ಮತ ಎಣಿಕೆ ಕೇಂದ್ರ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೀಕ್ಷಕರು

ಮತ ಎಣಿಕೆ ಕೇಂದ್ರ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೀಕ್ಷಕರು - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮತ ಎಣಿಕೆ ಕೇಂದ್ರ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೀಕ್ಷಕರು, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮತ ಎಣಿಕೆ ಕೇಂದ್ರ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೀಕ್ಷಕರು
ಲಿಂಕ್ : ಮತ ಎಣಿಕೆ ಕೇಂದ್ರ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೀಕ್ಷಕರು

ಓದಿ


ಮತ ಎಣಿಕೆ ಕೇಂದ್ರ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೀಕ್ಷಕರು

 
ಕೊಪ್ಪಳ ಏ. 27 (ಕರ್ನಾಟಕ ವಾರ್ತೆ): ವಿಧಾನಸಭಾ ಚುನಾವಣೆ ಸಂಬಂಧ ಮೇ. 12 ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯಕ್ಕಾಗಿ ಕೊಪ್ಪಳದ ಗವಿಸಿದ್ದೇಶ್ವರ ಮಹಾ ವಿದ್ಯಾಲಯ ಕಟ್ಟಡವನ್ನು ಆಯ್ಕೆ ಮಾಡಲಾಗಿದ್ದು, ಚುನಾವಣಾ ಸಾಮಾನ್ಯ ವೀಕ್ಷಕರು ಶುಕ್ರವಾರದಂದು ಕಾಲೇಜಿಗೆ ಭೇಟಿ ನೀಡಿ, ಮತ ಎಣಿಕೆ ಕಾರ್ಯದ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದರು.

     ಕುಷ್ಟಗಿ ಮತ್ತು ಯಲಬುರ್ಗಾ ವಿಧಾನಸಭಾ ಕ್ಷೇತ್ರಗಳಿಗೆ ಐಎಎಸ್ ಅಧಿಕಾರಿ ಕೆ.ಎನ್. ಸತೀಶ್-    ಕನಕಗಿರಿ ಮತ್ತು ಗಂಗಾವತಿ ವಿಧಾನಸಭಾ ಕ್ಷೇತ್ರಗಳಿಗೆ ಐಎಎಸ್ ಅಧಿಕಾರಿ ಎಂ. ಜಾಯ್‍ಸಿಂಗ್.  ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಆಗಮಿಸಿರುವ ಐಎಎಸ್ ಅಧಿಕಾರಿ ಎಂ. ಶಂಕರನಾರಾಯಣನ್ ಅವರು ಶುಕ್ರವಾರದಂದು ಕೊಪ್ಪಳದ ಗವಿಸಿದ್ದೇಶ್ವರ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದರು.  ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಮತ ಎಣಿಕೆ ಕೇಂದ್ರ ಸಿದ್ಧತೆಯ ಸಮಗ್ರ ಚಿತ್ರಣವನ್ನು ವೀಕ್ಷಕರಿಗೆ ವಿವರಿಸಿದರು.  ಮತ ಎಣಿಕೆ ಕೇಂದ್ರದಲ್ಲಿ ಇವಿಎಂ ಯಂತ್ರಗಳ ದಾಸ್ತಾನು ಭದ್ರತಾ ಕೊಠಡಿ, ಮಾಧ್ಯಮ ಕೊಠಡಿ, ಮತಗಳ ಎಣಿಕೆ ಕೊಠಡಿಗಳು, ವೀಕ್ಷಕರ ಕೊಠಡಿ ಇವುಗಳಿಗೆ ನಿಗದಿಪಡಿಸಿರುವ ಕೊಠಡಿಗಳನ್ನು ವೀಕ್ಷಕರಿಗೆ ತೋರಿಸಿಕೊಡಲಾಯಿತು.  ಇವಿಎಂ ಭದ್ರತಾ ಕೊಠಡಿಯ ಸಿದ್ಧತೆ ಕುರಿತಂತೆ ವೀಕ್ಷಕರು ಕೆಲವು ಸಲಹೆಗಳನ್ನು ನೀಡಿದರು.  
 
ಜಿಲ್ಲೆಯ ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 269, ಕನಕಗಿರಿ-260, ಗಂಗಾವತಿ-232, ಯಲಬುರ್ಗಾ-253 ಹಾಗೂ ಕೊಪ್ಪಳ ಕ್ಷೇತ್ರಗಳಲ್ಲಿ 287 ಸೇರಿದಂತೆ ಒಟ್ಟು 1301 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮೇ. 12 ರಂದು ಜರುಗುವ ಮತದಾನ ಪ್ರಕ್ರಿಯೆ ಬಳಿಕ ಎಲ್ಲ ವಿಧಾನಸಭಾ ಕ್ಷೇತ್ರಗಳ ಇವಿಎಂ ಮತಯಂತ್ರಗಳನ್ನು ಕೊಪ್ಪಳದ ಗವಿಸಿದ್ದೇಶ್ವರ ಮಹಾ ವಿದ್ಯಾಲಯದಲ್ಲಿ ನಿರ್ಮಿಸಲಾಗುವ ಭದ್ರತಾ ಕೊಠಡಿಯಲ್ಲಿ ದಾಸ್ತಾನು ಮಾಡಿ, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುವುದು.  ಮಾಧ್ಯಮ ಕೊಠಡಿಯಲ್ಲಿ ಮಾಧ್ಯಮದವರಿಗೆ ಸೂಕ್ತ ಆಸನಗಳ ವ್ಯವಸ್ಥೆಯ ಜೊತೆಗೆ ಮತ ಎಣಿಕೆ ಕಾರ್ಯದ ಪ್ರಗತಿಯ ವಿವರವನ್ನು ಪ್ರೊಜೆಕ್ಟರ್ ಮೂಲಕ ಪ್ರದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು.  ಮತಗಳ ಎಣಿಕೆ ಕಾರ್ಯ ಪ್ರಾರಂಭಕ್ಕೂ ಮುನ್ನ ಛಾಯಾಗ್ರಾಹಕರು ಅಥವಾ ಟಿ.ವಿ. ಕ್ಯಾಮೆರಾಮನ್‍ಗಳು ಮತ ಎಣಿಕೆ ಕಾರ್ಯದ ಸಿದ್ಧತೆ ಕುರಿತು ಚಿತ್ರೀಕರಣ ಮಾಡಿಕೊಳ್ಳಬಹುದಾಗಿದೆ  ಮತ ಎಣಿಕೆ ಕಾರ್ಯ ಪ್ರಾರಂಭವಾದ ಬಳಿಕ ಮಾಧ್ಯಮದವರಿಗೆ ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ ಇರುವುದಿಲ್ಲ.  ಮತ ಎಣಿಕೆ ಕಾರ್ಯದ ಪ್ರಗತಿ ಚಿತ್ರಣ ಮಾಧ್ಯಮ ಕೊಠಡಿಯಲ್ಲಿಯೇ ಲಭ್ಯವಾಗುತ್ತದೆ.  ಮತ ಎಣಿಕೆ ಕೊಠಡಿಯಲ್ಲಿ ನಿಯಮಾನುಸಾರ ಸಂಬಂಧಪಟ್ಟ ಮತ ಎಣಿಕೆ ಏಜೆಂಟರುಗಳಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು.  ಮತ ಎಣಿಕೆ ಕೇಂದ್ರದ ಕಟ್ಟಡ ಸುತ್ತಲೂ ಸೂಕ್ತ ಬಂದೋಬಸ್ತ್ ಆಯೋಜಿಸಲಾಗುವುದು.  ಮತ ಎಣಿಕೆ ಕೊಠಡಿಗೆ ಅಗತ್ಯ ಟೇಬಲ್ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು, ಈಗಾಗಲೆ ಮತ ಎಣಿಕೆ ಕಾರ್ಯಕ್ಕಾಗಿ ಅಗತ್ಯವಿರುವ ಮತ ಎಣಿಕೆ ಅಧಿಕಾರಿಗಳು, ಸಹಾಯಕ ಅಧಿಕಾರಿಗಳು, ಸಹಾಯಕ ಸಿಬ್ಬಂದಿಗಳನ್ನು ನೇಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ವಿವರಣೆ ನೀಡಿದರು.

     ಚುನಾವಣೆ ಕಾರ್ಯಕ್ಕಾಗಿ ಆಯೋಗದಿಂದ ನೇಮಕಗೊಂಡಿರುವ ಚುನಾವಣಾ ಸಾಮಾನ್ಯ ವೀಕ್ಷಕರು ಹಾಗೂ ಜಿಲ್ಲಾಧಿಕಾರಿಗಳ ಸಹಿತ ಎಲ್ಲ ಅಧಿಕಾರಿಗಳು ಮತ ಎಣಿಕೆ ಕೇಂದ್ರಕ್ಕೆ ಆಯ್ಕೆ ಮಾಡಿರುವ ಎಲ್ಲ ಕೊಠಡಿಗಳು, ಇವಿಎಂ ದಾಸ್ತಾನಿಗಾಗಿ ಆಯ್ಕೆ ಮಾಡಲಾಗಿರುವ ಭದ್ರತಾ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಿದ್ಧತೆಗಳ ಕುರಿತು ವೀಕ್ಷಕರು ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದರು.

     ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಕೊಪ್ಪಳ ಚುನಾವಣಾಧಿಕಾರಿ ಸಿ.ಡಿ. ಗೀತಾ, ಗಂಗಾವತಿ- ಡಾ. ರವಿ ತಿರ್ಲಾಪುರ, ಯಲಬುರ್ಗಾ- ವಿಜಯಕುಮಾರ, ಕುಷ್ಟಗಿ- ಪ್ರಶಾಂತ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಂಡಿವಡ್ಡರ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ಮತ ಎಣಿಕೆ ಕೇಂದ್ರ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೀಕ್ಷಕರು

ಎಲ್ಲಾ ಲೇಖನಗಳು ಆಗಿದೆ ಮತ ಎಣಿಕೆ ಕೇಂದ್ರ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೀಕ್ಷಕರು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮತ ಎಣಿಕೆ ಕೇಂದ್ರ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೀಕ್ಷಕರು ಲಿಂಕ್ ವಿಳಾಸ https://dekalungi.blogspot.com/2018/04/blog-post_694.html

Subscribe to receive free email updates:

0 Response to "ಮತ ಎಣಿಕೆ ಕೇಂದ್ರ ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೀಕ್ಷಕರು"

ಕಾಮೆಂಟ್‌‌ ಪೋಸ್ಟ್‌ ಮಾಡಿ