ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ
ಲಿಂಕ್ : ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ

ಓದಿ


ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ


ಕೊಪ್ಪಳ ಏ. 19 (ಕರ್ನಾಟಕ ವಾರ್ತೆ): ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2017 ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
        ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2017 ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳ ವಿವರ ಇಂತಿದೆ.  ಮಲ್ಲಿಕಾ ದತ್ತಿ ಪ್ರಶಸ್ತಿ : ಅತ್ಯುತ್ತಮ ಲೇಖಕಿಯರ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು.  ಹಿರಿಯ-ಕಿರಿಯ ಲೇಖಕಿಯರು ಎಂಬ ವ್ಯತ್ಯಾಸವಿಲ್ಲ.  ಯಾರು ಬೇಕಾದರೂ ಭಾಗವಹಿಸಬಹುದು.  ಸ್ವತಂತ್ರ ಅಥವಾ ಅನುವಾದಿತ ಕೃತಿಯಾದರೂ ಆಗಬಹುದು.  ಅಂತರಾಷ್ಟ್ರೀಯ ಮಹಿಳಾ ವರ್ಷದ ಮಹಿಳಾ ದತ್ತಿ ಪ್ರಶಸ್ತಿ : ಮಹಿಳೆಯರ ಅತ್ಯುತ್ತಮ ಕೃತಿಗೆ ರೂ.500/- ಬಹುಮಾನವನ್ನು ನೀಡಲಾಗುವುದು.  ಸ್ವತಂತ್ರ ಕೃತಿಯಾಗಿರಬೇಕು ಹಾಗೂ ಅನುವಾದ ಕೃತಿಗಳನ್ನಾಗಲೀ, ಪುನರ್ ಮುದ್ರಣಗೊಂಡ ಕೃತಿಗಳನ್ನಾಗಲೀ ಪರಿಗಣಿಸುವುದಿಲ್ಲ.  ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ : ಲೇಖಕಿ ಒಬ್ಬರ ಮಹತ್ವದ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು.  ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ : ಅತ್ಯುತ್ತಮ ಮಹಿಳಾ ಸಾಹಿತ್ಯದ (ಮಹಿಳೆಯರನ್ನು ಕುರಿತು ಅಥವಾ ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ರಚಿತವಾದ) ಕೃತಿಗೆ ರೂ.500/- ಬಹುಮಾನ ನೀಡಲಾಗುವುದು.  ನೀಲಗಂಗಾ ದತ್ತಿ ಪ್ರಶಸ್ತಿ : ಮಹಿಳೆಯರ ಪ್ರಬಂಧ, ಕವನ, ಕಾವ್ಯ ಮತ್ತು ಸಮಕಾಲಿನ ಮೌಲಿಕ ವಿಚಾರವುಳ್ಳ ಗ್ರಂಥಕ್ಕೆ ರೂ.500/- ಬಹುಮಾನ ನೀಡಲಾಗುವುದು.  ಕೆ.ಎಸ್.ಭಾರತಿ ರಾಜಾರಾಮ್ ಮಧ್ಯಸ್ಥ ಪ್ರಶಸ್ತಿ : ಮಹಿಳೆಯರ ಅತ್ಯುತ್ತಮ ಕಾದಂಬರಿಗೆ ರೂ.500/- ಬಹುಮಾನ ನೀಡಲಾಗುವುದು. ಕೃತಿ ಸ್ವತಂತ್ರವಾಗಿರಬೇಕು ಹಾಗೂ ಅನುವಾದವಾಗಿರಬಾರದು.  ಶಾರದಾ ಆರ್.ರಾವ್ ದತ್ತಿ ಪ್ರಶಸ್ತಿ : ಉದಯೋನ್ಮುಖ ಮಹಿಳಾ ಬರಹಗಾರರ ಅತ್ಯುತ್ತಮ ಕೃತಿಗೆ ರೂ.250/- ಬಹುಮಾನ ನೀಡಲಾಗುವುದು.  ಗೌರಮ್ಮ ಹಾರ್ನಹಳ್ಳಿ ಕೆ.ಮಂಜಪ್ಪ ದತ್ತಿ ಪ್ರಶಸ್ತಿ : ಲೇಖಕಿಯರಿಂದ ರಚಿತವಾದ ಯಾವುದೇ ಪ್ರಕಾರದ ಕೃತಿಗೆ ರೂ.1000/- ಬಹುಮಾನ ನೀಡಲಾಗುವುದು.  ಎಚ್. ಕರಿಯಣ್ಣ ದತ್ತಿ ಪ್ರಶಸ್ತಿ : ಲೇಖಕಿಯರಿಂದ ರಚಿತವಾಗಿರುವ ಮಕ್ಕಳ ಪುಸ್ತಕಕ್ಕೆ ರೂ.500/- ಬಹುಮಾನ ನೀಡಲಾಗುವುದು.
         ಡಾ|| ಎಚ್. ನರಸಿಂಹಯ್ಯ ದತ್ತಿ ಪ್ರಶಸ್ತಿ : ವೈಚಾರಿಕ ಹಾಗೂ ವೈಜ್ಞಾನಿಕ ಮನೋಭಾವಕ್ಕೆ ಸಂಬಂಧಿಸಿದ ಶ್ರೇಷ್ಠ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು.  ಅಸುಂಡಿ ಹುದ್ದಾರ್ ಕೃಷ್ಣರಾವ್ ಸ್ಮಾರಕ ದತ್ತಿ ಪ್ರಶಸ್ತಿ : ಹರಿದಾಸ ಸಾಹಿತ್ಯ ಕುರಿತ ಕೃತಿಗೆ ರೂ.250/- ಬಹುಮಾನ ನೀಡಲಾಗುವುದು.  ಜಿ.ಪಿ.ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ : (ಮಕ್ಕಳ ಪುಸ್ತಕ ಬಹುಮಾನ ಸ್ಪರ್ಧೆ-ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬರಹಗಾರರಿಗೆ ಮಾತ್ರ ಅವಕಾಶ) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬರಹಗಾರರು ಬರೆದಿರುವ ಅತ್ಯುತ್ತಮ ಮಕ್ಕಳ ಪುಸ್ತಕಕ್ಕೆ ರೂ.250/- ಬಹುಮಾನ ನೀಡಲಾಗುವುದು.  (ಪುಸ್ತಕ 15 ವರ್ಷ ವಯಸ್ಸಿನ ಒಳಗಿರುವ ಮಕ್ಕಳು ಓದುವಂತಹ ಕೃತಿ ಯಾಗಿರಬೇಕು).  ಕೆ.ವಿ.ರತ್ನಮ್ಮ ದತ್ತಿ ಪ್ರಶಸ್ತಿ : ಉದಯೋನ್ಮುಖ ಬರಹಗಾರರ ಅತ್ಯುತ್ತಮ ಚೊಚ್ಚಲ ಪದ್ಯಕೃತಿ ಒಂದಕ್ಕೆ ರೂ.500/- ಬಹುಮಾನ ನೀಡಲಾಗುವುದು.  ಸ್ಪರ್ಧೆಯಲ್ಲಿ ಯಾರು ಬೇಕಾದರು ಭಾಗವಹಿಸಬಹುದು.  ರತ್ನಾಕರವರ್ಣಿ-ಮುದ್ದಣ್ಣ-ಅನಾಮಿಕ ದತ್ತಿ ಪ್ರಶಸ್ತಿ : ಅತ್ಯುತ್ತಮ ಗದ್ಯಕೃತಿ ಒಂದಕ್ಕೆ ಹಾಗೂ ಅತ್ಯುತ್ತಮ ಪದ್ಯಕೃತಿ ಒಂದಕ್ಕೆ ತಲಾ 500/-ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಯಾರುಬೇಕಾದರು ಭಾಗವಹಿಸಬಹುದು.  ಪಿ.ಶಾಂತಿಲಾಲ್ ದತ್ತಿ ಪ್ರಶಸ್ತಿ : ಜೈನ ಸಾಹಿತ್ಯ ಕುರಿತ ಯಾವುದೇ ಪ್ರಕಾರದ ಕನ್ನಡ ಪುಸ್ತಕಕ್ಕೆ ರೂ.500/- ಬಹುಮಾನ ನೀಡಲಾಗುವುದು.  ಅಕ್ಕಮ್ಮ ಗಿರಿಗೌಡ ರುದ್ರಪ್ಪ ದತ್ತಿ ಪ್ರಶಸ್ತಿ : ಅತ್ಯುತ್ತಮವಾದ "ಜಾನಪದ ಸಾಹಿತ್ಯ ಕೃತಿ" ಒಂದಕ್ಕೆ ರೂ.500/- ಬಹುಮಾನ ನೀಡಲಾಗುವುದು.  ಜಯಲಕ್ಷ್ಮಮ್ಮ ಬಿ.ಎಸ್. ಸಣ್ಣಯ್ಯ ದತ್ತಿ ಪ್ರಶಸ್ತಿ : ಪ್ರಾಚೀನ ಸಂಪಾದಿತ ಕೃತಿಗೆ ರೂ.1000/- ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಯಾರುಬೇಕಾದರು ಭಾಗವಹಿಸಬಹುದು.  ಕುಂಬಾಸ್ ದತ್ತಿ ಪ್ರಶಸ್ತಿ : ಕನ್ನಡ ಹಾಸ್ಯ ಸಾಹಿತ್ಯ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು. (ಹಾಸ್ಯ ಸಾಹಿತ್ಯದ ಬಗ್ಗೆ ಬರೆದಿರುವ ಪುಸ್ತಕ, ಲೇಖನ, ಚುಟುಕು ಇತ್ಯಾದಿಗಳ ಬಗ್ಗೆ ವಿವರವಾದ ಪರಿಚಯ ಬರೆದು ಕಳುಹಿಸುವುದು).   ಪೆÇ್ರ|| ಡಿ.ಸಿ. ಅನಂತಸ್ವಾಮಿ ದತ್ತಿ ಪ್ರಶಸ್ತಿ : ಅತ್ಯುತ್ತಮ ಚೊಚ್ಚಲ ಕವನ ಸಂಕಲನಕ್ಕೆ ರೂ.500/- ಬಹುಮಾನ ನೀಡಲಾಗುವುದು.  ಸ್ಪರ್ಧೆಯಲ್ಲಿ ಯಾರುಬೇಕಾದರು ಭಾಗವಹಿಸಬಹುದು.  ಆರ್.ರೇವಯ್ಯ ದತ್ತಿ ಪ್ರಶಸ್ತಿ : ದೀನ ದಲಿತರ ಮತ್ತು ಶೋಷಿತ ವರ್ಗಗಳ ರಕ್ಷಣೆಗೆ ಶ್ರಮಿಸುವ ವ್ಯಕ್ತಿಗಳ ಬಗ್ಗೆ ಸಾಹಿತ್ಯ ಕೃತಿಗೆ ರೂ.1000/- ಬಹುಮಾನ ನೀಡಲಾಗುವುದು.  ಉದಯೋನ್ಮುಖ ಬರಹಗಾರರು, ಬರಹಗಾರ್ತಿಯರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. 
         ಸಿಸು ಸಂಗಮೇಶ ದತ್ತಿ ಪ್ರಶಸ್ತಿ : ಅತ್ಯುತ್ತಮ ಮಕ್ಕಳ ಸಾಹಿತ್ಯ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು.  ಸ್ಪರ್ಧೆಯಲ್ಲಿ ಯಾರುಬೇಕಾದರು ಭಾಗವಹಿಸಬಹುದು.  ಪಂಪಮ್ಮ-ಶರಣೇಗೌಡ ವಿರುಪಾಪುರ ದತ್ತಿ ಪ್ರಶಸ್ತಿ : ಉತ್ತಮ ಸಾಹಿತ್ಯ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು. (ರಾಯಚೂರು ಜಿಲ್ಲೆಯ ಬರಹಗಾರರಿಗೆ ಮಾತ್ರ ಸೀಮಿತ).  ಕೆ.ವಾಸುದೇವಾಚಾರ್ ದತ್ತಿ ಪ್ರಶಸ್ತಿ : ಸಣ್ಣಕಥಾ ಸಂಕಲನ ಕೃತಿಗೆ ರೂ.500/- ಬಹುಮಾನ ನೀಡಲಾಗುವುದು.  ಸ್ಪರ್ಧೆಯಲ್ಲಿ ಯಾರು ಬೇಕಾದರು ಭಾಗವಹಿಸಬಹುದು.  ಡಾ|| ಆರ್.ಜೆ. ಗಲಗಲಿ ದತ್ತಿ ಪ್ರಶಸ್ತಿ : ಉತ್ತಮ ಕವನ ಸಂಕಲನ ಒಂದಕ್ಕೆ ರೂ.1000/- ಬಹುಮಾನ ನೀಡಲಾಗುವುದು ಬೆಳಗಾವಿ ಜಿಲ್ಲೆಯ ಬರಹಗಾರರಿಗೆ ಮಾತ್ರ ಅವಕಾಶ.  ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲಶೆಟ್ಟಿ ಡಾ. ಮದನಕೇಸರಿ ಜೈನ ದತ್ತಿ ಪ್ರಶಸ್ತಿ : ಯಾವುದೇ ಜೈನ ಸಾಹಿತ್ಯ ಧರ್ಮಕ್ಕೆ ಸಂಬಂಧಪಟ್ಟ ಕೃತಿಗೆ ಬಹುಮಾನ, ಬಹುಮಾನದ ಮೊತ್ತ ರೂ. 7,500/.  ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ : ಅತ್ಯುತ್ತಮ ಕಾದಂಬರಿ ಕೃತಿಗೆ ರೂ. 5000/- ಬಹುಮಾನ ನೀಡಲಾಗುವುದು.  ಸಣ್ಣಕಥಾ ಸಂಕಲನಗಳನ್ನು ಸ್ಪರ್ಧೆಗೆ ಕಳುಹಿಸಬಹುದು ರೂ. 2000/- ಬಹುಮಾನ.  ಮಕ್ಕಳ ಸಾಹಿತ್ಯ ಕೃತಿಗೆ ರೂ. 2000/- ಬಹುಮಾನ.  ಅನುವಾದಿತ ಕೃತಿಗಳು, ವೈಚಾರಿಕ ಲೇಖನಗಳ ಕೃತಿಗೆ ರೂ. 2000/- ಬಹುಮಾನವನ್ನು ನೀಡಲಾಗುವುದು.  ಡಿ. ಮಾಣಿಕರಾವ ಸ್ಮರಣಾರ್ಥ ಹಾಸ್ಯ ಸಾಹಿತ್ಯ ದತ್ತಿ ಪ್ರಶಸ್ತಿ : ಯಾವುದೇ ಪ್ರಕಾರದ ಹಾಸ್ಯ ಸಾಹಿತ್ಯ ಕೃತಿಗೆ ರೂ.5000/- ಬಹುಮಾನ ನೀಡಲಾಗುವುದು.  ಕಾಕೋಳು ಸರೋಜಮ್ಮ ದತ್ತಿ ಪ್ರಶಸ್ತಿ : ನಾಟಕ ಪ್ರಕಾರಕ್ಕೆ ರೂ.1000/- ಬಹುಮಾನ ನೀಡಲಾಗುವುದು.  ಡಾ. ಎ.ಎಸ್. ಧರಣೇಂದ್ರಯ್ಯ-ಮನೋವಿಜ್ಞಾನ ದತ್ತಿ ಪ್ರಶಸ್ತಿ : ಮನೋವಿಜ್ಞಾನ ಸಾಹಿತ್ಯ ಕೃತಿಗೆ ರೂ.5000/- ಬಹುಮಾನ ನೀಡಲಾಗುವುದು.  ನಾ.ಕು. ಗಣೇಶ ದತ್ತಿ ಪ್ರಶಸ್ತಿ : ಪ್ರಥಮ ಕವನ ಸಂಕಲನಕ್ಕೆ ರೂ.1000/- ಬಹುಮಾನ ನೀಡಲಾಗುವುದು.  ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ ಪ್ರಶಸ್ತಿ : ವಿಜ್ಞಾನ ತಂತ್ರಜ್ಞಾನ ಪ್ರಕಾರಗಳಾದ ವೈದ್ಯಕೀಯ ಶಾಸ್ತ್ರ, ಯಂತ್ರಶಾಸ್ತ್ರ, ವಿದ್ಯನ್ಮಾನ ಶಾಸ್ತ್ರದಲ್ಲಿ ಕನ್ನಡದಲ್ಲಿ ರಚಿತವಾದ ಆ ವರ್ಷದ ಶ್ರೇಷ್ಠ ಕೃತಿಗಳಿಗೆ ರೂ.10000/- ಗಳ ಬಹುಮಾನ ನೀಡಲಾಗುವುದು.  ಸಾರಂಗಿ ವೆಂಕಟರಾಮಯ್ಯ ಶ್ರೀನಿವಾಸ ರಾವ್ ದತ್ತಿನಿಧಿ : ಮಕ್ಕಳ ಸಾಹಿತ್ಯ ಕ್ಷೇತ್ರದ ಗದ್ಯ ಪ್ರಕಾರದ ಕಥೆಗೆ ಸಂಬಂಧಿಸಿದಂತೆ ಕನಿಷ್ಠ 65 ಪುಟಗಳುಳ್ಳ ಪುಸ್ತಕಕ್ಕೆ ರೂ.2000/- ಬಹುಮಾನ ನೀಡಲಾಗುವುದು. 
           ಪಳಕಳ ಸೀತಾರಾಮಭಟ್ಟ ದತ್ತಿನಿಧಿ : ಮಕ್ಕಳ ಸಾಹಿತ್ಯ ಕೃತಿಗೆ ರೂ.2000/- ಬಹುಮಾನ ನೀಡಲಾಗುವುದು.  ಪೂಜ್ಯ ಸ್ವಸ್ತಿಶ್ರಿ ದೇವೇಂದ್ರಕೀರ್ತಿ ದತ್ತಿ ಪ್ರಶಸ್ತಿ : ಜೈನ್‍ಧರ್ಮದ ಇತಿಹಾಸ, ಸಾಹಿತ್ಯ ಸಂಸ್ಕøತಿ ಹಾಗೂ ಕಲೆ, ಸಂಶೋಧನಾ ಗ್ರಂಥ, ಗ್ರಂಥ ಸಂಪಾದನೆ, ಪ್ರಾಚೀನ ಗ್ರಂಥಗಳು ಹಾಗೂ ಅನುವಾದಕ್ಕೆ ಸಂಬಂಧಿಸಿದ ರೂ.6000/-ಗಳ ನಗದು ಹಣ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.  ಭಾರತೀಸುತ ಸ್ಮಾರಕ ದತ್ತಿ ಪ್ರಶಸ್ತಿ : ಕನ್ನಡ ಕಾದಂಬರಿ ಕೃತಿಗೆ ರೂ.5000/-ಗಳ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.  ಲಕ್ಷ್ಮೀದೇವಿ ಶಾಂತರಸ ಹೆಂಬೇರಾಳು ದತ್ತಿ ಪ್ರಶಸ್ತಿ : ಕನ್ನಡ ಮಹಿಳಾ ಬರಹಗಾರರ ವಿವಿಧ ಪ್ರಕಾರಗಳ ಆರು ವರ್ಷಗಳ ಅವಧಿಯಲ್ಲಿ (2010ನೇ ಜನವರಿ ತಿಂಗಳಿನಿಂದ 2017ನೇ ಡಿಸೆಂಬರ್ ತಿಂಗಳವರೆಗೆ) ಪ್ರಥಮ ಮುದ್ರಣವಾಗಿ ಪ್ರಕಟವಾದ "ಕಥೆ" ಕೃತಿಗೆ ರೂ.5000/-ಗಳ ನಗದು ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.  ಪ್ರಕಾಶ ಆರ್.ಎನ್ ಹಬ್ಬು ದತ್ತಿ ಪ್ರಶಸ್ತಿ : "ಕಥಾ ಸಂಕಲನ" ಪ್ರಕಾರದ ಪುಸ್ತಕ ಪ್ರಕಟಣೆ ಮಾಡಿದ "ಪ್ರಕಾಶನ ಸಂಸ್ಥೆಗೆ" ರೂ.5000/- ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.  ಕನ್ನಡ ಪುಸ್ತಕ ಪ್ರಕಾಶನ ಸಂಸ್ಥೆಗಳು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.  ಅಮೃತ ಮಹೋತ್ಸವ ಸಾಹಿತ್ಯ ಸಮ್ಮೇಳನದ ಸವಿ ನೆನಪಿನ ದತ್ತಿ (ಎಲ್. ಬಸವರಾಜು ದತ್ತಿ) ಪ್ರಶಸ್ತಿ : ಯಾವುದೇ ಪ್ರಕಾರದ ಉತ್ತಮ ದಲಿತ ಸಾಹಿತ್ಯ ಕೃತಿಗೆ ರೂ.5000/-ಗಳ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.  ನಿಡಸಾಲೆ ಪುಟ್ಟಸ್ವಾಮಯ್ಯ ಸಾಹಿತ್ಯ ಪ್ರಶಸ್ತಿ ದತ್ತಿ : ಯಾವುದೇ ಪ್ರಕಾರದ ಶ್ರೇಷ್ಠ ಕೃತಿಯನ್ನು ಸ್ಪರ್ಧೆಗೆ ಕಳುಹಿಸಬಹುದು.  ಪ್ರತಿವರ್ಷ ಕನ್ನಡದಲ್ಲಿ ಪ್ರಕಟಗೊಂಡ ಯಾವುದೇ ಪ್ರಕಾರದ ಶ್ರೇಷ್ಠ ಕೃತಿಗೆ ರೂ.5000/-ಗಳ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.  ಗುಬ್ಬಿ ಸೋಲೂರು ಮುರುಗಾರಾಧ್ಯ ದತ್ತಿ ಪ್ರಶಸ್ತಿ : ಶ್ರೇಷ್ಠ ಕಾದಂಬರಿಗೆ ರೂ. 5000/-ಗಳ ನಗದು ಪ್ರಶಸ್ತಿ ಹಾಗೂ ಪ್ರಶಸ್ತಿ ಪತ್ರ, ಗೌರವ.  ವಿ. ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿ : ವೀರಶೈವ ಸಾಹಿತ್ಯ ಸಂಶೋಧನಾತ್ಮಕ ಕೃತಿಗಳು ಎಂಬ ಪ್ರಚಾರಕ್ಕೆ ರೂ.10000/-ಗಳ ನಗದು ಮತ್ತು ಪ್ರಶಸ್ತಿ ಪತ್ರ ಹಾಗೂ ಗೌರವ.  ಗೌರುಭಟ್ ದತ್ತಿ ಪ್ರಶಸ್ತಿ : ಮಹಿಳೆಯರಿಗೆ ಸಂಬಂಧಿಸಿದ ಲೇಖನಗಳಿಗೆ ರೂ. 5000/-ಗಳ ನಗದು ಮತ್ತು ಪ್ರಶಸ್ತ ಪತ್ರ ಹಾಗೂ ಗೌರವ.  ಜಯಲಕ್ಷ್ಮಿ ಮತ್ತು ಬಾಪು ರಾಮಣ್ಣ ದತ್ತಿ ಪ್ರಶಸ್ತಿ : ಸಣ್ಣ ಕಥಾ ಸಂಕಲಕ್ಕೆ ರೂ.2000/- ನಗದು ಮತ್ತು ಪ್ರಶಸ್ತ ಪತ್ರ ಹಾಗೂ ಗೌರವ.  ಸುಮನ್ ಸೋಮಶೇಖರ್ ಸೋಮವಾರಪೇಟೆ ದತ್ತಿ ಪ್ರಶಸ್ತಿ : ಕವನ ಸಂಕಲಕ್ಕೆ ರೂ.1000/- ನಗದು ಮತ್ತು ಪ್ರಶಸ್ತಿ ಪತ್ರ ಹಾಗೂ ಗೌರವ.
ಹೇಮರಾಜ್ ಜಿ.ಎನ್. ಕುಶಾಲನಗರ ದತ್ತಿ ಪ್ರಶಸ್ತಿ : ಸಣ್ಣ ಕಥಾ ಸಂಕಲನಕ್ಕೆ ರೂ.1000/- ನಗದು ಮತ್ತು ಪ್ರಶಸ್ತಿ ಪತ್ರ ಹಾಗೂ ಗೌರವ.  ಗಂಗಮ್ಮ ಬಿ. ಶಿವಣ್ಣ ದತ್ತಿ ಪ್ರಶಸ್ತಿ : ಜಾತ್ಯಾತೀತ ವಿಚಾರವನ್ನೊಳಗೊಂಡ ಕೃತಿಗೆ ರೂ.5000/- ನಗದು ಮತ್ತು ಪ್ರಶಸ್ತಿ ಪತ್ರ ಹಾಗೂ ಗೌರವ.  ಡಾ. ಹಾ.ಮಾ ನಾಯಕ ದತ್ತಿ ಪ್ರಶಸ್ತಿ : ಶ್ರೇಷ್ಠ ವಿಚಾರ ಸಾಹಿತ್ಯ ಕೃತಿಗೆ ರೂ.2500/- ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
          ಪ್ರತಿ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು-560018 ಇವರಿಗೆ ಮೇ. 30 ರೊಳಗಾಗಿ ತಲುಪುವಂತೆ ಕಳುಹಿಸಬೇಕು.  ತಡವಾಗಿ ಬಂದ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ.  ಪರಿಶೀಲನೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.  ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸನ್ನು ಗಮನಿಸಿ ಪರಿಷತ್ತು ಅಂತಿಮ ನಿರ್ಧಾರ ಕೈಗೊಳ್ಳುತ್ತದೆ.  ಯಾವುದೇ ವರ್ಷ ಪ್ರಶಸ್ತಿಗೆ ಅರ್ಹ ಗ್ರಂಥಗಳು ಬಾರದಿದ್ದಾಗ ಆ ವರ್ಷ ಪ್ರಶಸ್ತಿಯನ್ನು ನೀಡದಿರುವ ಹಕ್ಕು ಪರಿಷತ್ತಿಗೆ ಇರುತ್ತದೆ.  ಒಂದಕ್ಕಿಂತ ಹೆಚ್ಚು ಗ್ರಂಥಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗೆ ಇರುತ್ತದೆ.  ಪಿ.ಎಚ್.ಡಿ. ಗ್ರಂಥಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ.  ಭಾಗವಹಿಸುತ್ತಿರುವ ಸ್ಪರ್ಧೆಯ ದತ್ತಿ ಹೆಸರನ್ನು ಪುಸ್ತಕದ ಮೊದಲ ಒಳಪುಟದಲ್ಲಿ ಸ್ಪಷ್ಟವಾಗಿ ಸೂಚಿಸಬೇಕು.  ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. 
        ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟಾಂಪ್ ಹಚ್ಚಿದ ಲಕೊಟೆ ಇಟ್ಟು ಪತ್ರ ಬರೆಯಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್  www.kasapa.in  ಮೂಲಕ ಸಹ ಪಡೆಯಬಹುದಾಗಿದೆ ಎಂದು ಕಸಾಪ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಅವರು ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/04/blog-post_879.html

Subscribe to receive free email updates:

0 Response to "ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ದತ್ತಿನಿಧಿ ಪ್ರಶಸ್ತಿ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ