ಶೀರ್ಷಿಕೆ : ವಿಜೃಂಭಣೆಯಿಂದ ಜರುಗಿದ ಹುಲಿಗೆಮ್ಮ ದೇವಿ ಮಹಾರಥೋತ್ಸವ
ಲಿಂಕ್ : ವಿಜೃಂಭಣೆಯಿಂದ ಜರುಗಿದ ಹುಲಿಗೆಮ್ಮ ದೇವಿ ಮಹಾರಥೋತ್ಸವ
ವಿಜೃಂಭಣೆಯಿಂದ ಜರುಗಿದ ಹುಲಿಗೆಮ್ಮ ದೇವಿ ಮಹಾರಥೋತ್ಸವ
ಕೊಪ್ಪಳ ಮೇ. 10 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಅಪಾರ ಜನ ಸಾಗರದ ನಡುವೆ ಮಹಾರಥೋತ್ಸವವು ವಿಜೃಂಭಣೆಯಿಂದ ಬುಧವಾರದಂದು ಜರುಗಿತು.
ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ಕಳೆದ ಹತ್ತು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಹಾರಥೋತ್ಸವವು ಬುಧವಾರದಂದು ಸಾಯಂಕಾಲ 5-30 ಗಂಟೆ ಸುಮಾರಿಗೆ ಅಪಾರ ಜನ ಸಾಗರದ ನಡುವೆ ವಿಜ್ರಂಭಣೆಯಿಂದ ಜರುಗಿತು. ಭಕ್ತರ ಉಧೋ ಉಧೋ ಘೋಷಣೆ ಮುಗಿಲು ಮುಟ್ಟಿತ್ತು. ಭಕ್ತವೃಂದ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ, ಭಕ್ತಿ ಭಾವ ಮೆರೆದರು. ರಾಜ್ಯದ ವಿವಿಧ ಜಿಲ್ಲೆಗಳೂ ಸೇರಿದಂತೆ ಕೊಪ್ಪಳ ಜಿಲ್ಲೆಯ ಹಾಗೂ ಸುತ್ತಮುತ್ತಲಿನ ವಿವಿಧ ಕ್ಷೇತ್ರಗಳಿಂದ ಭಕ್ತಾಧಿಗಳು ಜಾತ್ರೆಗೆ ಆಗಮಿಸಿ, ಮಹಾರಥೋತ್ಸವವನ್ನು ಕಣ್ತುಂಬಿಕೊಂಡರು. ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಮಹಾರಥೋತ್ಸವದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.
ಹೀಗಾಗಿ ಲೇಖನಗಳು ವಿಜೃಂಭಣೆಯಿಂದ ಜರುಗಿದ ಹುಲಿಗೆಮ್ಮ ದೇವಿ ಮಹಾರಥೋತ್ಸವ
ಎಲ್ಲಾ ಲೇಖನಗಳು ಆಗಿದೆ ವಿಜೃಂಭಣೆಯಿಂದ ಜರುಗಿದ ಹುಲಿಗೆಮ್ಮ ದೇವಿ ಮಹಾರಥೋತ್ಸವ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಜೃಂಭಣೆಯಿಂದ ಜರುಗಿದ ಹುಲಿಗೆಮ್ಮ ದೇವಿ ಮಹಾರಥೋತ್ಸವ ಲಿಂಕ್ ವಿಳಾಸ https://dekalungi.blogspot.com/2018/05/blog-post_55.html
0 Response to "ವಿಜೃಂಭಣೆಯಿಂದ ಜರುಗಿದ ಹುಲಿಗೆಮ್ಮ ದೇವಿ ಮಹಾರಥೋತ್ಸವ"
ಕಾಮೆಂಟ್ ಪೋಸ್ಟ್ ಮಾಡಿ