ಶೀರ್ಷಿಕೆ : ಚುನಾವಣೆ : ಡಿಸಿ ಯಿಂದ ಮತ ಎಣಿಕೆ ಕೇಂದ್ರ ಸಿದ್ಧತೆ ಪರಿಶೀಲನೆ
ಲಿಂಕ್ : ಚುನಾವಣೆ : ಡಿಸಿ ಯಿಂದ ಮತ ಎಣಿಕೆ ಕೇಂದ್ರ ಸಿದ್ಧತೆ ಪರಿಶೀಲನೆ
ಚುನಾವಣೆ : ಡಿಸಿ ಯಿಂದ ಮತ ಎಣಿಕೆ ಕೇಂದ್ರ ಸಿದ್ಧತೆ ಪರಿಶೀಲನೆ
ಕೊಪ್ಪಳ ಏ. 26 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ವಿಧಾನಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದು, ಮೇ. 15 ರಂದು ಮತ ಎಣಿಕೆ ಕಾರ್ಯ ಜರುಗುವ ಕೊಪ್ಪಳದ ಗವಿಸಿದ್ದೇಶ್ವರ ಮಹಾ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಗುರುವಾರದಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಪ್ಪಳ ಜಿಲ್ಲೆಯಲ್ಲಿ ಮೇ. 12 ರಂದು ನಡೆಯುವ ಮತದಾನ ಕಾರ್ಯಕ್ಕೆ ಈಗಾಗಲೆ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮತದಾನ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 1301 ಮತಗಟ್ಟೆಗಳಿಗೆ ಪ್ರತಿ ಮತಗಟ್ಟೆಗೆ ತಲಾ 05 ಸಿಬ್ಬಂದಿಗಳಂತೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ ಹೆಚ್ಚುವರಿ ಸಿಬ್ಬಂದಿಗಳನ್ನೂ ಕೂಡ ಕಾಯ್ದಿರಿಸಲು ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ. ಮತದಾನ ಪ್ರಕ್ರಿಯೆ ಬಳಿಕ ಮೇ. 15 ರಂದು ಕೊಪ್ಪಳದ ಗವಿಸಿದ್ದೇಶ್ವರ ಮಹಾ ವಿದ್ಯಾಲಯದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಕಾಲೇಜು ಕಟ್ಟಡದಲ್ಲಿ ಇವಿಎಂ ಮತಯಂತ್ರಗಳನ್ನು ದಾಸ್ತಾನು ಮಾಡುವ ಭದ್ರತಾ ಕೊಠಡಿ ಸಿದ್ಧತೆ, ಮತ ಎಣಿಕೆ ಕೊಠಡಿಗಳ ಸಿದ್ದತೆ, ಮತ ಎಣಿಕೆ ಕಾರ್ಯಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಗುರುವಾರದಂದು ಕಾಲೇಜಿಗೆ ಭೇಟಿ ನೀಡಿ ಮತ ಎಣಿಕೆ ಕೇಂದ್ರದ ಸಿದ್ಧತಾ ಕಾರ್ಯವನ್ನು ಪರಿಶೀಲಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಕೊಪ್ಪಳ ಕ್ಷೇತ್ರ ಚುನಾವಣಾಧಿಕಾರಿ ಸಿ.ಡಿ. ಗೀತಾ, ಗಂಗಾವತಿ ಕ್ಷೇತ್ರ ಚುನಾವಣಾಧಿಕಾರಿ ಡಾ. ರವಿ ತಿರ್ಲಾಪುರ, ಕನಕಗಿರಿ ಚುನಾವಣಾಧಿಕಾರಿ ನಾಗರಾಜ, ಯಲಬುರ್ಗಾ ಚುನಾವಣಾಧಿಕಾರಿ ವಿಜಯಕುಮಾರ ಮೆಕ್ಕಳಕಿ, ಎನ್‍ಐಸಿ ಕೇಂದ್ರದ ಜಿಲ್ಲಾ ಅಧಿಕಾರಿ ವೀರಣ್ಣ ಏಳುಬಾವಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಚುನಾವಣೆ : ಡಿಸಿ ಯಿಂದ ಮತ ಎಣಿಕೆ ಕೇಂದ್ರ ಸಿದ್ಧತೆ ಪರಿಶೀಲನೆ
ಎಲ್ಲಾ ಲೇಖನಗಳು ಆಗಿದೆ ಚುನಾವಣೆ : ಡಿಸಿ ಯಿಂದ ಮತ ಎಣಿಕೆ ಕೇಂದ್ರ ಸಿದ್ಧತೆ ಪರಿಶೀಲನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಚುನಾವಣೆ : ಡಿಸಿ ಯಿಂದ ಮತ ಎಣಿಕೆ ಕೇಂದ್ರ ಸಿದ್ಧತೆ ಪರಿಶೀಲನೆ ಲಿಂಕ್ ವಿಳಾಸ https://dekalungi.blogspot.com/2018/04/blog-post_133.html
0 Response to "ಚುನಾವಣೆ : ಡಿಸಿ ಯಿಂದ ಮತ ಎಣಿಕೆ ಕೇಂದ್ರ ಸಿದ್ಧತೆ ಪರಿಶೀಲನೆ"
ಕಾಮೆಂಟ್ ಪೋಸ್ಟ್ ಮಾಡಿ