ಶೀರ್ಷಿಕೆ : ಕೊಪ್ಪಳದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ : ಮತಗಟ್ಟೆಗಳತ್ತ ತೆರಳಿದ ಮತಗಟ್ಟೆ ಸಿಬ್ಬಂದಿ
ಲಿಂಕ್ : ಕೊಪ್ಪಳದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ : ಮತಗಟ್ಟೆಗಳತ್ತ ತೆರಳಿದ ಮತಗಟ್ಟೆ ಸಿಬ್ಬಂದಿ
ಕೊಪ್ಪಳದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ : ಮತಗಟ್ಟೆಗಳತ್ತ ತೆರಳಿದ ಮತಗಟ್ಟೆ ಸಿಬ್ಬಂದಿ
ಕೊಪ್ಪಳ ಮೇ. 11 (ಕ.ವಾ): ವಿಧಾನಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಕೊಪ್ಪಳದ ಗವಿಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಅಚ್ಚುಕಟ್ಟಾಗಿ ನೆರವೇರಿತು.
ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 287 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಸೇರಿದಂತೆ ಒಟ್ಟು 1720 ಸಿಬ್ಬಂದಿಗಳನ್ನು ಮತದಾನ ಪ್ರಕ್ರಿಯೆ ಕೈಗೊಳ್ಳುವ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಬೆಳಿಗ್ಗೆ 06 ಗಂಟೆಯಿಂದಲೇ ಕೊಪ್ಪಳದ ಗವಿಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಹಬ್ಬದ ಸಂಭ್ರಮ ಪ್ರಾರಂಭವಾಯಿತು. ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಪ್ರೌಢಶಾಲೆ ಆವರಣದಲ್ಲಿ ಸೇರತೊಡಗಿದರು. ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂಮತಗಟ್ಟೆಯ ಬಂದೋಬಸ್ತ್‍ಗಾಗಿ ನಿಯೋಜಿತಗೊಂಡಿರುವ ಪೊಲೀಸರು ಕೂಡ ಆಗಮಿಸಿದ್ದರು. ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ಕರೆದುಕೊಂಡು ಹೋಗಲು ಬಸ್, ಕ್ರೂಸರ್ ಹಾಗೂ ಜೀಪ್‍ಗಳು ಶಾಲಾ ಆವರಣದಲ್ಲಿ ಜಮಾವಣೆಗೊಂಡಿದ್ದವು. ಕೊಪ್ಪಳ ಕ್ಷೇತ್ರದಲ್ಲಿ ಇದಕ್ಕಾಗಿ 36 ಬಸ್‍ಗಳು, 35 ಕ್ರೂಸರ್‍ಗಳು ಹಾಗೂ 30 ಜೀಪ್‍ಗಳನ್ನು ಬಳಕೆ ಮಾಡಲಾಗಿದೆ. ಪ್ರೌಢಶಾಲೆಯ ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್ ಗಳ ವಿವರವನ್ನು ಧ್ವನಿವರ್ಧಕ ಮೂಲಕ ತಿಳಿಸಲಾಯಿತು. ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆಯನ್ನು ವಿತರಿಸಲು ಸೆಕ್ಟರ್‍ವಾರು ಕೊಠಡಿಗಳನ್ನು ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಮತಗಟ್ಟೆಗಳ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲಾಯಿತು. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.
ಸ್ಥೈರ್ಯ ತುಂಬಿದ ಡಿಸಿ :
********** ಕೊಪ್ಪಳದಲ್ಲಿ ಮಸ್ಟರಿಂಗ್ ಕಾರ್ಯ ಜರುಗಿದ ಗವಿಸಿದ್ದೇಶ್ವರ ಪ್ರೌಢಶಾಲೆಗೆ ಬೆಳಿಗ್ಗೆಯೇ ಆಗಮಿಸಿದ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು, ಮಸ್ಟರಿಂಗ್ ಕಾರ್ಯದ ಸಮಗ್ರ ವಿವರವನ್ನು ಪಡೆದುಕೊಂಡರು, ಚುನಾವಣಾ ಸಾಮಗ್ರಿಯನ್ನು ಜೋಡಿಸಿಕೊಳ್ಳಲು ಸಿಬ್ಬಂದಿಗಳಿಗೆ ಕೊಠಡಿಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈ ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಮಾತನಾಡಿ, ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಹಾಗೂ ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ನೈತಿಕ ಸ್ಥೈರ್ಯ ತುಂಬಿದರು. ಮಹಿಳಾ ಸಿಬ್ಬಂದಿಗಳೇ ಹೆಚ್ಚಿರುವ ಮತಗಟ್ಟೆಗಳಿಗೆ ಹೆಚ್ಚುವರಿಯಾಗಿ ಇನ್ನೋರ್ವ ಸಿಬ್ಬಂದಿಯನ್ನು ಒದಗಿಸುವಂತೆ ಕ್ಷೇತ್ರ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಚ್ಚುಕಟ್ಟಾದ ವ್ಯವಸ್ಥೆ :
********** ಕೊಪ್ಪಳದ ಗವಿಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಏರ್ಪಡಿಸಲಾದ ಮಸ್ಟರಿಂಗ್ ಕಾರ್ಯ ಯಶಸ್ವಿಯಾಗಿ, ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ನೆರವೇರಿಸಲು ಪೂರ್ವಭಾವಿಯಾಗಿ ಯೋಜನೆ ರೂಪಿಸಿ, ಅದರಂತೆಯೇ ಕಾರ್ಯಗತಗೊಳಿಸಲಾಯಿತು. ಚುನಾವಣಾ ಸಾಮಗ್ರಿ ವಿತರಣೆ, ಮತಯಂತ್ರಗಳ ವಿತರಣೆ, ಚುನಾವಣೆಗೆ ಮತಗಟ್ಟೆಗಳಿಗೆ ನಿಯೋಜನೆ, ಅನಿವಾರ್ಯ ಕಾರಣಗಳಿಗಾಗಿ ಕರ್ತವ್ಯದಲ್ಲಿ ಬದಲಾವಣೆ ಬಯಸಿದವರಿಗೂ, ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಪರ್ಯಾಯವಾಗಿ ಕಾಯ್ದರಿಸಿದ ಸಿಬ್ಬಂದಿಗಳಿಗೆ ಕರ್ತವ್ಯ ನಿಯೋಜಿಸುವ ಕಾರ್ಯವೂ ವ್ಯವಸ್ಥಿತವಾಗಿತ್ತು. ಮತಗಟ್ಟೆ ಕರ್ತವ್ಯ ಪಾಲನೆಗೆ ನಿಯೋಜಿತಗೊಂಡಿದ್ದ ಶಿಕ್ಷಕಿ ಶಮೀಮ್ ಅವರು, ಅಭಿಪ್ರಾಯ ವ್ಯಕ್ತಪಡಿಸಿ, ನಾನು ಸುಮಾರು ಮೂರ್ನಾಲ್ಕು ಚುನಾವಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ನನಗಿದೆ. ಹಿಂದೆಂದಿಗಿಂತಲೂ ಈ ಬಾರಿ ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮತದಾನ ಕಾರ್ಯಕ್ಕೆ ನೇಮಕಗೊಂಡಿರುವ ಹಲವು ಅಧಿಕಾರಿ, ಸಿಬ್ಬಂದಿಗಳೂ ಕೂಡ ಮಸ್ಟರಿಂಗ್ ಕಾರ್ಯಕ್ಕೆ ಕೈಗೊಂಡ ವ್ಯವಸ್ಥೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಕೊಪ್ಪಳ ಕ್ಷೇತ್ರ ಚುನಾವಣಾಧಿಕಾರಿ ಸಿ.ಡಿ. ಗೀತಾ ಅವರು ಮಸ್ಟರಿಂಗ್ ಕಾರ್ಯದ ನೇತೃತ್ವ ವಹಿಸಿದ್ದರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ ಅವರು ಪೊಲೀಸ್ ಹಾಗೂ ವಿಶೇಷ ಭದ್ರತಾ ದಳದ ನಿಯೋಜನೆ ಕಾರ್ಯದ ಉಸ್ತುವಾರಿಯನ್ನು ವಹಿಸಿದ್ದರು. ಕೊಪ್ಪಳ ಕ್ಷೇತ್ರ ಚುನಾವಣಾ ವಿಭಾಗದ ಅನಂತರಾಮ್, ಮಂಜುನಾಥ್ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿ, ಚುನಾವಣಾ ಸಾಮಗ್ರಿ ವಿತರಣೆಯ ನೇತೃತ್ವ ವಹಿಸಿದ್ದರು.
ಹೀಗಾಗಿ ಲೇಖನಗಳು ಕೊಪ್ಪಳದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ : ಮತಗಟ್ಟೆಗಳತ್ತ ತೆರಳಿದ ಮತಗಟ್ಟೆ ಸಿಬ್ಬಂದಿ
ಎಲ್ಲಾ ಲೇಖನಗಳು ಆಗಿದೆ ಕೊಪ್ಪಳದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ : ಮತಗಟ್ಟೆಗಳತ್ತ ತೆರಳಿದ ಮತಗಟ್ಟೆ ಸಿಬ್ಬಂದಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ : ಮತಗಟ್ಟೆಗಳತ್ತ ತೆರಳಿದ ಮತಗಟ್ಟೆ ಸಿಬ್ಬಂದಿ ಲಿಂಕ್ ವಿಳಾಸ https://dekalungi.blogspot.com/2018/05/blog-post_18.html
0 Response to "ಕೊಪ್ಪಳದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ : ಮತಗಟ್ಟೆಗಳತ್ತ ತೆರಳಿದ ಮತಗಟ್ಟೆ ಸಿಬ್ಬಂದಿ"
ಕಾಮೆಂಟ್ ಪೋಸ್ಟ್ ಮಾಡಿ