ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ
ಲಿಂಕ್ : ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ

ಓದಿ


ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ


ಕೊಪ್ಪಳ ಏ. 28 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಪ್ರಾಪ್ತ ಮಕ್ಕಳನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುವಂತಿಲ್ಲ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸೂಚನೆ ನೀಡಿದೆ.
    ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸಕ್ಷನ್ 13ರ ಅನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಮತ್ತು  ಸೆಕ್ಷನ್ 14ರ ಅಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಂತೆ ಕಾರ್ಯನಿರ್ವಹಿಸುವ ಅಧಿಕಾರವನ್ನು ಹೊಂದಿದೆ.  ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರಣಗಳನ್ನು ಆಯೋಗವು ಸ್ವಯಂಪ್ರೇರಣೆಯಿಂದ (ಸುಮೋಟೋ) ದೂರು ದಾಖಲಿಸಿ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಹೊಂದಿದೆ.  
    ಭಾರತ ಚುನಾವಣಾ ಆಯೋಗ ಹಾಗೂ ರಾಪ್ಟ್ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಇವರುಗಳು ಮಕ್ಕಳನ್ನು ಚುನಾವಣಾ ಕೆಲಸಗಳಿಗೆ ಬಳಸಿಕೊಳ್ಳದಂತೆ ಸೂಕ್ತ ನಿರ್ದೇಶನಗಳನ್ನು ನೀಡಿದ್ದು, ಪ್ರಸ್ತುತ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರ ಕಾರ್ಯದಲ್ಲಿ ರಾಯಚೂರು ಜಿಲ್ಲೆಯಲ್ಲಿ ಅಪ್ರಾಪ್ತ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವ ಕುರಿತು ಪತ್ರಿಕೆಯಲ್ಲಿ ವರದಿಯಾಗಿತ್ತು.  ಸ್ವಯಂ ಸೇವಾ ಸಂಸ್ಥೆಗಳು ಇಂತಹ ಪ್ರಕರಣಗಳನ್ನು ಆಯೋಗದ ಗಮನಕ್ಕೆ ತರುತ್ತಿದ್ದು, ಈ ವಿಷಯನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ.  
    ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದೊಂಬಿ, ಗಲಾಟೆ, ಘರ್ಷಣೆ ಮುಂತಾದ ಅನಿರೀಕ್ಷಿತ ಪ್ರಕರಣಗಳು ಸಂಭವಿಸಬಹುದು.  ಅಂತಹ ಸದಂರ್ಭಗಳಲ್ಲಿ ಮಕ್ಕಳು ಬಲಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ.  ಈ ತರಹದ ಘಟನೆಗಳು ಆದಲ್ಲಿ ಸಂಬಂಧಿಸಿದ ರಾಜಕೀಯ ಪಕ್ಷವು ನೇರ ಹೊಣೆಗಾರರಾಗಿದ್ದು, ಅವರ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕ್ರಮ ತೆಗೆದುಕೊಳ್ಳಬಹುದಾಗಿದೆ.  ಚುನಾವಣಾ ಪ್ರಚಾರಕ್ಕಾಗಲಿ, ಪೋಸ್ಟರ್ ಹಂಚುವುದು, ಬ್ಯಾನರ್ ಕಟ್ಟುವುದು ಹಾಗೂ ಇನ್ನಿತರ ಚುನಾವಣಾ ಕಾರ್ಯಾಗಳಿಗಾಗಲಿ ಮಕ್ಕಳನ್ನು ಬಳಸಿದ್ದಲ್ಲಿ, ಆಯೋಗವು ಈ ಬಗ್ಗೆ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ.



ಹೀಗಾಗಿ ಲೇಖನಗಳು ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ

ಎಲ್ಲಾ ಲೇಖನಗಳು ಆಗಿದೆ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/04/blog-post_394.html

Subscribe to receive free email updates:

0 Response to "ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ