ಶೀರ್ಷಿಕೆ : ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಲಿಂಕ್ : ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ
ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಕೊಪ್ಪಳ ಏ. 13 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆಗಳು ಏ. 15 ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆಗಳು ಏ. 15 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ 42 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಒಟ್ಟು 11034 ವಿದ್ಯಾರ್ಥಿಗಳು ಪರಿಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1937ರ ಕಲಂ 144 ರನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಜಾಗೃತ ದಳದವರನ್ನು ಹೊರತುಪಡಿಸಿ, ಉಳಿದವರ ಪ್ರವೇಶ ನಿಷೇಧಿಸಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರ ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಎಲ್ಲಾ ಲೇಖನಗಳು ಆಗಿದೆ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ ಲಿಂಕ್ ವಿಳಾಸ https://dekalungi.blogspot.com/2018/04/6.html
0 Response to "ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ"
ಕಾಮೆಂಟ್ ಪೋಸ್ಟ್ ಮಾಡಿ