ಮೂಲ ಕಾನೂನು ಹಾಗೂ ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ

ಮೂಲ ಕಾನೂನು ಹಾಗೂ ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮೂಲ ಕಾನೂನು ಹಾಗೂ ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮೂಲ ಕಾನೂನು ಹಾಗೂ ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ
ಲಿಂಕ್ : ಮೂಲ ಕಾನೂನು ಹಾಗೂ ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ

ಓದಿ


ಮೂಲ ಕಾನೂನು ಹಾಗೂ ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ



ಕೊಪ್ಪಳ ಏ. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿದ್ಯಾರ್ಥಿಗಳಿಗಾಗಿ ಮೂಲ ಕಾನೂನು ಹಾಗೂ ಮತದಾನ ಜಾಗೃತಿ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಜರುಗಿತು.

    ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮೇಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಇವರ ಸಹಯೋಗದಲ್ಲಿ ಮೂಲ ಕಾನೂನು ಹಾಗೂ ಮತದಾನ ಜಾಗೃತಿ ಕುರಿತು ಕಲ್ಯಾಣ ನಗರದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರದಂದು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  

    ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ ಅವರು ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಮುಕ್ತವಾಗಿ ಮತದಾನ ಮಾಡಲು ಹಕ್ಕಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ. 12 ರಂದು ನಡೆಯಲಿದ್ದು, ಮನೆಯಲ್ಲಿ ಕೂಡದೇ ಪ್ರತಿಯೊಬ್ಬರೂ ಮತಗಟ್ಟೆಗೆ ಹೋಗಿ ಮತ ಚಲಾಯಿಸಿ,  ನಿಮ್ಮ ಕರ್ತವ್ಯವನ್ನು ಪಾಲಿಸಿ ಎಂದು ಹೇಳಿದರು.  

    ವಕೀಲರಾದ ಹನುಮಂತರಾವ್ ಅವರು ವಿಶೇಷ ಉಪನ್ಯಾಸ ನೀಡಿ, ಸಂವಿಧಾನದಲ್ಲಿರುವ ಮೂಲಭೂತ ಹಕ್ಕುಗಳನ್ನು ಹೇಗೆ ಅನುಭವಿಸುತ್ತೇವೆಯೋ ಹಾಗೆಯೇ ಪ್ರತಿಯೊಬ್ಬ ಪ್ರಜೆಗಳು ಮೂಲಭೂತ ಕರ್ತವ್ಯಗಳನ್ನು ಪಾಲಿಸಬೇಕು.  ಮತದಾನವು ಎಲ್ಲ ಮತದಾರರ ಕರ್ತವ್ಯವಾಗಿದ್ದು ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಮತದಾನ ಜಾಗೃತಿ ಕುರಿತು ಮತದಾನದ ಮಹತ್ವವನ್ನು ವಿವರಿಸಿದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಉದ್ದಗಟ್ಟಿ ತ್ರಿಮೂರ್ತಿ ಅವರು ಮಾತನಾಡಿ, ಸಮೃದ್ಧ ಭಾರತದ ನಿರ್ಮಾಣಕ್ಕೆ ಸಮರ್ಥ ನಾಯಕರನ್ನು ಆಯ್ಕೆ ಮಾಡಲು ಪ್ರತಿಯೊಬ್ಬ ಪ್ರಜೆ ಮತದಾನ ಮಾಡಬೇಕು.  ಪ್ರಸ್ತುತ ಮತದಾನವು ಕೇವಲ ಶೇ.60 ರಷ್ಟು ನಡೆಯುತ್ತಿದೆ.  ಇದು ಶೇ.100 ಕ್ಕೆ ತಲುಪಿದಾಗ ಮಾತ್ರ ಸ್ವಾಸ್ಥ್ಯ ಸಮಾಜ ಸಮೃದ್ಧ ಭಾರತವನ್ನು ನಿರ್ಮಾಣ ಮಾಡಲಿಕ್ಕೆ ಸಾಧ್ಯವಾಗುತ್ತದೆ ಎಂದರು.  ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ಮೂಲ ಕಾನೂನು ಹಾಗೂ ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಮೂಲ ಕಾನೂನು ಹಾಗೂ ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೂಲ ಕಾನೂನು ಹಾಗೂ ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2018/04/blog-post_15.html

Subscribe to receive free email updates:

0 Response to "ಮೂಲ ಕಾನೂನು ಹಾಗೂ ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ