ಶೀರ್ಷಿಕೆ : ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಸಲ್ಲದು : ವೆಂಕಟ್‍ರಾಜಾ
ಲಿಂಕ್ : ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಸಲ್ಲದು : ವೆಂಕಟ್‍ರಾಜಾ
ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಸಲ್ಲದು : ವೆಂಕಟ್‍ರಾಜಾ
ಕೊಪ್ಪಳ ಮೇ. 05 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗವು ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಯಾವುದೇ ಚುನಾವಣಾ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಂಡರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾಗಿರುವ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಅವರು ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿರವರು, ಭಾರತ ದೇಶವು ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿಹಾಕಿದ್ದು, ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ "ಮಕ್ಕಳ ಆರೋಗ್ಯ, ಶೈಕ್ಷಣಿ ಅಭಿವೃದ್ಧಿಗೆ ಮಾರಕವಾದ ಯಾವುದೇ ಕಾರ್ಯ ಅಥವಾ ಚಟುವಟಿಕೆಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಭಾಗವಹಿಸದಂತೆ ಸರಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯ ಅಥವಾ ಚಟುವಟಿಕೆಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಯಾರೇ ಚುನಾವಣಾ ಅಭ್ಯರ್ಥಿಯು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡು, ಕರಪತ್ರಗಳನ್ನು ಹಂಚುವುದು, ರ್ಯಾಲಿ, ಜಾಥಾಗಳಲ್ಲಿ ಮಕ್ಕಳಿಂದ ಘೋಷಣೆ ಕೂಗಲು ಹಾಗೂ ಇನ್ನಿತರೇ ಯಾವುದೇ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಭಾರತೀಯ ಚುನಾವಣಾ ಆಯೋಗ, ನವದೆಹಲಿರವರು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಕೊಪ್ಪಳ ರವರು, ಯಾವುದೇ ರಾಜಕೀಯ ಪಕ್ಷ ಅಥವಾ ಯಾರೇ ಚುನಾವಣಾ ಅಭ್ಯರ್ಥಿಯು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳನ್ನು ಮಾಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದು, ಯಾವುದೇ ರಾಜಕೀಯ ಪಕ್ಷ ಅಥವಾ ಯಾರೇ ಅಭ್ಯರ್ಥಿಯು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳಬಾರದು. ಈ ಕುರಿತಂತೆ ಈಗಾಗಲೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ಪ್ರಚಾರ ಕಾರ್ಯಕ್ರಮಗಳ ಬಗ್ಗೆ ನಿಗಾ ವಹಿಸಿ, ಮಕ್ಕಳ ಬಳಕೆ ಕಂಡುಬಂದಲ್ಲಿ, ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಅಂತಹವರ ವಿರುದ್ಧ ಚುನಾವಣಾ ನೀತಿ ಸಂಹಿತೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್‍ರಾಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಸಲ್ಲದು : ವೆಂಕಟ್‍ರಾಜಾ
ಎಲ್ಲಾ ಲೇಖನಗಳು ಆಗಿದೆ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಸಲ್ಲದು : ವೆಂಕಟ್‍ರಾಜಾ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಸಲ್ಲದು : ವೆಂಕಟ್‍ರಾಜಾ ಲಿಂಕ್ ವಿಳಾಸ https://dekalungi.blogspot.com/2018/05/blog-post_5.html
0 Response to "ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಸಲ್ಲದು : ವೆಂಕಟ್‍ರಾಜಾ"
ಕಾಮೆಂಟ್ ಪೋಸ್ಟ್ ಮಾಡಿ