ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ
ಲಿಂಕ್ : ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ

ಓದಿ


ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ


ಕೊಪ್ಪಳ ಮೇ. 10 (ಕರ್ನಾಟಕ ವಾರ್ತೆ): ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 
    ಕೈಮಗ್ಗ ಮತ್ತು ಜವಳಿ ಇಲಾಖೆಯು ಪ್ರಸಕ್ತ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ ಕಲಿಕೆಗಾಗಿ 42 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 1000 ರಿಂದ ರೂ. 1200 ರವರೆಗೆ ಶಿಷ್ಯವೇತನ ನೀಡಲಾಗುವುದು.  ಹಾಗೂ ಪುರುಷ ಅಭ್ಯರ್ಥಿಗಳಿಗೆ ಹಣ ಪಾವತಿಸುವ ಆಧಾರದ ಮೇಲೆ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗಿದೆ. 
    ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‍ನ್ನು ಒಂದು ವಿಷಯವಾಗಿ ಅಭ್ಯಾಸಿಸಿ ಉತ್ತೀರ್ಣರಾಗಿರಬೇಕು.  ಜುಲೈ. 01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವರ್ಷ, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15 ರಿಂದ 25 ವರ್ಷಗಳ ವಯೋಮಿತಿಯಲ್ಲಿರಬೇಕು.  ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.  ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸಗಾಗಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿಯಲ್ಲಿ 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) ನಲ್ಲಿ 15, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) ಯಲ್ಲಿ 03, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) ದಲ್ಲಿ 02, ಸೇರಿ ಒಟ್ಟು 42 ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. 
    ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು.  ಅರ್ಜಿ ಸಲ್ಲಿಸಲಿಚ್ಛಿಸುವ ಆಸಕ್ತರು ಅರ್ಜಿಯನ್ನು ಪೂರ್ಣವಾಗಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-582102, ಇವರಿಗೆ ಜೂನ್. 08 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ ಕಛೇರಿ ದೂರವಾಣಿ ಸಂಖ್ಯೆ 080-23561628/ 23568223/ 23566082, ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ ದೂ.ಸಂ. 08372-297221, ಅಥವಾ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕೊಪ್ಪಳ ದೂ.ಸಂ. 08539-230069, ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 


ಹೀಗಾಗಿ ಲೇಖನಗಳು ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/05/blog-post_84.html

Subscribe to receive free email updates:

0 Response to "ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ