ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ : ಎಂ. ಕನಗವಲ್ಲಿ

ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ : ಎಂ. ಕನಗವಲ್ಲಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ : ಎಂ. ಕನಗವಲ್ಲಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ : ಎಂ. ಕನಗವಲ್ಲಿ
ಲಿಂಕ್ : ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ : ಎಂ. ಕನಗವಲ್ಲಿ

ಓದಿ


ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ : ಎಂ. ಕನಗವಲ್ಲಿ



ಕೊಪ್ಪಳ ಮೇ. 08 (ಕರ್ನಾಟಕ ವಾರ್ತೆ): ವಿಧಾನಸಭಾ ಚುನಾವಣೆಯ ಅಂಗವಾಗಿ ಮೇ. 15 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು, ಆಯೋಗ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು. 

      ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳಿಗೆ ಮತ ಎಣಿಕೆ ಕಾರ್ಯದ ಕುರಿತು ಕೊಪ್ಪಳ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೊಪ್ಪಳ ನಗರದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ ಮತ್ತು ಕೊಪ್ಪಳ ಸೇರಿದಂತೆ ಎಲ್ಲ ಐದೂ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಸಲಾಗುವುದು.  ಈಗಾಗಲೆ ಮತ ಎಣಿಕೆ ಕೇಂದ್ರ ಸಜ್ಜುಗೊಂಡಿದೆ.  ಪ್ರತಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗಾಗಿ ಪ್ರತ್ಯೇಕ ಕೊಠಡಿಗಳನ್ನು ನಿಗದಿಪಡಿಸಲಾಗಿದೆ.  ಅಲ್ಲದೆ ಇವಿಎಂ ಸ್ಟ್ರಾಂಗ್ ರೂಮ್‍ಗಳನ್ನು ಸ್ಥಾಪಿಸಲಾಗಿದೆ.   ಮತ ಎಣಿಕಾ ಕೇಂದ್ರದಲ್ಲಿ ಮೀಡಿಯಾ ಸೆಂಟರ್, ಪೊಲೀಸ್ ವೇಟಿಂಗ್ ರೂಂ, ವೀಕ್ಷಕರ ಕೊಠಡಿ,  ಹಾಗೂ ಡಿ.ಇ.ಓ ರೂಮ್‍ಗಳನ್ನು ಸಹ ನಿಗದಿಪಡಿಸಲಾಗಿದೆ.  ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 17 ಜನ ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕರನ್ನು ನೇಮಿಸಲಾಗುವುದು.  ಪ್ರತಿ ಕ್ಷೇತ್ರಕ್ಕೆ ಮತ ಎಣಿಕೆಗಾಗಿ 14 ಟೇಬಲ್‍ನಂತೆ ವ್ಯವಸ್ಥೆ ಮಾಡಲಾಗುವುದು.  ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಅಂದಾಜು 16 ರಿಂದ 20 ಸುತ್ತುಗಳಲ್ಲಿ ನಡೆಯಲಿದೆ.  ಮತ ಎಣಿಕೆ ಕಾರ್ಯವು ಸುಗಮವಾಗಿ ನಡೆಯಬೇಕಾಗಿದ್ದು, ಮತ ಎಣಿಕಾ ಕಾರ್ಯಕ್ಕಾಗಿ ನಿಯೋಜಿಸಲಾದ ಅಧಿಕಾರಿಗಳು ಮೇ. 15 ರಂದು ಬೆಳಿಗ್ಗೆ 5 ಗಂಟೆಗೆ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಿ, ಬೆಳಿಗ್ಗೆ 5-30ಕ್ಕೆ ವರದಿ ಮಾಡಿಕೊಳ್ಳಬೇಕು.   ತಮಗೆ ಹಂಚಿಕೆಯಾದ ವಿಧಾನಸಭಾ ಕ್ಷೇತ್ರ ಹಾಗೂ ಟೇಬಲ್ ಸಂಖ್ಯೆಯನ್ನು ತಿಳಿದುಕೊಳ್ಳಬೇಕು.  ಮತಯಂತ್ರಗಳ ಪ್ರಕಾರ ದಾಖಲಾದ ಮತಗಳ ಸಂಖ್ಯೆ, ಚಲಾವಣೆಯಾದ ಮತಗಳು ಇತ್ಯಾದಿಗಳ ವಿವರವನ್ನು ಪಡೆಯಬೇಕು.  ಮೊದಲಿಗೆ ಬೆಳಿಗ್ಗೆ 08 ಗಂಟೆಗೆ ಸರಿಯಾಗಿ ಪೋಸ್ಟಲ್ ಮತಗಳ ಎಣಿಕೆಯನ್ನು ಕ್ಷೇತ್ರ ಚುನಾವಣಾಧಿಕಾರಿಗಳ ಟೇಬಲ್‍ನಲ್ಲಿ ಪ್ರಾರಂಭಗೊಂಡು, ಉಳಿದಂತೆ ಮತಗಟ್ಟೆಗಳಲ್ಲಿ ಇವಿಎಂ ಮೂಲಕ ದಾಖಲಾದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗುತ್ತದೆ.  ಮತ ಎಣಿಕೆ ಕಾರ್ಯದಲ್ಲಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಯನ್ನ ಕಟ್ಟುನಿಟ್ಟಾಗಿ ಪಾಲಿಸಬೇಕು.  ಯಾವುದೇ ತೊಂದರೆ ಉಂಟಾದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು. 
ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ಮಾತನಾಡಿ, ಮತ ಎಣಿಕೆ ಕಾರ್ಯದಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.  ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.  ಚುನಾವಣಾ ವೆಚ್ಚದ ಜಿಲ್ಲಾ ನೋಡಲ್ ಅಧಿಕಾರಿ ವಾಗೀಶ್ ಉಪಸ್ಥಿತರಿದ್ದರು.  ತರಬೇತಿಯಲ್ಲಿ ಚುನಾವಣಾ ಮತ ಎಣಿಕೆಗೆ ನಿಯೋಜನೆಗೊಂಡಿರುವ ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕರು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ : ಎಂ. ಕನಗವಲ್ಲಿ

ಎಲ್ಲಾ ಲೇಖನಗಳು ಆಗಿದೆ ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ : ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ : ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2018/05/blog-post_9.html

Subscribe to receive free email updates:

0 Response to "ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಿ : ಎಂ. ಕನಗವಲ್ಲಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ