗಂಗಾದೇವಿ ಪೂಜಾ, ಬೆಳಗಿನ ಜಾವ 4-30ಕ್ಕೆ ಗಂಟೆಗೆ ಶ್ರೀದೇವಿಗೆ ಪ್ರಸಾದ ಕಟ್ಟುವುದು, ಬೆಳಗಿನ ಜಾವ 5-30 ಗಂಟೆಗೆ ಶ್ರೀದೇವಿಗೆ ಪಾಯಸ ಪ್ರಸಾದ ನಿವೇದನೆ, ಹಾಗೂ ಮೇ. 12 ರಂದು ಬೆಳಿಗ್ಗೆ 6-30 ಗಂಟೆಗೆ (ದ್ವಾದಶಿ ನಸುಕಿನಲ್ಲಿ) ಅಗ್ನಿಕುಂಡ. ಈ ಬಾರಿ ಜೇಷ್ಠಮಾಸ ಅಧಿಕ ಬಂದಿರುವುದರಿಂದ ನಿಜ ಕಾರಹುಣ್ಣಿಮೆಯ ನಂತರ ಬರುವ ಜುಲೈ. 03 ರಂದು ರಾತ್ರಿ 8 ಗಂಟೆಗೆ ಶ್ರೀದೇವಿಯವರ ಕಂಕಣ ವಿಸರ್ಜನೆ ಮಾಡಲಾಗುವುದು ಎಂದು ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್.ಚಂದ್ರಮೌಳಿ ಅವರು ತಿಳಿಸಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನುಪ್ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ರಾಮಕೃಷ್ಣ ಹೆಚ್., ಹುಲಿಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಫೀವುಲ್ಲಾ ಮುಲ್ಲಾ ಹಾಗೂ ಹುಲಿಗೆಮ್ಮ ದೇವಿ ದೇವಸ್ಥಾನದ ಆಡಳಿತ ಸಮಿತಿ, ಪೊಲೀಸ್ ಇಲಾಖೆ ಸೇರಿದಂತೆ ವಿವಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಏ. 30 ರಿಂದ ಹುಲಿಗೆಮ್ಮ ದೇವಿ ಜಾತ್ರೆ : ಮೇ. 09 ರಂದು ಮಹಾರಥೋತ್ಸವ: ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಕನಗವಲ್ಲಿ ಸೂಚನೆ
ಎಲ್ಲಾ ಲೇಖನಗಳು ಆಗಿದೆ ಏ. 30 ರಿಂದ ಹುಲಿಗೆಮ್ಮ ದೇವಿ ಜಾತ್ರೆ : ಮೇ. 09 ರಂದು ಮಹಾರಥೋತ್ಸವ: ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಕನಗವಲ್ಲಿ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಏ. 30 ರಿಂದ ಹುಲಿಗೆಮ್ಮ ದೇವಿ ಜಾತ್ರೆ : ಮೇ. 09 ರಂದು ಮಹಾರಥೋತ್ಸವ: ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಕನಗವಲ್ಲಿ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/04/30-09.html
0 Response to "ಏ. 30 ರಿಂದ ಹುಲಿಗೆಮ್ಮ ದೇವಿ ಜಾತ್ರೆ : ಮೇ. 09 ರಂದು ಮಹಾರಥೋತ್ಸವ: ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಕನಗವಲ್ಲಿ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ