ಶೀರ್ಷಿಕೆ : ಅಂತಿಮ ಹಂತ ತಲುಪಿದ ಮತ ಎಣಿಕೆ ಕೇಂದ್ರ ಸಿದ್ಧತೆ
ಲಿಂಕ್ : ಅಂತಿಮ ಹಂತ ತಲುಪಿದ ಮತ ಎಣಿಕೆ ಕೇಂದ್ರ ಸಿದ್ಧತೆ
ಅಂತಿಮ ಹಂತ ತಲುಪಿದ ಮತ ಎಣಿಕೆ ಕೇಂದ್ರ ಸಿದ್ಧತೆ
ಕೊಪ್ಪಳ ಏ. 30 (ಕರ್ನಾಟಕ ವಾರ್ತೆ): ವಿಧಾನಸಭಾ ಚುನಾವಣೆ ಸಂಬಂಧ ಮೇ. 12 ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯಕ್ಕಾಗಿ ಕೊಪ್ಪಳದ ಗವಿಸಿದ್ದೇಶ್ವರ ಮಹಾ ವಿದ್ಯಾಲಯದಲ್ಲಿ ನಡೆಯುತ್ತಿದ್ದ ಮತ ಎಣಿಕೆ ಕೇಂದ್ರದ ಸಿದ್ಧತೆ ಅಂತಿಮ ಹಂತ ತಲುಪಿದೆ.

ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೋಮವಾರದಂದು ಗವಿಸಿದ್ದೇಶ್ವರ ಮಹಾ ವಿದ್ಯಾಲಯಕ್ಕೆ ಭೇಟಿ ನೀಡಿ, ಮತ ಎಣಿಕೆ ಕೇಂದ್ರದ ಸಿದ್ದತೆಯ ಅಂತಿಮ ರೂಪರೇಷೆಗಳನ್ನು ಪರಿಶೀಲಿಸಿದರು. ಮತ ಎಣಿಕೆ ಕೇಂದ್ರದಲ್ಲಿ ಇವಿಎಂ ಯಂತ್ರಗಳ ದಾಸ್ತಾನು ಭದ್ರತಾ ಕೊಠಡಿ, ಮಾಧ್ಯಮ ಕೊಠಡಿ, ಮತಗಳ ಎಣಿಕೆ ಕೊಠಡಿಗಳು, ವೀಕ್ಷಕರ ಕೊಠಡಿ ಇವುಗಳಿಗೆ ನಿಗದಿಪಡಿಸಿರುವ ಕೊಠಡಿಗಳಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಮತ ಎಣಿಕೆ ಕೇಂದ್ರದಲ್ಲಿ ಮತಗಟ್ಟೆಗಳಿಗೆ ಅನುಗುಣವಾಗಿ ಟೇಬಲ್ ವ್ಯವಸ್ಥೆ, ಎಣಿಕೆ ಸಿಬ್ಬಂದಿಗಳಿಗೆ ಸೂಕ್ತ ಆಸನ ವ್ಯವಸ್ಥೆ, ಮತ ಎಣಿಕೆ ಕಾರ್ಯಕ್ಕೆ ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ಸಿದ್ಧವಾಗಿರಿಸಿಕೊಳ್ಳಲಾಗುತ್ತಿದೆ. ಮತ ಎಣಿಕೆ ಕೇಂದ್ರಕ್ಕೆ ಆಗಮಿಸುವ ಚುನಾವಣಾ ಏಜಂಟರುಗಳು ಮತ ಎಣಿಕೆ ಕಾರ್ಯ ವೀಕ್ಷಿಸಲು ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆಯನ್ನು ಸುಸಜ್ಜಿತವಾಗಿ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದರು.
ಮತ ಎಣಿಕೆ ಕೇಂದ್ರದ ಕಟ್ಟಡ ಸುತ್ತಲೂ ಸೂಕ್ತ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗುವುದು. ಮತ ಎಣಿಕೆ ಕೇಂದ್ರದ ಪ್ರವೇಶಕ್ಕೆ ಅಗತ್ಯ ಅನುಮತಿ ಪತ್ರ ಇರುವವರನ್ನು ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಕೇಂದ್ರ ಸುತ್ತ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ ಅವರು ತಿಳಿಸಿದರು. ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಅಂತಿಮ ಹಂತ ತಲುಪಿದ ಮತ ಎಣಿಕೆ ಕೇಂದ್ರ ಸಿದ್ಧತೆ
ಎಲ್ಲಾ ಲೇಖನಗಳು ಆಗಿದೆ ಅಂತಿಮ ಹಂತ ತಲುಪಿದ ಮತ ಎಣಿಕೆ ಕೇಂದ್ರ ಸಿದ್ಧತೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಂತಿಮ ಹಂತ ತಲುಪಿದ ಮತ ಎಣಿಕೆ ಕೇಂದ್ರ ಸಿದ್ಧತೆ ಲಿಂಕ್ ವಿಳಾಸ https://dekalungi.blogspot.com/2018/04/blog-post_697.html
0 Response to "ಅಂತಿಮ ಹಂತ ತಲುಪಿದ ಮತ ಎಣಿಕೆ ಕೇಂದ್ರ ಸಿದ್ಧತೆ"
ಕಾಮೆಂಟ್ ಪೋಸ್ಟ್ ಮಾಡಿ