ಮುಕ್ತ, ನ್ಯಾಯಸಮ್ಮತ ಚುನಾವಣೆ: ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟ ಡಿ.ಸಿ.

ಮುಕ್ತ, ನ್ಯಾಯಸಮ್ಮತ ಚುನಾವಣೆ: ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟ ಡಿ.ಸಿ. - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮುಕ್ತ, ನ್ಯಾಯಸಮ್ಮತ ಚುನಾವಣೆ: ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟ ಡಿ.ಸಿ., ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮುಕ್ತ, ನ್ಯಾಯಸಮ್ಮತ ಚುನಾವಣೆ: ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟ ಡಿ.ಸಿ.
ಲಿಂಕ್ : ಮುಕ್ತ, ನ್ಯಾಯಸಮ್ಮತ ಚುನಾವಣೆ: ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟ ಡಿ.ಸಿ.

ಓದಿ


ಮುಕ್ತ, ನ್ಯಾಯಸಮ್ಮತ ಚುನಾವಣೆ: ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟ ಡಿ.ಸಿ.


ಕೊಪ್ಪಳ ಏ. 19 (ಕರ್ನಾಟಕ ವಾರ್ತೆ) : ಪ್ರಸಕ್ತ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಚುನಾವಣಾ ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟರು.

      ಚುನಾವಣೆ ನಡೆಸುವ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕೊಪ್ಪಳ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರೊಂದಿಗೆ ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

     ವಿಧಾನಸಭಾ ಚುನಾವಣೆಯನ್ನು ನಿಸ್ಪಕ್ಷಪಾತ ಹಾಗೂ ಮುಕ್ತವಾಗಿ, ಶಾಂತಿಯಿಂದ ಜರುಗಿಸಲು ಅಗತ್ಯ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಪತ್ತೆಹಚ್ಚಲು ಸೆಕ್ಟರ್ ಅಧಿಕಾರಿಗಳನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 06 ತಂಡಗಳಂತೆ ಫ್ಲೈಯಿಂಗ್ ಸ್ಕ್ವಾಡ್‍ಗಳನ್ನು ನೇಮಕ ಮಾಡಲಾಗಿದೆ.  ಅಲ್ಲದೆ ಪ್ರತಿ ಫ್ಲೈಯಿಂಗ್ ಸ್ಕ್ವಾಡ್‍ತಂಡದಲ್ಲಿ ವಿಡಿಯೋ ಸರ್ವೆಲನ್ಸ್ ತಂಡ ಸಹ ಕಾರ್ಯನಿರ್ವಹಿಸಿ, ವಿವಿಧ ಅಕ್ರಮಗಳ ಬಗ್ಗೆ ವಿಡಿಯೋ ಚಿತ್ರೀಕರಣ ನಡೆಸಲಿದೆ.  ಈ ವಿಡಿಯೋ ಚಿತ್ರಗಳನ್ನು ವೀಕ್ಷಿಸಿ, ವರದಿ ಸಲ್ಲಿಸಲು ವಿಡಿಯೋ ವೀಕ್ಷಣಾ ತಂಡವನ್ನು ಸಹ ರಚಿಸಲಾಗಿದೆ.  ಯಾವುದೇ ಕಾರಣಕ್ಕೂ ಮದ್ಯ ಹಾಗೂ ಹಣ ಹಂಚಿಕೆ ಪ್ರಕರಣಗಳು ನಡೆಯದಂತೆ ಅಗತ್ಯ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಜಿಲ್ಲೆಯ ಗಡಿ ಭಾಗಗಳಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಹಣ, ಮದ್ಯ ಹಾಗೂ ಇತರೆ ಸಾಮಗ್ರಿಗಳು ಬರುವ ಸಾಧ್ಯತೆಗಳಿದ್ದು, ಈ ನಿಟ್ಟಿನಲ್ಲಿ ಪ್ರಮುಖ ಸ್ಥಳಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ.  ಎಲ್ಲ ಬಗೆಯ ವಾಹನಗಳನ್ನೂ ಪರಿಶೀಲಿಸಲಾಗುತ್ತಿದ್ದು, ಕೃಷಿ ಉತ್ಪನ್ನಗಳ ಸಾಗಾಣಿಕೆ ವಾಹನಗಳನ್ನೂ ಕೂಡ ಚೆಕ್ ಮಾಡಲಾಗುತ್ತಿದೆ.   ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಣ ಹಾಗೂ ಮದ್ಯ, ಇನ್ನಿತರೆ ಸಾಮಗ್ರಿ ಹಂಚಿಕೆ ತಡೆಗಟ್ಟಲು ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.  ಅಬಕಾರಿ ಇಲಾಖೆಯವರು ಅಕ್ರಮ ಮದ್ಯ ಸಾಗಾಣಿಕೆಯನ್ನು ಪತ್ತೆ ಹಚ್ಚಲು  ಹೆಚ್ಚಿನ ನಿಗಾ ವಹಿಸಿದ್ದು, ಅಬಕಾರಿ ಇಲಾಖೆ ಹಾಗೂ ಪೊಲೀಸ್  ಸಮನ್ವಯತೆಯಿಂದ ಕಾರ್ಯ ನಿರ್ವಹಿಸುತ್ತಿವೆ.  ಜಿಲ್ಲೆಯ ಬ್ಯಾಂಕರ್ಸ್‍ಗಳ ಸಭೆ ಕೈಗೊಂಡು, 01 ಲಕ್ಷ ರೂ. ಗೂ ಹೆಚ್ಚಿನ ಶಂಕಾಸ್ಪದ ಹಣದ ವ್ಯವಹಾರಗಳ ಕುರಿತು ದಿನನಿತ್ಯ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.   
     ಕುಷ್ಟಗಿ ಹಾಗೂ ಯಲಬುರ್ಗಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕ ಮನಿಶ್ ಅವರು ಮಾತನಾಡಿ, ಜಿಲ್ಲೆಯ ಎಟಿಎಂ ಗಳಲ್ಲಿ ಹಣ ಇಲ್ಲ ಎಂಬುದಾಗಿ ಮಾಧ್ಯಮಗಳಲ್ಲಿ ವರದಿ ಬರುತ್ತಿದ್ದು, ಎಟಿಎಂ ಗಳಲ್ಲಿ ಹಣ ಇಲ್ಲ ಎಂದಾದರೆ, ಹೆಚ್ಚಿನ ಮೊತ್ತದ ಹಣ ಮನೆಗಳಲ್ಲಿ ಸಂಗ್ರಹಣೆಯಾಗುತ್ತಿದೆ ಎಂಬ ಶಂಕೆ ಮೂಡುತ್ತದೆ.  01 ಲಕ್ಷ ರೂ. ಮೀರಿದ ಶಂಕಾಸ್ಪದ ವ್ಯವಹಾರಗಳ ವಿವರಗಳ ಬಗ್ಗೆ ಮಾತ್ರ ಮಾಹಿತಿ ಸಂಗ್ರಹಿಸದರೆ ಸಾಲದು, ಸತತವಾಗಿ ಪದೇ ಪದೇ ಹಣ ಡ್ರಾ ಮಾಡುತ್ತಿರುವವರ ಬಗ್ಗೆಯೂ ಮಾಹಿತಿ ಸಂಗ್ರಹಣೆ ಹಾಗೂ ವರದಿ ಚುನಾವಣಾಧಿಕಾರಿಗಳಿಗೆ ಲಭ್ಯವಾಗಬೇಕು ಎಂದರು.   
       ಕೊಪ್ಪಳ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕ ನೀರಜ್ ಕುಮಾರ್ ಅವರು ಮಾತನಾಡಿ, ಅಕ್ರಮ ಮದ್ಯ ಸಾಗಾಣಿಕೆ ಅಥವಾ ಸಂಗ್ರಹಣೆ ಕುರಿತು ತೀವ್ರ ನಿಗಾ ವಹಿಸಬೇಕು.  ಚೆಕ್ ಪೋಸ್ಟ್‍ಗಳಲ್ಲಿ ಈ ಬಗ್ಗೆ ತಪಾಸಣೆ ಸಮರ್ಪಕವಾಗಿ ಆಗಬೇಕು ಎಂದರು.
     ಗಂಗಾವತಿ ಮತ್ತು ಯಲಬುರ್ಗಾ ಕ್ಷೇತ್ರಗಳ  ಚುನಾವಣಾ ವೆಚ್ಚ ವೀಕ್ಷಕ ಮಹಮ್ಮದ್ ಇರ್ಫಾನ್ ಅಜೀಜ್ ಅವರು, ಕ್ಷೇತ್ರಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲ ಅಧಿಕಾರಿ, ಸಿಬ್ಬಂದಿಗಳು ಹಾಗೂ ಸೆಕ್ಟರ್ ಮತ್ತು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದರು.
     ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಅಬಕಾರಿ ಉಪ ಅಧೀಕ್ಷಕ ನಾರಾಯಣ ನಾಯ್ಕ, ಚುನಾವಣಾ ವೆಚ್ಚ ನೋಡಲ್ ಅಧಿಕಾರಿ ವಾಗೀಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ಮುಕ್ತ, ನ್ಯಾಯಸಮ್ಮತ ಚುನಾವಣೆ: ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟ ಡಿ.ಸಿ.

ಎಲ್ಲಾ ಲೇಖನಗಳು ಆಗಿದೆ ಮುಕ್ತ, ನ್ಯಾಯಸಮ್ಮತ ಚುನಾವಣೆ: ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟ ಡಿ.ಸಿ. ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ: ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟ ಡಿ.ಸಿ. ಲಿಂಕ್ ವಿಳಾಸ https://dekalungi.blogspot.com/2018/04/blog-post_34.html

Subscribe to receive free email updates:

0 Response to "ಮುಕ್ತ, ನ್ಯಾಯಸಮ್ಮತ ಚುನಾವಣೆ: ವೀಕ್ಷಕರಿಗೆ ಮನವರಿಕೆ ಮಾಡಿಕೊಟ್ಟ ಡಿ.ಸಿ."

ಕಾಮೆಂಟ್‌‌ ಪೋಸ್ಟ್‌ ಮಾಡಿ