ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಸಬಯಸುವವರಿಗೆ ಸೂಚನೆ

ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಸಬಯಸುವವರಿಗೆ ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಸಬಯಸುವವರಿಗೆ ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಸಬಯಸುವವರಿಗೆ ಸೂಚನೆ
ಲಿಂಕ್ : ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಸಬಯಸುವವರಿಗೆ ಸೂಚನೆ

ಓದಿ


ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಸಬಯಸುವವರಿಗೆ ಸೂಚನೆ


ಕೊಪ್ಪಳ ಏ. 17 (ಕರ್ನಾಟಕ ವಾರ್ತೆ): ಪ್ರಸಕ್ತ ವಿಧಾನಸಭಾ ಚುನಾವಣೆಗೆ ಏ. 17 ರಂದು ಅಧಿಸೂಚನೆ ಪ್ರಕಟಗೊಂಡಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ನಾಮಪತ್ರ ಸಲ್ಲಿಸಬಯಸುವವರು ಅನುಸರಿಸುವ ಕ್ರಮಗಳ ಕುರಿತು ಸೂಚನೆಗಳನ್ನು ನೀಡಲಾಗಿದೆ.
ನಾಮಪತ್ರ ಸಲ್ಲಿಸಬಯಸುವವರು ನಾಮಪತ್ರವನ್ನು ನಮೂನೆ 2ಬಿ ರಲ್ಲಿ ಸಲ್ಲಿಸಬೇಕು . ಸೂಚಕರು ಮತ್ತು ಅಭ್ಯರ್ಥಿಯು ಕಡ್ಡಾಯವಾಗಿ ಸಹಿ ಮಾಡಿರಬೇಕು. ಸಹಿ ಮಾಡದ ನಾಮಪತ್ರಗಳನ್ನು ತಿರಸ್ಕರಿಸಲಾಗುವುದು. ನಾಮಪತ್ರದಲ್ಲಿ ಹೆಸರು ಮತ್ತು ಅಂಚೆ ವಿಳಾಸವನ್ನು ಸ್ಪಷ್ಟವಾಗಿ ಹಾಗೂ ಪೂರ್ಣವಾಗಿ ನಮೂದಿಸಬೇಕು. ನಮೂನೆ 26 ರಲ್ಲಿ ಅಫಿಡವಿಟ್ ರೂ. 20 ರ ಛಾಪಾ ಕಾಗದದಲ್ಲಿ (2 ಮೂಲ ಪ್ರತಿಗಳು ಹಾಗೂ 03 ಜೆರಾಕ್ಸ್ ಪ್ರತಿಗಳು) ಸಲ್ಲಿಸಬೇಕು. ಅಭ್ಯರ್ಥಿಯು ಅಫಿಡವಿಟ್‍ನಲ್ಲಿ ಎಲ್ಲಾ ಪುಟಗಳಿಗೆ ಸಹಿ ಮಾಡಿರಬೇಕು. ಅಫಿಡವಿಟ್‍ನ ಎಲ್ಲ ಕಾಲಂಗಳನ್ನು ಕಡ್ಡಾಯವಾಗಿ ಭರ್ತಿ ಮಾಡಿರಬೇಕು. ಅನ್ವಯವಾಗದ ಕಾಲಂಗಳಲ್ಲಿ ‘ಅನ್ವಯಸುವುದಿಲ್ಲ/NIL ಎಂದು ಬರೆಯಬೇಕು. ನೋಟರಿ ಪಬ್ಲಿಕ್‍ರಿಂದ ದೃಢೀಕರಿಸಿರಬೇಕು. ಅಫಿಡವಿಟ್‍ನ ಕ್ರಮಸಂಖ್ಯೆ 3 ರಲ್ಲಿ ಅಭ್ಯರ್ಥಿಯು ಹೊಂದಿರುವ ಸಾಮಾಜಿಕ ಜಾಲತಾಣದ ವಿವರ ನೀಡಬೇಕು. ಅಂದರೆ ಫೇಸ್‍ಬುಕ್, ಟ್ವಿಟರ್, ಇನ್ಸ್‍ಟಾಗ್ರಾಂ, ಪರ್ಸನಲ್ ಆ್ಯಪ್, ಪರ್ಸನಲ್ ವೆಬ್‍ಸೈಟ್, ಯುಟ್ಯೂಬ್ ಚಾನೆಲ್, ಬ್ಲಾಗ್ಸ್, ಇ-ಮೇಲ್ ಐಡಿ, ವಾಟ್ಸಪ್, ಟೆಲಿಗ್ರಾಂ, ಹೈಕ್ ಇತ್ಯಾದಿ ಸಾಮಾಜಿಕ ಜಾಲತಾಣಗಳ ಎಲ್ಲ ಸಮಗ್ರ ವಿವರವನ್ನು ನೀಡಬೇಕು. ಹೆಚ್ಚುವರಿ ಅಫಿಡವಿಟ್‍ನ್ನು (ಸರ್ಕಾರಕ್ಕೆ ಬರಬೇಕಾದ ಬೇಬಾಕಿ ಬಗ್ಗೆ) ಸಲ್ಲಿಸಬೇಕು. ಸಂಬಂಧಪಟ್ಟ ಇಲಾಖೆಗಳಿಂದ ಬೇಬಾಕಿ ದೃಢೀಕರಣ ( (No Due certificate) ಹಾಜರುಪಡಿಸಬೇಕು. ನೋಟರಿ ಪಬ್ಲಿಕ್‍ರಿಂದ ದೃಢೀಕರಿಸಿರಬೇಕು. ಹೆಚ್ಚುವರಿ ಅಫಿಡವಿಟ್ ಸಲ್ಲಿಸದಿದ್ದಲ್ಲಿ ಪ್ರಜಾಪ್ರಾತಿನಿಧ್ಯ ಕಾಯ್ದೆ ಕಲಂ-36 ರಂತೆ ಅನರ್ಹತೆಯ ಮಾನದಂಡವಾಗುತ್ತದೆ. ಅಭ್ಯರ್ಥಿಯು (ಆಯಾ ಕ್ಷೇತ್ರದ ಮತದಾರರಾಗಿರದಿದ್ದಲ್ಲಿ) ಕಡ್ಡಾಯವಾಗಿ ಸಂಬಂಧಿಸಿದ ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ನಕಲು ಪ್ರತಿ ಸಲ್ಲಿಸಬೇಕು. ಅಭ್ಯರ್ಥಿಯ ವಯಸ್ಸು 25 ವರ್ಷಕ್ಕಿಂತ ಕಡಿಮೆ ಇರಬಾರದು. ಒಬ್ಬರು ಅಭ್ಯರ್ಥಿಯು 04 ನಾಮಪತ್ರಗಳನ್ನು ಮಾತ್ರ ಸಲ್ಲಿಸಬಹುದಾಗಿದೆ. ರಾಷ್ಟ್ರೀಯ/ರಾಜ್ಯ ಪಕ್ಷವಾಗಿದ್ದಲ್ಲಿ ಒಬ್ಬರು ಸೂಚಕರು. ನೋಂದಾಯಿತ/ ಪಕ್ಷೇತರರಾಗಿದ್ದಲ್ಲಿ 10 ಜನ ಸೂಚಕರ ಸಹಿ ಮಾಡಿರಬೇಕು. ಸೂಚಕರು ಕಡ್ಡಾಯವಾಗಿ ಆಯಾ ವಿಧಾನಸಭಾ ಕ್ಷೇತ್ರದ ಮತದಾರರಾಗಿರಬೇಕು. ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿದ್ದಲ್ಲಿ ಎ ಮತ್ತು ಬಿ ಮೂಲ ಫಾರಂ ಅನ್ನು ನಾಮಪತ್ರ ಸಲ್ಲಿಸುವ ಕೊನೆಯ ದಿನ ಅಂದರೆ ಏ. 24 ರಂದು ಮಧ್ಯಾಹ್ನ 3 ಗಂಟೆಯ ಒಳಗಾಗಿ ಸಲ್ಲಿಸಬೇಕು. ಠೇವಣಿ ಹಣ, ಸಾಮಾನ್ಯ ಅಭ್ಯರ್ಥಿಗೆ ರೂ. 10 ಸಾವಿರ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿದ್ದರೆ ರೂ. 5 ಸಾವಿರ. ಇದಕ್ಕಾಗಿ ಸಂಬಂಧಪಟ್ಟ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ನಾಮಪತ್ರ ಸಲ್ಲಿಸಿದ ನಂತರ ಅಭ್ಯರ್ಥಿಯು ಪ್ರಮಾಣ ವಚನ ಸ್ವೀಕರಿಸಬೇಕು. ಚುನಾವಣಾಧಿಕಾರಿಗಳ ಕಚೇರಿಯ 100 ಮೀ. ಒಳಗೆ ಕೇವಲ ಮೂರು ವಾಹನಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿರುತ್ತದೆ. ಚುನಾವಣಾಧಿಕಾರಿಗಳ ಕೊಠಡಿ ಒಳಗೆ ಅಭ್ಯರ್ಥಿಯ ಜೊತಗೆಗೆ 04 ಜನರಿಗೆ ಮಾತ್ರ ಪ್ರವೇಶವಿರುತ್ತದೆ. ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಇತ್ತೀಚಿನ 03 ಪಾಸ್‍ಪೋರ್ಟ್ ಅಳತೆಯ ಹಾಗೂ 02 ಸ್ಟ್ಯಾಂಪ್ ಸೈಜ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು. ಭಾವಚಿತ್ರವನ್ನು ನಾಮಪತ್ರದೊಂದಿಗೆ ಸಲ್ಲಿಸಬೇಕು. ಚುನಾವಣೆ ಉದ್ದೇಶಕ್ಕಾಗಿಯೇ ತೆರೆದಿರುವ ಹೊಸ ಬ್ಯಾಂಕ್ ಖಾತೆಯ ಪಾಸ್‍ಬುಕ್‍ನ ನಕಲು ಪ್ರತಿ ಸಲ್ಲಿಸಬೇಕು. ಭಾರತದ ಸಂವಿಧಾನ, ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿಗಳಲ್ಲಿ ತಮ್ಮ ಅರ್ಹತೆ ಮತ್ತು ಅನರ್ಹತೆಗಳ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು ಎಂದು ಕೊಪ್ಪಳ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಸಬಯಸುವವರಿಗೆ ಸೂಚನೆ

ಎಲ್ಲಾ ಲೇಖನಗಳು ಆಗಿದೆ ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಸಬಯಸುವವರಿಗೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಸಬಯಸುವವರಿಗೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/04/blog-post_17.html

Subscribe to receive free email updates:

0 Response to "ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಸಬಯಸುವವರಿಗೆ ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ