ಶೀರ್ಷಿಕೆ : ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳ ತೀವ್ರ ಕಟ್ಟೆಚ್ಚರ ಅಗತ್ಯ- ಎಂ. ಕನಗವಲ್ಲಿ
ಲಿಂಕ್ : ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳ ತೀವ್ರ ಕಟ್ಟೆಚ್ಚರ ಅಗತ್ಯ- ಎಂ. ಕನಗವಲ್ಲಿ
ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳ ತೀವ್ರ ಕಟ್ಟೆಚ್ಚರ ಅಗತ್ಯ- ಎಂ. ಕನಗವಲ್ಲಿ
ಕೊಪ್ಪಳ ಏ. 22 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. 12 ರಂದು ಮತದಾನ ನಡೆಯಲಿದ್ದು, ಸೆಕ್ಟರ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ತೀವ್ರ ಕಟ್ಟೆಚ್ಚರ ವಹಿಸುವುದು ಅಗತ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ವಿಧಾನಸಭೆ ಚುನಾವಣೆ ಸಂಬಂಧ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಿಗೆ ನೇಮಕಗೊಂಡಿರುವ ಸೆಕ್ಟರ್ ಅಧಿಕಾರಿಗಳು ಹಾಗೂ ಮಾಸ್ಟರ್ ಟ್ರೈನರ್‍ಗಳಿಗೆ ಶನಿವಾರದಂದು ಏರ್ಪಡಿಸಲಾದ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ವತಿಯಿಂದ ನೇಮಿಸಲಾಗಿರುವ ಸೆಕ್ಟರ್ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಸೆಕ್ಟರ್ ಅಧಿಕಾರಿಗಳು ಈಗಾಗಲೆ ಮತಗಟ್ಟೆಗಳ ಸ್ಥಿತಿ-ಗತಿ, ಮೂಲಭೂತ ಸೌಕರ್ಯ ಮುಂತಾದ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ, ಸಮರ್ಪಕವಾಗಿ ಒದಗಿಸುವಲ್ಲಿ ಉತ್ತಮ ಕಾರ್ಯವನ್ನು ನಿರ್ವಹಿಸಿದ್ದಾರೆ. ಅದೇ ರೀತಿ ಸೆಕ್ಟರ್ ಅಧಿಕಾರಿಗಳು ಆಯಾ ಮತಗಟ್ಟೆಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯ ಪಾಲನೆ, ಉಲ್ಲಂಘನೆ ಪ್ರಕರಣಗಳ ಬಗ್ಗೆಯೂ ನಿಗಾ ವಹಿಸಿದ್ದಾರೆ. ಮೇ. 12 ರಂದು ನಡೆಯುವ ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮತಗಟ್ಟೆಯ ಅಧಿಕಾರಿಗಳು, ಸಹಾಯಕ ಸಿಬ್ಬಂದಿಗಳು, ಮತದಾನ ಸಿಬ್ಬಂದಿಗಳಿಗೆ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿ ಹಾಗೂ ನಿರ್ದೇಶನಗಳ ಬಗ್ಗೆ ಸೆಕ್ಟರ್ ಅಧಿಕಾರಿಗಳು ಅರಿವು ಹೊಂದಿರಬೇಕು. ಆಯಾ ಮತಗಟ್ಟೆಗಳ 100 ಮೀ. ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ, ಅಭ್ಯರ್ಥಿ, ಅಥವಾ ಪಕ್ಷಗಳು ಪ್ರಚಾರ ಮಾಡುವುದನ್ನು ನಿಷೇಧಿಸಿದ್ದು, ಈ ಕುರಿತಂತೆ ಸೆಕ್ಟರ್ ಅಧಿಕಾರಿಗಳು ನಿಗಾ ವಹಿಸಬೇಕು. ಮತದಾನ ಪ್ರಕ್ರಿಯೆಯಲ್ಲಿ ಬೆಳಿಗ್ಗೆ 06 ಗಂಟೆಗೆ ಅಣಕು ಮತದಾನ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಮತಯಂತ್ರಗಳ ಕಾರ್ಯ ನಿರ್ವಹಣೆ ಕುರಿತು ಯಾವುದೇ ಸಮಸ್ಯೆಗಳು ತಲೆದೋರಿದಲ್ಲಿ, ಕೂಡಲೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಅದನ್ನು ನಿವಾರಿಸಿ, ಮತದಾನ ಪ್ರಕ್ರಿಯೆ ಸುಗಮವಾಗಿ ಮುಂದುವರೆಯುವಂತೆ ಮಾಡುವಲ್ಲಿ ಸೆಕ್ಟರ್ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಅಲ್ಲದೆ ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ಜಾಗೃತಿ ನೀಡಬೇಕು. ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಸುಗಮವಾಗಿ ಹಾಗೂ ನ್ಯಾಯ ಸಮ್ಮತವಾಗಿ ಜರುಗಲು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಕೈಗೊಳ್ಳಲಾಗಿದೆಯೇ ಹಾಗೂ ಮತದಾನ ಗೌಪ್ಯತೆ ಕಾಪಾಡುವ ರೀತಿಯಲ್ಲಿ ಮತಯಂತ್ರಗಳನ್ನು ಸೂಕ್ತ ಸ್ಥಳದಲ್ಲಿ ಜೋಡಿಸಿಡಲಾಗಿದೆಯೇ ಎಂಬುದರ ಬಗ್ಗೆಯೂ ನಿಗಾ ವಹಿಸಬೇಕು. ಮತಗಟ್ಟೆಗಳಲ್ಲಿ ಚುನಾವಣಾ ಏಜೆಂಟರು ನಿಯಮಾನುಸಾರ ಕಾರ್ಯ ನಿರ್ವಹಿಸುವುದರಿಂದ, ಏಜೆಂಟರ ಕಾರ್ಯದ ಬಗ್ಗೆಯೂ ಮತಗಟ್ಟೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
ವಿಧಾನಸಭಾ ಚುನಾವಣೆ ಸಂಬಂಧ ಮಾಸ್ಟರ್ ಟ್ರೇನರ್ ಆಗಿ ನೇಮಕ ಮಾಡಲಾಗಿರುವ ಶಂಕರಪ್ಪ ಅವರು, ಸೆಕ್ಟರ್ ಅಧಿಕಾರಿಗಳು ಹಾಗೂ ಕ್ಷೇತ್ರವಾರು ಟ್ರೈನರ್‍ಗಳಿಗೆ ಮತದಾನ ದಿನದಂದು ಕೈಗೊಳ್ಳಬೇಕಾಗಿರುವ ಎಲ್ಲ ಕಾರ್ಯ ಹಾಗೂ ಕ್ರಮಗಳ ಕುರಿತು ವಿವರವಾಗಿ ತರಬೇತಿ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಉಪಸ್ಥಿತರಿದ್ದರು. ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಿಗೆ ನೇಮಕಗೊಂಡಿರುವ ಸೆಕ್ಟರ್ ಅಧಿಕಾರಿಗಳು ಹಾಗೂ ಮಾಸ್ಟರ್ ಟ್ರೈನರ್‍ಗಳು ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.
ಹೀಗಾಗಿ ಲೇಖನಗಳು ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳ ತೀವ್ರ ಕಟ್ಟೆಚ್ಚರ ಅಗತ್ಯ- ಎಂ. ಕನಗವಲ್ಲಿ
ಎಲ್ಲಾ ಲೇಖನಗಳು ಆಗಿದೆ ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳ ತೀವ್ರ ಕಟ್ಟೆಚ್ಚರ ಅಗತ್ಯ- ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳ ತೀವ್ರ ಕಟ್ಟೆಚ್ಚರ ಅಗತ್ಯ- ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2018/04/blog-post_295.html
0 Response to "ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳ ತೀವ್ರ ಕಟ್ಟೆಚ್ಚರ ಅಗತ್ಯ- ಎಂ. ಕನಗವಲ್ಲಿ"
ಕಾಮೆಂಟ್ ಪೋಸ್ಟ್ ಮಾಡಿ