ಶೀರ್ಷಿಕೆ : ಮತದಾನ ದಿನ, ಪೂರ್ವ ದಿನಾಂಕದಂದು ಸಾರ್ವತ್ರಿಕ ರಜೆ ಘೋಷಣೆ
ಲಿಂಕ್ : ಮತದಾನ ದಿನ, ಪೂರ್ವ ದಿನಾಂಕದಂದು ಸಾರ್ವತ್ರಿಕ ರಜೆ ಘೋಷಣೆ
ಮತದಾನ ದಿನ, ಪೂರ್ವ ದಿನಾಂಕದಂದು ಸಾರ್ವತ್ರಿಕ ರಜೆ ಘೋಷಣೆ
ಕೊಪ್ಪಳ ಮೇ. 04 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ನಿಮಿತ್ಯ ಮತಗಟ್ಟೆಯನ್ನು ಸರ್ಕಾರಿ ಕಚೇರಿ ಅಥವಾ ಶಾಲೆಗಳಲ್ಲಿ ಸ್ಥಾಪಿಸಿದ್ದಲ್ಲಿ ಅಂತಹ ಕಚೇರಿ/ಶಾಲೆಗಳಿಗೆ ಮೇ. 11 ಮತ್ತು 12 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ, ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಮೇ. 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳ ನಿಮಿತ್ಯ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ), ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳು, ರಾಷ್ಟ್ರೀಕೃತ ಬ್ಯಾಂಕ್‍ಗಳು, ಇತರೆ ಬ್ಯಾಂಕ್‍ಗಳು ಮುಂತಾದ ಕಛೇರಿಗಳಿಗೆ ಸಿಮೀತಗೊಳಿಸಿ ಯಾವುದೇ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು (ಇಂಡಸ್ಟ್ರೀಯಲ್ ಅಂಡರ್‍ಟೇಕಿಂಗ್) ಅಥವಾ ಇನ್ನಿತರ ಸಾರ್ವಜನಿಕ ಸಂಸ್ಥೆಗಳ (ಎಸ್ಟಬ್ಲಿಷ್‍ಮೆಂಟ್) ಖಾಯಂ ಹಾಗೂ ದಿನಗೂಲಿ ನೌಕರರಿಗೆ ಸರ್ಕಾರವು ಸರ್ಕಾರವು ಮೇ. 12 ರಂದು ವೇತನ ಸಹಿತ ರಜೆಯನ್ನು ಈಗಾಗಲೆ ಘೋಷಿಸಿದೆ.
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳ ನಿಮಿತ್ಯ ಸರ್ಕಾರವು ಮತದಾನ ನಡೆಯುವ ದಿನ ಮೇ. 12 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದ್ದು, ನೆಗೋಷಿಯೇಬಲ್ ಇನಸ್ಟ್ರುಮೆಂಟ್ ಆಕ್ಟ್ 1881ರ ಕಲಂ 25ರಲ್ಲಿ ವಿವರಿಸಿದಂತೆ ಮತದಾನದ ಪೂರ್ವ ಸಿದ್ದತೆಗಾಗಿ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಕೊಪ್ಪಳ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲು ಮತಗಟ್ಟೆಯನ್ನು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ದಲ್ಲಿ ಅಂತಹ ಎಲ್ಲಾ ಸರ್ಕಾರಿ ಕಛೇರಿ/ ಕಟ್ಟಡ ಹಾಗೂ ಶಾಲೆ/ ಕಾಲೇಜುಗಳಿಗೆ ಮೇ. 11 ಹಾಗೂ 12 ರಂದು ಸಾರ್ವತ್ರಿಕ ರಜೆ ಎಂದು ಘೋಷಿಸಲಾಗಿದೆ. ಅಲ್ಲದೆ ಮತ ಎಣಿಕೆ ಕೇಂದ್ರವಾದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯಕ್ಕೆ ಮತ ಎಣಿಕೆ ದಿನ ಮೇ. 15 ರಂದು ಸಾರ್ವತ್ರಿಕ ರಜೆ ಎಂದು ಘೋಷಣೆ ಮಾಡಿ ಆದೇಶಿಸಲಾಗಿದೆ. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು ಮತ್ತು ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮತದಾನ ದಿನ, ಪೂರ್ವ ದಿನಾಂಕದಂದು ಸಾರ್ವತ್ರಿಕ ರಜೆ ಘೋಷಣೆ
ಎಲ್ಲಾ ಲೇಖನಗಳು ಆಗಿದೆ ಮತದಾನ ದಿನ, ಪೂರ್ವ ದಿನಾಂಕದಂದು ಸಾರ್ವತ್ರಿಕ ರಜೆ ಘೋಷಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮತದಾನ ದಿನ, ಪೂರ್ವ ದಿನಾಂಕದಂದು ಸಾರ್ವತ್ರಿಕ ರಜೆ ಘೋಷಣೆ ಲಿಂಕ್ ವಿಳಾಸ https://dekalungi.blogspot.com/2018/05/blog-post_22.html
0 Response to "ಮತದಾನ ದಿನ, ಪೂರ್ವ ದಿನಾಂಕದಂದು ಸಾರ್ವತ್ರಿಕ ರಜೆ ಘೋಷಣೆ"
ಕಾಮೆಂಟ್ ಪೋಸ್ಟ್ ಮಾಡಿ