ಶೀರ್ಷಿಕೆ : News and photo Date: 29-5-2018
ಲಿಂಕ್ : News and photo Date: 29-5-2018
News and photo Date: 29-5-2018
ನಿಫಾ ವೈರಸ್ ರೋಗಕ್ಕೆ ಆಂತಕ ಪಡದಂತೆ ಜಿಲ್ಲಾಧಿಕಾರಿಗಳ ಮನವಿ
***************************************************************
ಕಲಬುರಗಿ,ಮೇ.29.(ಕ.ವಾ.)-ಜಿಲ್ಲೆಯಲ್ಲಿ ನಿಫಾ ವೈರಸ್ ರೋಗ ಈವರೆಗೆ ಕಂಡು ಬಂದಿಲ್ಲ. ಯಾವುದೇ ಶಂಕಿತ ಪ್ರಕರಣಗಳು ಸಹ ವರದಿಯಾಗಿಲ್ಲ. ಕಾರಣ ಸಾರ್ವಜನಿಕರು ನಿಫಾ ವೈರಸ ರೋಗದ ಬಗ್ಗೆ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ನಿಫಾ ವೈರಸ್ ರೋಗಕ್ಕೆ ಯಾವುದೇ ನಿಖರ ಚಿಕಿತ್ಸೆಯಾಗಲಿ ಅಥವಾ ಲಸಿಕೆಯಾಗಲಿ ಲಭ್ಯವಿಲ್ಲ. ಈ ರೋಗ ಬರದಂತೆ ನೋಡಿಕೊಳ್ಳುವುದಕ್ಕೆ ಮುಂಜಾಗ್ರತೆ ವಹಿಸುವದೇ ಮುಖ್ಯವಾಗಿದೆ ಎಂದರು.
ಹಣ್ಣು ಸೇವಿಸುವ ಬಾವಲಿಗಳ ಮುಖಾಂತರ ಹರಡುವ ಈ ರೋಗವು ಸಧ್ಯ ಕೇರಳದಲ್ಲಿ ಹರಡಿದೆ. ಕೇರಳ ರಾಜ್ಯದ ಕೋಝಿಕೋಡ, ಮಲಪ್ಪುರಂ, ವಯನಾಡ ಹಾಗೂ ಕನ್ನೂರ ಜಿಲ್ಲೆಗಳನ್ನು ನಿಫಾ ವೈರಸ್ ರೋಗ ಹರಡುವ ಅಪಾಯಕಾರಿ ಜಿಲ್ಲೆಗಳೆಂದು ಗುರುತಿಸಲಾಗಿದೆ. ಈ ಜಿಲ್ಲೆಗಳಿಗೆ ತಾತ್ಕಾಲಿಕವಾಗಿ ಪ್ರವಾಸ ಕೈಗೊಳ್ಳಬಾರದು. ಕೇರಳದಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಅಥವಾ ಸ್ಥಳೀಯರ ಮೇಲೆ ನಿಗಾವಹಿಸಬೇಕು. ಅಪ್ಪಾ ಪಬ್ಲಿಕ್ ಶಾಲೆಯ 10ನೇ ತರಗತಿಯ ಮಕ್ಕಳು ಕೇರಳಕ್ಕೆ ಪ್ರವಾಸ ಹೋಗಿದ್ದು, ಇಂದು ಅಥವಾ ನಾಳೆ ಜಿಲ್ಲೆಗೆ ಆಗಮಿಸಲಿದ್ದಾರೆ ಎಂಬ ವರದಿಗಳಿವೆ. ಪ್ರವಾಸದಲ್ಲಿರುವ ಮಕ್ಕಳು ಜಿಲ್ಲೆಗೆ ಆಗಮಿಸಿದಾಗ ತಕ್ಷಣ ಅವರನ್ನು ಮುಂಜಾಗೃತಾ ಕ್ರಮವಾಗಿ ತಪಾಸಣೆಗೆ ಒಳಪಡಿಸಬೇಕು ಎಂದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಾವಲಿಗಳು ವಾಸಮಾಡುವ ಸ್ಥಳಗಳನ್ನು ಗುರುತಿಸಬೇಕು. ಬಾವಿಗಳಲ್ಲಿ ವಾಸವಾಗಿದ್ದರೆ ಅಂತಹ ಬಾವಿಗಳಿಗೆ ಜಾಲಿಗಳನ್ನು ಅಳವಡಿಸುವ ಮೂಲಕ ಬಾವಲಿಗಳು ಬಾವಿಯನ್ನು ಪ್ರವೇಶಿಸದಂತೆ ನೋಡಿಕೊಳ್ಳಬೇಕು. ಮರಗಳಲ್ಲಿ ವಾಸಮಾಡುವ ಬಾವಲಿಗಳಿಂದ ಎಚ್ಚರಿಕೆ ವಹಿಸಬೇಕು. ಹಣ್ಣುಗಳನ್ನು ಸಂಸ್ಕರಿಸಿ ಸೇವಿಸಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ನಿಫಾ ವೈರಸ್ ರೋಗ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡನ್ನು ಪ್ರಾರಂಭಿಸಬೇಕು. ಆರೋಗ್ಯ ಇಲಾಖೆಯವರು ನಿಫಾ ವೈರಸ ರೋಗ ಹರಡದಂತೆ ಹಮ್ಮಿಕೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಕರಪತ್ರಗಳನ್ನು ಮುದ್ರಿಸಿ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಮನೆ ಮನೆಗೆ ವಿತರಿಸಬೇಕು. ಮಹಾನಗರ ಪಾಲಿಕೆಯವರು ಜಿಲ್ಲೆಯಲ್ಲಿರುವ ಹಂದಿಗಳನ್ನು ಹಿಡಿದು ಸುರಕ್ಷಿತ ಸ್ಥಳಗಳಿಗೆ ಸಾಗಿಸಬೇಕು ಎಂದು ಸೂಚಿಸಿದರು.
ಡೆಂಗ್ಯೂ ಜ್ವರ: ಜೂನ್ ಮಾಹೆಯಿಂದ ಮಳೆಗಾಲ ಪ್ರಾರಂಭವಾಗಲಿದ್ದು, ಮಳೆ ಬಂದ ನಂತರ ನಿಂತ ನೀರಿನಲ್ಲಿ ಸೊಳ್ಳೆ ಸಂತಾನೋತ್ಪತ್ತಿ ಕೈಗೊಳ್ಳುವುದರಿಂದ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ರೋಗವು ಹರಡುವ ಸಾಧ್ಯತೆಗಳಿವೆ. ಇದನ್ನು ತಡೆಯಲು ಬೂತ ಮಟ್ಟದಲ್ಲಿ ಮಹಾನಗರ ಪಾಲಿಕೆ ನೌಕರರು, ಆಶಾ, ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತರನ್ನೊಳಗೊಂಡ ತಂಡಗಳನ್ನು ರಚಿಸಬೇಕು. ಈ ತಂಡಗಳು ಮನೆ ಮನೆಗೆ ಭೇಟಿ ನೀಡಿ ಮಳೆ ನೀರು ಸಂಗ್ರಹವಾಗುವ ತಾಣಗಳನ್ನು ಗುರುತಿಸಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ನಾಶಪಡಿಸಬೇಕು ಎಂದರು.
ಇನ್ನೆರಡು ದಿನಗಳಲ್ಲಿ ಸೊಳ್ಳೆ ಸಂತಾನೋತ್ಪತ್ತಿ ತಾಣಗಳ ನಾಶಪಡಿಸುವ ತಂಡಗಳನ್ನು ರಚಿಸಿ ಕಾರ್ಯಪ್ರವೃತ್ತರಾಗಬೇಕು. ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಹರಡದಂತೆ ನೋಡಿಕೊಳ್ಳಬೇಕು. ಕಳೆದ ವರ್ಷ ಸುಮಾರು 900ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 600ಕ್ಕೂ ಹೆಚ್ಚು ಪ್ರಕರಣಗಳು ಕಲಬುರಗಿ ನಗರದಿಂದ ವರದಿಯಾಗಿವೆ. ನಗರ ಪ್ರದೇಶದಿಂದ ಹೆಚ್ಚು ಪ್ರಮಾಣದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುವ ಹಿನ್ನೆಲೆಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕ ನಗರ ಕುಡಿಯುವ ನೀರು ಸರಬರಾಜು ಮಂಡಳಿಯ ಅಧಿಕಾರಿಗಳು ಕುಡಿಯುವ ನೀರು ಸರಬರಾಜು ಪೈಪುಗಳಿಂದ ನೀರು ಸೋರಿಕೆಯಾಗಿ ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿಂತ ನೀರಿನಲ್ಲಿ ಆರೋಗ್ಯ ಇಲಾಖೆಯಿಂದ ಲಾರ್ವಾ ನಾಶಪಡಿಸುವ ಮೀನುಗಳನ್ನು ಬಿಡಬೇಕು. ಡೆಂಗ್ಯೂ ಮತ್ತು ಚಿಕನಗುನ್ಯಾ ಪ್ರಕರಣಗಳು ಕಂಡು ಬರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಫಾಗಿಂಗ್ ಮಾಡಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾರಂಭಿಸಲಾಗಿರುವ ಡೆಂಗ್ಯೂ ವಾರ್ಡ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಹಾಗೆ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ಶಸ್ತ್ರಜ್ಞರು ಖಾಸಗಿ ಲಾಬ್‍ನವರೊಂದಿಗೆ ಸಭೆ ಕರೆದು ಡೆಂಗ್ಯೂ ಪ್ರಕರಣಗಳ ನಿಖರ ತಪಾಸಣೆ ಮತ್ತು ವರದಿ, ಡೆಂಗ್ಯೂ ತಪಾಸಣೆಗೆ 250 ರೂ.ಗಳಿಗಿಂತ ಹೆಚ್ಚಿನ ಶುಲ್ಕ ಪಡೆಯದಂತೆ ಹಾಗೂ ಡೆಂಗ್ಯೂ ತಪಾಸಣೆಗೆ ಗುಣಮಟ್ಟದ ತಂತ್ರಜ್ಞಾನವನ್ನು ಬಳಸುವಂತೆ ಸೂಚಿಸಬೇಕೆಂದರು.
ಸಭೆಯಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಕೆ. ಪಾಟೀಲ, ಜಿಲ್ಲಾ ಆಸ್ಪತ್ರೆಯ ಶಸ್ತ್ರಜ್ಞ ಡಾ. ಬಾಲಚಂದ್ರ ಜೋಶಿ, ಎಲ್ಲ ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಜೂನ್ 5 ರಿಂದ ವಿಶ್ವ ಪರಿಸರ ದಿನಾಚರಣೆ ಸಪ್ತಾಹ ಆಚರಣೆ
****************************************************
ಕಲಬುರಗಿ,ಮೇ.29.(ಕ.ವಾ.)-ವಿಶ್ವ ಪರಿಸರ ದಿನಾಚರಣೆಯನ್ನು ಈ ವರ್ಷ ಜಾಗತಿಕ ಮಟ್ಟದಲ್ಲಿ ಭಾರತವು ಪ್ರತಿನಿಧಿಸುತ್ತಿರುವುದರಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 5 ರಿಂದ ಪರಿಸರ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ನಿಷೇಧಿಸುವ ಘೋಷಣೆ ಮಾಡಲಾಗಿರುವ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಮತ್ತು ಪಾಲಿಥಿನ್ ಬ್ಯಾಗ್‍ಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಜಾಗೃತ ತಂಡಗಳನ್ನು ರಚಿಸಿ ಆಂದೋಲನ ಮಾದರಿಯಲ್ಲಿ ಪ್ಲಾಸ್ಟಿಕ್ ನಿಷೇಧಿಸಬೇಕೆಂದು ಸೂಚಿಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 5ರಿಂದ ಒಂದು ವಾರಗಳ ಕಾಲ ಪ್ಲಾಸ್ಟಿಕ್ ನಿಷೇಧ, ಪರಿಸರ ಮಾಲಿನ್ಯ ತಡೆ, ಪರಿಸರ ಸಂರಕ್ಷಣೆಗಳ ಕುರಿತು ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಶಾಲಾ ಮಕ್ಕಳಿಂದ ಎಲ್ಲ ಶಾಲೆಗಳಲ್ಲಿ ಕನಿಷ್ಠ 10 ಮರಗಳನ್ನು ಬೆಳೆಸಲು ಕ್ರಮ ಜರುಗಿಸಬೇಕು. ಅರಣ್ಯ ಇಲಾಖೆಯಿಂದ ಸಸಿಗಳನ್ನು ಪಡೆದುಕೊಳ್ಳಬೇಕು. ಎಲ್ಲ ಶಾಲೆಗಳಲ್ಲಿ ಶಾಲಾ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಬೇಕು. ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ತಂಡದವರು ಪ್ರಮುಖ ಸಾರ್ವಜನಿಕ ಸ್ಥಳಗಳು, ಪ್ರೇಕ್ಷಣೀಯ ಸ್ಥಳಗಳು, ಸ್ಮಾರಕಗಳ ಪ್ರದೇಶವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಬೇಕು. ಪರಿಸರ ಸಪ್ತಾಹವನ್ನು ತಾಲೂಕು ಮತ್ತು ಗ್ರಾಮಮಟ್ಟದಲ್ಲಿಯೂ ಹಮ್ಮಿಕೊಂಡು ಆಯಾ ತಾಲೂಕಿನ ತಹಶೀಲ್ದಾರ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮುಂದಾಳತ್ವ ವಹಿಸಿ ಜೂನ್ 5ರಂದು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಬೇಕು. ಒಂದು ವಾರದಲ್ಲಿ ತಾಲೂಕಿನ ಹಾಗೂ ಜಿಲ್ಲೆಯ ಎಲ್ಲ ಪ್ರಮುಖ ಸ್ಥಳಗಳು ಸ್ವಚ್ಛವಾಗುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಜೂನ್ 5ರಂದು ಎಸ್.ವಿ.ಪಿ. ವೃತ್ತದಿಂದ ಜಗತ್ ವೃತ್ತದವರೆಗೆ ವಾಕಥಾನ್ ಹಮ್ಮಿಕೊಳ್ಳಲಾಗುತ್ತಿದ್ದು, ಶಾಲಾಮಕ್ಕಳೊಂದಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕು. ಸಂಚಾರಿ ಸ್ತಬ್ದ ಚಿತ್ರದ ವಾಹನದ ಮೂಲಕ ಅರಣ್ಯ ಇಲಾಖೆಯು ಪರಿಸರ ಸಂರಕ್ಷಣೆ, ಅರಣ್ಯ ಸಂರಕ್ಷಣೆ, ಪ್ಲಾಸ್ಟಿಕ್ ನಿಷೇಧ ಕುರಿತು ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು. ಪ್ರವಾಸಿ ಸ್ಥಳಗಳಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ಮತ್ತು ಪಾಲಿಥಿನ್ ಬ್ಯಾಗ್‍ಗಳನ್ನು ಬಳಸದಂತೆ ಜಾಗೃತಿ ಮೂಡಿಸಬೇಕು. ಪುರಸಭೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಸ್ತುಗಳ ಸಂಗ್ರಹ ಮತ್ತು ವಿಲೇವಾರಿ ಸಮರ್ಪಕವಾಗಿ ಕೈಗೊಂಡು ದಾಖಲೆಗಳನ್ನು ಸಲ್ಲಿಸಿದ್ದಲ್ಲಿ ಉತ್ತಮ ಪುರಸಭೆ ಅವಾರ್ಡ ಸಹಿತ ನೀಡಲಾಗುವುದು ಎಂದರು.
ಸರ್ಕಾರವು 15 ಮೈಕ್ರಾನ್‍ಗಿಂತ ಕಡಿಮೆ ಸಾಮಥ್ರ್ಯದ ಪ್ಲಾಸ್ಟಿಕ್ ಮತ್ತು ಪಾಲಿಥಿನ್ ಉತ್ಪಾದಿಸುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್, ಫ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್, ಪ್ಲಾಸ್ಟಿಕ್ ಕಪ್, ಪ್ಲಾಸ್ಟಿಕ್ ಚಮಚ ಹಾಗೂ ಪ್ಲಾಸ್ಟಿಕ್ ಶೀಟ್‍ಗಳ ಬಳಕೆಯನ್ನು ನಿಷೇಧಿಸಲಾಗಿದೆ. ಇವುಗಳ ಬಳಕೆ ಪರಿಸರಕ್ಕೆ ಹಾನಿಕಾರಕವಾಗಿದ್ದು, ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಪ್ಲಾಸ್ಟಿಕ್ ಬಳಕೆ ತಡೆಯಲು ತಂಡಗಳನ್ನು ರಚಿಸಿ ಹಠಾತ್ತಾಗಿ ದಾಳಿಗಳನ್ನು ಕೈಗೊಳ್ಳುವ ಮೂಲಕ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು. ನಿರಂತರವಾಗಿ ದಾಳಿ ಮಾಡುವ ಮೂಲಕ ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕೆಂದು ಹೇಳಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ರಘುನಂದನ ಮೂರ್ತಿ, ಸೇಡಂ ಸಹಾಯಕ ಆಯುಕ್ತ ಡಾ. ಬಿ. ಸುಶೀಲಾ, ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ, ಪರಿಸರ ಇಲಾಖೆಯ ಅಧಿಕಾರಿಗಳು, ಎಲ್ಲ ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೇ 31ರಂದು ತಂಬಾಕು ವ್ಯಸನಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
******************************************************************
ಕಲಬುರಗಿ,ಮೇ.29.(ಕ.ವಾ.)-ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಿಲ್ಲಾ ತಂಬಾಕು ಕೋಶದಿಂದ ತಂಬಾಕು ವ್ಯಸನಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಬಾಯಿ ಕ್ಯಾನ್ಸರ್ ಸ್ಕ್ರೀನಿಂಗ್ ಶಿಬಿರವನ್ನು 2018ರ ಮೇ 31 ರಂದು ಬೆಳಿಗ್ಗೆ 11 ರಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ಹೊಸ ಜಿಲ್ಲಾ ಆಸ್ಪತ್ರೆಯ ತಂಬಾಕು ವ್ಯಸನಮುಕ್ತ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಸಮೀಕ್ಷಣಾ ಘಟಕದ ಜಿಲ್ಲಾ ಸಮೀಕ್ಷಾಧಿಕಾರಿಗಳು ತಿಳಿಸಿದ್ದಾರೆ.
ಈ ಶಿಬಿರದಲ್ಲಿ ನುರಿತ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆ
*******************************************
ಅಂಗವಾಗಿ ಜಾಥಾ-ಅರಿವು ಕಾರ್ಯಕ್ರಮ
************************************
ಕಲಬುರಗಿ,ಮೇ.29.(ಕ.ವಾ.)-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಮೀಕ್ಷಣಾ ಘಟಕ ಕಲಬುರಗಿ ಇವುಗಳ ಸಂಯುಕ್ತ ಸಂಯುಕ್ತಾಶ್ರಯದಲ್ಲಿ ಮೇ 31ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯ ಹೆಚ್.ಐ.ಟಿ. ಸಭಾಂಗಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಥಾ ಹಾಗೂ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಕೆ. ಪಾಟೀಲ ಜಾಥಾ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕ ಡಾ. ಬಿ.ಎನ್. ಜೋಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಶಿವಶರಣಪ್ಪ ಅಧ್ಯಕ್ಷತೆ ವಹಿಸುವರು. ಕಲಬುರಗಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಸರ್ಜಿಕಲ್ ಅಂಕಾಲೋಜಿಸ್ಟ್ ಡಾ|| ಗುರುರಾಜ್ ದೇಶಪಾಂಡೆ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು.

ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
******************************************************
ಕಲಬುರಗಿ,ಮೇ.29.(ಕ.ವಾ.)-ಕಲಬುರಗಿ ಜಿಲ್ಲೆಯ ಶಹಾಬಾದ ಮತ್ತು ಚಿತ್ತಾಪುರ ತಾಲೂಕಿನ ವಾಡಿ ಗ್ರಾಮಗಳಲ್ಲಿ ಮಂಜೂರಾಗಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2017-18ನೇ ಸಾಲಿಗೆ ಆಂಗ್ಲ, ಕನ್ನಡ, ಉರ್ದು ಮತ್ತು ಗಣಿತ ವಿಷಯಗಳಿಗೆ ತಾತ್ಕಾಲಿಕ ಅತಿಥಿ ಶಿಕ್ಷಕರ ಸೇವೆ ಪಡೆಯಲು ಆಸಕ್ತ ನಿವೃತ್ತಿ ಶಿಕ್ಷಕ/ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ತಾಪುರ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಬಿ.ಇಡಿ ಮತ್ತು ಬಿ.ಎಸ್.ಸಿ. ಬಿ.ಇಡಿ. ಪಾಸಾಗಿರಬೇಕು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಮಾದರಿ ಶಾಲೆಯಿಂದ ಪಡೆದು ಭರ್ತಿ ಮಾಡಿ ಜೂನ್ 3ರೊಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಚಿತ್ತಾಪುರದ ಇಂದಿರಾನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯವನ್ನು ಹಾಗೂ ಮೊಬೈಲ್ ಸಂಖ್ಯೆ 9019491939. ವಾಡಿ ಮೌಲಾನಾ ಆಜಾದ್ ಮಾದರಿ ವಸತಿ ಶಾಲೆ ಪ್ರಾಂಶುಪಾಲರನ್ನು ಮೊಬೈಲ್ ಸಂಖ್ಯೆ 9449438874 ಹಾಗೂ ಶಹಾಬಾದ ಮೌಲಾನಾ ಆಜಾದ ಮಾದರಿ ಶಾಲೆ ಪ್ರಾಂಶುಪಾಲರನ್ನು ಮೊಬೈಲ್ ಸಂಖ್ಯೆ 7899755427ನ್ನು ಸಂಪರ್ಕಿಸಲು ಕೋರಲಾಗಿದೆ.

ವಿವಿಧ ಹುದ್ದೆಗಳ ಭರ್ತಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನ
*************************************************
ಕಲಬುರಗಿ,ಮೇ.29.(ಕ.ವಾ.)-ಸ್ಟಾಫ್ ಸೆಲೆಕ್ಷನ್ ಕಮಿಷನ್‍ದಿಂದ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗಾಗಿ (ಅombiಟಿeಜ ಉಡಿಚಿಜuಚಿಣe ಐeveಟ ಇxಚಿmiಟಿಚಿಣioಟಿ-2018) ಕಂಬೈನ್ಡ್ ಗ್ಯಾಜುಯೆಟ್ ಲೆವೆಲ್ ಪರೀಕ್ಷೆ-2018 ಪರೀಕ್ಷೆ ನಡೆಯಲಿದ್ದು, ಇದಕ್ಕಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅಂತಿಮ ಪದವಿಯಲ್ಲಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 4 ಕೊನೆಯ ದಿನವಾಗಿದೆ. ಓಬಿಸಿ ಸೇರಿದ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ 100 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕರು, ಅಂಗವಿಕಲರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕವಿರುವುದಿಲ್ಲ.
ಈ ಪರೀಕ್ಷೆಯು 2018ರ ಜುಲೈ 25 ರಿಂದ ಆಗಸ್ಟ್ 28 ರವರೆಗೆ ಬೆಂಗಳೂರು (9001), ಮಂಗಳೂರು (9008), ಗುಲಬರ್ಗಾ (9005), ಧಾರವಾಡ (9004), ಮೈಸೂರು (9009) ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ hಣಣಠಿ://ssಛಿ.ಟಿiಛಿ.iಟಿ ಅಥವಾ hಣಣಠಿ://ssಛಿoಟಿಟiಟಿe.ಟಿiಛಿ.iಟಿ ಅಥವಾ hಣಣಠಿ://ssಛಿoಟಿಟiಟಿe2.gov.iಟಿ ವೆಬ್‍ಸೈಟ್‍ನ್ನು ಅಥವಾ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08472-274846ನ್ನು ಸಂಪರ್ಕಿಸಲು ಕೋರಲಾಗಿದೆ.

ಜಿ.ಟಿ.ಟಿ.ಸಿ.: ವಿವಿಧ ಡಿಪ್ಲೋಮಾ ಕೋರ್ಸಿಗಾಗಿ ಅರ್ಜಿ ಆಹ್ವಾನ.
*******************************************************
ಕಲಬುರಗಿ,ಮೇ.29.(ಕ.ವಾ.)-ಕಲಬುರಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕಲಬುರಗಿ ಕೇಂದ್ರದಲ್ಲಿ 2017-18 ನೇ ಸಾಲಿನ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸುಗಳಲ್ಲಿ ತರಬೇತಿಗಾಗಿ ಅರ್ಹ ಎಸ್.ಎಸ್.ಎಲ್.ಸಿ. ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿಯ ಜಿ.ಟಿ.ಟಿ.ಸಿ. ಪ್ರಾಂಶುಪಾಲರು ತಿಳಿಸಿದ್ದಾರೆ.
ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಕೋರ್ಸನಲ್ಲಿ 45 ಸೀಟ್‍ಗಳು ಮತ್ತು ಕೈಗಾರಿಕಾ ಪ್ರಾಯೋಜಿತ 5 ಸೀಟುಗಳು ಲಭ್ಯವಿರುತ್ತದೆ. ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸಿಗೆ 30 ಸಿಟ್‍ಗಳು ಲಭ್ಯವಿರುತ್ತದೆ. ಈ ತರಬೇತಿಯ ಅವಧಿಯು 3 ವರ್ಷ ಇದ್ದು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕಲಬುರಗಿ ಕೇಂದ್ರದಲ್ಲಿ ತರಬೇತಿ ನೀಡಲಾಗುತ್ತದೆ. ಈ ತರಬೇತಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 1 ವರ್ಷದ ಇನ್-ಪ್ಲಾಂಟ್ ಟ್ರೇನಿಂಗ್ ಕಡ್ಡಾಯವಾಗಿರುತ್ತದೆ.
ಈ ತರಬೇತಿ ಅವಧಿಯಲ್ಲಿ 10000 ರೂ. ರಿಂದ 15000 ರೂ.ಗಳ ತರಬೇತಿ ಭತ್ಯೆ ನೀಡಲಾಗುವುದು. ಐ.ಟಿ.ಐ ಪಾಸಾದ ವಿದ್ಯಾರ್ಥಿಗಳು ನೇರವಾಗಿ 2ನೇ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಹರು. ಆಸಕ್ತಿಯುಳ್ಳ ವಿದ್ಯಾರ್ಥಿಗಳು ಕಲಬುರಗಿ ಜಿ.ಟಿ.ಟಿ.ಸಿ. ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಜೂನ್ 5 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಜೂನ್ 7ರಂದು ಸಂದರ್ಶನದ ಮೂಲಕ ರೋಷ್ಟರ್ ಮತ್ತು ಮೇರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು, ಶೇ. 30ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಮೀಸಲಿಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಂತ್ರಾಸವಾಡಿಯಲ್ಲಿರುವ ಜಿ.ಟಿ.ಟಿ.ಸಿ. ಯನ್ನು ಹಾಗೂ ದೂರವಾಣಿ ಸಂಖ್ಯೆ 08472-238084, ಮೊಬೈಲ್ ಸಂಖ್ಯೆ 9141630308/8453327166ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಆಳಂದ: ಮೆಟ್ರಿಕ್ ನಂತರ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*************************************************************
ಕಲಬುರಗಿ,ಮೇ.29.(ಕ.ವಾ.)-ಸಮಾಜ ಕಲ್ಯಾಣ ಇಲಾಖೆಯಿಂದ ಆಳಂದ ತಾಲೂಕಿನಲ್ಲಿ ನಡೆಸಲಾಗುತ್ತಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕÀ, ಬಾಲಕಿಯರ ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು ಪಿಯುಸಿ, ಡಿಗ್ರಿ, ಪಿ.ಜಿ. ಹಾಗೂ ಇತರೆ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಳಂದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಮೂಲಕ ಅಥವಾ hಣಣಠಿ://ಚಿಜmissioಟಿs.ಞಚಿಡಿ.ಟಿiಛಿ.iಟಿ/hosಣeಟಚಿಜmissioಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‍ಲೈನ್‍ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಪ್ರಾಚಾರ್ಯರ ದೃಢೀಕರಣದೊಂದಿಗೆ ಅವಶ್ಯಕ ದಾಖಲೆಗಳನ್ನು ದೃಢೀಕರಿಸಿ ಸಂಬಂಧಪಟ್ಟ ವಸತಿ ನಿಲಯದ ವಾರ್ಡನರವರಿಗೆ ಜೂನ್ 30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಳಂದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಾಲಯ ಅಥವಾ ಆಯಾ ವಸತಿ ನಿಲಯದ ವಾರ್ಡನ ಅವರಿಗೆ ಸಂಪರ್ಕಿಸಲು ಕೋರಲಾಗಿದೆ.
ವಸತಿ ನಿಲಯಗಳ ವಿವರ ಇಂತಿದೆ. ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಆಳಂದ ಹಾಗೂ ಸರ್ಕಾರಿ ವೃತ್ತಿಪರ ಮಹಿಳಾ ಕಾಲೇಜು ವಸತಿ ನಿಲಯ ಆಳಂದ.

ಸೇಡಂ: ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*************************************************************
ಕಲಬುರಗಿ,ಮೇ.29.(ಕ.ವಾ.)-ಸೇಡಂ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2018-19ನೇ ಸಾಲಿಗೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಸೇಡಂ ಟೌನ್, ಮುಧೋಳ, ಇಟಕಾಲ ಮತ್ತು ಕುರಕುಂಟಾ ಹಾಗೂ ಬಾಲಕಿಯರ ವಸತಿ ನಿಲಯ ಸೇಡಂ ಟೌನ್ ಇಲ್ಲಿ ಹೊಸದಾಗಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೇಡಂ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರವು ನಡೆಸುತ್ತಿರುವ ಅಥವಾ ಸರ್ಕಾರದಿಂದ ಅಂಗೀಕೃತವಾದ ಶಿಕ್ಷಣ ಸಂಸ್ಥೆಗಳಲ್ಲಿ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು. ಇಚ್ಚೆಯುಳ್ಳ ಅಭ್ಯರ್ಥಿಗಳು ಆಯಾ ವಸತಿ ನಿಲಯಗಳ ಮೇಲ್ವಿಚಾರಕರಿಂದ ಅಥವಾ ಸೇಡಂ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳಿಂದ ಕಚೇರಿಯಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ಜೂನ್ 1 ರಿಂದ 20 ರೊಳಗಾಗಿ ಆಯಾ ನಿಲಯಗಳ ಮೇಲ್ವಿಚಾರಕರಿಗೆ ಅಥವಾ ಸೇಡಂ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸೇಡಂ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ 08441-276115ನ್ನು ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ: ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*****************************************************
ಕಲಬುರಗಿ,ಮೇ.29.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿನಲ್ಲಿ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಕಲಬುರಗಿ ತಾಲೂಕಿನ ತಾಡತೇಗನೂರ ಗ್ರಾಮದ ಶ್ರೀ ವಿವೇಕಾನಂದ ವಿದ್ಯಾಪೀಠ ಹಾಗೂ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದ ಶ್ರೀ ಶಿವಾನಂದ ಶಿವಯೋಗಿ ಜನ ಕಲ್ಯಾಣ ಗ್ರಾಮೀಣ ಸಂಸ್ಥೆಯ ಶಾಲೆಗಳಲ್ಲಿ 6ನೇ ತರಗತಿಯ ಉಚಿತ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಯು ಸರ್ಕಾರದ ಆದೇಶ ದಿನಾಂಕ: 01-02-1966ರನ್ವಯ ಅಲೆಮಾರಿ/ ಅರೆ ಅಲೆಮಾರಿ ಜಾತಿಗೆ ಸೇರಿದವರಾಗಿರಬೇಕು ಹಾಗೂ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ.ದೊಳಗಿರಬೇಕು. ಇಚ್ಛೆಯುಳ್ಳ ವಿದ್ಯಾರ್ಥಿಗಳು ಜೂನ್ 10ರೊಳಗಾಗಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ ಮತ್ತು 5ನೇ ತರಗತಿಯಲ್ಲಿ ಉತ್ತೀರ್ಣರಾದ ಅಂಕಪಟ್ಟಿಯನ್ನು ಲಗತ್ತಿಸಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಡಿ. ದೇವರಾಜ ಅರಸು ಭವನ ತಾರ್‍ಫೈಲ್ 8ನೇ ಕ್ರಾಸ್, ಡಂಕಿನ ಬಾವಿ ಹತ್ತಿರ ಜಿಡಿಎ ಲೇಔಟ್, ಅಂಬಿಕಾನಗರ ಹಿಂದುಗಡೆ ಕಲಬುರಗಿ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.

ಚಿತ್ತಾಪುರ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
**********************************************************************
ಕಲಬುರಗಿ,ಮೇ.29.(ಕ.ವಾ.)-ಚಿತ್ತಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2018-19ನೇ ಸಾಲಿಗೆ ಕೆಳಕಂಡ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಅನುದಾನಿತ ವಸತಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು 5 ರಿಂದ 10ನೇ ತರಗತಿಯಲ್ಲಿ ಓದುತ್ತಿರಬೇಕು. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾತಿಗೆ ಸೇರಿದವರಾಗಿರಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಜೂನ್ 20ರೊಳಗಾಗಿ ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ವಸತಿ ನಿಲಯಗಳ ವಿವರ ಇಂತಿದೆ. ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಚಿತ್ತಾಪುರ, ಆಲಹಳ್ಳಿ, ಭೀಮನಳ್ಳಿ, ನಾಲವಾರ, ಕೊಲ್ಲೂರ, ಕಾಳಗಿ, ನಿಪ್ಪಾಣಿ, ರೇವಗ್ಗಿ, ಮಂಗಲಗಿ, ತೆಂಗಳಿ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಚಿತ್ತಾಪುರ, ನಾಲವಾರ. ಅನುದಾನಿತ ವಿದ್ಯಾರ್ಥಿ ನಿಲಯ ಶ್ರೀ ಸಿದ್ದೇಲಿಂಗೇಶ್ವರ ವಸತಿ ಪ್ರಸಾದ ನಿಲಯ ರಾವೂರ, ಕೋರಿಸಿದ್ದೇಶ್ವರ ಬಿ.ಸಿ.ಎಂ. ವಸತಿ ನಿಲಯ ನಾಲವಾರ, ಗುರುನಂಜೇಶ್ವರ ವಸತಿ ನಿಲಯ ಭರತನೂರ.

ಹೀಗಾಗಿ ಲೇಖನಗಳು News and photo Date: 29-5-2018
ಎಲ್ಲಾ ಲೇಖನಗಳು ಆಗಿದೆ News and photo Date: 29-5-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 29-5-2018 ಲಿಂಕ್ ವಿಳಾಸ https://dekalungi.blogspot.com/2018/05/news-and-photo-date-29-5-2018.html
0 Response to "News and photo Date: 29-5-2018"
ಕಾಮೆಂಟ್ ಪೋಸ್ಟ್ ಮಾಡಿ