ಶೀರ್ಷಿಕೆ : ಬಾಲ್ಯ ವಿವಾಹದಿಂದ ಅಪ್ರಾಪ್ತರ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಲಿಂಕ್ : ಬಾಲ್ಯ ವಿವಾಹದಿಂದ ಅಪ್ರಾಪ್ತರ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಬಾಲ್ಯ ವಿವಾಹದಿಂದ ಅಪ್ರಾಪ್ತರ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಕೊಪ್ಪಳ ಏ. 23 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಬಾಲ್ಯ ವಿವಾಹಕ್ಕೆ ಒಳಪಡುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಮ್ಮೂರು ತಾಂಡದ ಇಬ್ಬರು ಬಾಲಕಿಯರ ವಿವಾಹ ನಿಗದಿಪಡಿಸಲಾಗಿತ್ತು. ಬಾಲ್ಯ ವಿವಾಹ ಜರುಗುತ್ತಿರುವ ಕುರಿತ ಮಾಹಿತಿಯನ್ನು ತಿಳಿದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಕೊಪ್ಪಳ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮತ್ತು ಅಂಗನವಾಡಿ ಮೇಲ್ವಿಚಾರಕಿಯರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದಾಗ, ಒಬ್ಬ ಬಾಲಕಿಗೆ ಶಾಲಾ ದಾಖಲಾತಿಯ ಪ್ರಕಾರ 18 ವರ್ಷ ಪೂರ್ಣಗೊಳ್ಳದೇ ಇರುವುದರಿಂದ ಹಾಗೂ ಮತ್ತೋರ್ವ ಬಾಲಕಿಯ ವಯಸ್ಸಿನ ಕುರಿತು ಯಾವುದೇ ಜನನ ಪ್ರಮಾಣ ಪತ್ರ, ಶಾಲೆ ಅಥವಾ ವೈದ್ಯಕೀಯ ದಾಖಲಾತಿಗಳನ್ನು ಪಡೆಯದೇ ವಿವಾಹ ಮಾಡುತ್ತಿರುವುದು ಕಂಡು ಬಂದಿದ್ದರಿಂದ ಬಾಲಕಿಯರ ಪಾಲಕರಿಗೆ ಬಾಲ್ಯವಿವಾಹ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ಪತ್ರವನ್ನು ನೀಡಿ ಬಾಲಕಿಯರಿಬ್ಬರನ್ನು ವಶಕ್ಕೆ ಪಡೆದು ಮುಂದಿನ ಆರೈಕೆ ಮತ್ತು ಪೋಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಬಾಲ್ಯ ವಿವಾಹದಿಂದ ಅಪ್ರಾಪ್ತರ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಎಲ್ಲಾ ಲೇಖನಗಳು ಆಗಿದೆ ಬಾಲ್ಯ ವಿವಾಹದಿಂದ ಅಪ್ರಾಪ್ತರ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲ್ಯ ವಿವಾಹದಿಂದ ಅಪ್ರಾಪ್ತರ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಲಿಂಕ್ ವಿಳಾಸ https://dekalungi.blogspot.com/2018/04/blog-post_773.html
0 Response to "ಬಾಲ್ಯ ವಿವಾಹದಿಂದ ಅಪ್ರಾಪ್ತರ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು"
ಕಾಮೆಂಟ್ ಪೋಸ್ಟ್ ಮಾಡಿ