ಶೀರ್ಷಿಕೆ : ಡಾ: ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿ ನಮನ
ಲಿಂಕ್ : ಡಾ: ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿ ನಮನ
ಡಾ: ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿ ನಮನ
ಕೊಪ್ಪಳ ಏ. 14 (ಕರ್ನಾಟಕ ವಾರ್ತೆ): ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರ 127 ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಶನಿವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರೇಣುಕಾನಂದ್ ಅವರು, ಅಂಬೇಡ್ಕರ್ ಅವರ ಜೀವನ, ಸಾಧನೆ ಹಾಗೂ ಅವರ ಆಶಯಗಳ ಕುರಿತು ಸಂಕ್ಷಿಪ್ತವಾಗಿ ವಿವರಿಸಿ, ಅಂಬೇಡ್ಕರ್ ಅವರ ಸಮಾನತೆಯ ಸದುದ್ದೇಶವನ್ನು ಈಡೇರಿಸಲು ಸರ್ಕಾರಿ ನೌಕರರು ಪಣತೊಡಬೇಕಿದೆ ಎಂದರು.
ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಆಹಾರ ಇಲಾಖೆ ಉಪನಿರ್ದೇಶಕಿ ಸಿ.ಡಿ. ಗೀತಾ, ಅಬಕಾರಿ ಇಲಾಖೆ ಉಪ ಆಯುಕ್ತ ಪ್ರಶಾಂತಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು.
ಹೀಗಾಗಿ ಲೇಖನಗಳು ಡಾ: ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿ ನಮನ
ಎಲ್ಲಾ ಲೇಖನಗಳು ಆಗಿದೆ ಡಾ: ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿ ನಮನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಾ: ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿ ನಮನ ಲಿಂಕ್ ವಿಳಾಸ https://dekalungi.blogspot.com/2018/04/blog-post_50.html
0 Response to "ಡಾ: ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿ ನಮನ"
ಕಾಮೆಂಟ್ ಪೋಸ್ಟ್ ಮಾಡಿ