ಶೀರ್ಷಿಕೆ : ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಕೌನ್ಸಿಲಿಂಗ್ : ಹಾಜರಾಗಲು ಸೂಚನೆ
ಲಿಂಕ್ : ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಕೌನ್ಸಿಲಿಂಗ್ : ಹಾಜರಾಗಲು ಸೂಚನೆ
ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಕೌನ್ಸಿಲಿಂಗ್ : ಹಾಜರಾಗಲು ಸೂಚನೆ
ಕೊಪ್ಪಳ ಮೇ. 16 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ಶಾಲೆಗಳ 6ನೇ ತರಗತಿಯ ಪ್ರಸಕ್ತ ಸಾಲಿನ ಪ್ರವೇಶಕ್ಕಾಗಿ ಕೌನ್ಸಿಲಿಂಗ್ ಅನ್ನು ಮೇ. 25 ರಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಏರ್ಪಡಿಸಲಾಗಿದ್ದು, ಕೌನ್ಸಿಲಿಂಗ್‍ಗೆ ಹಾಜರಾಗುವಂತೆ ಇಲಾಖಾ ಉಪನಿರ್ದೇಶಕರು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ.
ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಅವರಿಂದ ಆಯ್ಕೆ ಪಟ್ಟಿ ಕಳುಹಿಸಲಾಗಿದ್ದು, ಪರೀಕ್ಷಾ ಫಲಿತಾಂಶವನ್ನು ಸಂಬಂಧಿಸಿದ ವಸತಿ ಶಾಲೆಗಳಲ್ಲಿ ಪ್ರಕಟಿಸಲಾಗಿದೆ. ಮೇ. 25 ರಿಂದ 28 ರವರೆಗೆ ವಸತಿ ಶಾಲೆಗಳಿಗೆ ಕೌನ್ಸ್‍ಲಿಂಗ್ ಪ್ರಕ್ರಿಯೆ ನಡೆಯುತ್ತಿದ್ದು, ಕಟ್‍ಆಫ್ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಹಾಜರಾಗಬೇಕು. ಒಂದು ವೇಳೆ ಕೌನ್ಸ್‍ಲಿಂಗ್ ಪತ್ರ ತಲುಪದೇ ಇದ್ದಲ್ಲಿ ಕೌನ್ಸಿಲಿಂಗ್ ದಿನಾಂಕಗಳಂದು ಪ್ರವರ್ಗವಾರು ಅಭ್ಯರ್ಥಿಗಳು ಹಾಜರಾಗಬಹುದು.
ವಿವಿಧ ಪ್ರವರ್ಗವಾರು ಕಟ್‍ಆಫ್ ಮಾಕ್ರ್ಸ್ ಪಡೆದಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಸಂಬಂಧಿಸಿದ ವಸತಿ ಶಾಲೆಗಳಲ್ಲಿ ಪ್ರಕಟಿಸಲಾಗಿದ್ದು, ಮೇ. 25, 26, 27 ಮತ್ತು 28 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 5-30 ಗಂಟೆಯವರೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಕೌನ್ಸಿಲಿಂಗ್‍ನ್ನು ಏರ್ಪಡಿಸಲಾಗಿದೆ. ಕಟ್‍ಆಫ್ ಮಾಕ್ರ್ಸ್ ಪಡೆದ ವಿದ್ಯಾರ್ಥಿಗಳು ಕೌನ್ಸಿಲಿಂಗ್‍ಗೆ ತಪ್ಪದೇ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಕೌನ್ಸಿಲಿಂಗ್ : ಹಾಜರಾಗಲು ಸೂಚನೆ
ಎಲ್ಲಾ ಲೇಖನಗಳು ಆಗಿದೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಕೌನ್ಸಿಲಿಂಗ್ : ಹಾಜರಾಗಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಕೌನ್ಸಿಲಿಂಗ್ : ಹಾಜರಾಗಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/05/6.html
0 Response to "ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಕೌನ್ಸಿಲಿಂಗ್ : ಹಾಜರಾಗಲು ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ