ಶೀರ್ಷಿಕೆ : ಹುಲಿಗೆಮ್ಮ ದೇವಿ ಜಾತ್ರೆ : ಪ್ರಾಣಿ ಬಲಿ ನಿಷೇಧ
ಲಿಂಕ್ : ಹುಲಿಗೆಮ್ಮ ದೇವಿ ಜಾತ್ರೆ : ಪ್ರಾಣಿ ಬಲಿ ನಿಷೇಧ
ಹುಲಿಗೆಮ್ಮ ದೇವಿ ಜಾತ್ರೆ : ಪ್ರಾಣಿ ಬಲಿ ನಿಷೇಧ
ಕೊಪ್ಪಳ ಮೇ. 02 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವವು ಮೇ. 08 ರಿಂದ 12 ರವರೆಗೆ ಜರುಗಲಿದ್ದು, ದೇವಸ್ಥಾನ ಆವರಣದಲ್ಲಿ ಅಥವಾ ದೇವಸ್ಥಾನಕ್ಕೆ ಸಂಬಂಧಪಟ್ಟ ಜಮೀನುಗಳಲ್ಲಿ ಯಾವುದೇ ರೀತಿಯ ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಪ್ರಾಣಿ ಬಲಿ ಕೊಡುವ ಪದ್ಧತಿಯು ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ 1959 ಮತ್ತು ಕರ್ನಾಟಕ ಪ್ರಾಣಿ ಬಲಿ ನಿಷೇಧ ನಿಯಮಗಳು 1963ರ ಪ್ರಕಾರ ಅಪರಾಧ ಹಾಗೂ ಶಿಕ್ಷಾರ್ಹವಾಗಿರುತ್ತದೆ. ಪ್ರಾಣಿ ಬಲಿ ಪದ್ಧತಿಯು ಅತ್ಯಂತ ಕ್ರೂರ ಹಾಗೂ ಅವೈಜ್ಞಾನಿಕವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವುದಕ್ಕೆ ಕಾರಣವಾಗುತ್ತದೆ. ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವವು ಮೇ. 08 ರಿಂದ 12 ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜಾತ್ರೆ ಸಮಯದಲ್ಲಿ ಹುಲಿಗೆಮ್ಮ ದೇವಿಯ ದೇವಸ್ಥಾನದ ಆವರಣದಲ್ಲಿ ಅಥವಾ ದೇವಸ್ಥಾನಕ್ಕೆ ಸಂಬಂಧಪಟ್ಟ ಜಮೀನುಗಳಲ್ಲಿ ಭಕ್ತಾದಿಗಳು, ಸಾರ್ವಜನಿಕರು ಯಾವುದೇ ರೀತಿಯ ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಹುಲಿಗೆಮ್ಮ ದೇವಿ ಜಾತ್ರೆ : ಪ್ರಾಣಿ ಬಲಿ ನಿಷೇಧ
ಎಲ್ಲಾ ಲೇಖನಗಳು ಆಗಿದೆ ಹುಲಿಗೆಮ್ಮ ದೇವಿ ಜಾತ್ರೆ : ಪ್ರಾಣಿ ಬಲಿ ನಿಷೇಧ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ : ಪ್ರಾಣಿ ಬಲಿ ನಿಷೇಧ ಲಿಂಕ್ ವಿಳಾಸ https://dekalungi.blogspot.com/2018/05/blog-post_38.html
0 Response to "ಹುಲಿಗೆಮ್ಮ ದೇವಿ ಜಾತ್ರೆ : ಪ್ರಾಣಿ ಬಲಿ ನಿಷೇಧ"
ಕಾಮೆಂಟ್ ಪೋಸ್ಟ್ ಮಾಡಿ